ಗ್ರಾ.ಪಂ. ವ್ಯಾಪ್ತಿಯ ವಾಣಿಜ್ಯ ಕಟ್ಟಡಗಳಿಗೆ ನಿಖರ ತೆರಿಗೆ: ಕೆಡಿಪಿ ನಿರ್ಣಯ
Thursday, June 11th, 2015ಮಂಗಳೂರು : ಜಿಲ್ಲೆಯ ಗ್ರಾಮಾಂತರ ಪ್ರದೇಶಗಳಲಿರುವ ಎಲ್ಲಾ ವಾಣಿಜ್ಯ ಸಂಕೀರ್ಣ ಮತ್ತು ಬೃಹತ್ ಕಟ್ಟಡಗಳ ನಿಖರ ಅಳತೆ ಮಾಡಿ, ಗ್ರಾಮ ಪಂಚಾಯತ್ಗಳು ಕಟ್ಟಡ ತೆರಿಗೆ ವಿಧಿಸಲು ಇಂದು ನಡೆದ ಕೆಡಿಪಿ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಆಶಾ ತಿಮ್ಮಪ್ಪಗೌಡ ಅವರ ಅಧ್ಯಕ್ಷತೆಯಲ್ಲಿ ಗುರುವಾರ ಜಿ.ಪಂ. ಸಭಾಂಗಣದಲ್ಲಿ ನಡೆದ ಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಬಗ್ಗೆ ನಿರ್ಧರಿಸಲಾಯಿತು. ಜಿ.ಪಂ. ಉಪಾಧ್ಯಕ್ಷ ಸತೀಶ್ ಕುಂಪಲ ಮಾತನಾಡಿ, ಜಿಲ್ಲೆಯ ವಿವಿಧ ಗ್ರಾಮ ಪಂಚಾಯತ್ಗಳಲ್ಲಿ ಕಟ್ಟಡ ತೆರಿಗೆಯಲ್ಲಿ ಏಕರೂಪತೆ […]