ವಸ್ತು ನಿಷ್ಠ, ಮೌಲ್ಯಯುತ ವರದಿಗೆ ಆದ್ಯತೆ ಅಗತ್ಯ: ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ

Saturday, January 2nd, 2021
PaGo Award

ಮಂಗಳೂರು: ಕಟ್ ಆ್ಯಂಡ್ ಫೇಸ್ಟ್ ಸುದ್ದಿಯ ಬದಲು ವಸ್ತು ನಿಷ್ಠ ಮೌಲ್ಯಯುತ ಜತೆಗೆ ವಿಮರ್ಶೆಯಿಂದ ಕೂಡಿದ ಪತ್ರಿಕಾ ವರದಿಗಳು ಜನಪರ ಆಡಳಿತ ನಡೆಸಲು ಪೂರಕವಾಗುತ್ತವೆ ಎಂದು ದ.ಕ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಹೇಳಿದರು. ಗುರುವಾರ ನಗರದ ಪತ್ರಿಕಾಭವನದಲ್ಲಿ ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜರುಗಿದ 2019ನೇ ಸಾಲಿನ ಪ.ಗೋ.(ಪದ್ಯಾಣ ಗೋಪಾಲಕೃಷ್ಣ) ಗ್ರಾಮೀಣ ವರದಿಗಾರಿಕೆ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು. ಇಲಾಖೆಯಲ್ಲಿ ವರ್ಷಕ್ಕೆ ಒಂದು ಬಾರಿ ಅಡಿಟ್ ನಡೆಯುವ ಮೂಲಕ ಪಾರದರ್ಶಕತೆಯನ್ನು ಹೆಚ್ಚು ಮಾಡುವಂತೆ […]

ಪ್ರಾಕೃತಿಕ ವಿಕೋಪ ಪರಿಹಾರ ವಿತರಣೆ ವಿಫಲ : ಈಶ್ವರ ಖಂಡ್ರೆ ಆರೋಪ

Thursday, December 26th, 2019
ishwar

ಮಡಿಕೇರಿ : ಕೊಡಗು ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪಕ್ಕೆ ಸಿಲುಕಿದ ಸಂತ್ರಸ್ತರಿಗೆ ಸೂಕ್ತ ಪರಿಹಾರ ಮತ್ತು ವಸತಿ ವ್ಯವಸ್ಥೆಗಳನ್ನು ಕಲ್ಪಸಿಕೊಡುವಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳೆರಡೂ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಆರೋಪಿಸಿದ್ದಾರೆ. ಮಡಿಕೇರಿ ನಗರದ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಕ್ಷಣವೇ ಸಂತ್ರಸ್ತರಿಗೆ ಸೂಕ್ತ ಪರಿಹಾರ ಒದಗಿಸಲು ರಾಜ್ಯ ಸರ್ಕಾರ ಮುಂದಾಗದಿದ್ದಲ್ಲಿ ವಿಧಾನಸಭೆಯಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಹೋರಾಟ ಹಮ್ಮಿಕೊಳ್ಳುವುದಾಗಿ ಎಚ್ಚರಿಕೆ […]

ರಾಷ್ಟ್ರೀಯ ಪೌರತ್ವ ನೋಂದಣಿ ದುರುದ್ದೇಶ ಪೂರಿತ; ಆರೋಪ

Tuesday, December 10th, 2019
madikeri

ಮಡಿಕೇರಿ : ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಮಂಡಿಸಿರುವ ರಾಷ್ಟ್ರೀಯ ಪೌರತ್ವ ನೋಂದವಣಿ ಮಸೂದೆಯು ಅನಗತ್ಯ, ದುರುದ್ದೇಶಪೂರಿತ ಮತ್ತು ಮುಸ್ಲಿಂ ಸಮಾಜವನ್ನು ನೇರವಾಗಿ ಆಕ್ರಮಿಸುವ ಸಂವಿಧಾನ ವಿರೋಧಿ ನಡೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಎಂ.ಎ.ಉಸ್ಮಾನ್ ಆರೋಪಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಈಗಾಗಲೇ ಅಸ್ಸಾಂನಲ್ಲಿ 1300 ಕೋಟಿ ರೂಪಾಯಿ ಖರ್ಚುಮಾಡಿ ಪೌರತ್ವ ನೋಂದಣಿ ಯೋಜನೆ ಜಾರಿ ಮಾಡಿದ್ದರಿಂದ 19 ಲಕ್ಷ ಮಂದಿ ಅತಂತ್ರರಾಗಿದ್ದು, ಇವರನ್ನು ಏನು ಮಾಡಬೇಕೆಂಬ ತೀರ್ಮಾನಕ್ಕೆ ಬರಲು ಈವರೆಗೂ […]

ಕೊಡಗು ಜಿಲ್ಲೆಯಾದ್ಯಂತ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀಸುಬ್ರಹ್ಮಣ್ಯ ಷಷ್ಠಿ

Tuesday, December 3rd, 2019
shashti

ಮಡಿಕೇರಿ : ಕೊಡಗು ಜಿಲ್ಲೆಯಾದ್ಯಂತ ವಿವಿಧ ದೇವಾಲಯಗಳಲ್ಲಿ ಶ್ರೀಸುಬ್ರಹ್ಮಣ್ಯ ಷಷ್ಠಿ ಶ್ರದ್ಧಾಭಕ್ತಿಯಿಂದ ನಡೆಯಿತು. ನಗರದ ಇತಿಹಾಸ ಪ್ರಸಿದ್ಧ ಶ್ರೀಓಂಕಾರೇಶ್ವರ ದೇವಾಲಯದಲ್ಲಿ ಶ್ರೀಸುಬ್ರಹ್ಮಣ್ಯ ದೇವರಿಗೆ ಅಭಿಷೇಕ, ಅಲಂಕಾರ, ಅರ್ಚನೆ ಸೇರಿದಂತೆ ವಿವಿಧ ಪೂಜಾ ವಿಧಿ ವಿಧಾನಗಳು ಬೆಳಗ್ಗೆಯಿಂದಲೇ ನಡೆಯಿತು. ಮಹಾಪೂಜೆ ಮತ್ತು ಮಹಾಮಂಗಳಾರತಿ ಸಂದರ್ಭ ಸಾವಿರಾರು ಭಕ್ತರು ಶ್ರದ್ಧಾಭಕ್ತಿಯನ್ನು ಮೆರೆದರು. ಭಕ್ತಾಧಿಗಳಿಗೆ ಅನ್ನದಾನದ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು. ಬ್ರಾಹ್ಮಣರ ಬೀದಿಯ ಅಶ್ವತ್ಥ ಕಟ್ಟೆಯಲ್ಲೂ ನಾಗಾರಾಧನೆ ನಡೆಯಿತು. ಭಕ್ತರು ಅಭಿಷೇಕ ಮತ್ತು ವಿಶೇಷ ಪೂಜೆ ಸಲ್ಲಿಸಿದರು. ಕೂಡಿಗೆಯಲ್ಲಿ ರಥೋತ್ಸವ ಶ್ರೀಸುಬ್ರಹ್ಮಣ್ಯ ಷಷ್ಠಿ […]

ಕೊಡಗು ಪ್ರವೇಶದ ಚೆಕ್ ಪೋಸ್ಟ್‌ಗಳಲ್ಲಿ ಪೊಲೀಸ್ ಕಣ್ಗಾವಲು

Friday, November 8th, 2019
sumana

ಮಡಿಕೇರಿ  :  ಈದ್ ಮಿಲಾದ್, ಟಿಪ್ಪು ಜಯಂತಿ ಹಾಗೂ ಸಧ್ಯದಲ್ಲಿಯೇ ಅಯೋಧ್ಯೆ ವಿವಾದದ ತೀರ್ಪು ಹೊರ ಬರಲಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಪೊಲೀಸ್ ಇಲಾಖೆ ಅಗತ್ಯ ಭದ್ರತಾ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಕೊಡಗು ಪ್ರವೇಶದ ಚೆಕ್ ಪೋಸ್ಟ್‌ಗಳಲ್ಲಿ ಪೊಲೀಸ್ ಕಣ್ಗಾವಲು ಇರಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಡಾ.ಸುಮನ ತಿಳಿಸಿದ್ದಾರೆ. ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್‌ಪಿ, ಕೇರಳ ರಾಜ್ಯದ ಕಣ್ಣೂರು, ವಯನಾಡು, ಕಾಸರಗೂಡು ಹಾಗೂ ಹಾಸನ, ಮೈಸೂರು ಜಿಲ್ಲೆಗಳ ಗಡಿಭಾಗಗಳಿಗೆ ಹೊಂದಿಕೊಂಡಂತೆ ೧೪ ಚೆಕ್ ಪೋಸ್ಟ್‌ಗಳನ್ನು ತೆರೆದಿದ್ದು, ವಾಹನ […]

ಕೊಡಗಿನಲ್ಲಿ ಮತ್ತೊಂದು ರೇವ್‌ ಪಾರ್ಟಿ 8 ಜನರ ಬಂಧನ 100 ಕ್ಕೂ -ಯುವತಿಯರು ಭಾಗಿ.

Sunday, November 3rd, 2019
dj-party

ಮಡಿಕೇರಿ  : ಪೊನ್ನಂಪೇಟೆ (ಕೊಡಗು ) ದಕ್ಷಿಣ ಕೊಡಗಿನ ನಲ್ಲೂರು ಗ್ರಾಮದಲ್ಲಿ ಪಿ ವಿವೇಕ್ ಎಂಬಾತನ ಅನಧಿಕೃತ ಹೋಂ ಸ್ಟೇ ಒಂದರಲ್ಲಿ ರೇವಾಪಾರ್ಟಿ ನಡೆಯುತ್ತಿರುವ  ಕುರಿತು ಖಚಿತ ಮಾಹಿತಿಯ ಮೇರೆಗೆ ಕೊಡಗು ಜಿಲ್ಲಾ ಅಪರಾಧಿ ಪತ್ತೆದಳದ ಅಧಕಾರಿ ಮಹೇಶ್ ರವರ ನೇತೃತ್ವದ ತಂಡ ಶನಿವಾರ ರಾತ್ರಿ ಧಾಳಿ ನಡೆಸಿ ೮ ಮಂದಿಯನು ಬಂಧಿಸಿದೆ.  ದಾಳಿ ಸಂಧರ್ಭ ಹೈದರಬಾದ್ ಮೂಲದ ಸುಮಾರು 100 ಕ್ಕೂ ಏಚ್ಚು  ವಿದ್ಯಾರ್ಥಿಗಳು ಹಾಗೂ ಬಹುರಾಷ್ಟ್ರೀಯ ಕಂಪೆನಿಗಳ ಉದ್ಯೋಗಸ್ಥ ಯುವಕ-ಯುವತಿಯರು ಮದ್ಯ, ಹೆಂಡ, ಗಾಂಜಾ […]

ಮಾಜಿ ಸಿಎಂ ಹೆಚ್‌ಡಿಕೆಗೆ ಇಲ್ಲ ಆಹ್ವಾನ : ಕೊಡಗು ಜೆಡಿಎಸ್ ಅಸಮಾಧಾನ

Saturday, October 26th, 2019
HDK

ಮಡಿಕೇರಿ : ಕಳೆದ ವರ್ಷ ಕೊಡಗಿನಲ್ಲಿ ಸಂಭವಿಸಿದ ಮಹಾಮಳೆ ಹಾನಿಯ ಸಂದರ್ಭ ಅಂದಿನ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸಕಾಲದಲ್ಲಿ ಸ್ಪಂದಿಸಿ ಸಂತ್ರಸ್ತರಿಗೆ ನೂತನ ಮನೆಗಳನ್ನು ನಿರ್ಮಿಸಿ ಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಆದರೆ ಮನೆಗಳ ಹಸ್ತಾಂತರದ ಸಂದರ್ಭ ಇಂದಿನ ಬಿಜೆಪಿ ಸರ್ಕಾರ ಕುಮಾರಸ್ವಾಮಿ ಅವರನ್ನು ಕಡೆಗಣಿಸಿದೆ ಎಂದು ಜಾತ್ಯತೀತ ಜನತಾ ದಳದ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್ ಆರೋಪಿಸಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು, ಅ.25 ರಂದು ಸಂತ್ರಸ್ತರಿಗಾಗಿ ಮೊದಲ ಹಂತದಲ್ಲಿ 35 ಮನೆಗಳನ್ನು ಹಸ್ತಾಂತರಿಸಲಾಗಿದೆ. ಆದರೆ ಈ ಸಮಾರಂಭಕ್ಕೆ […]

ಕೊಡಗು ಜಿ.ಪಂ.ನೂತನ ಭವನ ಉದ್ಘಾಟನೆ

Friday, October 25th, 2019
kodagu jilla panchayath

ಮಡಿಕೇರಿ : ನಗರದ ಹೊರ ವಲಯದಲ್ಲಿ 25ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಿರುವ ಜಿಲ್ಲಾ ಪಂಚಾಯಿತಿ ನೂತನ ಭವನವನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಕೆ.ಎಸ್.ಈಶ್ವರಪ್ಪ ಅವರು ಶುಕ್ರವಾರ ಉದ್ಘಾಟಿಸಿದರು. ಬಳಿಕ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಅವರು ರಾಜ್ಯ ಹಾಗೂ ಜಿಲ್ಲೆಯಲ್ಲಿ ನೆರೆಯಿಂದಾಗಿ ಕೃಷಿ ಸೇರಿದಂತೆ ಇತರೆ ಬೆಳೆ ನಷ್ಟವಾಗಿದ್ದು, ಬೆಳೆ ಪರಿಹಾರವನ್ನು ಎಂಟು ಹತ್ತು ದಿನದಲ್ಲಿ ಸರ್ಕಾರ ಬಿಡುಗಡೆ ಮಾಡಲಿದೆ ಎಂದು ಅವರು ತಿಳಿಸಿದರು. ಕಳೆದ ಬಾರಿ […]

ಡಿಕೆಶಿಗೆ ಜಾಮೀನು : ಕೊಡಗು ಕಾಂಗ್ರೆಸ್‌ನಿಂದ ದೇವಾಲಯದಲ್ಲಿ ಪೂಜೆ

Thursday, October 24th, 2019
kodagu

ಮಡಿಕೇರಿ : ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಜಾಮೀನು ದೊರೆತ ಹಿನ್ನೆಲೆ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ನಗರದಲ್ಲಿ ಸಂಭ್ರಮಾಚರಿಸಿತು. ನಗರದ ಶ್ರೀಓಂಕಾರೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಜಿಲ್ಲಾ ಮುಖಂಡರು ಹಾಗೂ ಕಾರ್ಯಕರ್ತರು ಡಿ.ಕೆ.ಶಿವಕುಮಾರ್ ಅವರ ಒಳಿತಿಗಾಗಿ ಪ್ರಾರ್ಥಿಸಿದರು. ಈ ಸಂದರ್ಭ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್, ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಹಾಗೂ ದೇಶವನ್ನು ಅಭಿವೃದ್ಧಿ ಪಥದತ್ತ ಸಾಗಿಸುವ ಮೂಲಕ ಜನಪ್ರಿಯ ಪಕ್ಷವೆನಿಸಿಕೊಂಡ ಕಾಂಗ್ರೆಸ್‌ನ್ನು ನೇರವಾಗಿ […]

ಕೊಡಗಿನಲ್ಲಿ ಭಾರಿ ಮಳೆ ಸಾಧ್ಯತೆ : ರೆಡ್ ಅಲರ್ಟ್ ಘೋಷಣೆ

Thursday, September 5th, 2019
kodagu

ಮಡಿಕೇರಿ : ಇಂದು ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಬುಧವಾರದಿಂದಲೇ ರೆಡ್ ಅಲರ್ಟ್ ಘೋಷಿಸಲಾಗಿದೆ. ಮುಂದಿನ 24 ಗಂಟೆಗಳಲ್ಲಿ ಅಧಿಕ ಮಳೆಯಾಗುವ ಸೂಚನೆ ದೊರೆತ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಧಿಕಾರಿ ಅನೀಸ್ ಕಣ್ಮನಿ ಶಾಲಾ ಕಾಲೇಜುಗಳಿಗೆ ಇಂದು ರಜೆಯನ್ನು ಘೋಷಿಸಿದ್ದಾರೆ. ಭಾನುವಾರ ಸಂಜೆಯಿಂದಲೂ ಕೊಡಗಿನಲ್ಲಿ ಭಾರೀ ಮಳೆಯಾಗುತ್ತಿದೆ. ಕೊಡಗು ವಿಪತ್ತು ನಿರ್ವಹಣಾ ಆಡಳಿತ ನೀಡಿದ ಮಾಹಿತಿ ಪ್ರಕಾರ, ಜಿಲ್ಲೆಯಲ್ಲಿ ಗುರುವಾರ 204.5 ಮಿಲಿ ಮೀಟರ್ ಮಳೆಯಾಗಲಿದೆ. ಜೊತೆಗೆ ಮಡಿಕೇರಿ ಹಾಗೂ ಕುಶಾಲನಗರದಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ಕಾವೇರಿ ನದಿ […]