ಐತಿಹಾಸಿಕವಾಗಿ ನಾಲ್ಕು ಸಾವಿರದಷ್ಟು ವೈದ್ಯರ ನೇಮಕ:ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್

Monday, June 28th, 2021
Dr Sudhakar

ಬೆಂಗಳೂರು :  ಸರ್ಕಾರಿ ಆಸ್ಪತ್ರೆಗಳಲ್ಲಿ ಕಡ್ಡಾಯ ಸೇವೆ ಸಲ್ಲಿಕೆ ಕ್ರಮ ಅನುಷ್ಠಾನಗೊಂಡಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಗಳ ವಿವಿಧ ಹುದ್ದೆಗಳಿಗೆ 2,053 ವೈದ್ಯರನ್ನು ಗುತ್ತಿಗೆ ಆಧಾರದಲ್ಲಿ ನೇಮಿಸಲಾಗಿದೆ. ಇತ್ತೀಚೆಗೆ ಪೂರ್ಣಗೊಂಡ 1,750 ವೈದ್ಯರ ಐತಿಹಾಸಿಕ ನೇರ ನೇಮಕಾತಿ ಸೇರಿದಂತೆ ಕೊರೊನಾ ಸಂದರ್ಭದಲ್ಲಿ ರಾಜ್ಯ ಸರ್ಕಾರ ಒಟ್ಟು 4,000 ವೈದ್ಯರನ್ನ ನೇಮಿಸಿಕೊಂಡಿದೆ, ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಎಂಬಿಬಿಎಸ್ ಪದವೀಧರರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ […]

ಕೊರೋನ ಯೋಧರು ಎಂದು ಆಸ್ಪತ್ರೆ ಗಳಲ್ಲಿ ದುಡಿಸಿಕೊಳ್ಳಲಾಗುತ್ತಿದೆಯೇ ಹೊರತು, ನಮಗೆ ಸೌಲಭ್ಯ ನೀಡುತ್ತಿಲ್ಲ

Monday, October 5th, 2020
contract doctors

ಮಂಗಳೂರು : ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ವೈದ್ಯಕೀಯ ಶಿಕ್ಷಣ ಹೊರಗುತ್ತಿಗೆ ನೌಕರರ ಪ್ರತಿಭಟನೆ 12 ದಿನಕ್ಕೆ ಕಾಲಿಟ್ಟಿದ್ದು ನಗರದ ಮನಪಾ ಗಾಂಧಿ ಪ್ರತಿಮೆಯ ಬಳಿ ಸೋಮವಾರ ಜಿಲ್ಲಾ ಘಟಕದ ವತಿಯಿಂದ ಪ್ರತಿಭಟನಾ ಪ್ರದರ್ಶನ ನಡೆಯಿತು. ಸರಕಾರದ ಆಸ್ಪತ್ರೆಯಲ್ಲಿ 15ರಿಂದ 18 ವರ್ಷಗಳಿಂದ ದುಡಿಯುತ್ತಿರುವ ಆರೋಗ್ಯ ಕಾರ್ಯಕರ್ತರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ಇನ್ನೂ ಜಾರಿಯಾಗಿಲ್ಲ. ತಾನು ಕೂಡಾ 15 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದೇನೆ. ಗುತ್ತಿಗೆ, ಹೊರಗುತ್ತಿಗೆ ನೌಕರರಾಗಿ ಸೇವೆ ಸಲ್ಲಿಸುತ್ತಿರುವ ನಮಗೆ ಕಾರ್ಮಿಕ […]

ಪ್ರತಿಪಕ್ಷಗಳ ಆರೋಪ ನಿರಾಧಾರ -ಆರೋಗ್ಯ ಸಚಿವ ಬಿ.ಶ್ರೀರಾಮುಲು

Monday, July 20th, 2020
sriramulu

ಬೆಂಗಳೂರು: ಮಾರಕ ಕೋವಿಡ್-19 ಸಾಂಕ್ರಾಮಿಕ ರೋಗದ ಸಮಯದಲ್ಲಿ ಚಿಕಿತ್ಸೆಗಾಗಿ ಅಗತ್ಯವಿರುವ ಆರೋಗ್ಯ ಸಂಬಂಧಿತ ಉಪಕರಣಗಳ ಖರೀದಿಯಲ್ಲಿ ರಾಜ್ಯ ಸರ್ಕಾರ ಅವ್ಯವಹಾರ ನಡೆಸಿದೆ ಎನ್ನುವ ಪ್ರತಿಪಕ್ಷಗಳ ಆರೋಪ ನಿರಾಧಾರವಾಗಿದ್ದು, ಇಂತಹ ಯಾವುದೇ ಪ್ರಕರಣಗಳು ನಡೆದಿರುವುದಿಲ್ಲ, ಅವ್ಯವಹಾರ ಸಾಭೀತದಾದಲ್ಲಿ ತಕ್ಷಣವೇ ರಾಜಿನಾಮೆ ನೀಡಲು ಸಿದ್ಧ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಅವರು ಸ್ಪಷ್ಟಪಡಿಸಿದ್ದಾರೆ. ಪ್ರತಿಪಕ್ಷಗಳ ಆರೋಪ ಕುರಿತು ಇಂದು ವಿಕಾಸಸೌಧದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿನ್ನು ಉದ್ದೇಶಿಸಿ ಮಾತನಾಡಿದ ಅವರು ಪ್ರತಿಪಕ್ಷಗಳು ಕಳೆದ ಮಾರ್ಚ್‍ನಲ್ಲಿ ಇದ್ದ ರಾಜ್ಯದ ಪರಿಸ್ಥಿತಿಯನ್ನು […]

ನಗರದ ಪುರಭವನದಲ್ಲಿ ಮಲೇರಿಯಾ ಮತ್ತು ಡೆಂಗ್ಯೂ ಜಾಗೃತಿ ಕಾರ್ಯಕ್ರಮ

Monday, July 29th, 2013
Maleria Dengue

ಮಂಗಳೂರು : ಹೆಲ್ತ್  ಕನ್ಸೆರ್ನ್ ಪೌಂಡೇಶನ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಶ್ರಯದಲ್ಲಿ ಮಲೇರಿಯಾ ಮತ್ತು ಡೆಂಗ್ಯೂ ನಿಯಂತ್ರಣ ಕಾರ್ಯಕ್ರಮವು ಜುಲೈ17 ರಂದು ಪುರಭವನದಲ್ಲಿ ನಡೆಯಿತು. ಇದರ ಉದ್ಘಾಟನೆಯನ್ನು ಎಂಎಲ್ ಸಿ ಗಣೇಶ್ ಕಾರ್ಣಿಕ್ ನೆರವೇರಿಸಿದರು. ಉದ್ಘಾಟನೆಯ ಬಳಿಕ ಮಾತನಾಡಿದ ಕಾರ್ಣಿಕ್ ಅವರು ರೋಗಗಳ ಬಗ್ಗೆ ಜನರಲ್ಲಿ ನೈರ್ಮಲ್ಯ ಮತ್ತು ಶುಚಿತ್ವದ ಬಗ್ಗೆ ಅರಿವು ಮೂಡಿಸಬೇಕು. ನಗರಗಳಲ್ಲಿ ಚರಂಡಿ ಮತ್ತು ಮನೆಯ ಆವರಣದಲ್ಲಿ ಕೊಳಕು ನೀರು ನಿಲ್ಲದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು. ಮಲೇರಿಯಾ ಮತ್ತು ಡೆಂಗ್ಯೂವಿನಂತಹ ರೋಗಗಳ […]

ಆರೋಗ್ಯಯುತ ಸಮಾಜ ನಿರ್ಮಾಣಕ್ಕೆ ಇಲಾಖೆ ಆದ್ಯತೆ: ಆರೋಗ್ಯ ಸಚಿವ

Tuesday, July 9th, 2013
Primary Health Care Centre inaugurated at Kudupu

ಮಂಗಳೂರು : ಆಸ್ಪತ್ರೆಗಳ ಸಂಖ್ಯೆಯನ್ನು ಹೆಚ್ಚಳ ಮಾಡದೆ ಇರುವ ಆಸ್ಪತ್ರೆಗಳನ್ನೇ ಸುಸ್ಸಜ್ಜಿತಗೊಳಿಸಿ ಜನರಲ್ಲಿ ರೋಗ ರುಜಿನಗಳ ಬಗ್ಗೆ ಜಾಗೃತಿ ಹಾಗೂ ರೋಗ ಮುಕ್ತ ಪರಿಸರ ನಿರ್ಮಾಣ ಆರೋಗ್ಯ ಇಲಾಖೆಯ ಆದ್ಯತೆಯಾಗಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀ ಯು ಟಿ ಖಾದರ್ ಅವರು ಹೇಳಿದರು. ಅವರು ಸೋಮವಾರ ಕುಡುಪುವಿನಲ್ಲಿ ಒಂದು ಕೋಟಿ ಎರಡು ಲಕ್ಷ ರೂ.ಗಳಲ್ಲಿ ನಿರ್ಮಾಣಗೊಂಡ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಕಟ್ಟಡಗಳನ್ನು ನಿರ್ಮಿಸಿ, ಅಗತ್ಯ ಶುಶ್ರೂಷಾ ಉಪಕರಣಗಳಿಲ್ಲದ, ನಿರ್ವಹಣೆಯಿಲ್ಲದ ಆಸ್ಪತ್ರೆಗಳ […]