ಸೌರ ವಿದ್ಯುತ್ ಘಟಕಗಳ ಅಳವಡಿಕೆಗೆ ಬ್ಯಾಂಕ್ಗಳ ವಿಶೇಷ ಸಾಲ ಅಗತ್ಯ
Monday, December 7th, 2015ಮಂಗಳೂರು: ಮನೆಗಳ ಮೇಲ್ಛಾವಣಿಗಳಲ್ಲಿ ಸೌರ ವಿದ್ಯುತ್ ಘಟಕಗಳ ಅಳವಡಿಕೆಗೆ ಬ್ಯಾಂಕ್ಗಳು ವಿಶೇಷ ಒತ್ತು ನೀಡಿ ಅಗತ್ಯ ಸಾಲ ಸೌಲಭ್ಯವನ್ನು ತ್ವರಿತಗತಿಯಲ್ಲಿ ಒದಗಿಸಲು ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎ. ಬಿ. ಇಬ್ರಾಹಿಂ ಅವರು ಹೇಳಿದರು. ಸೌರಶಕ್ತಿ ಮೇಲ್ಛಾವಣಿ ಘಟಕ ಅಳವಡಿಕೆಯ ಕುರಿತು ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ಜರಗಿದ ಸಮಾಲೋಚನಾ ಸಭೆಯಲ್ಲಿ ಮಾತನಾಡಿದ ಅವರು ಅರ್ಜಿ ಸಲ್ಲಿಸಿದ ಒಂದು ವಾರದೊಳಗೆ ಸಾಲ ಲಭ್ಯವಾಗುವಂತೆ ಬ್ಯಾಂಕ್ಗಳು ವಿಶೇಷ ಮುತುವರ್ಜಿ ವಹಿಸಬೇಕು ಹಾಗೂ ಬಡ್ಡಿದರವನ್ನೂ ಕಡಿಮೆ ಪ್ರಮಾಣದಲ್ಲಿ ವಿಧಿಸಬೇಕು ಎಂದು ಕೋರಿದರು. ಜಿಲ್ಲಾಧಿಕಾರಿ […]