ನಿಗದಿತ ಅವಧಿಯೊಳಗೆ ಜಲಜೀವನ್ ಮಿಷನ್ ಅಭಿಯಾನ ಮುಗಿಸುವಂತೆ ಅಧಿಕಾರಿಗಳಿಗೆ ಬಿಸಿಪಿ ಸೂಚನೆ

Sunday, August 8th, 2021
bc pateel

ಹಾವೇರಿ : ಕೇಂದ್ರ ಸರಕಾರದ  ಮಹತ್ವಾಕಾಂಕ್ಷಿ ಯೋಜನೆಯಾದ “ಜಲಜೀವನ್ ಮಿಷನ್” ಅನ್ನು ನಿಗದಿತ ಅವಧಿಯೊಳಗೆ ಮುಗಿಸುವಂತೆ ಹಾವೇರಿ ಉಸ್ತುವಾರಿಗಳೂ ಆಗಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನಲ್ಲಿ ರಾಜ್ಯದ ಗ್ರಾಮೀಣ ಭಾಗದ ಪ್ರತಿಮನೆಗೆ ನಲ್ಲಿ ನೀರಿನ ಸಂಪರ್ಕ ಕಲ್ಪಿಸುವ “ಜಲಜೀವನ್ ಮಿಷನ್ ಯೋಜನೆ”ಗೆ ಕೃಷಿ ಸಚಿವರೂ ಆಗಿರುವ ಹಾವೇರಿ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲರಿಂದು ಹಿರೇಕೆರೂರು ಮತಕ್ಷೇತ್ರದ ರಟ್ಟಿಹಳ್ಳಿ,ಇಂಗಳಗೊಂದಿ ,ಸತ್ತಗಿಹಳದಳಿ, ಶಿರಗಂಬಿ ಗ್ರಾಮಗಳಲ್ಲಿ ಭೂಮಿಪೂಜೆ ನೆರವೇರಿಸಿದರು. ಭೂಮಿ ಪೂಜೆ ನೆರವೇರಿಸಿ ಈ ಸಂದರ್ಭದಲ್ಲಿ ಮಾತನಾಡಿದ […]

ಸೂಕ್ಷ್ಮ ನೀರಾವರಿ ಯೋಜನೆಯಡಿ ಎಲ್ಲಾ ವರ್ಗದ ರೈತರಿಗೆ ಈ ಹಿಂದೆ ನೀಡುತ್ತಿದ್ದ ಸಬ್ಸಿಡಿ ಮುಂದುವರಿಕೆ : ಕೃಷಿ ಸಚಿವ ಬಿ.ಸಿ.ಪಾಟೀಲ್

Friday, July 16th, 2021
BC Pateel

ಬೆಂಗಳೂರು : ಮುಖ್ಯಮಂತ್ರಿಗಳ ಸೂಕ್ಷ್ಮ ನೀರಾವರಿ ಯೋಜನೆಯಡಿ ಎಲ್ಲಾ ವರ್ಗದ ರೈತರಿಗೆ ಈ ಹಿಂದೆ ನೀಡುತ್ತಿದ್ದ ಸಬ್ಸಿಡಿಯನ್ನು ಅದೇ ಮಾದರಿಯಲ್ಲಿ ಮುಂದುವರೆಸುತ್ತಿರುವುದಾಗಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಸ್ಪಷ್ಟಪಡಿಸಿದ್ದಾರೆ. ಶುಕ್ರವಾರ ವಿಕಾಸಸೌಧದ ಸಮ್ಮೇಳನ ಸಭಾಂಗಣದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾ ಕೃಷಿ ಅಧಿಕಾರಿಗಳ ಜೊತೆ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆ ಜಿಲ್ಲೆಗಳಲ್ಲಿನ ಪ್ರಗತಿ ಕುರಿತು ಕೃಷಿ ಸಚಿವರು ಹಾಗೂ ಇಲಾಖಾಧಿಕಾರಿಗಳು ಸಭೆ ನಡೆಸಿದರು. ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಈ ಹಿಂದೆ ಎಲ್ಲಾ ವರ್ಗದ 2 ಹೆಕ್ಟೇರ್ […]

ಕನ್ನಡ ಚಿತ್ರರಂಗದ ಕಾರ್ಮಿಕರಿಗೆ ಫುಡ್ ಕಿಟ್ ವಿತರಣೆ

Saturday, July 10th, 2021
BC-Pateel

ಬೆಂಗಳೂರು  : ಚಿತ್ರನಟರೂ ಆಗಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರಿಂದು ಬೆಂಗಳೂರಿನ ಸರ್ಕಾರಿ ನಿವಾಸದಲ್ಲಿ ಕನ್ನಡ ಚಿತ್ರರಂಗದ ಕಾರ್ಮಿಕರಿಗೆ ಫುಡ್ ಕಿಟ್ ವಿತರಿಸಿದರು. ಲೈಟ್ ಬಾಯ್ಸ್,ಕ್ಯಾಮೆರಾಮನ್,ಮೇಕಪ್ ಕಲಾವಿದರಿಗೆ ಆಹಾರದ ಕಿಟ್ ವಿತರಿಸಿ ಬಳಿಕ‌ ಮಾತನಾಡಿದ ಬಿ.ಸಿ.ಪಾಟೀಲ್, ನಾನು ಚಿತ್ರರಂಗದಿಂದಲೇ ಬಂದವನಾದ್ದರಿಂದ‌ ಚಿತ್ರರಂಗದಲ್ಲಿರುವ ಕಾರ್ಮಿಕರ ಕಷ್ಟದ ಅರಿವು ಅನುಭವವಿದೆ. ಕೋವಿಡ್‌ನಿಂದಾಗಿ ಎಲ್ಲರೂ ಸಂಕಷ್ಟದಲ್ಲಿದ್ದಾರೆ.ಚಿತ್ರರಂಗದ ಕೆಲವು ಗೆಳೆಯರು ನನ್ನನ್ನು ಭೇಟಿ ಮಾಡಿ ಸಹಾಯ ಕೋರಿದ್ದರು.ಅದರಂತೆಕಾರ್ಮಿಕ ಕಲ್ಯಾಣ ಇಲಾಖೆಗೆ ನಾನು ಮನವಿ ಮಾಡಿದ್ದು,ಅವರು ಫುಡ್ ಕಿಟ್ ಕಳಿಸಿದ್ದರು. ಹೀಗಾಗಿ ಇವತ್ತು ಒಂದು ಸಾವಿರ […]

ಮರಕಡ ವಾರ್ಡಿನಲ್ಲಿ ಕೃಷಿ ಸಚಿವರಿಂದ ಹಡೀಲು ಗದ್ದೆಯಲ್ಲಿ ಭತ್ತ ಬೆಳೆಯೋಣ ಅಭಿಯಾನಕ್ಕೆ ಚಾಲನೆ

Friday, June 25th, 2021
BC-Patil

ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಕುಂಜತ್ತಬೈಲ್ ಪ್ರದೇಶದ ಮರಕಡ ವಾರ್ಡಿನ ದಿ. ಕಾಂತಣ್ಣ ಶೆಟ್ಟಿ ಕೊಂರ್ಗಿಬೈಲ್ ಇವರ ಹಡೀಲು ಬಿಟ್ಟ ಜಮೀನಿನಲ್ಲಿ ಹಡೀಲು ಗದ್ದೆಯಲ್ಲಿ ಭತ್ತ ಬೆಳೆಯೋಣ ಅಭಿಯಾನದ ಅಂಗವಾಗಿ ರಾಜ್ಯದ ಮಾನ್ಯ ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಅವರು ಯಾಂತ್ರೀಕೃತ ಭತ್ತದ ಕೃಷಿ ಕಾರ್ಯಕ್ಕೆ ಶುಕ್ರವಾರ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಮಾನ್ಯ ಕೋಟಾ ಶ್ರೀನಿವಾಸ ಪೂಜಾರಿ, ಶಾಸಕರಾದ ಡಾ.ವೈ ಭರತ್ ಶೆಟ್ಟಿ, ಭಾಜಪಾ ಉತ್ತರ ಮಂಡಲ ಅಧ್ಯಕ್ಷ ತಿಲಕರಾಜ್ ಕೃಷ್ಣಾಪುರ, […]

ತೆವಲಿನ ಬಗ್ಗೆ ಹೆಚ್.ಡಿ. ಕುಮಾರಸ್ವಾಮಿಗೆ ಚೆನ್ನಾಗಿಯೇ ಗೊತ್ತಿದೆ : ಕೃಷಿ ಸಚಿವ ಬಿ.ಸಿ ಪಾಟೀಲ್‌ ತಿರುಗೇಟು

Tuesday, March 10th, 2020
bc-patil

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಬಳಸುವಂತಹ ಹಗುರವಾದ ಪದಗಳನ್ನಾಗಲೀ ಅವರು ಹೇಳಿರುವಂತೆ ತೆವಲು ಭಾಷೆಯನ್ನಾಗಲೀ ತಾವು ಬಳಸುವುದಿಲ್ಲ ಎಂದು ಕೃಷಿ ಸಚಿವರಾದ ಬಿ.ಸಿ‌ಪಾಟೀಲ್ ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದ್ದಾರೆ. ವಿಧಾನಸೌಧದಲ್ಲಿ ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಕೃಷಿ ಸಚಿವರು, ತೆವಲಿನ ಬಗ್ಗೆ ಕುಮಾರಸ್ವಾಮಿ ಅವರಿಗೆ ಬಹಳ ಚೆನ್ನಾಗಿಯೇ ಗೊತ್ತಿದೆ ಅನಿಸುತ್ತದೆ ಎಂದರು. 2006-07 ರಲ್ಲಿ ತಾವು ಅಷ್ಟು ಕೆಲಸ ಮಾಡಿಕೊಂಡು ಹೋಗಿದ್ದೇನೆ ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರೆ. ಅದು ನನ್ನ ಮನೆಗೆ ಕೊಟ್ಟ ದುಡ್ಡಲ್ಲ […]