ಮುಂದಿನ ವರ್ಷದೊಳಗೆ ವಿಧಾನಸೌಧದ ಮುಂದೆ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಸ್ಥಾಪನೆ : ಮುಖ್ಯಮಂತ್ರಿ

Monday, June 27th, 2022
cm-Bommai

ಬೆಂಗಳೂರು : ಮುಂದಿನ ವರ್ಷದೊಳಗೆ ವಿಧಾನಸೌಧದ ಮುಂದೆ ನಾಡಪ್ರಭು ಕೆಂಪೇಗೌಡರ ಪ್ರತಿಮೆಯನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ನಾಡಪ್ರಭು ಕೆಂಪೇಗೌಡರ 513ನೇ ಜಯಂತಿ ಮತ್ತು ನಾಡಪ್ರಭುಕೆಂಪೇಗೌಡ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು. ತನ್ನ ಬದುಕಿನ ಆದರ್ಶಗಳಿಂದಾಗಿ ಕೆಂಪೇಗೌಡರು ‘ನಾಡಪ್ರಭು’ ಎಂಬ ಬಿರುದನ್ನು ಪಡೆದು, ನಾಡಿನ ಸಮಗ್ರ ಚಿಂತನೆ ಮಾಡುವ ಮೂಲಕ ಪ್ರತಿ ಜನರ ಬದುಕಿಗೂ ಕೊಡುಗೆ ನೀಡಿದ್ದಾರೆ. ವಿಜಯನಗರ ಸಾಮ್ರಾಜ್ಯ, ಜನರನ್ನು ನಾಡು ಕಟ್ಟಲು ಬಳಕೆ ಮಾಡಿದ […]