ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಉರುಳಿದ ಕೆ.ಎಸ್.ಆರ್.ಟಿ.ಸಿ ಬಸ್

Tuesday, September 24th, 2024
KSRTC-BUS

ಬಂಟ್ವಾಳ : ಮಂಗಳೂರು-ಧರ್ಮಸ್ಥಳ ಮಧ್ಯೆ ಸಂಚರಿಸುವ ಕೆ.ಎಸ್.ಆರ್.ಟಿ.ಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹೊಂಡಕ್ಕೆ ಉರುಳಿ ಬಿದ್ದ ಘಟನೆ ಇಂದು ಸಂಜೆ ವಗ್ಗ ಸಮೀಪದ ಕೊಪ್ಪಳದಲ್ಲಿ ಸಂಭವಿಸಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಇನ್ನು ಬಸ್ಸಿನಿಂದ ಪ್ರಯಾಣಿಕರನ್ನು ಹೊರಗೆ ತೆಗೆಯಲು ಸ್ಥಳೀಯ ಯುವಕರು ಸಹಕರಿಸಿದ್ದಾರೆ. ಮಂಗಳೂರು ವಿಭಾಗಕ್ಕೆ ಸೇರಿದ ಬಸ್ಸು ತಾಂತ್ರಿಕ ದೋಷದಿಂದ ಪಲ್ಟಿಯಾಗಿದೆ ಎನ್ನಲಾಗಿದ್ದು, ಸ್ಪಷ್ಟ ಕಾರಣ ತಿಳಿದು ಬಂದಿಲ್ಲ. ಇನ್ನು ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ. […]

ಖಾಸಗಿ ವಾಹನಗಳಲ್ಲಿ ಪ್ರಯಾಣಿಕರಿಂದ ದುಬಾರಿ ದರವನ್ನು ಪಡೆಯುವಂತಿಲ್ಲ : ಜಿಲ್ಲಾಧಿಕಾರಿ

Wednesday, April 7th, 2021
RTO-meeting

ಮಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆ ಕುರಿತು ಅನಿರ್ಧಿಷ್ಟ ಅವಧಿಯ ಮುಷ್ಕರದ ಹಿನ್ನೆಲೆ ಜಿಲ್ಲೆಯ ಸಾರ್ವಜನಿಕರಿಗೆ ಸಾರಿಗೆ ವ್ಯವಸ್ಥೆಯಲ್ಲಿ ಯಾವುದೇ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆಯನ್ನು ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ. ಕೆ. ವಿ ಸೂಚನೆ ನೀಡಿದರು. ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಅನಿರ್ದಿಷ್ಠಾವಧಿ ಮುಷ್ಕರ ಹಿನ್ನೆಲೆ ಪರ್ಯಾಯ ವ್ಯವಸ್ಥೆ ಕೈಗೊಳ್ಳುವ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ […]

ಕಾಸರಗೋಡು – ಮಂಗಳೂರು ಕೆ.ಎಸ್.ಆರ್.ಟಿ.ಸಿ ಅಂತರ್ ರಾಜ್ಯ ಬಸ್ ಸರ್ವಿಸ್ ಶೀಘ್ರ ಪ್ರಸ್ತಾಪಿಸುವಂತೆ ಆಗ್ರಹಿಸಿ ಮನವಿ

Saturday, September 26th, 2020
Manjeshwara Bjp

ಮಂಜೇಶ್ವರ:- ಕಾಸರಗೋಡು – ಮಂಗಳೂರು ಕೆ.ಎಸ್.ಆರ್.ಟಿ.ಸಿ ಅಂತರ್ ರಾಜ್ಯ ಬಸ್ ಸರ್ವಿಸ್ ಶೀಘ್ರ ಪುನಃ ಸ್ಥಾಪಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಕೆ.ಎಸ್.ಆರ್.ಟಿ.ಸಿ ಮೆನೇಜಿಂಗ್ ಡೈರೆಕ್ಟರ್ ರವರಿಗೆ ಬಿಜೆಪಿ ಮಂಜೇಶ್ವರದ ನಿಯೋಗದವರು ಭೇಟಿಯಾಗಿ ಮನವಿ ಸಲ್ಲಿಸಿದರು. ಓಬಿಸಿ ಮೋರ್ಚಾ ಕೇರಳ ರಾಜ್ಯ ಕೋಶಾಧಿಕಾರಿ ನ್ಯಾಯವಾದಿ ನವೀನ್ ರಾಜ್ ಕೆ.ಜೆ ಯವರು ಮನವಿ ಸಲ್ಲಿಸಿದರು. ಈ ವೇಳೆ ಬಿಜೆಪಿ ಮಂಜೇಶ್ವರ ಮಂಡಲ ಉಪಾಧ್ಯಕ್ಷ ಪದ್ಮನಾಭ ಕಡಪ್ಪರ, ಪ್ರಧಾನ ಕಾರ್ಯದರ್ಶಿ ಆದರ್ಶ್ ಬಿ.ಎಂ, ಓಬಿಸಿ ಮೋರ್ಚಾ ಮಂಜೇಶ್ವರ ಪಂಚಾಯತ್ ಸಮಿತಿ ಪ್ರಧಾನ […]

ನಾಳೆಯಿಂದ 8 ಜಿಲ್ಲೆಗಳಿಗೆ ಕೆ ಎಸ್ ಆರ್ ಟಿ ಸಿ, ಎಸಿ ಬಸ್ ಸಂಚಾರ ಆರಂಭ

Wednesday, June 24th, 2020
ksrtc-ac

ಬೆಂಗಳೂರು : ಕೊರೋನಾ ಭೀತಿಯಿಂದಾಗಿ ಆರೋಗ್ಯ ಇಲಾಖೆಯ ಸೂಚನೆಯ ಮೇರೆಗೆ ಎಸಿ ಬಸ್ ಸಂಚಾರವನ್ನು ಕೆ ಎಸ್ ಆರ್ ಟಿ ಸಿ ನಿಲ್ಲಿಸಿತ್ತು. ಹಂತ ಹಂತವಾಗಿ ಆರಂಭ ಕೂಡ ಮಾಡಲಾಗುತ್ತದೆ ಎಂಬುದಾಗಿ ತಿಳಿಸಿತ್ತು. ಮೊದಲ ಹಂತವಾಗಿ ನಾಳೆಯಿಂದ 8 ಜಿಲ್ಲೆಗಳಿಗೆ ಕೆ ಎಸ್ ಆರ್ ಟಿ ಸಿ ಎಸಿ ಬಸ್ ಸಂಚಾರ ಸೇವೆ ಆರಂಭಗೊಳ್ಳಲಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮುಖ್ಯ ಸಂಚಾರ ವ್ಯವಸ್ಥಾಪಕರು, ಮೊದಲ ಹಂತದಲ್ಲಿ ಬೆಂಗಳೂರಿನಿಂದ […]

ನರ್ಮ್ ಬಸ್ಸುಗಳು ಕಾರ್ಯಾಚರಿಸಲು ಜಿಲ್ಲಾ ಉಸ್ತುವಾರಿ ಸಚಿವ ಸೂಚನೆ

Tuesday, May 19th, 2020
nurm bus

ಮಂಗಳೂರು :  ಕೆ.ಎಸ್.ಆರ್.ಟಿ.ಸಿ ನರ್ಮ್ ಬಸ್ಸ್‍ಗಳ ಸಂಚಾರವನ್ನು ಮಂಗಳೂರು ನಗರದಲ್ಲಿ ಆರಂಭಿಸಲು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಸೂಚಿಸಿದರು. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಯಲ್ಲಿ ಈ ಕುರಿತು ನಡೆದ ಸಭೆಯಲ್ಲಿ ಮಾತನಾಡುತ್ತಾ ಜಿಲ್ಲೆಯಲ್ಲಿ ವೆನ್ಲಾಕ್ ಆಸ್ಪತ್ರೆಯನ್ನು ಕೋವಿಡ್ ಆಸ್ಪತ್ರೆಯನ್ನಾಗಿ ಮಾಡಲಾಗಿದ್ದು, ಈ ಮೊದಲು ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದ ರೋಗಿಗಳಿಗೆ ಖಾಸಗಿ ಆಸ್ಪತ್ರೆಗಳಲ್ಲಿ ವೆನ್ಲಾಕ್ ಆಸ್ಪತ್ರೆ ದರದಲ್ಲೇ ಚಿಕಿತ್ಸೆ ದೊರಕಬೇಕು ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಿ ಎಂದು ಸೂಚಿಸಿದರು. ಕೆ.ಎಸ್.ಆರ್.ಟಿ.ಸಿ ನರ್ಮ್ ಬಸ್ಸ್‍ಗಳ ಬಗ್ಗೆ ಮಾಹಿತಿ […]

ಕೃಷ್ಣಮೃಗದ ಚರ್ಮ ಮಾರಾಟಕ್ಕೆ ಯತ್ನಿಸಿದ ನಾಲ್ವರ ಬಂಧನ

Tuesday, September 24th, 2019
krishna-mruga

ಮಂಗಳೂರು : ನಗರದ ವಿಶೇಷ ಅರಣ್ಯ ಸಂಚಾರಿ ದಳದ ಪೊಲೀಸರು ದಾಳಿ ನಡೆಸಿ ಕೃಷ್ಣಮೃಗ ಚರ್ಮ ಮಾರಾಟ ಜಾಲವನ್ನು ಪತ್ತೆ ಹಚ್ಚಿದ್ದು, ನಾಲ್ವರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ದಾಟ್ನಾಳ್ ನಿವಾಸಿಗಳಾದ ರವಿ ಹನುಮಂತಪ್ಪ (32), ಮಲ್ಲಪ್ಪ (32), ಗದಗ ಜಿಲ್ಲೆಯ ರೋಣ ತಾಲೂಕಿನ ಹೊಳೆ ಆಲೂರು ನಿವಾಸಿಗಳಾದ ಪರಶುರಾಮ ಲಮಾಣಿ (32), ಟಿಪ್ಪು ಸುಲ್ತಾನ್ (33) ಎಂದು ಗುರುತಿಸಲಾಗಿದೆ. ಸೆ.23ರ ಬೆಳಗ್ಗೆ 8:30ಕ್ಕೆ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಸಮೀಪ ನಾಲ್ವರು ಅನುಮಾನಾಸ್ಪದವಾಗಿ […]

ಕೆ.ಎಸ್.ಆರ್.ಟಿ.ಸಿ ನಿಲ್ದಾಣದಲ್ಲಿ ಆರೋಗ್ಯ ಜಾಗೃತಿ- ವಸ್ತು ಪ್ರದರ್ಶನ

Thursday, August 8th, 2019
ksrtc-helth

ಮಂಗಳೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ವಿವಿಧ ಸಾಂಕ್ರಾಮಿಕ ರೋಗಗಳ ಹಾಗೂ ಆರೋಗ್ಯ ಜಾಗೃತಿ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಲು, ಮಾಹಿತಿ ಪ್ರದರ್ಶನ ನಗರದ ಲಾಲ್‍ಬಾಣ್ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಚಾಲನೆ ನೀಡಲಾಯಿತು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮಕೃಷ್ಣ ರಾವ್ ಅವರು ಪ್ರದರ್ಶನ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಸಾಂಕ್ರಾಮಿಕ ರೋಗಗಳ ನಿಯಂತ್ರಣ ನಮ್ಮಿಂದಲೇ ಸಾಧ್ಯ. ವೈದ್ಯಕೀಯ ಚಿಕಿತ್ಸೆಗಳ ಮೂಲಕ ರೋಗದ ತೀವೃತೆ ಕಡಿಮೆ ಮಾಡಬಹುದಾದರೂ, ರೋಗದ […]

ಮುಂಬೈಯಿಂದ ಕಾಸರಗೋಡಿಗೆ ತರಲಾಗುತ್ತಿದ್ದ ದಾಖಲೆ ರಹಿತ 20 ಲಕ್ಷ ರೂ ಹಳೆ ನೋಟುಗಳ ವಶ

Friday, December 2nd, 2016
indian money

ಮಂಗಳೂರು: ಮುಂಬೈಯಿಂದ ಕಾಸರಗೋಡಿಗೆ ತರಲಾಗುತ್ತಿದ್ದ ದಾಖಲೆ ರಹಿತ 20 ಲಕ್ಷ ರೂ. ಹಳೆ ನೋಟುಗಳನ್ನು ಹೊಸಂಗಡಿ ವಾಮಂಜೂರು ಚೆಕ್ ಪೋಸ್ಟ್ ಬಳಿ ಅಬಕಾರಿ ಪೋಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಕಾಸರಗೋಡು ನಿವಾಸಿ ಗಫೂರ್ ಎಂಬಾತನಿಂದ ಈ ಹಣವನ್ನು ವಶಕ್ಕೆ ಪಡೆಯಲಾಗಿದೆ. ಕೆ.ಎಸ್.ಆರ್.ಟಿ.ಸಿ ಬಸ್ಸಿನಲ್ಲಿ ಸಾಗಾಟ ಮಾಡುತ್ತಿದ್ದ ವೇಳೆ ಕಾರ್ಯಾಚರಣೆ ನಡೆಸಿ ಹಣ ವಶಕ್ಕೆ ಪಡೆಯಲಾಯಿತು.

ಕೆ.ಎಸ್.ಆರ್.ಟಿ.ಸಿ ನಿರ್ವಾಹಕ ಆತ್ಮಹತ್ಯೆ ಪೊಲೀಸರ ದೌರ್ಜನ್ಯದ ವಿರುದ್ಧ ಪ್ರತಿಭಟನೆ

Tuesday, September 27th, 2016
ksrtc protest

ಮಂಗಳೂರು :  ರಾಜ್ಯ ರಸ್ತೆ ಸಾರಿಗೆ ನಿಗಮದ ಮಂಗಳೂರು ಒಂದನೇ ಘಟಕಕ್ಕೆ ಸೇರಿದ ಮಂಗಳೂರು- ಸುಬ್ರಹ್ಮಣ್ಯ ರೂಟ್‌ನ ಬಸ್ಸಲ್ಲಿ ಚಿಲ್ಲರೆ ಹಣದ ವಿಚಾರಕ್ಕೆ ಸಂಬಂಧಿಸಿ  ಯುವತಿಯೋರ್ವಳು ಮಾಡಿದ ಆರೋಪದಿಂದ ಮನನೊಂದು ಚಲಿಸುತ್ತಿದ್ದ ಬಸ್‌ನಿಂದ ಕುಮಾರಧಾರಾ ನದಿಗೆ ಹಾರಿ ನಿರ್ವಾಹಕ ದೇವದಾಸ್ ಶೆಟ್ಟಿ(41) ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿ ಕೆಎಸ್‌ಆರ್‌ಟಿಸಿ ಡಿಪೋ ಮುಂದೆ  ವಿವಿಧ ಸಂಘಟನೆಗಳ  ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು. ಪ್ರಕರಣದಲ್ಲಿ ಕಡಬ ಠಾಣಾ ಪೊಲೀಸರು ಏಕಪಕ್ಷೀಯವಾಗಿ ವರ್ತಿಸಿದ್ದು, ಯುವತಿಯ ಹೇಳಿಕೆಯನ್ನೇ ಆಧರಿಸಿ ನಿರ್ವಾಹಕರ ಬಟ್ಟೆ ಬಿಚ್ಚಿಸಿ ಅಮಾನವೀಯವಾಗಿ […]

ಕೆ.ಎಸ್.ಆರ್.ಟಿ.ಸಿ ವೋಲ್ವೊ ಬಸ್ ದರ-ಬೆಜ್ಜಿಬಿದ್ದ ಪ್ರಯಾಣಿಕರು

Wednesday, October 22nd, 2014
ksrtc

ಮುಂಬಯಿ : ಮಂಗಳೂರು-ಮುಂಬಯಿ ಅಥವಾ ಮುಂಬಯಿ-ಮಂಗಳೂರು ಪ್ರಯಾಣ ತುಳು ಕನ್ನಡಿಗರ ಪಾಲಿಗೆ ಕಂಠಕವಾಗುತ್ತಿದ್ದು, ಈ ಮಾರ್ಗವಾಗಿ ಸೇವೆಗೈಯುವ ಬಸ್ ಗಳಲ್ಲಿ ಯಾವುದೇ ಸುಸಮಯ ಬಂದಾಗ (ಸೀಝನ್) ಅತೀಯಾದ ದರ ಬೆಳೆಸಿ ಪ್ರಯಾಣಿಕರನ್ನು ಸಂಕಷ್ಟಕ್ಕೊಳ ಪಡಿಸುವ ಬಸ್ ಸಂಸ್ಥೆಗಳ ಉಪಟಲ ತೀರಾ ಖಂಡನೀಯ ಎಂದು ಪ್ರಯಾಣಿಕರು ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ. ಅದಕ್ಕೆ ಪೂರಕ ಎಂಬಂತೆ ಈ ಬಾರಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ) ಸಂಸ್ಥೆಯ ವೋಲ್ವೊ ಬಸ್ ದರವೂ ಪ್ರಯಣಿಕರನ್ನು ಕೆರಳಿಸಿದೆ. ಮಂಗಳೂರು-ಮುಂಬಯಿ ಮತ್ತು ಬೆಂಗಳೂರು-ಮುಂಬಯಿ […]