ಲೋಕಾಯುಕ್ತ ಬಲೆಗೆ ಬಿದ್ದ ಬಿಬಿಎಂಪಿ ಸದಸ್ಯ
Friday, October 1st, 2010ಬೆಂಗಳೂರು : ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಪುತ್ರ, ಬಿಬಿಎಂಪಿ ಸದಸ್ಯ ಜಗದೀಶ್ ನಾಯ್ಡು ಕೆಐಎಡಿಬಿ ಪ್ರಕರಣದ ಸಾಕ್ಷಿದಾರೊಬ್ಬರಿಗೆ ಗಾಂಧಿನಗರದ ಕಚೇರಿಯಲ್ಲಿ ಒಂದು ಲಕ್ಷ ರೂಪಾಯಿ ಲಂಚ ನೀಡುತ್ತಿದ್ದ ಸಂದರ್ಭದಲ್ಲಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಗುರುವಾರ ನಡೆದಿದೆ. ಲೋಕಾಯುಕ್ತ ಪೊಲೀಸರು ದಿಢೀರನೆ ನಡೆಸಿದ ಕಾರ್ಯಾಚರಣೆಯಲ್ಲಿ ಕಟ್ಟಾ ಜಗದೀಶ್ ನಾಯ್ಡು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುವುದು ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರ ರಾಜಕೀಯ ಭವಿಷ್ಯದ ಮೇಲೆ ಪರಿಣಾಮ ಬೀರಿದೆ. ಬುಧವಾರ ಬಿಬಿಎಂಪಿ ಸಭೆಯಲ್ಲಿ ಜಗದೀಶ್ ನಾಯ್ಡುವನ್ನು […]