ವಿಶ್ವಕರ್ಮ ಸಮಾಜ ಓಲೈಕೆಯತ್ತ ಬಿಎಸ್ವೈ
Tuesday, January 2nd, 2018ತುಮಕೂರು: ತಾವು ಅಧಿಕಾರಕ್ಕೆ ಬಂದರೆ, ವಿಶ್ವಕರ್ಮ ಸಮಾಜ ಸೇರಿದಂತೆ ವಿವಿಧ 103 ಹಿಂದುಳಿದ ವರ್ಗಗಳ ಸಮುದಾಯದ ಅಭಿವೃದ್ಧಿಗೆ ಒಂದು ಸಾವಿರ ಕೋಟಿ ರೂ. ಅನುದಾನವನ್ನು ಮೊದಲ ವರ್ಷದಲ್ಲೇ ಬಿಡುಗಡೆ ಮಾಡುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ವಾಗ್ದಾನ ಮಾಡಿದ್ದಾರೆ. ಅವರು ಕೈದಾಳದಲ್ಲಿ ನಡೆದ ಅಮರ ಶಿಲ್ಪಿ ಜಕಣಾಚಾರ್ಯರ ಸಂಸ್ಮರಣಾ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದರು. ವಿಶ್ವಕರ್ಮ ಸಮಾಜದ ಮುಖಂಡ ಕೆ.ಪಿ. ನಂಜುಂಡಿಯನ್ನು ಪರಿಷತ್ ಸದಸ್ಯರನ್ನಾಗಿ ಮಾಡುವುದಲ್ಲದೆ, ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಅನುದಾನ ನೀಡುವುದಾಗಿ ಹೇಳಿ ವಿಶ್ವಕರ್ಮ ಸಮಾಜವನ್ನು […]