ಸಿಎಎ ನೆಪದಲ್ಲಿ ಕಾಂಗ್ರೆಸ್ ಪಕ್ಷವು ಕೇಂದ್ರ ಮತ್ತು ರಾಜ್ಯ ಸರಕಾರವನ್ನು ಅಸ್ಥಿರಗೊಳಿಸಲು ಮುಂದಾಗಿದೆ : ಸಚಿವ ಸಿ.ಟಿ.ರವಿ
Thursday, December 26th, 2019ಮಂಗಳೂರು : ಸಿಎಎ ನೆಪದಲ್ಲಿ ರಾಜ್ಯ ಮತ್ತು ಕೇಂದ್ರ ಸರಕಾರವನ್ನು ಅಸ್ಥಿರಗೊಳಿಸಲು ಕಾಂಗ್ರೆಸ್ ಸಂಚು ರೂಪಿಸಿದೆ ಎಂದು ರಾಜ್ಯ ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.ರವಿ ಆರೋಪಿಸಿದ್ದಾರೆ. ದ.ಕ. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಸಿ.ಟಿ.ರವಿ ಅವರು, ತ್ರಿವಳಿ ತಲಾಖ್, 370ನೆ ವಿಧಿ ರದ್ದು, ಬಾಬರಿ ಮಸ್ಜಿದ್ ತೀರ್ಪು ಇತ್ಯಾದಿ ಸಂದರ್ಭ ದೇಶಾದ್ಯಂತ ಗಲಭೆಯಾಗಬಹುದು ಎಂದು ಕಾಂಗ್ರೆಸ್ಸಿಗರು ಭಾವಿಸಿದ್ದರು. ಆದರೆ, ಎಲ್ಲೂ ಏನೂ ಆಗಿಲ್ಲ. ಈ ಮಧ್ಯೆ ಸಿಎಎ ಅನುಷ್ಠಾನಕ್ಕೆ ಸಿದ್ಧತೆ ನಡೆಯತೊಡಗಿದಾಗ ಕಾಂಗ್ರೆಸ್ […]