Blog Archive

ಕುಕ್ಕೆ‌ ಸುಬ್ರಹ್ಮಣ್ಯದಲ್ಲಿ ಸಿಎಂ ಕುಮಾರಸ್ವಾಮಿ ತುಲಾಭಾರ ಸೇವೆ..!

Tuesday, August 14th, 2018
kumarswamy-kukke

ಮಂಗಳೂರು: ಮುಖ್ಯಮಂತ್ರಿ ಕುಮಾರಸ್ವಾಮಿ ಇಂದು ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ತುಲಾಭಾರ ಸೇವೆ ನಡೆಸಿದರು. ಕುಕ್ಕೆ ಸುಬ್ರಹ್ಮಣ್ಯಕ್ಕೆ ಮಾಜಿ ಪ್ರಧಾನಿ ದೇವೇಗೌಡ, ತಾಯಿ ಚೆನ್ನಮ್ಮ, ಪತ್ನಿ ಅನಿತಾ ಕುಮಾರಸ್ವಾಮಿ ಜೊತೆ ಆಗಮಿಸಿದ ಸಿಎಂ ದೇವರ ದರ್ಶನಗೈದು ತುಲಾಭಾರ ಸೇವೆ ನಡೆಸಿದರು. ಒಣದ್ರಾಕ್ಷಿಯಲ್ಲಿ ಒಮ್ಮೆ ತುಲಾಭಾರ ಸೇವೆ ನಡೆಸಿದರೆ ಮತ್ತೊಮ್ಮೆ ಅಕ್ಕಿ ಬೆಲ್ಲ ತೆಂಗಿನಕಾಯಿಯಿಂದ ತುಲಾಭಾರ ಸೇವೆ ನಡೆಸಿದರು.

ಬೆಳ್ತಂಗಡಿ, ಸುಳ್ಯದಲ್ಲಿ ಭಾರಿ ಮಳೆ..!

Thursday, August 9th, 2018
belthangady

ಮಂಗಳೂರು: ಪಶ್ಚಿಮಘಟ್ಟದಲ್ಲಿ ಬುಧವಾರದಿಂದ ಮಳೆ ಸುರಿಯುತ್ತಿದ್ದು ಪಶ್ಚಿಮ ಘಟ್ಟದ ತಪ್ಪಲಲ್ಲಿರುವ ಬೆಳ್ತಂಗಡಿ, ಸುಳ್ಯದಲ್ಲಿಯೂ ವರುಣನ ಆರ್ಭಟ ಜೋರಾಗಿದೆ. ಭಾರಿ ಮಳೆಯ ಪರಿಣಾಮ ಕುಮಾರಧಾರ, ನೇತ್ರಾವತಿ ನದಿಯಲ್ಲಿ ನೀರಿನ ಹರಿವು ಹೆಚ್ಚಳವಾಗಿದೆ. ಮಳೆಯ ಪರಿಣಾಮ ಪುತ್ತೂರು ತಾಲೂಕಿನ ಗುಂಡ್ಯಾ ಸಮೀಪದ ಉದನೆಯಲ್ಲಿ ಸೇತುವೆಯ ಮೇಲೆ ನೀರು ಹರಿಯುತ್ತಿದೆ. ಶಿರಾಡಿ ಗ್ರಾಮದ ಹಲವು ‌ಮನೆಗಳು ಜಲಾವೃತವಾಗಿದ್ದು, ಉಪ್ಪಿನಂಗಡಿಯಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ‌ ಸಂಪರ್ಕ ಕಲ್ಪಿಸುವ ಹೊಸ್ಮಠ ಸೇತುವೆಯೂ ಮುಳುಗಡೆಯಾಗಿದೆ.

ಚಂದ್ರ ಗ್ರಹಣದ ಹಿನ್ನೆಲೆ..ಕುಕ್ಕೆ ಸುಬ್ರಹ್ಮಣ್ಯದಲ್ಲಿ ದೇವರ ದರ್ಶನದಲ್ಲಿ ಬದಲಾವಣೆ!

Friday, July 27th, 2018
kukke-subramanya

ಮಂಗಳೂರು: ಚಂದ್ರ ಗ್ರಹಣದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡದ ಪುಣ್ಯ ಕ್ಷೇತ್ರಗಳಲ್ಲೊಂದಾದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ದೇವರ ದರ್ಶನದಲ್ಲಿ ಬದಲಾವಣೆ ಮಾಡಲಾಗಿದೆ. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸಂಜೆ 7ರ ನಂತರ ಭಕ್ತಾದಿಗಳಿಗೆ ದೇವರ ದರ್ಶನಕ್ಕೆ ಅವಕಾಶ ಇಲ್ಲ ಎಂದು ದೇಗುಲದ ಆಡಳಿತ ಮಂಡಳಿ ತಿಳಿಸಿದೆ. ಪ್ರತಿನಿತ್ಯ 7.30ಕ್ಕೆ ನಡೆಯುತ್ತಿದ್ದ ಮಹಾಪೂಜೆಯನ್ನು ಇಂದು 6.30ಕ್ಕೆ ನಿಗದಿಪಡಿಸಲಾಗಿದೆ. 7 ಗಂಟೆ ನಂತರ ದೇವಸ್ಥಾನಕ್ಕೆ ಪ್ರವೇಶ ನಿರಾಕರಿಸಲಾಗಿದೆ. ಇಂದು ಸಂಜೆ ನಡೆಯಬೇಕಿದ್ದ ಆಶ್ಲೇಷ ಪೂಜೆಯನ್ನು ರದ್ದುಗೊಳಿಸಲಾಗಿದೆ. ಅಷ್ಟೆ ಅಲ್ಲದೆ ದೇವಾಲಯದಲ್ಲಿ ಇಂದು ರಾತ್ರಿ ಅನ್ನಪ್ರಸಾದವಿರುವುದಿಲ್ಲ ಎಂದು […]

ಕುಕ್ಕೆ ಸುಬ್ರಹ್ಮಣ್ಯ ಭಕ್ತರ ಅನುಕೂಲಕ್ಕಾಗಿ ಇಂದಿನಿಂದ ಸಂಜೆಯೂ ಆಶ್ಲೇಷಾಬಲಿ ಸೇವೆ..!

Thursday, July 5th, 2018
ಕುಕ್ಕೆ ಸುಬ್ರಹ್ಮಣ್ಯ ಭಕ್ತರ ಅನುಕೂಲಕ್ಕಾಗಿ ಇಂದಿನಿಂದ ಸಂಜೆಯೂ ಆಶ್ಲೇಷಾಬಲಿ ಸೇವೆ..!

ಮಂಗಳೂರು: ಕುಕ್ಕೆ ಸುಬ್ರಹ್ಮಣ್ಯ ದೇಗುಲದಲ್ಲಿ ಭಕ್ತರ ಅನುಕೂಲಕ್ಕಾಗಿ ಇಂದಿನಿಂದ ಆಶ್ಲೇಷಾ ಬಲಿ ಸೇವೆಯನ್ನು ಸಂಜೆ ವೇಳೆಯಲ್ಲೂ ಆರಂಭಿಸಲಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ದೇಗುಲಕ್ಕೆ ಹರಕೆ ಸೇವೆಗಳನ್ನು ಪೂರೈಸಲು ಬರುವ ಭಕ್ತರ ಸಂಖ್ಯೆ ಹೆಚ್ಚಾಗಿದೆ. ಪ್ರತಿನಿತ್ಯ ಸುಮಾರು 400-500 ಮಂದಿ ಆಶ್ಲೇಷಾ ಬಲಿ ಸೇವೆ ಸಲ್ಲಿಸುತ್ತಾರೆ. ವಿಶೇಷ ದಿನ ಹಾಗೂ ಸಾರ್ವಜನಿಕ ರಜಾ ದಿನಗಳಲ್ಲಿ ಇದರ ಪ್ರಮಾಣ 1,200ರಿಂದ 1,400ರ ತನಕವೂ ಏರಿಕೆಯಾಗುತ್ತಿದೆ. ಹೀಗಾಗಿ ಸಂಜೆಯೂ ಸೇವೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ದೇವಸ್ಥಾನದ ಮಂಡಳಿ ವರ್ಗ ತಿಳಿಸಿದೆ. ಮಧ್ಯಾಹ್ನ 12.30ರಿಂದ […]

ರಾಜ್ಯದ ಶ್ರೀಮಂತ ದೇಗುಲಗಳಲ್ಲಿ ದಕ್ಷಿಣ ಕನ್ನಡದ ಕುಕ್ಕೆ ಸುಬ್ರಹ್ಮಣ್ಯ ನಂಬರ್ ಒನ್ ..!

Thursday, June 28th, 2018
subramanya

ಮಂಗಳೂರು: ರಾಜ್ಯದ ಶ್ರೀಮಂತ ದೇಗುಲಗಳ ಪಟ್ಟಿ ಬಿಡುಗಡೆಯಾಗಿದ್ದು, ದಕ್ಷಿಣ ಕನ್ನಡದ ಕುಕ್ಕೆ ಸುಬ್ರಹ್ಮಣ್ಯ ನಂಬರ್ ಒನ್ ಸ್ಥಾನದಲ್ಲಿದೆ. ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಎರಡನೇ ಸ್ಥಾನದಲ್ಲಿದ್ದು, ಮೈಸೂರಿನ ಚಾಮುಂಡೇಶ್ವರಿ ದೇವಾಲಯ ತೃತೀಯ ಸ್ಥಾನದಲ್ಲಿದೆ. ಹಾಗೂ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ನಾಲ್ಕನೇ ಸ್ಥಾನದಲ್ಲಿದೆ. ಕರಾವಳಿ ಜಿಲ್ಲೆಗಳ ದೇಗುಲಗಳು ಮೊದಲ ಸ್ಥಾನದಲ್ಲಿದ್ದು, ಮುಜರಾಯಿ ಇಲಾಖೆ ಈ ಕ್ರೆಡಿಟ್ ಕೊಟ್ಟಿದೆ.

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಅನಧಿಕೃತ ಪೂಜೆ ವಿರೋದಿಸಿ ಬೈಕ್ ರ‍್ಯಾಲಿ, ಕರಪತ್ರ ಹಂಚಿಕೆ

Saturday, June 16th, 2018
Kukke Subrahmanya

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರವು ನಾಗದೋಷ ಪರಿಹಾರಕ್ಕೆ ಹೆಸರುವಾಸಿಯಾಗಿರುವ ಕ್ಷೇತ್ರವಾಗಿದೆ. ಇತ್ತೀಚಿನ ದಿನಗಳಲ್ಲಿ ಕುಕ್ಕೆ ಕ್ಷೇತ್ರದಲ್ಲಿ ನಡೆಸಲಾಗುವ ಪೂಜೆಗಳನ್ನು ಸಂಪುಟ ನರಸಿಂಹ ಮಠದಲ್ಲೂ ಹಾಗೂ ಅನ್ಯಕಡೆಗಳಲ್ಲಿ ನಡೆಸಲಾಗುತ್ತಿದೆ. ಕ್ಷೇತ್ರದ ಹೆಸರಿನಲ್ಲಿ ಮಠವು ಅಕ್ರಮವಾಗಿ ಸರ್ಪಸಂಸ್ಕಾರ ಪೂಜೆಗಳನ್ನು ನಡೆಸುತ್ತಿದೆ ಎನ್ನುವ ಆರೋಪದ ನಡುವೆ ಇದೀಗ ಸುಬ್ರಹ್ಮಣ್ಯ ಕ್ಷೇತ್ರದ ಭಕ್ತರ ಹಿತರಕ್ಷಣಾ ವೇದಿಕೆ ಈ ಬಗ್ಗೆ ಜನತೆಗೆ ತಿಳುವಳಿಕೆ ನೀಡುವ ಕುರಿತಾಗಿ ಕ್ಷೇತ್ರದ ಸುತ್ತಮುತ್ತ ಪ್ರದೇಶಗಳಲ್ಲಿ ಬೈಕ್ ರ‍್ಯಾಲಿ ಹಾಗೂ ಕರಪತ್ರಹಂಚುವ ಕಾರ್ಯ ಹಮ್ಮಿಕೊಂಡಿದೆ ಎಂದು ವೇದಿಕೆಯ ಕಾನೂನು ಸಲಹೆಗಾರ […]

ಕುಕ್ಕೆ ಸುಬ್ರಹ್ಮಣ್ಯ ದ ವಿದ್ಯಾರ್ಥಿನಿಗೆ ಎಸ್ ಎಸ್ ಎಲ್ ಸಿ ಯಲ್ಲಿ ರಾಜ್ಯಕ್ಕೆ ತೃತೀಯ ಸ್ಥಾನ

Monday, May 7th, 2018
subramanya

ಮಂಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ಕುಕ್ಕೆ ಸುಬ್ರಹ್ಮಣ್ಯ ದ ವಿದ್ಯಾರ್ಥಿನಿಗೆ ಎಸ್ ಎಸ್ ಎಲ್ ಸಿ ಯಲ್ಲಿ ರಾಜ್ಯಕ್ಕೆ ತೃತೀಯ ಸ್ಥಾನ ಬಂದಿದೆ. ಮಾಜಿ ಪ್ರಾಂಶುಪಾಲ, ಪತ್ರಕರ್ತ ದಿ.ವಿಠಲ ರಾವ್ ಅವರ ಪುತ್ರಿ ಅಭಿಜ್ಞಾ ರಾವ್ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 625 ರಲ್ಲಿ 623 ಅಂಕ ಪಡೆದು ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಯಾಗಿದ್ದಾರೆ. ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ ವಿದ್ಯಾರ್ಥಿನಿ ಇವರಾಗಿದ್ದು, ಇವರ ಈ ಸಾಧನೆ ಶಾಲೆಗೆ, ಶಿಕ್ಷಕ ವೃಂದಕ್ಕೆ ಕೀರ್ತಿ ತಂದೊದಗಿಸಿದೆ.

ಕುಕ್ಕೆ ಸುಬ್ರಹ್ಮಣ್ಯನಿಗೆ ಬ್ರಹ್ಮರಥ ನಿರ್ಮಾಣಕ್ಕೆ ವೀಳ್ಯ ಸ್ವೀಕರಿಸಿದ ಮುತ್ತಪ್ಪ ರೈ

Friday, March 16th, 2018
mutthappa-rai

ಮಂಗಳೂರು: ಇದು ನನ್ನ ಜೀವನದ ಒಂದು ಭಾಗ್ಯ. ಪುತ್ತೂರು ಮಹಾಲಿಂಗೇಶ್ವರನ ಕೃಪೆಯಿಂದ ಇದೀಗ ಮೂರನೇ ಬ್ರಹ್ಮರಥವನ್ನು ನೀಡುವ ಭಾಗ್ಯ ದೊರಕಿದೆ ಎಂದು ಉದ್ಯಮಿ ಎನ್.ಮುತ್ತಪ್ಪ ರೈ ಹೇಳಿದರು. ಅವರು ಮಹತೋಭಾರ ಕುಕ್ಕೆಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸೇವಾರೂಪದಲ್ಲಿ ನಿರ್ಮಿಸಿ ಕೊಡುತ್ತಿರುವ ನೂತನ ಬ್ರಹ್ಮರಥ ನಿರ್ಮಾಣಕ್ಕೆ ವೀಳ್ಯ ಸ್ವೀಕರಿಸಿ ಮಾತನಾಡಿದರು. ಇದು ನಾವು ಕೊಡುವುದಲ್ಲ ಬದಲಾಗಿ ಸಕಲ ಭಕ್ತರ ಪರವಾಗಿ ಕುಕ್ಕೆಸುಬ್ರಹ್ಮಣ್ಯದ ಎಲ್ಲಾ ಜನತೆಯ ಪರವಾಗಿ ನಮ್ಮ ಕೈಯಿಂದ ಭಗವಂತ ಕೊಡಿಸುತ್ತಿದ್ದಾನೆ. ಭಗವಂತ ನೀಡಿದ ಭಾಗ್ಯವನ್ನು ನಾವು ಪೂರೈಸುತ್ತಿದ್ದೇವೆ. ಶ್ರೀ ದೇವರ […]

ಕುಕ್ಕೆ ಸುಬ್ರಹ್ಮಣ್ಯಕ್ಕೆ 2.5 ಕೋಟಿಯ ಬ್ರಹ್ಮರಥ ನೀಡಲಿರುವ ಮುತ್ತಪ್ಪ ರೈ

Wednesday, March 14th, 2018
muthappa-rai

ಮಂಗಳೂರು: ಪರಶುರಾಮ ಸೃಷ್ಟಿಯ ಸಪ್ತ ಕ್ಷೇತ್ರಗಳಲ್ಲಿ ಒಂದಾದ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಬ್ರಹ್ಮ ರಥ ನೀಡಲು ಉದ್ಯಮಿ ಮುತ್ತಪ್ಪ ರೈ ಹಾಗೂ ಬಿಡದಿ ರಿಯಾಲಿಟಿ ವೆಂಚರ್ ಪಾಲುದಾರ ಅಜಿತ್ ಶೆಟ್ಟಿ ನಿರ್ಧರಿಸಿದ್ದಾರೆ. ಜಂಟಿಯಾಗಿ ಎರಡೂವರೆ ಕೋಟಿ ಮೌಲ್ಯದ ಬ್ರಹ್ಮರಥವನ್ನು ದೇವಸ್ಥಾನಕ್ಕೆ ನೀಡಲು ನಿರ್ಧರಿಸಿದ್ದಾರೆ. ಗುರುವಾರ ಇಬ್ಬರೂ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಿದ್ದಾರೆ. ಇದಾದ ಬಳಿಕ ಬ್ರಹ್ಮರಥ ನೀಡುವುದಕ್ಕೆ ಎಲೆ ವೀಳ್ಯ ಸ್ವೀಕರಿಸಲಿದ್ದಾರೆ. ಬಳಿಕ ಬ್ರಹ್ಮರಥ ಕೆತ್ತನೆಯ ಕಾರ್ಯ ಆರಂಭವಾಗಲಿದೆ. ಬ್ರಹ್ಮರಥವನ್ನ ರಾಷ್ಟ್ರ,ರಾಜ್ಯ,ಶಿಲ್ಪಕಲಾ ಅಕಾಡಮಿ […]

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಹಿಳಾ ಭಕ್ತರ ಮೇಲೆ ತಲವಾರು ಬೀಸಿದ ಗೋಕಳ್ಳರು

Friday, February 23rd, 2018
subramanya

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದನಗಳ್ಳರ ಅಟ್ಟಹಾಸ ಮಿತಿ ಮೀರುತ್ತಿದೆ. ಮಾರಕಾಸ್ತ್ರಗಳನ್ನು ಹಿಡಿದು ಮನೆ ಮಂದಿಗೆ ಬೆದರಿಕೆ ಒಡ್ಡಿ ಹಟ್ಟಿಯಿಂದ ಹಸುಗಳನ್ನು ಕದ್ದೊಯ್ಯುತ್ತಿದ್ದ ದನಗಳ್ಳರು ಈಗ ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೂ ತಮ್ಮ ಕರಾಳ ಹಸ್ತ ಚಾಚಿದ್ದಾರೆ. ಶ್ರೀಕ್ಷೇತ್ರ ಸುಬ್ರಹ್ಮಣ್ಯದಲ್ಲಿ ರಾಜಾರೋಷವಾಗಿ ದನಕಳ್ಳತನ ಮಾಡುತ್ತಿದ್ದವರನ್ನು ಪ್ರಶ್ನಿಸಿದ ಮಹಿಳಾ ಭಕ್ತರ ಮೇಲೆ ದನಕಳ್ಳರು ತಲವಾರು ಬೀಸಿ ಬೆದರಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬುಧವಾರ ತಡರಾತ್ರಿ ಈ ಘಟನೆ ನಡೆದಿದ್ದು ಕ್ಷೇತ್ರದ ಭಕ್ತರಲ್ಲಿ ಭಯದ ವಾತಾವರಣ ಸೃಷ್ಟಿಸಿದೆ. ಸುಬ್ರಹ್ಮಣ್ಯದಲ್ಲಿ […]