ನಾಡಿನೆಲ್ಲೆಡೆ ಭಕ್ತರಿಂದ ಸಂಭ್ರಮದ ನಾಗರಪಂಚಮಿ ಆಚರಣೆ..!
Wednesday, August 15th, 2018ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ನಾಗ ದೇವಸ್ಥಾನಗಳಲ್ಲಿ ನಾಗರಪಂಚಮಿಯನ್ನು ಬುಧವಾರ ಭಕ್ತಿ ಮತ್ತು ಶ್ರದ್ಧೆಯಿಂದ ಆಚರಿಸಿದರು. ಮಂಗಳೂರಿನ ಇತಿಹಾಸ ಪ್ರಸಿದ್ಧ ಕುಡುಪು ಅನಂತ ಪದ್ಮನಾಭ ದೇವಸ್ಥಾನದಲ್ಲಿ ಮುಂಜಾನೆಯೇ ಭಾರಿ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಸರತಿ ಸಾಲಿನಲ್ಲಿ ನಿಂತು ನಾಗ ದೇವರಿಗೆ ಹಾಲೆರೆದು ವಿಶೇಷ ಪೂಜೆ ಸಲ್ಲಿಸುವ ಮೂಲಕ ನಾಗರಪಂಚಮಿಯನ್ನು ಆಚರಿಸಿದರು. ಕುಡುಪು ದೇವಸ್ಥಾನದಲ್ಲಿ ಪ್ರಧಾನ ಆರ್ಚಕರ ಕೃಷ್ಣರಾಜ ತಂತ್ರಿಗಳ ನೇತೃತ್ವದಲ್ಲಿ ಹಾಲು, ಕ್ಷೀರಾ, ತುಪ್ಪ, ಜೇನಿನೊಂದಿಗೆ ಪಂಚಾಮೃತ ಆಭಿಷೇಕವನ್ನು ಮಾಡಿ ವಿಶೇಷ ಪೂಜೆ ನೆರವೇರಿಸಿದರು. ಪೂಜೆಯ ಅಂಗವಾಗಿ ದೇವಸ್ಥಾನ ಹಾಗೂ ಹುತ್ತಗಳಿಗೆ ಭೇಟಿ ನೀಡಿ, […]