ಕೊರೊನಾ ಬಂದಿದ್ದ ವ್ಯಕ್ತಿಗೆ ಬ್ಲಾಕ್ ಫಂಗಸ್, ಬೆಳ್ತಂಗಡಿಯಲ್ಲಿ ಮೊದಲ ಬಲಿ

Friday, May 28th, 2021
black fungus

ಬೆಳ್ತಂಗಡಿ: ಕೊರೊನಾದ ಬಳಿಕ ಕಣ್ಣು ಮತ್ತು ಕಿಡ್ನಿ ಸಮಸ್ಯೆ ಉಂಟಾಗಿ ಬ್ಲಾಕ್ ಫಂಗಸ್ ಗೆ ಬೆಳ್ತಂಗಡಿಯ ವ್ಯಕ್ತಿಯೋರ್ವರು ಮೃತಪಟ್ಟಿದ್ದಾರೆ. ಬೆಳ್ತಂಗಡಿ ತಾಲೂಕಿನ ತಣ್ಣೀರುಪಂತ ಗ್ರಾಮದ ಅಳಕೆ ನಿವಾಸಿ ನೋಣಯ್ಯ ಪೂಜಾರಿ (55) ಬ್ಲ್ಯಾಕ್ ಫಂಗಸ್ ವೈರಸ್‌ಗೆ ಬಲಿಯಾದ ವ್ಯಕ್ತಿ. ಮಂಗಳೂರಿನ ಕೆ.ಎಂ.ಸಿ. ಆಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಈ ವೇಳೆ ಕೊರೊನಾ ಪರೀಕ್ಷೆ ನಡೆಸಿದಾಗ ಪಾಸಿಟಿವ್ ವರದಿ ಬಂದಿತ್ತು ಕೊರೋನಾ ಚಿಕಿತ್ಸತೆಯ ಬಳಿಕ  ಬ್ಲ್ಯಾಕ್ ಫಂಗಸ್ ಗೋಚರಿಸಿದ್ದು ಕಣ್ಣಿನ ಆಪರೇಷನ್ ನಡೆಸಿದ್ದರು, ಬಳಿಕ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ […]

ಹಿರಿಯ ಪತ್ರಕರ್ತ ಸೂರ್ಯನಾರಾಯಣ ಪೂವಳ ಇನ್ನಿಲ್ಲ

Friday, November 6th, 2020
sooryanarayana Poovala

ಬಂಟ್ವಾಳ : ಕಳೆದ ಇಪ್ಪತ್ತೈದು ವರ್ಷಗಳಿಗಿಂತಲೂ ಅಧಿಕ ಕಾಲ ಪತ್ರಕರ್ತರಾಗಿ ಬಂಟ್ವಾಳದಿಂದ ಕರ್ತವ್ಯ ಸಲ್ಲಿಸಿದ್ದ ಹಿರಿಯ ಪತ್ರಕರ್ತ ಕಲ್ಲಡ್ಕ ಸಮೀಪ ಅಮ್ಟೂರು ಪೂವಳ ನಿವಾಸಿ ಸೂರ್ಯನಾರಾಯಣ ರಾವ್ ಪೂವಳ (51) ಅಲ್ಪಕಾಲದ ಅಸೌಖ್ಯದ ಬಳಿಕ ಶುಕ್ರವಾರ ಬೆಳಗಿನ ಜಾವ ತನ್ನ ಮನೆಯಲ್ಲಿ ನಿಧನ ಹೊಂದಿದರು. ಕೊರೊನಾದಿಂದ ಗುಣಮುಖರಾದ ಬಳಿಕ ಕಿಡ್ನಿ ವೈಫಲ್ಯದಿಂದ ಕಳೆದೆರಡು ತಿಂಗಳಿಂದ ಮಂಗಳೂರಿನ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.  ತೀವ್ರ ಶುಗರ್ ಸಮಸ್ಯೆಯು ಅವರನ್ನು ಕಾಡಿತ್ತು. ಅವರು ನಿನ್ನೆಯಷ್ಟೇ ಡಿಸ್ಚಾರ್ಜ್ ಆಗಿದ್ದರು. ಮುಂಗಾರು ಪತ್ರಿಕೆ ಸಹಿತ […]

ಯೇನಪೊಯದಲ್ಲಿ ಕಾಶ್ಮೀರದ ಬಡ ರೋಗಿಗೆ ಕಿಡ್ನಿ ಕಸಿ

Thursday, January 11th, 2018
kashmir

ಮಂಗಳೂರು: ದೇರಳಕಟ್ಟೆಯ ಯೇನಪೊಯ ಮೆಡಿಕಲ್‌ ಕಾಲೇಜ್‌ ಆಸ್ಪತ್ರೆಯು ಲಿಂಫೊಸೈಟ್‌ ಕ್ರಾಸ್‌ಮ್ಯಾಚ್‌ ಮತ್ತು ಅತ್ಯಂತ ಕನಿಷ್ಠ ಶಸ್ತ್ರಕ್ರಿಯೆಯನ್ನು ಒಳಗೊಂಡ ರೊಬೊಟಿಕ್‌ ಕಸಿ ವಿಧಾನದ ಮೂಲಕ ಕಾಶ್ಮೀರದ ಬಡ ರೋಗಿಯೊಬ್ಬರಿಗೆ ಮೂತ್ರಪಿಂಡ ಕಸಿ ನಡೆಸಿ ವೈದ್ಯಕೀಯ ಕ್ಷೇತ್ರದಲ್ಲಿ ಮಹತ್ವದ ಹೆಜ್ಜೆ ಇರಿಸಿದೆ. ಮೂತ್ರಪಿಂಡ ಕಸಿ ಶಸ್ತ್ರಚಿಕಿತ್ಸೆಯ ಅವಿಭಾಜ್ಯ ಭಾಗವಾದ ಲಿಂಫೋಸೈಟ್‌ ಕ್ರಾಸ್‌ ಮ್ಯಾಚ್‌ ಮಾಡುವ ಸೌಲಭ್ಯ ಮಂಗಳೂರಿನಲ್ಲಿ ಯೇನಪೊಯ ಮೆಡಿಕಲ್‌ ಕಾಲೇಜ್‌ ಆಸ್ಪತ್ರೆಯಲ್ಲಿದೆ. ಈಗ ಈ ವೈದ್ಯಕೀಯ ಕಾಲೇಜು ಆಸ್ಪತ್ರೆ ರಾಜ್ಯದ ಗಡಿಯನ್ನು ಮೀರಿ, ಜಮ್ಮು ಮತ್ತು ಕಾಶ್ಮೀರದ ಬಡ […]