Blog Archive

ಕುಕ್ಕೆ ಸುಬ್ರಹ್ಮಣ್ಯದ ಹುಂಡಿ ಎಣಿಕೆ ಮಾಡುತ್ತಿದ್ದಾಗ ಹಣ ಎಗರಿಸಿದ ಮಹಿಳಾ ಸಿಬ್ಬಂದಿ

Wednesday, December 9th, 2020
Kukke Subrahmanya

ಸುಬ್ರಹ್ಮಣ್ಯ:  ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಹುಂಡಿ ಎಣಿಕೆಯ ಸಂದರ್ಭದಲ್ಲಿ ದೇಗುಲದ ಮಹಿಳಾ ಸಿಬ್ಬಂದಿವೋರ್ವರು ಹಣ ಎಗರಿಸಿ ಸಿಕ್ಕಿಬಿದ್ದ ಘಟನೆ ನಡೆದಿದೆ. ದೇವಸ್ಥಾನದ ಸಿಬ್ಬಂದಿ ಗೌರಮ್ಮ ಎಂಬುವರು ಹಣ ಎಣಿಕೆ ಸಂದರ್ಭದಲ್ಲಿ ಹಣ ಕದ್ದು ಬಚ್ಚಿಟ್ಟುಕೊಳ್ಳುತ್ತಿರುವುದು ಭದ್ರತಾ ಸಿಬ್ಬಂದಿವೋರ್ವರ ಗಮನಕ್ಕೆ ಬಂದಿತ್ತು ಎನ್ನಲಾಗ್ತಿದೆ. ಹಣ ಎಗರಿಸುತ್ತಿರುವುದನ್ನು ಖಾತ್ರಿ ಪಡಿಸಿಕೊಂಡ ಮೇಲೆ ಈ ವಿಚಾರವನ್ನು ಭದ್ರತಾ ಸಿಬ್ಬಂದಿ ಮೇಲಾಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಅವರು ಮಹಿಳೆಯನ್ನು ವಿಚಾರಣೆ ನಡೆಸಿದಾಗ ಮಹಿಳೆಯು ಹಣ ಅಡಗಿಸಿಟ್ಟಿಕೊಂಡಿರುವುದು ಗೊತ್ತಾಗಿದೆ. ಸುಮಾರು 10,640 ರೂಪಾಯಿ ಹಣವು ಪರಿಶೀಲನೆ […]

ಆಶ್ಲೇಷ ಪೂಜೆಗಾಗಿ ಕುಕ್ಕೆ ಸುಬ್ರಹ್ಮಣ್ಯ ದಲ್ಲಿ ಜನಜಂಗುಳಿ

Sunday, December 6th, 2020
Kukke Subrahmanya4

ಸುಬ್ರಹ್ಮಣ್ಯ :  ಆಶ್ಲೇಷ ನಕ್ಷತ್ರ ದಿನವಾದ ರವಿವಾರದಂದು ಆಶ್ಲೇಷ ಪೂಜೆ ನೆರವೇರಿಸಲು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭಕ್ತರ ಸಂಖ್ಯೆ ಹೆಚ್ಚಿದ್ದು, ದೇವಾಲಯದ ಸುತ್ತಮುತ್ತ ಭಾರಿ ಜನಸಂದಣಿ ಕಂಡುಬಂದಿದೆ. ದೇವಾಲಯದ ರಥ ಬೀದಿ, ಹೊರಾಂಗಣದಲ್ಲಿ ಭಾರಿ ಸಂಖ್ಯೆಯ ಜನ ಸೇರಿದ್ದು, ರಶೀದಿಗಾಗಿ ನೂರಾರು ಭಕ್ತರು ಸರತಿ ಸಾಲಿನಲ್ಲಿ ನಿಂತಿರುವುದು ಕಂಡು ಬಂತು. ಈ ನಡುವೆ ಸೀಮಿತ ಸಂಖ್ಯೆಯಲ್ಲಿ ಸೇವಾ ರಶೀದಿ ವಿತರಿಸುವ ಕಾರಣ ದೂರದಿಂದ ಬಂದ ಭಕ್ತರಿಗೆ ರಶೀದಿ ಸಿಗದೇ ಸೇವಾ ಕೌಂಟರ್‌‌‌ ಸಿಬ್ಬಂದಿಗಳ ಜೊತೆ ವಾಗ್ವಾದವಾದ ಘಟನೆಯೂ ನಡೆದಿದೆ. […]

ಕುಕ್ಕೆ ಸುಬ್ರಹ್ಮಣ್ಯ ಮಠದ ಬಳಿ ಬೆಂಗಳೂರು ಮೂಲದ ಯುವಕ ಆತ್ಮಹತ್ಯೆ

Sunday, October 18th, 2020
Ranganath

ಸುಬ್ರಹ್ಮಣ್ಯ : ಕುಕ್ಕೆ ಸುಬ್ರಹ್ಮಣ್ಯ ದ ಉತ್ತರಾದಿ ಮಠದ ಬಳಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ಮದ್ಯಾಹ್ನ ಸಂಭವಿಸಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಬೆಂಗಳೂರು ಮೂಲದ ರಂಗನಾಥ್ (25) ಎಂದು ಗುರುತಿಸಲಾಗಿದೆ. ಈತ ವಾರದ ಹಿಂದೆ ಮನೆ ಬಿಟ್ಟು ಸುಬ್ರಹ್ಮಣ್ಯಕ್ಕೆ ಬಂದಿದ್ದ ಎಂದು ತಿಳಿದು ಬಂದಿದೆ. ಈತನ ಆತ್ಮಹತ್ಯೆ ಗೆ ಕಾರಣ ಏನೆಂದು ತಿಳಿದು ಬಂದಿಲ್ಲ. ಮೃತ ದೇಹವನ್ನು ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕೊಂಡೊಯ್ಯಲಾಗಿದೆ. ಘಟನಾ ಸ್ಥಳಕ್ಕೆ ಸುಬ್ರಹ್ಮಣ್ಯ ಪೋಲಿಸರು ಭೇಟಿ ನೀಡಿ […]

ಕುಕ್ಕೆ ಸುಬ್ರಹ್ಮಣ್ಯ ಸಮೀಪ ರಸ್ತೆಗೆ ಬಂದ ಕಾಡಾನೆಗಳ ಹಿಂಡು

Saturday, October 10th, 2020
Kodagu Elephant

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ಸಮೀಪ ಇರುವ ಕೊಡಗು ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಇದ್ದಕ್ಕಿದ್ದಂತೆ ಕಾಡಾನೆಗಳ ಹಿಂಡು ಪ್ರತ್ಯಕ್ಷ ಗೊಂಡಿದೆ. ಕುಕ್ಕೆ ಸುಬ್ರಹ್ಮಣ್ಯ ಸಮೀಪ‌ ಅರಣ್ಯ ಪ್ರದೇಶ ಇದ್ದು ಇಲ್ಲಿ ಹೆಚ್ಚಾಗಿ ಕಾಡಾನೆಗಳು ಇದೆ.  ಶನಿವಾರ ಕಾಡಾನೆಗಳ ಹಿಂಡು ರಸ್ತೆ ಇದ್ದಕ್ಕಿದ್ದಂತೆ ರಸ್ತೆ ದಾಟುವ ದೃಶ್ಯ ಕಂಡು ಬಂತು. ಆನೆಗಳ ಹಿಂಡನ್ನು ಕಂಡ ವಾಹನ ಸವಾರರು ಸ್ವಲ್ಪ ಹೊತ್ತು ಅಲ್ಲೇ ವಾಹನಗಳನ್ನು ನಿಲ್ಲಿಸಿ ತಮ್ಮ ಮೊಬೈಲ್ ಕ್ಯಾಮರಾಗಳಲ್ಲಿ ದೃಶ್ಯವನ್ನು ಸೆರೆ ಹಿಡಿದರು.

ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಸರ್ಪ ಸಂಸ್ಕಾರ ಅರ್ಚಕ ನೇಣಿಗೆ ಶರಣು

Thursday, October 8th, 2020
sarpa samskaara

ಸುಬ್ರಹ್ಮಣ್ಯ : ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಸರ್ಪ ಸಂಸ್ಕಾರ ಕೆಲಸ ನಿರ್ವಹಿಸುತ್ತಿದ್ದ ಅರ್ಚಕರೊಬ್ಬರು ತಾನು ವಾಸವಿದ್ದ ಬಾಡಿಗೆ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ  ಗುರುವಾರ ಸಂಜೆ ವರದಿಯಾಗಿದೆ. ಉಪ್ಪಿನಂಗಡಿ ನಾಳ ನಿವಾಸಿಯಾದ ಕೃಷ್ಣ ಮಯ್ಯ ಭಟ್ (55) ಕಳೆದ ಐದು ವರ್ಷಗಳಿಂದ ಕುಕ್ಕೆ ಸುಬ್ರಹ್ಮಣ್ಯ ದೇಗುಲದಲ್ಲಿ ಸರ್ಪಸಂಸ್ಕಾರ ಕ್ರಿಯಾಕರ್ತನಾಗಿ ಕೆಲಸ ನಿರ್ವಹಿಸುತ್ತಿದ್ದರು. ಗುರುವಾರ ತಾನು ವಾಸವಿದ್ದ ಬಾಡಿಗೆ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾವಿಗೆ ಸ್ಪಷ್ಟ ಕಾರಣ ಇನ್ನೂ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಕುಕ್ಕೆ ಸುಬ್ರಹ್ಮಣ್ಯ ಪೊಲೀಸರು […]

ಸೋಮವಾರದಿಂದ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ಸೇವೆಗಳು ಆರಂಭ

Sunday, September 13th, 2020
sarpasamskara

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ಸ್ಥಗಿತಗೊಂಡಿದ್ದ ವಿವಿಧ ಸೇವೆಗಳು ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇರಿದಂತೆ ಎಲ್ಲಾ ಸೇವೆಗಳು  ಸೋಮವಾರದಿಂದ ಆರಂಭವಾಗಲಿದೆ. ಕೊರೊನಾ ಹಿನ್ನೆಲೆಯಲ್ಲಿ ಕೆಲವೊಂದು ಷರತ್ತುಗಳನ್ನು ಪೂಜಾ ವಿಧಿ ವಿಧಾನಗಳಿಗೆ ಸಂಬಂಧಿಸಿದಂತೆ ಅನ್ವಯ ಮಾಡಲಾಗುತ್ತದೆ ಎಂದು ದೇವಾಲಯದ ಆಡಳಿತಾಧಿಕಾರಿ ತಿಳಿಸಿದ್ದಾರೆ. ದೇಗುಲವು ಬೆಳಗ್ಗೆ 6.30 ರಿಂದ ಮಧ್ಯಾಹ್ನ 1.30ರವರೆಗೆ ಮತ್ತು 3.30 ರಿಂದ ರಾತ್ರಿ 8ಗಂಟೆಯವರೆಗೆ ಮಾತ್ರ ತೆರೆದಿರುತ್ತದೆ. ಪ್ರತಿದಿನ ಮೂವತ್ತು ಭಕ್ತರಿಗೆ ಮಾತ್ರ ಸರ್ಪ ಸಂಸ್ಕಾರ, ಆಶ್ಲೇಷ ಬಲಿ ನಡೆಸಲು ಅವಕಾಶ ನೀಡಲಾಗುತ್ತಿದೆ. ಸೇವಾರ್ಥಿಗಳಿಗೆ ಮಾತ್ರ ಭೋಜನ […]

ಕುಕ್ಕೆ ಸುಬ್ರಹ್ಮಣ್ಯ ಕುಮಾರಸ್ವಾಮಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ ಪ್ರಥಮ

Monday, August 10th, 2020
anush

ಸುಬ್ರಹ್ಮಣ್ಯ: ಕಡಬ ತಾಲೂಕು ಕುಕ್ಕೆ ಸುಬ್ರಹ್ಮಣ್ಯ ಕುಮಾರಸ್ವಾಮಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಅನುಷ್ ಎ.ಎಲ್. 2019-20ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 625 ಅಂಕಗಳನ್ನು ಪಡೆದುಕೊಂಡಿದ್ದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದು ಕೊಂಡಿದ್ದಾರೆ. ಕೈಬೆರಳು ರಹಸ್ಯ, ನಿಮ್ಮ ಯಾವ ಬೆರಳಿನಲ್ಲಿ ಅದೃಷ್ಟವಿದೆ ನೋಡಿ ! ಇವರು ಬಳ್ಪ ಗ್ರಾಮದ ಲೊಕೇಶ್ ಮತ್ತು ಉಷಾ ಎಣ್ಣೆಮಜಲು ದಂಪತಿಗಳ ಪುತ್ರ. ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟ್ ನಲ್ಲಿ ಫಲಿತಾಂಶ ಪ್ರಕಟವಾಗಿದೆ. ಈ ಬಾರಿ ಶೇ. 71.80 ಫಲಿತಾಂಶ ಬಂದಿದೆ. […]

ನಾಗರ ಪಂಚಮಿಯಂದು ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪ್ರತ್ಯಕ್ಷನಾದ ನಿಜ ನಾಗರ

Monday, July 27th, 2020
ನಾಗರ ಪಂಚಮಿಯಂದು ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪ್ರತ್ಯಕ್ಷನಾದ ನಿಜ ನಾಗರ

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಾಗನಿಗೆ ಹಾಲೆರೆಯುವ ಸಂದರ್ಭದಲ್ಲಿ ನಿಜ ನಾಗರ ದರ್ಶನ ನೀಡಿ ಅರ್ಚಕರಿಗೆ ಮತ್ತು ಅಲ್ಲಿ ನೆರೆದಿದ್ದವರಿಗೆ ಆಶ್ಚರ್ಯಮೂಡಿಸಿದೆ. ಮೊದಲಿಗೆ ದೇಗುಲದ ನಾಗಪ್ರತಿಷ್ಟೆ ಮಂಟಪದ ಬಳಿ, ನಂತರ ಅರ್ಚಕರು ನಾಗಮಂಟಪದಲ್ಲಿ ಪೂಜೆ ನಡೆಸುತ್ತಿದ್ದ ವೇಳೆ ಹೊರಾಂಗಣದಲ್ಲಿ ಹಾವು ಪ್ರತ್ಯಕ್ಷವಾಗಿದೆ ಎನ್ನಲಾಗಿದೆ. ನಾಗರಪಂಚಮಿಯನ್ನು ಶನಿವಾರ ಪೂರ್ವ ಶಿಷ್ಠ ಸಂಪ್ರದಾಯದಂತೆ ಆಚರಿಸಲಾಯಿತು. ಮದ್ಯಾಹ್ನ ಮಹಾಪೂಜೆಯ ಬಳಿಕ ದೇವಳದ ಅರ್ಚಕ ವೇದಮೂರ್ತಿ ಸತ್ಯನಾರಾಯಣ ನೂರಿತ್ತಾಯರು ದೇವಳದ ಹೊರಾಂಗಣದಲ್ಲಿರುವ ನಾಗಪ್ರತಿಷ್ಠಾ ಮಂಟಪದಲ್ಲಿನ ನಾಗರಾಜನಿಗೆ ವಿಶೇಷ ಕ್ಷೀರಾಭಿಷೇಕ, ಪಂಚಾಮೃತಾಭಿಷೇಕ, ಸೀಯಾಳಾಭಿಷೇಕ, ಜಲಾಭಿಷೇಕ ಮಾಡಿದರು. […]

ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ಶೌಚಾಲಯದಲ್ಲಿ ಆತ್ಮಹತ್ಯೆ ಮಾಡಿಕೊಂಡ ಕಾರ್ಮಿಕ

Friday, July 3rd, 2020
Bihari

ಸುಬ್ರಹ್ಮಣ್ಯ : ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ಬಳಿ ಇರುವ ಶೌಚಾಲಯದಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಬಿಹಾರ ಮೂಲದ 25 ವರ್ಷ ವಯಸ್ಸಿನ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮದ್ಯಾಹ್ನದ ವೇಳೆಗೆ ಕೆಲಸಕ್ಕೆ ಆಗಮಿಸಿದ್ದ ಈ ಯುವಕ ಶೌಚಾಲಯದ ಒಳಗಡೆಯೇ ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.

ಕುಕ್ಕೆ ಸುಬ್ರಹ್ಮಣ್ಯ : 237 ಸರ್ಪ ಸಂಸ್ಕಾರ ಕ್ರಿಯಾಕರ್ತರಿಗೆ ತಲಾ 5,000 ರೂ. ಮೌಲ್ಯದ ಚೆಕ್ ವಿತರಣೆ

Saturday, May 16th, 2020
Angara MLA

ಸುಳ್ಯ: ಕುಕ್ಕೆಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ನಿತ್ಯ ನಡೆಯುತ್ತಿದ್ದ ಸರ್ಪ ಸಂಸ್ಕಾರ ಪೂಜೆ ಕೋವಿಡ್-19 ಲಾಕ್ಡೌನ್ನಿಂದಾಗಿ ಸ್ಥಗಿತಗೊಂಡಿತ್ತು.  ಇದರಿಂದಾಗಿ ಕಷ್ಟಕ್ಕೆ ಸಿಲುಕಿರುವ ಕ್ರಿಯಾಕರ್ತರಿಗೆ ಗೌರವ ಧನವನ್ನು ಶಾಸಕ ಎಸ್. ಅಂಗಾರ ಅವರು ಶನಿವಾರ ವಿತರಿಸಿದರು. ಒಟ್ಟು 237 ಮಂದಿ ಸರ್ಪ ಸಂಸ್ಕಾರ ಕ್ರಿಯಾಕರ್ತರಿಗೆ ತಲಾ 5,000 ರೂ. ಮೌಲ್ಯದ ಚೆಕ್ ನೀಡಿದರು. ಕ್ರಿಯಾಕರ್ತರ ಪರವಾಗಿ ದೇವಸ್ಥಾನದ ವತಿಯಿಂದ ಮುಜರಾಯಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಧನ ಸಹಾಯಕ್ಕೆ ಮನವಿ ಸಲ್ಲಿಸಲಾಗಿತ್ತು. ಧನ ಸಹಾಯ ವಿತರಿಸಿದ ಶಾಸಕ ಎಸ್.ಅಂಗಾರ ಕ್ರಿಯಾಕರ್ತರ […]