Blog Archive

ಮಂಗಳೂರು ಭಾಗದ ರೈಲ್ವೆ ಹಳಿ ದ್ವಿಪಥ ಕಾಮಗಾರಿಗೆ 327.00 ಕೋಟಿ ರೂ. ಅನುದಾನ: ನಳಿನ್ ಕುಮಾರ್

Tuesday, August 30th, 2016
nalin-kumar-kateel

ಮಂಗಳೂರು: ಮಂಗಳೂರು ಭಾಗದ ರೈಲ್ವೆ ಹಳಿ ದ್ವಿಪಥ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ 327.00 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ಮಂಗಳೂರು ಜಂಕ್ಷನ್‌‌‌‌ನಿಂದ ಪಣಂಬೂರು ವರೆಗಿನ ಒಟ್ಟು 19 ಕಿ.ಮೀ ದ್ವಿಪಥ ಕಾಮಗಾರಿಗೆ ರೂ.327.00 ಕೋಟಿ ಅನುದಾನ ಈಗಾಗಲೇ ಬಿಡುಗಡೆಯಾಗಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಹೆಚ್ಚುವರಿಯಾಗಿ ಈ ಕಾಮಗಾರಿಗೆ 2016-17ನೇ ಸಾಲಿಗೆ 100.00ಕೋಟಿ ರೂ. ಅನುದಾನವನ್ನು ಕಾಯ್ದಿರಿಸಲಾಗಿದೆ ಎಂದರು. ಇನ್ನು ನೇತ್ರಾವತಿ ಕ್ಯಾಬಿನ್‌‌‌‌‌ನಿಂದ ಮಂಗಳೂರು ಕೇಂದ್ರ ರೈಲು ನಿಲ್ದಾಣದವರೆಗಿನ […]

ಗೋ ರಕ್ಷಣೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವೇ ಕಾನೂನು ತಂದರೆ ಒಳಿತು: ಪರಮೇಶ್ವರ್

Saturday, August 27th, 2016
Parameshwar

ಮಂಗಳೂರು: ಗೋ ರಕ್ಷಣೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವೇ ಕಾನೂನು ತಂದರೆ ಒಳಿತು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇಂದು ಮಂಗಳೂರು ಪೊಲೀಸ್ ಕಚೇರಿಯಲ್ಲಿ ಪೊಲೀಸ್ ಗೌರವ ರಕ್ಷೆ ಸ್ವೀಕರಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗೋ ರಕ್ಷಣೆಯ ಹೆಸರಿನಲ್ಲಿ ದೇಶದೆಲ್ಲೆಡೆ ಹಲ್ಲೆ, ಕೊಲೆ ನಡೆಯುತ್ತಿವೆ. ಪ್ರಧಾನಿ ಮೋದಿಯವರು ಗೋ ರಕ್ಷಕರ ಹೆಸರಿನಲ್ಲಿ ದಾಂಧಲೆ ನಡೆಸುವವರ ದಾಖಲೆ ಸಂಗ್ರಹಿಸುವಂತೆ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದ ಬಳಿಕವೂ ಕರಾವಳಿಯಲ್ಲಿ ಗೋ ರಕ್ಷಣೆಯ ಹೆಸರಿನಲ್ಲಿ ಕೊಲೆ […]

ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ಪ್ರತಿಭಟನೆ

Wednesday, August 10th, 2016
Motamma

ಮಂಗಳೂರು: ನರಭಕ್ಷಕರಾಗಿ, ಗೋಮುಖ ವ್ಯಾಘ್ರರಂತೆ ದಲಿತರ ಚರ್ಮ ಸುಲಿಯುತ್ತಿರುವ ಸಂಘ ಪರಿವಾರಕ್ಕೆ ದಲಿತರ ಮೇಲೆ ಹಲ್ಲೆ ಮಾಡಲು ಅಧಿಕಾರ ಕೊಟ್ಟವರು ಯಾರು ಎಂದು ಕಾಂಗ್ರೆಸ್ ಹಿರಿಯ ಮುಖಂಡೆ ಮೋಟಮ್ಮ ಪ್ರಶ್ನಿಸಿದ್ದಾರೆ. ದೇಶಾದ್ಯಂತ ನಡೆಯುತ್ತಿರುವ ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ನಗರದಲ್ಲಿ ನಡೆದ ಬೃಹತ್ ಪ್ರತಿಭಟನೆಯಲ್ಲಿ ಪ್ರಶ್ನಿಸಿದ ಮೋಟಮ್ಮ, ಧರ್ಮ, ಜಾತಿ, ಭಾಷೆ ಎಲ್ಲವನ್ನೂ ಬದಿಗಿಟ್ಟು ಎಲ್ಲರನ್ನೂ ಸಮನಾಗಿ ರಕ್ಷಿಸುವ ಕಾರ್ಯವನ್ನು ಕೇಂದ್ರ ಸರ್ಕಾರ ಮರೆತಿದೆ. ದಲಿತರ ಮೇಲಿನ ದೌರ್ಜನ್ಯದ ಪ್ರಕರಣಗಳು ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಹೆಚ್ಚಿದೆ. […]

ಆಂಧ್ರ ವಿಭಜನೆ ಅಧಿಕೃತ, ಜೂ.2 ತೆಲಂಗಾಣ ಉದಯ ದಿನ

Wednesday, March 5th, 2014
Sampath

ನವದೆಹಲಿ: ತೆಲಂಗಾಣ ರಾಜ್ಯ ರಚನೆ ಈಗ ಅಧಿಕೃತವಾಗಿದ್ದು, ಜೂ.2 ತೆಲಂಗಾಣ ಉದಯ ದಿನ ಎಂದು ಕೇಂದ್ರ ಸರ್ಕಾರ ಘೋಷಿಸಿದೆ. ಇದರೊಂದಿಗೆ ಭಾರತದ 29ನೇ ರಾಜ್ಯವಾಗಿ ತೆಲಂಗಾಣ ಉದಯವಾಗಿದೆ. ತೆಲಂಗಾಣ ರಾಜ್ಯ ರಚನೆ ಮಸೂದೆ ರಾಜ್ಯಸಭೆಯಲ್ಲಿ ಮತ್ತು ಲೋಕಸಭೆಯಲ್ಲಿ ಅಂಗೀಕಾರಗೊಂಡ ನಂತರ, ಮಾರ್ಚ್ 1ರಂದು ರಾಷ್ಟ್ರಪತಿಗಳು ಮಸೂದೆಗೆ ಸಹಿ ಹಾಕಿದ್ದರು. ಇದಾದ ಬಳಿಕ ನಿನ್ನೆ ತಡರಾತ್ರಿ ಕೇಂದ್ರ ಗೃಹ ಸಚಿವಾಲಯ, ಆಂಧ್ರಪ್ರದೇಶ ವಿಭಜನೆ ಕಾಯ್ದೆ 2014ರ ಗೆಜೆಟ್ ಅಧಿಸೂಚನೆ ಹೊರಡಿಸಿದ್ದು, ಅದರಲ್ಲಿ ಜೂನ್ 2 ತೆಲಂಗಾಣ ದಿನವನ್ನಾಗಿ ಘೋಷಿಸಿದೆ. […]

ಎಫ್‌ಡಿಐ, ಜಿಎಸ್‌ಟಿ ಇರಲಿ ಮಾರಕ ಕಾನೂನು ತೊಲಗಲಿ

Friday, February 28th, 2014
Narendra-Modi

ನವದೆಹಲಿ: ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಇದೇ ಮೊದಲ ಬಾರಿಗೆ ಪಕ್ಷದ ಆರ್ಥಿಕ ನೀತಿಯನ್ನು ಬಹಿರಂಗಪಡಿಸಿದ್ದಾರೆ. ವಿದೇಶಿ ನೇರ ಬಂಡವಾಳ ಹೂಡಿಕೆ ಮತ್ತು ಸರಕು ಹಾಗೂ ಸೇವೆಗಳ ತೆರಿಗೆ(ಜಿಎಸ್‌ಟಿ) ಪಕ್ಷದ ವಿರೋಧವಿಲ್ಲ ಎಂದಿದ್ದಾರೆ. ಜಿಎಸ್‌ಟಿ ಜಾರಿಗೆ ಸಂಬಂಧಿಸಿ ನಮ್ಮ ಅಭ್ಯಂತರವೇನೂ ಇಲ್ಲ. ಆದರೆ, ಇದರ ಅನುಷ್ಠಾನಕ್ಕೆ ಬೇಕಾದ ಪೂರ್ವ ಸೌಲಭ್ಯಗಳನ್ನು ಕಲ್ಪಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ. ಜಿಎಸ್‌ಟಿ ಜಾರಿಗೂ ಮುನ್ನ ಮಾಹಿತಿ ತಂತ್ರಜ್ಞಾನ ಎಲ್ಲೆಡೆ ಲಭ್ಯವಾಗಬೇಕಿದೆ. ಜತೆಗೆ, ರಾಜ್ಯ ಸರ್ಕಾರಗಳಿಗೆ ಹಣಕಾಸಿಗೆ ಸಂಬಂಧಿಸಿ ಒಂದಷ್ಟು ಕಳವಳಗಳಿವೆ. […]

ಲೋಕಾಯುಕ್ತ ತಿದ್ದುಪಡಿಗೆ ಸಹಿ ಹಾಕಬೇಡಿ: ರಾಜ್ಯಪಾಲರಿಗೆ ನ್ಯಾ.ಭಾಸ್ಕರ್‌ರಾವ್ ಮನವಿ

Monday, February 24th, 2014
Bhaskar-Rav

ಬೆಂಗಳೂರು: ಕೇಂದ್ರ ಸರ್ಕಾರದ ಜಾರಿಗೆ ತಂದಿರುವ ಲೋಕಪಾಲ ಮಾದರಿ ಅಳವಡಿಸಿಕೊಳ್ಳಲು ರಾಜ್ಯ ಸರ್ಕಾರ ಲೋಕಾಯುಕ್ತ ಕಾಯಿದೆಗೆ ತಿದ್ದುಪಡಿ ತರುವುದಕ್ಕೆ ಲೋಕಾಯುಕ್ತರಿಂದಲೇ ವಿರೋಧ ವ್ಯಕ್ತವಾಗಿದೆ. ಲೋಕಾಯುಕ್ತ ಕಾಯ್ದೆಗೆ ರಾಜ್ಯ ಸರ್ಕಾರ ತಿದ್ದುಪಡಿ ತರಲು ಮುಂದಾಗಿದ್ದು, ಇದರಲ್ಲಿ ಸಾಕಷ್ಟು ಲೋಪಗಳಿವೆ. ಇದರಿಂದ ಲೋಕಾಯುಕ್ತ ಸಂಸ್ಥೆಯ ಮೂಲ ಸಂರಚನೆಗೆ ಧಕ್ಕೆ ತರುತ್ತದೆ ಹಾಗೂ ಭ್ರಷ್ಟಾಚಾರ ನಿಯಂತ್ರಣ ಉದ್ದೇಶಕ್ಕೆ ಅಡ್ಡಿಯಾಗುತ್ತದೆ ಎಂದು ಲೋಕಾಯುಕ್ತ ನ್ಯಾಯಮೂರ್ತಿ ವೈ.ಭಾಸ್ಕರ್ ರಾವ್ ಆತಂಕ ವ್ಯಕ್ತಪಡಿಸಿದ್ದಾರೆ. ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಅವರನ್ನು ಭಾನುವಾರ ಭೇಟಿ ಮಾಡಿದ ಲೋಕಾಯುಕ್ತ ನ್ಯಾ. ವೈ. […]

‘ರಾಜೀವ್’ ಹಂತಕರ ಬಿಡುಗಡೆ: ಫೆ. 27ಕ್ಕೆ ವಿಚಾರಣೆ

Monday, February 24th, 2014
Rajeev-Gandhi

ನವದೆಹಲಿ: ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿ ಹಂತಕರನ್ನು ಬಿಡುಗಡೆ ಮಾಡಲು ತೀರ್ಮಾನಿಸಿದ್ದ ತಮಿಳುನಾಡು ಸರ್ಕಾರ ನಿರ್ಧಾರವನ್ನು ಪ್ರಶ್ನಿಸಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಫೆಬ್ರವರಿ 27ರಂದು ಕೈಗೆತ್ತಿಕೊಳ್ಳಲಿದೆ. ತಮಿಳುನಾಡು ಸರ್ಕಾರದ ನಿರ್ಧಾರ ಮತ್ತು ರಾಜೀವ್ ಹಂತಕರ ಗಲ್ಲು ಶಿಕ್ಷೆಯನ್ನು ಜೀವಾವಧಿಗೆ ಇಳಿಸಿದ್ದ ಸುಪ್ರೀಂಕೊರ್ಟ್ನ ತೀರ್ಪಿನ ವಿರುದ್ಧ ಕೇಂದ್ರ ಸರ್ಕಾರ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯ ವಿಚಾರಣೆಯನ್ನು ಫೆ. 27ರಂದು ಸುಪ್ರೀಂಕೋರ್ಟ್ ನಡೆಸಲಿದೆ. ನಳಿನಿ ಶ್ರೀಹರನ್ ಸೇರಿದಂತೆ ಸಂತನ್, ಮುರಗನ್ ಮತ್ತು ಪೆರಾರಿವೇಲನ್ ಅವರ […]

ಲೋಕಾ ವ್ಯಾಪ್ತಿಗೆ ಮುಖ್ಯಮಂತ್ರಿ ಸಂಪುಟ ಸದಸ್ಯರು

Saturday, February 22nd, 2014
Siddaramaiah

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಲೋಕಪಾಲ ಕಾಯಿದೆ ಹಿನ್ನೆಲೆಯಲ್ಲಿ ರಾಜ್ಯದ ಲೋಕಾಯುಕ್ತ ಕಾಯ್ದೆಯನ್ನು ಬಲಪಡಿಸುವ ವಿಧೇಯಕವನ್ನು ಸೋಮವಾರ ವಿಧಾನ ಮಂಡಲದ ಉಭಯ ಸದನಗಳಲ್ಲಿ ಮಂಡಿಸುವ ಮಹತ್ವದ ನಿರ್ಧಾರಕ್ಕೆ ಶುಕ್ರವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಣಯ ತೆಗೆದುಕೊಳ್ಳಲಾಗಿದ್ದು, ಹೊಸ ಕಾನೂನಿನ ಪ್ರಕಾರ ಮುಖ್ಯಮಂತ್ರಿ ಕಚೇರಿಯನ್ನೂ ಲೋಕಾಯುಕ್ತ ವ್ಯಾಪ್ತಿಗೆ ಒಳಪಡಿಸಲು ನಿರ್ಧರಿಸಲಾಗಿದೆ. ರಾಜ್ಯದ ಮುಖ್ಯಮಂತ್ರಿ, ಸಂಪುಟದ ಇತರೆ ಎಲ್ಲ ಸದಸ್ಯರು, ಮುಖ್ಯ ಕಾರ್ಯದರ್ಶಿಯನ್ನು […]

ಅಲ್ಪಸಂಖ್ಯಾತ ವಿಶ್ವವಿದ್ಯಾನಿಲಯಕ್ಕೆ ಟಿಪ್ಪು ಹೆಸರಿನ ಬದಲು ಫರ್ಡಿನೆಂಡ್ ಕಿಟ್ಟೆಲ್ ಹೆಸರಿಡುವುದು ಸೂಕ್ತ : ಟಿ. ಜೆ. ಅಬ್ರಹಾಂ

Saturday, February 16th, 2013
University in Srirangapatna

ಮಂಗಳೂರು : ಕೇಂದ್ರ ಸರ್ಕಾರವು ಮೈಸೂರಿನ ಶ್ರೀರಂಗಪಟ್ಟಣದಲ್ಲಿ ಸ್ಥಾಪಿಸಲು ನಿರ್ಧರಿಸಿರುವ ಅಲ್ಪಸಂಖ್ಯಾತ ವಿಶ್ವವಿದ್ಯಾನಿಲಯಕ್ಕೆ ಟಿಪ್ಪು ಹೆಸರಿನ ಬದಲು  ಶಿಕ್ಷಣ ಕ್ಷೇತ್ರಕ್ಕೆ ಗಣನೀಯವಾದ ಸೇವೆ ಸಲ್ಲಿಸಿದ್ದ ರೆ.ಫಾ.ಫರ್ಡಿನೆಂಡ್ ಕಿಟ್ಟೆಲ್  ಹೆಸರಿಡುವುದು ಸೂಕ್ತ ಎಂದು ಸಾಮಾಜಿಕ ಕಾರ್ಯಕರ್ತ ಹಾಗೂ ಆ್ಯಂಟಿ ಗ್ರಾಫ್ಟ್ ಮತ್ತು ಎನ್ವಿರಾನ್‌ಮೆಂಟ್ ಫೋರಂನ ಅಧ್ಯಕ್ಷ ಟಿ. ಜೆ. ಅಬ್ರಹಾಂ ಹೇಳಿದರು. ಅವರು ಶುಕ್ರವಾರ ನಗರದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತ, ಟಿಪ್ಪು ಸುಲ್ತಾನ್ ಒಬ್ಬ ಶ್ರೇಷ್ಟ ಸ್ವಾತಂತ್ರ್ಯ ಹೋರಾಟಗಾರನಾಗಿದ್ದ ಎಂಬುದು ನಿಜ. ಆದರೆ ಆತ ಶಿಕ್ಷಣ ಕ್ಷೇತ್ರಕ್ಕೆ ಯಾವುದೇ […]

ಪಂಚ ದ್ರಾವಿಡ ಭಾಷೆಯಲ್ಲಿ ಒಂದಾದ ತುಳುವಿಗೆ ಪ್ರತ್ಯೇಕ ರಾಜ್ಯ ಸಿಗಲಿ : ಹರಿಕೃಷ್ಣ ಪುನರೂರು

Wednesday, July 6th, 2011
Harikrishana punaroor/ಹರಿಕೃಷ್ಣ ಪುನರೂರು

ಮಂಗಳೂರು : ಪಂಚ ದ್ರಾವಿಡ ಭಾಷೆಯಲ್ಲಿ ಒಂದಾದ ತುಳುವಿಗೆ ಮತ್ತು ತುಳುವರಿಗೆ ಅನ್ಯಾಯವಾಗಿದೆ. 1956ರಲ್ಲಿ ಭಾಷಾವಾರು ರಾಜ್ಯಗಳ ರಚನೆಯಾದಾಗ ನಮ್ಮ ನಾಯಕರು ತುಳು ರಾಜ್ಯದ ಬೇಡಿಕೆಯನ್ನು ಇರಿಸದೆ ತುಳುವರಿಗೆ ಅನ್ಯಾಯವೆಸಗಿದ್ದಾರೆ.ದೇಶದ ಉದ್ಧಾರದ ಹೆಸರಿನಿಂದ ಹೊಸ ಹೊಸ ಕೈಗಾರಿಕೆಗಳು ಬಂದು ತುಳುನಾಡು, ಸಂಸ್ಕೃತಿ ಇದರಿಂದಾಗಿ ನಾಶವಾಗುತ್ತಿದೆ. ತುಳುವರು ಅನಾಥರಾಗಿದ್ದಾರೆ ಈಗ ತೆಲುಗರು ಅವರ ರಾಜ್ಯ ವನ್ನು ಒಡೆದು ಪ್ರತ್ಯೇಕ ತೆಲುಂಗಾಣ ರಾಜ್ಯದ ಬೇಡಿಕೆಗೆ ಮುಂದಾಗಿದ್ದಾರೆ. ಈ ಸಮಯದಲ್ಲಿ ತೆಲಂಗಾಣ ರಾಜ್ಯವನ್ನು ರಚಿಸಲು ಕೇಂದ್ರ ಸರಕಾರ ಮುಂದೆ ಬಂದರೆ,ತುಳುವರು ನ್ಯಾಯ […]