ಮಂಗಳೂರು ವಿವಿಯ ಕುಲಪತಿ ಪ್ರೊ.ಪಿ.ಎಲ್. ಧರ್ಮ ನಿವೃತ್ತಿ, ಬೀಳ್ಕೊಡುಗೆ

Friday, November 15th, 2024
pro-dharma

ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯದ ರಾಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸಿ ವಿಭಾಗದಿಂದ ನಿವೃತ್ತಿಯಾಗುತ್ತಿರುವ ಮಂಗಳೂರು ವಿವಿಯ ಕುಲಪತಿಯೂ ಆಗಿರುವ ಪ್ರೊ.ಪಿ.ಎಲ್.ಧರ್ಮ ಅವರನ್ನು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರ ವತಿಯಿಂದ ಮಂಗಳಗಂಗೋತ್ರಿಯ ಆಡಳಿತ ಭವನದ ಕುಲಪತಿಗಳ ಕಛೇರಿಯಲ್ಲಿ ಶುಕ್ರವಾರ ಬೀಳ್ಕೊಡಲಾಯಿತು. ಸಿಂಡಿಕೇಟ್ ನ ಸರ್ವ ಸದಸ್ಯರು, ಕುಲಸಚಿವರು, ಕುಲಸಚಿವ (ಪರೀಕ್ಷಾಂಗ), ಡೀನ್ ಗಳು, ವಿವಿಧ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು, ಆಡಳಿತ ಸಿಬ್ಬಂದಿ ಉಪಸ್ಥಿತರಿದ್ದರು.

ʼನವಿಲುಗರಿʼ ಕವನ ಸಂಕಲನ ಬಿಡುಗಡೆ

Wednesday, January 19th, 2022
Navilu-Gari

ಮಂಗಳೂರು: ಜೀವನ ಎದುರಿಸಲು ಸೃಜನಶೀಲತೆ ಅಗತ್ಯ. ಕಾವ್ಯವೆಂಬ ಸೃಜನಶೀಲ ಹವ್ಯಾಸ ಕಷ್ಟಗಳಿಂದ ಹೊರಬಂದು ನಮ್ಮನ್ನು ನಾವೇ ಸಾಂತ್ವನಪಡಿಸಿಕೊಳ್ಳಲು ಸಹಾಯ ಮಾಡುತ್ತದೆ, ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ ಸುಬ್ರಹ್ಮಣ್ಯ ಯಡಪಡಿತ್ತಾಯ ಅಭಿಪ್ರಾಯಪಟ್ಟರು. ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಬುಧವಾರ ಡಾ. ಭಾರತಿ ಪಿಲಾರ್ ಅವರ ʼನವಿಲುಗರಿʼ ಕವನ ಸಂಕಲನ ಬಿಡುಗಡೆ ಮಾಡಿ ಮಾತನಾಡಿದ ಅವರು, ಕವನ ಸಂಕಲನದ 40 ಕವನಗಳು ಓದುಗನನ್ನು ಚಿಂತನೆಗೆ ಹಚ್ಚುತ್ತವೆ. ಭಾವನೆಗಳ ಹೊಯ್ದಾಟ, ಕಟು ವಾಸ್ತವ ನಮ್ಮನ್ನು ನಾವು ಮರೆಯುವಂತೆ […]

ಸ್ನಾತಕ/ಸ್ನಾತಕೋತ್ತರ ಪರೀಕ್ಷೆಗಳು ಆಗಸ್ಟ್‌ 11 (ಬುಧವಾರ) ರಿಂದ ಮರು ಪ್ರಾರಂಭ

Thursday, August 5th, 2021
Mangalore University

ಮಂಗಳೂರು :  ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿಗಳ ನಿರ್ದೇಶನ ಮತ್ತು ಮಾನ್ಯ ಜಿಲ್ಲಾಧಿಕಾರಿಗಳ ಸಲಹೆಯಂತೆ ಇಂದು (ಆಗಸ್ಟ್‌ 05) ರಂದು ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನಡೆದ ಸಭೆಯಲ್ಲಿ, ಈ ಹಿಂದೆ ಜಿಲ್ಲಾಧಿಕಾರಿಗಳ ಆದೇಶದಂತೆ ಮುಂದೂಡಲಾಗಿದ್ದ ಸ್ನಾತಕ/ಸ್ನಾತಕೋತ್ತರ ಪರೀಕ್ಷೆಗಳನ್ನು ಆಗಸ್ಟ್‌ 11 (ಬುಧವಾರ) ರಿಂದ ಕೊವಿಡ್‌ ಶಿಷ್ಟಾಚಾರದೊಂದಿಗೆ ಮರುಪ್ರಾರಂಭಿಸಲು ನಿರ್ಧರಿಸಲಾಗಿದೆ. ಪರಿಷ್ಕೃತ ವೇಳಾಪಟ್ಟಿಯನ್ನು ಕಾಲೇಜಿನ ವೆಬ್‌ಸೈಟ್‌ ಮೂಲಕ ತಿಳಿಸಲಾಗುವುದು. ವಾಹನ ಸೌಲಭ್ಯ ಅಥವಾ ಕೊವಿಡ್‌ ಕಾರಣಗಳಿಂದ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ವಿಶೇಷ ಪರೀಕ್ಷೆಯನ್ನು ನಡೆಸಲಾಗುವುದು.

ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ನಿವೃತ್ತ ಕುಲಪತಿ ಸಬಿಹಾ ಭೂಮಿಗೌಡ ಅವರಿಗೆ ಬೀಳ್ಕೊಡುಗೆ

Saturday, July 31st, 2021
Sabiha bhoomi gowda

ಮಂಗಳೂರು : ತಮ್ಮ 38 ವರ್ಷಗಳ ಅಧ್ಯಾಪನ ವೃತ್ತಿಯಿಂದ ನಿವೃತ್ತರಾದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ನಿಕಟಪೂರ್ವ ಕುಲಪತಿ ಪ್ರೊ. ಸಬಿಹಾ ಭೂಮಿಗೌಡ ಅವರಿಗೆ ಮಾತೃ ಸಂಸ್ಥೆಯಾದ ಎಸ್.ವಿ.ಪಿ ಕನ್ನಡ ಅಧ್ಯಯನ ಸಂಸ್ಥೆಯಿಂದ ಶನಿವಾರ ಆತ್ಮೀಯವಾಗಿ ಬೀಳ್ಕೊಡಲಾಯಿತು. ಕಳೆದ ವರ್ಷ ಕುಲಪತಿ ಹುದ್ದೆಯಿಂದ ನಿವೃತ್ತ ಪ್ರೊ. ಸಬಿಹಾ ತಮ್ಮ ಮಾತೃ ಸಂಸ್ಥೆ ಎಸ್.ವಿ.ಪಿ ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಬೋಧನೆ ಮುಂದುವರಿಸಿದ್ದರು. ಕಾರ್ಯಕ್ರಮಕ್ಕೂ ಮೊದಲು ಅಧ್ಯಯನ ಸಂಸ್ಥೆಯ ಪ್ರಸ್ತುತಿಯಲ್ಲಿ ಚಂದ್ರಶೇಖರ್ ಎಂ. ಬಿ ಮತ್ತು ಮುಸ್ತಾಫ ಕೆ […]

ಮಂಗಳೂರು ವಿವಿ: ನಾಲ್ಕು ಕೃತಿಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಕುಲಪತಿಗಳು

Wednesday, July 14th, 2021
VV Books

ಮಂಗಳಗಂಗೋತ್ರಿ: ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಶೀಘ್ರ ಅನುಷ್ಠಾನಕ್ಕೆ ತರಲಾಗುವುದು. ಅದರಲ್ಲಿ ಸಂಶೋಧನೆಗೆ ವಿಶೇಷ ಒತ್ತು ನೀಡುವ ಉದ್ದೇಶದಿಂದ ಈಗಾಗಲೇ ಕ್ರಿಯಾಸಮಿತಿಯನ್ನು ರಚಿಸಲಾಗಿದ್ದು ಪ್ರಸಾರಾಂಗದ ಮೂಲಕ ಸಂಶೋಧನಾ ಕೃತಿಗಳ ಪ್ರಕಟಣೆಯನ್ನು ಉತ್ತೇಜಿಸಲಾಗುವುದು, ಎಂದು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ. ಎಸ್ ಯಡಪಡಿತ್ತಾಯ ಹೇಳಿದ್ದಾರೆ. ಮಂಗಳೂರು ವಿವಿಯ ಸಿಂಡಿಕೇಟ್ ಸಭಾಂಗಣದಲ್ಲಿ ಪ್ರಸಾರಾಂಗ ಪ್ರಕಟಿಸಿದ ನಾಲ್ಕು ಕೃತಿಗಳನ್ನು ಮಂಗಳವಾರ ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ವೃತ್ತಿಯ ಜೊತೆಗೆ ಪ್ರವೃತ್ತಿ, ಸಮಾಜಮುಖಿ ಚಿಂತನೆಗಳನ್ನು ರೂಢಿಸಿಕೊಂಡಾಗ ಮನುಷ್ಯನ ವ್ಯಕ್ತಿತ್ವಕ್ಕೆ ಘನತೆ ಬರುತ್ತದೆ. ಬ್ಯಾರಿ […]

ಪಠ್ಯದಲ್ಲಿ ಸ್ಥಳೀಯತೆಗೆ ಒತ್ತು : ಕುಲಪತಿ ಪ್ರೊ ಯಡಪಡಿತ್ತಾಯ ಅಭಿಮತ

Thursday, June 3rd, 2021
12books

ಮಂಗಳಗಂಗೋತ್ರಿ  : ಶಿಕ್ಷಣ ವ್ಯವಸ್ಥೆಯಲ್ಲಿ ಆಯಾ ಪ್ರದೇಶದ ಜ್ಞಾನ, ಕೌಶಲ ಮತ್ತು ಪ್ರತಿಭೆಗಳಿಗೆ ಅವಕಾಶ ಒದಗುವಂತಾಗಬೇಕು. ಪಠ್ಯಗಳಲ್ಲಿ ಜಾಗತಿಕ ಮತ್ತು ಸಾರ್ವಕಾಲಿಕ ಅಂಶಗಳೊಂದಿಗೆ ಸ್ಥಳೀಯತೆಗೆ ಒತ್ತು ಸಿಕ್ಕಾಗ ಇದು ಸಾಧ್ಯವಾಗುತ್ತದೆ. ಮಂಗಳೂರು ವಿಶ್ವವಿದ್ಯಾನಿಲಯದ ಪ್ರಸಾರಾಂಗ ಪ್ರಕಟಿಸುತ್ತಿರುವ ಕನ್ನಡ ಪಠ್ಯಪುಸ್ತಕಗಳಲ್ಲಿ ಸ್ಥಳೀಯತೆಗೆ ಅವಕಾಶ ಒದಗಿರುವುದು ಸಂತೋಷದ ವಿಷಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ.ಸುಬ್ರಹ್ಮಣ್ಯ ಯಡಪಡಿತ್ತಾಯ ಹೇಳಿದರು. ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸಭಾಂಗಣದಲ್ಲಿ ಗುರುವಾರ ಮಂಗಳೂರು ವಿಶ್ವವಿದ್ಯಾನಿಲಯದ ಪ್ರಸಾರಾಂಗವು ಪ್ರಕಟಿಸಿದ ಪದವಿ ತರಗತಿಗಳ ದ್ವಿತೀಯ ಮತ್ತು ಚತುರ್ಥ ಸೆಮಿಸ್ಟರಿನ […]

ಕುಲಪತಿ ಆಗುವ ಆಸೆಯಿಂದ 17.5 ಲಕ್ಷ ರೂ ಲಕ್ಷ ಕಳಕೊಂಡ ಮಂಗಳೂರು ವಿವಿಯ ಪ್ರೊಫೆಸರ್

Monday, March 29th, 2021
prasad Attavara

ಮಂಗಳೂರು:  ರಾಯಚೂರು ವಿಶ್ವ ವಿದ್ಯಾನಿಲಯದಲ್ಲಿ ಕುಲಪತಿ ಹುದ್ದೆ ಕೊಡಿಸುವುದಾಗಿ ಮಂಗಳೂರು ವಿವಿಯಲ್ಲಿ ಕೆಮಿಸ್ಟ್ರಿ ವಿಭಾಗದಲ್ಲಿ ಪ್ರೊಫೆಸರ್ ಆಗಿರುವ  ವಿವೇಕ್ ಆಚಾರ್ಯ ಎಂಬವರನ್ನು ವಂಚಿಸಿದ ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ  ಹಣ ಪಡೆದು ವಂಚಿಸಿದ ಆರೋಪದ ಮೇರೆಗೆ ರಾಮ ಸೇನೆಯ ಸಂಸ್ಥಾಪಕ ಪ್ರಸಾದ್ ಅತ್ತಾವರನನ್ನು ಪೊಲೀಸರು ಬಂಧಿಸಿದ್ದಾರೆ. ರಾಮಸೇನೆಯ ಸಂಸ್ಥಾಪಕ ಮತ್ತು ರಾಜ್ಯಾಧ್ಯಕ್ಷನಾಗಿರುವ ಪ್ರಸಾದ್ ಅತ್ತಾವರ  ವಿವೇಕ ಆಚಾರ್ಯ ಎಂಬವರಿಗೆ ರಾಯಚೂರು ವಿಶ್ವ ವಿದ್ಯಾನಿಲಯದಲ್ಲಿ  ಉಪ ಕುಲಪತಿ ಸ್ಥಾನ ಕೊಡಿಸುತ್ತೇನೆಂದು ಹೇಳಿ 17.5 ಲಕ್ಷ ರೂ. ಹಣವನ್ನು ಪಡೆದಿದ್ದ ಬಗ್ಗೆ ಕಂಕನಾಡಿ […]