ಬೆಂಗಳೂರು : ಸಿದ್ದರಾಮಯ್ಯ ವಿರುದ್ಧವೇ ಕಾಂಗ್ರೆಸ್‌ ಕಾರ್ಯಕರ್ತರ ಪ್ರತಿಭಟನೆ

Tuesday, January 21st, 2020
siddaramaiah

ಬೆಂಗಳೂರು : ರಾಜ್ಯ ಕಾಂಗ್ರೆಸ್‌ ನಾಯಕತ್ವಕ್ಕಾಗಿ ಪಕ್ಷದ ನಾಯಕರ ನಡುವಿನ ಮುಸುಕಿನ ಗುದ್ದಾಟ ಈಗ ಬೀದಿಗೆ ಬಂದಿದ್ದು, ಎರಡು ಹುದ್ದೆ ವಿಭಜನೆಗೆ ವಿರೋಧಿಸಿದ್ದ ಸಿದ್ದರಾಮಯ್ಯ ವಿರುದ್ಧ ಪರಮೇಶ್ವರ್‌, ಡಿ.ಕೆ.ಶಿವಕುಮಾರ್‌ ಬಹಿರಂಗವಾಗಿಯೇ ತಿರುಗೇಟು ನೀಡಿದ್ದಾರೆ. ಹೊಸ ಬೆಳವಣಿಗೆಯಲ್ಲಿ ಸಿದ್ದರಾಮಯ್ಯ ವಿರುದ್ಧ ಕಾರ್ಯಕರ್ತರು ಪಕ್ಷದ ಕಚೇರಿ ಮುಂದೆಯೇ ಪ್ರತಿಭಟನೆ ಮಾಡುವ ಮೂಲಕ ನಾಯಕತ್ವದ ಗಲಾಟೆಯನ್ನು ಬೀದಿಗೆ ತಂದಿದ್ದಾರೆ. ಇದರ ಹಿಂದೆ ಡಿ.ಕೆ.ಶಿವಕುಮಾರ್‌ ಆಪ್ತರು ಸೇರಿಕೊಂಡಿದ್ದಾರೆಂದು ಆರೋಪಿಸಲಾಗಿದೆ. ಶಾಸಕಾಂಗ ಪಕ್ಷದ ನಾಯಕ ಹಾಗೂ ಪ್ರತಿಪಕ್ಷದ ನಾಯಕ ಎರಡು ಹುದ್ದೆಗಳು ಪ್ರತ್ಯೇಕವಾಗಬೇಕೆಂದು ಪರಮೇಶ್ವರ್‌ […]

ರಾಜ್ಯದಲ್ಲಿ ಕಾಂಗ್ರೆಸ್ ಪರ ಅಲೆ ಬೀಸುತ್ತಿದೆ 15 ಕ್ಷೇತ್ರದಲ್ಲಿ ಗೆಲ್ಲುತ್ತೇವೆ : ಮಾಜಿ ಸಂಸದ ಜಿ.ಎಸ್. ಉಗ್ರಪ್ಪ

Monday, December 2nd, 2019
Ugrappa

ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ಅಲೆ ಗೋಚರಿಸುತ್ತಿದ್ದು, ಬಿಜೆಪಿ ಹಾಗೂ ಅನರ್ಹ ಶಾಸಕರ ವಿರುದ್ಧವಾದಂತಹ ಗಾಳಿ 15 ಕ್ಷೇತ್ರಗಳಲ್ಲಿ ಬೀಸುತ್ತಿದೆ ಎಂದು ಮಾಜಿ ಸಂಸದ ಜಿ.ಎಸ್. ಉಗ್ರಪ್ಪ ತಿಳಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಕಾಂಗ್ರೆಸ್ ಅಭ್ಯರ್ಥಿಗಳು ಎಲ್ಲಾ 15 ಕ್ಷೇತ್ರದಲ್ಲಿ ಗೆಲ್ಲುವ ಸೂಚನೆ ಸಿಗುತ್ತಿದೆ. ಇದರಿಂದಲೇ ಬಿಜೆಪಿ ನಾಯಕರು ಹಾಗೂ ಅನರ್ಹ ಶಾಸಕರು ಮತ್ತು ಸಿಎಂ ಬಿ.ಎಸ್. ಯಡಿಯೂರಪ್ಪ ಹತಾಶೆಯಿಂದ ಮಾತನಾಡಲು ಆರಂಭಿಸಿದ್ದಾರೆ. ಇವರೆಲ್ಲರೂ ಸದ್ಯ ತಿರುಕನ ಕನಸನ್ನು ಕಾಣುತ್ತಿದ್ದಾರೆ. ಜನರ ದಾರಿ […]

ಸೈಕಲ್ ಬಿಟ್ಟು ಕೈ ಹಿಡಿದ ಸಿ.ಪಿ ಯೋಗೀಶ್ವರ್

Wednesday, March 19th, 2014
Yogeshwar

ಬೆಂಗಳೂರು : ಸಿ..ಪಿ ಯೋಗೀಶ್ವರ್ ಅವರು ಮತ್ತೊಮ್ಮೆ ಪಕ್ಷಾಂತರ ಮಾಡಿದ್ದಾರೆ. ಸಮಾಜವಾದಿ ಪಕ್ಷದ ಏಕೈಕ ಶಾಸಕ ಮಂಗಳವಾರದಂದು ಕೆಪಿಸಿಸಿ ಕಚೇರಿಗೆ ತೆರಳಿ ಕಾಂಗ್ರೆಸ್ ಪಕ್ಷಕ್ಕೆ ಸೇರಿಕೊಂಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಶಾಸಕ ಸಿ.ಪಿ ಯೋಗೀಶ್ವರ್ ಅವರು ಸಮಾಜವಾದಿ ಪಕ್ಷ ತೊರೆದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್, ಸಚಿವ ಡಿ.ಕೆ ಶಿವಕುಮಾರ್, ಮುಂತಾದ ನಾಯಕರು ಉಪಸ್ಥಿತರಿದ್ದರು. ಕಳೆದ ಆಗಸ್ಟಿನಲ್ಲಿ ಚನ್ನಪಟ್ಟಣದಲ್ಲಿ ನಡೆದಿದ್ದ ಸಮಾಜವಾದಿ ಪಕ್ಷದ ಬೆಂಬಲಿಗರ ಸಭೆಯಲ್ಲಿ […]