ಕುಮಾರಧಾರಾ ನದಿಗೆ ಬಿದ್ದ ಟ್ಯಾಂಕರ್

Wednesday, August 10th, 2016
Gas-Tanker

ಮಂಗಳೂರು: ಮಂಗಳೂರಿನಿಂದ ಬೆಂಗಳೂರಿಗೆ ಗ್ಯಾಸ್ ಸಾಗಣೆ ಮಾಡುತ್ತಿದ್ದ ಎಚ್‌ಪಿಸಿಎಲ್‌ ಕಂಪನಿಗೆ ಸೇರಿದ ಟ್ಯಾಂಕರ್ ಕುಮಾರಧಾರಾ ನದಿಗೆ ಬಿದ್ದಿದೆ. ಟ್ಯಾಂಕರ್‌ನಿಂದ ಭಾರೀ ಪ್ರಮಾಣದಲ್ಲಿ ಗ್ಯಾಸ್ ಸೋರಿಕೆಯಾಗುತ್ತಿದ್ದು, ಆತಂಕ ಸೃಷ್ಟಿಯಾಗಿದೆ. ಮಂಗಳವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಉಪ್ಪಿನಂಗಡಿ ಬಳಿಯ ಉದನೆ ನರ್ಸರಿ ಬಳಿ ಚಾಲಕನ ನಿಯಂತ್ರಣ ತಪ್ಪಿದ ಟ್ಯಾಂಕರ್ ನದಿಗೆ ಉರುಳಿ ಬಿದ್ದಿದೆ. ಲಾರಿ ಸೇತುವೆಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಚಾಲಕ ಬ್ರೇಕ್ ಹಾಕಿದಾಗ ಟ್ಯಾಂಕರ್ ನದಿಗೆ ಉರುಳಿದೆ. ಕುಮಾರಧಾರಾ ನದಿಗೆ ಗ್ಯಾಸ್ ಸೋರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಕೆಲವು ಹೊತ್ತು […]

ಕುಡಿಯುವ ನೀರಿಗಾಗಿ ದ.ಕ. ಜಿಲ್ಲಾಧಿಕಾರಿಗಳನ್ನು ಬೇಟಿ ಮಾಡಿದ ಕಾರ್ಪೊರೇಟರ್‌ಗಳು

Saturday, April 21st, 2012
Congress Corporaters

ಮಂಗಳೂರು : ನಗರದ ಜನರ ಕುಡಿಯುವ ನೀರಿನ ಬವಣೆಯನ್ನು ನೀಗಿಸಲು ಕ್ರಮ ಕೈಗೊಳ್ಳಬೇಕು ಎಂದು ಮಂಗಳೂರು ಮಹಾ ನಗರ ಪಾಲಿಕೆಯ ಕಾರ್ಪೊರೇಟರ್‌ಗಳ ನಿಯೋಗ ದ.ಕ. ಜಿಲ್ಲಾಧಿಕಾರಿಗಳನ್ನು ಒತ್ತಾಯಿಸಿದೆ. ತುಂಬೆ ವೆಂಟೆಡ್‌ ಡ್ಯಾಮ್‌ನಿಂದ ಮೇಲ್ಗಡೆ ನೇತ್ರಾವತಿ ಮತ್ತು ಕುಮಾರಧಾರಾ ನದಿಗಳಿಗೆ ಕಟ್ಟಿರುವ ಎಲ್ಲ ಅಣೆಕಟ್ಟುಗಳನ್ನು ಡಿಸೆಂಬರ್‌ ಬಳಿಕ ಮಳೆ ಬರುವ ತನಕ ಜಿಲ್ಲಾಧಿಕಾರಿಯವರು ಸ್ವಾಧೀನಕ್ಕೆ ತಗೆದುಕೊಂಡು ನೀರು ಹಂಚಿಕೆಯ ಬಗ್ಗೆ ಮಹಾನಗರ ಪಾಲಿಕೆಯನ್ನು ವಿಶ್ವಾಸಕ್ಕೆ ತೆಗೆದುಕೊಂಡು ನೀರಿನ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಆಗ್ರಹಿಸಿತು. ಮಾಜಿ ಮೇಯರ್‌ಗಳಾದ ಎಂ. ಶಶಿಧರ […]