ಕೇಂದ್ರ ಸರ್ಕಾರದಿಂದ ಚಾರ್ಮಾಡಿ ಘಾಟ್‌ ಹೆದ್ದಾರಿ ದ್ವಿಪಥಗೊಳಿಸಲು 343.74 ಕೋಟಿ ರೂ. ಬಿಡುಗಡೆ: ಸಂಸದ ಕ್ಯಾ. ಚೌಟ

Saturday, November 9th, 2024
Charmadi-Ghat

ಮಂಗಳೂರು: ಚಾರ್ಮಾಡಿ ಘಾಟ್‌ ರಾಷ್ಟ್ರೀಯ ಹೆದ್ದಾರಿಯನ್ನು ದ್ವಿಪಥವನ್ನಾಗಿ ಅಭಿವೃದ್ಧಿಪಡಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು 343.74 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಮಂಗಳೂರಿನಿಂದ ಮೂಡಿಗೆರೆಯಾಗಿ ತುಮಕೂರಿಗೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ-73ರ ಚಾರ್ಮಾಡಿ ಘಾಟಿಯಲ್ಲಿ 75 ಕಿ.ಮೀ ನಿಂದ 86.20 ಕಿ.ಮೀ. ಅಂತರದವರೆಗೆ ಅಭಿವೃದ್ದಿಯಾಗಲಿದೆ. ಆ ಮೂಲಕ ಚಾರ್ಮಾಡಿ ಘಾಟ್ ಪ್ರದೇಶದ ರಸ್ತೆಯು ದ್ವಿಪಥವಾಗಿ ಅಗಲೀಕರಣಗೊಳ್ಳಲಿದೆ. ಈ […]

‘ಪಿಎಂ-ವಿದ್ಯಾಲಕ್ಷ್ಮಿ’ ಯೋಜನೆಯಿಂದ ಲಕ್ಷಾಂತರ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸು ನನಸು: ಸಂಸದ ಕ್ಯಾ. ಚೌಟ

Thursday, November 7th, 2024
Modi-Loan

ಮಂಗಳೂರು: ಕೇಂದ್ರ ಸರ್ಕಾರ ಪ್ರಾರಂಭಿಸುತ್ತಿರುವ ಹೊಸ ಪಿಎಂ-ವಿದ್ಯಾಲಕ್ಷ್ಮಿ ಯೋಜನೆಯು ಕರ್ನಾಟಕ ಸೇರಿದಂತೆ ದೇಶದೆಲ್ಲೆಡೆ ಆರ್ಥಿಕ ಸಮಸ್ಯೆಯಿಂದ ಉನ್ನತ ಶಿಕ್ಷಣ ಮುಂದುವರಿಸಲು ಸಾಧ್ಯವಾಗದ ಪ್ರತಿಭಾವಂತ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಬಹು ದೊಡ್ಡ ವರದಾನವಾಗಲಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಪಿಎಂ ವಿದ್ಯಾಲಕ್ಷ್ಮಿ ಎನ್ನುವ ಬಹಳ ಉಪಯುಕ್ತ ಯೋಜನೆಗೆ ಅನುಮೋದನೆ ನೀಡಿರುವುದಕ್ಕೆ ಹರ್ಷ ವ್ಯಕ್ತಪಡಿಸಿರುವ ಸಂಸದರು,” ಪ್ರಧಾನಮಂತ್ರಿ ವಿದ್ಯಾಲಕ್ಷ್ಮಿ ಯೋಜನೆ ರಾಷ್ಟ್ರೀಯ ಶಿಕ್ಷಣ […]

ಕೇಂದ್ರ ಸರ್ಕಾರದಿಂದ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ ಬಿಡುಗಡೆ: ಸಂಸದ ಕ್ಯಾ. ಚೌಟ

Saturday, September 21st, 2024
Brijesh-Chowta

ಮಂಗಳೂರು : ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಆಯುಷ್ಮಾನ್ ಭಾರತ್ ಹೆಲ್ತ್ ಇಂಫ್ರಾಸ್ಟ್ರಕ್ಚರ್ ಮಿಷನ್-PMABHIM ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಗೆ ಒಟ್ಟು 25.11 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು ಆ ಪೈಕಿ 24 ಕೋಟಿ ರೂ. ವೆಚ್ಚದಲ್ಲಿ ವೆನ್ಲಾಕ್ ಆಸ್ಪತ್ರೆಯ ಆವರಣದಲ್ಲಿ ಕ್ರಿಟಿಕಲ್ ಕೇರ್ ಯೂನಿಟ್ ಕಟ್ಟಡ ನಿರ್ಮಾಣ ಕಾಮಗಾರಿಗೆ ಅನುಮೋದನೆ ಲಭಿಸಿರುವುದಾಗಿ ಸಂಸದ ಕ್ಯಾ. ಬ್ರಿಜೇಶ್‌ ಚೌಟ ತಿಳಿಸಿದ್ದಾರೆ. ಇಂಟಿಗ್ರೇಟೆಡ್ ಪಬ್ಲಿಕ್ ಹೆಲ್ತ್ ಲ್ಯಾಬ್ ಕಟ್ಟಡಕ್ಕೆ 1.11 ಕೋಟಿಈ ಯೋಜನೆಯಡಿ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯ ಟ್ರಮಾ […]

ಕೇಂದ್ರ ಸರ್ಕಾರದ ‘ಪಿಎಂ ಶ್ರೀ ‘ ಶಾಲೆಯಾಗಿ ಮುಡಿಪು ಜವಾಹರ್ ನವೋದಯ ವಿದ್ಯಾಲಯ – ಕ್ಯಾ. ಚೌಟ

Saturday, September 14th, 2024
PM-shree

ಮಂಗಳೂರು: ಕೇಂದ್ರ ಸರ್ಕಾರ ಘೋಷಿಸಿರುವ ಮಹತ್ವಾಕಾಂಕ್ಷಿ ‘ಪಿಎಂ ಶ್ರೀ’ ಯೋಜನೆಯಡಿ ಮುಡಿಪುವಿನ ಜವಾಹರ್ ನವೋದಯ ವಿದ್ಯಾಲಯ ಆಯ್ಕೆಯಾಗಿರುವುದನ್ನು ಇಂದು ಅಧಿಕೃತವಾಗಿ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಘೋಷಿಸಿದ್ದಾರೆ. ಈ ವೇಳೆ ಮಾತನಾಡಿದ ಸಂಸದರು, ಪ್ರಧಾನ ಮಂತ್ರಿ ಸ್ಕೂಲ್ ಫಾರ್ ರೈಸಿಂಗ್ ಇಂಡಿಯಾ( ಪಿಎಂಶ್ರೀ) ಯೋಜನೆಯಡಿ ಮುಡಿಪುವಿನ ಜವಾಹರ್ ನವೋದಯ ವಿದ್ಯಾಲಯ ಶಾಲೆ ಆಯ್ಕೆಯಾಗಿರುವುದು ದಕ್ಷಿಣ ಕನ್ನಡ ಜಿಲ್ಲೆಗೆ ಹೆಮ್ಮೆಯ ಸಂಗತಿಯಾಗಿದೆ. ಈ ಯೋಜನೆಯಡಿ ಶಾಲೆಯಲ್ಲಿ ತಂತ್ರಜ್ಞಾನ ಆಧಾರಿತ ನಾವೀನ್ಯ ಬೋಧನಾ ವ್ಯವಸ್ಥೆ, ಕೌಶಲ್ಯ, ಆವಿಷ್ಕಾರ, ಉತ್ತಮ […]

ʼಕೇಂದ್ರ ಸರ್ಕಾರದ ಪಿಎಂಇಜಿಪಿ, ಮುದ್ರಾ ಯೋಜನೆ ಫಲಾನುಭವಿಗಳ ಸಂಖ್ಯೆ ಹೆಚ್ಚಳಕ್ಕೆ ಪ್ರಯತ್ನಿಸಿ’

Tuesday, September 10th, 2024
Mudraloan

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೇಂದ್ರ ಸರ್ಕಾರದ ಪಿಎಂಇಜಿಪಿ ಹಾಗೂ ಮುದ್ರಾ ಯೋಜನೆಯಡಿ ಗ್ರಾಮೀಣ ಭಾಗದವರಿಗೆ ವಿಶೇಷವಾಗಿ ಮಹಿಳೆಯರು ಹಾಗೂ ಪರಿಶಿಷ್ಟ ಜಾತಿ/ಪಂಗಡ ಮತ್ತು ಹಿಂದುಳಿದ ವರ್ಗದ ಹೆಚ್ಚಿನ ಫಲಾನುಭವಿಗಳನ್ನು ತಲುಪಲು ಬ್ಯಾಂಕ್ ಗಳು ಉತ್ತೇಜನ ನೀಡಬೇಕೆಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಕರೆ ನೀಡಿದ್ದಾರೆ.. ಮಂಗಳೂರು ನಗರದಲ್ಲಿರುವ ದ.ಕ. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ನಡೆದ ದ.ಕ ಜಿಲ್ಲಾ ಬ್ಯಾಂಕುಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಕ್ಯಾ. ಚೌಟ ಅವರು, ಕೇಂದ್ರ ಸರ್ಕಾರದ […]

ನರೇಂದ್ರ ಮೋದಿ ಜನ್ಮದಿನದಂದು ದೇಶಾದ್ಯಂತ ಎರಡು ಕೋಟಿಗೂ ಹೆಚ್ಚು ಮಂದಿಗೆ ಕೋವಿಡ್ ಲಸಿಕೆ ವಿತರಣೆ

Friday, September 17th, 2021
Narendra Modi

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನವಾದ ಶುಕ್ರವಾರ ದೇಶಾದ್ಯಂತ ದಾಖಲೆಯ ಎರಡು ಕೋಟಿಗೂ ಹೆಚ್ಚು ಮಂದಿಗೆ ಕೋವಿಡ್ ಲಸಿಕೆ ನೀಡಲಾಗಿದೆ.  ಇದು ದೇಶದ  ಕೋವಿಡ್ ಲಸಿಕೆ ಅಭಿಯಾನದಲ್ಲಿ  ಹೊಸ ಮೈಲುಗಲ್ಲು  ಎನ್ನಲಾಗಿದೆ. “ಪ್ರಧಾನಿ ಮೋದಿಯವರ ಜನ್ಮದಿನದಂದು ದೇಶಾದ್ಯಂತ ಎರಡು ಕೋಟಿ ಡೋಸ್ ಲಸಿಕೆ ನೀಡುವ ಗುರಿ ಹೊಂದಲಾಗಿತ್ತು ಎಂದು ಕೇಂದ್ರ ಸರ್ಕಾರದ ಉನ್ನತ ಮೂಲಗಳು ಈ ಮುಂಚೆ ತಿಳಿಸಿದ್ದವು. ಆರೋಗ್ಯ ಕಾರ್ಯಕರ್ತರು ಮತ್ತು ದೇಶದ ಜನರ ಪರವಾಗಿ ಪ್ರಧಾನಿಗೆ ಇದು ಉಡುಗೊರೆ. ಇಂದು ಪ್ರಧಾನಿ ನರೇಂದ್ರ […]

ಪ್ರಧಾನಿ ಭೇಟಿ ಮಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ

Friday, July 16th, 2021
CM Delhi

ನವ ದೆಹಲಿ : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ರಾಜ್ಯದ ಕೆಲ ಯೋಜನೆಗಳ ವಿಷಯದಲ್ಲಿ ಕೇಂದ್ರ ಸರ್ಕಾರದ ನೆರವು ಒದಗಿಸುವಂತೆ ಮನವಿ ಮಾಡಿದರು. ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಣೆ ಮಾಡಬೇಕು, ಬೆಂಗಳೂರುಪೆರಿಫೆರಲ್ ರಿಂಗ್ ರೋಡ್ ನಿರ್ಮಾಣಕ್ಕೆ 6 ಸಾವಿರ ಕೋಟಿ ಅನುದಾನ ಒದಗಿಸಬೇಕು ಎಂದು ಮುಖ್ಯಮಂತ್ರಿಗಳು ಮನವಿ ಮಾಡಿದರು. ಈ ಸಂದರ್ಭದಲ್ಲಿ ಮೇಕೆದಾಟು ಯೋಜನೆ, ಬೆಂಗಳೂರಿನಲ್ಲಿ ಯುಎಸ್ ಕಾನ್ಸುಲೇಟ್ ಸ್ಥಾಪನೆ ಸೇರಿದಂತೆ ವಿವಿಧ […]

ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ತಿಂಗಳೊಳಗಾಗಿ ಪೂರ್ಣಗೊಳಿಸಿ: ಸಚಿವ ಕೆ.ಎಸ್.ಈಶ್ವರಪ್ಪ

Friday, July 9th, 2021
eswarappa

ಮೈಸೂರು :- ಕೇಂದ್ರ ಸರ್ಕಾರವು ವಿಶೇಷವಾಗಿ ಆಸಕ್ತಿವಹಿಸಿರುವ ಕುಡಿಯುವ ನೀರಿನ ಯೋಜನೆಯಾದ ಜಲಜೀವನ್ ಮಿಷನ್ ಯೋಜನೆಯಡಿ ವಿಳಂಬವಾಗಿರುವ ಕಾಮಗಾರಿಗಳನ್ನು ಜುಲೈ ತಿಂಗಳೊಳಗೆ ಪೂರ್ಣಗೊಳಿಸಬೇಕು. ಇಲ್ಲದಿದ್ದರೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಕೆ.ಎಸ್.ಈಶ್ವರಪ್ಪ ಅವರು ಹೇಳಿದರು. ಶುಕ್ರವಾರ ಜಿಲ್ಲಾ ಪಂಚಾಯಿತಿಯ ಸಭಾಂಗಣದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ, ಜಲಜೀವನ್ ಮಿಷನ್ ಸೇರಿದಂತೆ ಇಲಾಖಾ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ಹಾಗೂ ಕೋವಿಡ್-19 ಸೋಂಕು ಗ್ರಾಮೀಣ ಪ್ರದೇಶದಲ್ಲಿ ಹರಡುವುದುನ್ನು […]

ಸಿಬಿಎಸ್ಇ (CBSC)12ನೇ ಪರೀಕ್ಷೆಯನ್ನು ರದ್ದುಗೊಳಿಸಿದ ಕೇಂದ್ರ ಸರ್ಕಾರ

Tuesday, June 1st, 2021
cbsc

ನವದೆಹಲಿ : ಕೋವಿಡ್ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಸಿಬಿಎಸ್ಇ 12ನೇ ಪರೀಕ್ಷೆಯನ್ನುರದ್ದುಗೊಳಿಸಿದೆ.  ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ತೀರ್ಮಾನವನ್ನು ಕೈಗೊಳ್ಳಲಾಗಿದೆ. ಕೋವಿಡ್ ಪರಿಸ್ಥಿತಿ ಹಿನ್ನಲೆ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ. ನಮ್ಮ ವಿದ್ಯಾರ್ಥಿಗಳ ಆರೋಗ್ಯ ಮತ್ತು ಸುರಕ್ಷತೆ ಅತ್ಯಂತ ಮಹತ್ವದ್ದಾಗಿದೆ ಮತ್ತು ಈ ವಿಷಯದಲ್ಲಿ ಯಾವುದೇ ರಾಜಿ ಇಲ್ಲ ಎಂದು ಪ್ರಧಾನಿ ಹೇಳಿದ್ದಾರೆ. ಸಿಬಿಎಸ್‌ಇ ಫಲಿತಾಂಶಗಳನ್ನು ಘೋಷಣೆ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಸಭೆಯ […]

ಕೇಂದ್ರ ಸರ್ಕಾರದ ವಿರುದ್ಧ ಮಂಗಳೂರಿನಲ್ಲಿ ವೈದ್ಯರ ಪ್ರತಿಭಟನೆ

Saturday, December 12th, 2020
IMA

ಮಂಗಳೂರು: ಶಸ್ತ್ರಚಿಕಿತ್ಸೆಗಳನ್ನು ಆಯುರ್ವೇದಿಕ್ ವೈದ್ಯರೂ ಮಾಡಬಹುದು ಎಂದು ಕೇಂದ್ರ ಸರ್ಕಾರ ಆದೇಶಿಸಿರುವುದನ್ನು ಖಂಡಿಸಿ ನಗರದ ಐಎಂಎ ಕಚೇರಿ ಮುಂಭಾಗ ವೈದ್ಯರು ಪ್ರತಿಭಟನೆ ನಡೆಸಿದರು. ಅಲೋಪತಿ ವೈದ್ಯರು ಮಾಡುವ ಅನೇಕ ಶಸ್ತ್ರಚಿಕಿತ್ಸೆಗಳನ್ನು ಆಯುರ್ವೇದಿಕ್ ವೈದ್ಯರೂ ಮಾಡಬಹುದು ಎಂದು ಕೇಂದ್ರ ಸರ್ಕಾರ ಹೊಸ ನಿಯಮ ಜಾರಿಗೆ ತಂದಿದೆ. ಇದನ್ನು ಖಂಡಿಸಿ ದೇಶಾದ್ಯಂತ ಭಾರತೀಯ ವೈದ್ಯಕೀಯ ಸಂಘದ ನೇತೃತ್ವದಲ್ಲಿ ಮುಷ್ಕರ ನಡೆಯುತ್ತಿದ್ದು, ಇದಕ್ಕೆ ಬೆಂಬಲ ಸೂಚಿಸಿದ ದ.ಕ ಜಿಲ್ಲೆಯ ವೈದ್ಯರು ಒಪಿಡಿ ಸೇವೆ ಸ್ಥಗಿತಗೊಳಿಸಿ ಮುಷ್ಕರದಲ್ಲಿ ಭಾಗವಹಿಸಿದ್ದಾರೆ‌. ವೈದ್ಯರು ಕಪ್ಪು ಪಟ್ಟಿ […]