ಪುತ್ತೂರಿನ ಪ್ರವಾಸಿಗರನ್ನು ಹಲ್ಲೆ ಮಾಡಿ ಚಿನ್ನದ ಸರ ದೋಚಿದ ಮಡಿಕೇರಿಯ ಪುಡಿ ರೌಡಿಗಳು

Sunday, June 23rd, 2024
Madapura

ಮಡಿಕೇರಿ : ಕೋಟೆಬೆಟ್ಟ ಪ್ರವಾಸಕ್ಕೆಂದು ಆಗಮಿಸಿದ ಪ್ರವಾಸಿಗರ ಮೇಲೆ ಬೈಕಿನಲ್ಲಿ ಬಂದ ಇಬ್ಬರು ಹಲ್ಲೆ ಮಾಡಿ ದೌರ್ಜನ್ಯ ಎಸಗಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ. ಮಕ್ಕಳು, ಮಹಿಳೆಯರು ಸೇರಿದಂತೆ ಪುತ್ತೂರಿನಿಂದ ಕುಟುಂಬವೊಂದು ಕೋಟೆಬೆಟ್ಟ ಪ್ರವಾಸಿ ತಾಣಕ್ಕೆ ಆಗಮಿಸಿದ ಸಂದರ್ಭ ಬೈಕಿನಲ್ಲಿ ಬಂದ ಇಬ್ಬರು ಪುಂಡರು ಹಲ್ಲೆ ನಡೆಸಿ, ಚಿನ್ನದ ಸರ ಎಗರಿಸಿ ಬೈಕನ್ನು ಬಿಟ್ಟು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಇಬ್ಬರು ಆರೋಪಿಗಳು ಮಾದಾಪುರ ಸಮೀಪದ ನಿವಾಸಿಗಳು ಎಂಬ ವಿಚಾರ ತಿಳಿದು ಬಂದಿದೆ. ದೌರ್ಜನ್ಯಕ್ಕೆ ಒಳಗಾದವರು ಮಾದಾಪುರ […]

ಪುರೋಹಿತರನ್ನು ಪೂಜೆ ಮಾಡಿಸಿ, 49 ಲಕ್ಷ ರೂ. ಸುಲಿಗೆ ಮಾಡಿದ ಆರೋಪಿಗಳು

Friday, January 21st, 2022
Honey Trap

ಮಂಗಳೂರು : ನಗರದ ಪದವಿನಂಗಡಿಯ ಬಾಡಿಗೆ ಮನೆಯೊಂದಕ್ಕೆ ಪೂಜೆ ನೆಪದಲ್ಲಿ ಚಿಕ್ಕಮಗಳೂರಿನ ಪುರೋಹಿತರೊಬ್ಬರನ್ನು ಕರೆಸಿಕೊಂಡು ಜೊತೆಗೆ ಫೋಟೋ ತೆಗಿಸಿಕೊಂಡು ಬ್ಲಾಕ್ಮೇಲ್ ಮಾಡಿ  ಸುಮಾರು 49 ಲಕ್ಷ ರೂ.ಗಳನ್ನು ಸುಲಿಗೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಸಿಸಿಬಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಮೂಲತ: ಕೊಡಗು ಜಿಲ್ಲೆಯ ಸೋಮವಾರ ಪೇಟೆ ನಿವಾಸಿ ಭವ್ಯ (30) ಹಾಗೂ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಕುಮಾರ್ ರಾಜು ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಕಾರು ಚಾಲಕನಾಗಿರುವ ಕುಮಾರ್ ರಾಜು ಹಾಗೂ ಭವ್ಯ ನಗರದ ಮೇರಿಹಿಲ್‌ನ ಅಪಾರ್ಟ್‌ಮೆಂಟ್‌ನ […]

ಕುಶಾಲನಗರ ನೂತನ ತಾಲ್ಲೂಕು ಅಸ್ತಿತ್ವಕ್ಕೆ ಆರ್ ಅಶೋಕ ಚಾಲನೆ

Wednesday, July 7th, 2021
Kushal Nagara

ಕುಶಾಲನಗರ  : ಕಂದಾಯ ಸಚಿವರಾದ ಆರ್ ಅಶೋಕ ಅವರು ನೂತನವಾಗಿ ರಚನೆಗೊಂಡಿರುವ ಕೊಡಗು ಜಿಲ್ಲೆಯ ಐದನೇ ತಾಲ್ಲೂಕು ಕುಶಾಲನಗರದ ಅಧಿಕೃತ ಕಾರ್ಯಾರಂಭಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಆರ್. ಅಶೋಕ ಅವರು “ಕುಶಾಲನಗರ ತಾಲ್ಲೂಕು ಕೇಂದ್ರವಾಗಬೇಕು ಎಂದು ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್ ಅವರು 20-30 ಬಾರಿ ಕಚೇರಿಗೆ ಬಂದು ವಿನಂತಿಸಿದ್ದಾರೆ. ಅಪ್ಪಚ್ಚುರಂಜನ್ ಅವರ ಪ್ರಯತ್ನದಿಂದ ಕುಶಾಲನಗರ ತಾಲ್ಲೂಕು ಕೇಂದ್ರವಾಗಿದೆ. ಇಲ್ಲಿನ ಶಾಸಕರ ಹೋರಾಟದ ಫಲವಾಗಿ ಕುಶಾಲನಗರ ತಾಲ್ಲೂಕು ಅಸ್ತಿತ್ವಕ್ಕೆ ಬಂದಿದೆ” ಎಂದು ಕಂದಾಯ ಸಚಿವರು ಹೇಳಿದರು. “ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ […]

ತಲಕಾವೇರಿಯಲ್ಲಿ ಗುಡ್ಡ ಜರಿದು ಅರ್ಚಕರ ಮನೆ ಸಮಾಧಿ, ಬಂಟ್ವಾಳದ ಅರ್ಚಕ ನಾಪತ್ತೆ

Thursday, August 6th, 2020
Archak

ಬಂಟ್ವಾಳ: ಕೊಡಗು ಜಿಲ್ಲೆಯ ತಲಕಾವೇರಿ ಭಾಗದಲ್ಲಿ ಗುಡ್ಡ ಜರಿದು ಅರ್ಚಕರ ಮನೆ ಸಮಾಧಿಯಾದ ದುರಂತ ಪ್ರಕರಣದಲ್ಲಿ ನಾಪತ್ತೆಯಾಗಿರುವ ನಾಲ್ವರಲ್ಲಿ ಬಂಟ್ವಾಳ ಮೂಲದ ಯುವ ಅರ್ಚಕರೊಬ್ಬರೂ ಸೇರಿದ್ದಾರೆ ಎಂಬ ಮಾಹಿತಿ ಇದೀಗ ಲಭಿಸಿದೆ. ಬಂಟ್ವಾಳ ಮೂಲದ ಕಳ್ಳಿಗೆ ಗ್ರಾಮದ ಕನಪಾಡಿ ನಿವಾಸಿ ರವಿಕಿರಣ್ ಈ ದುರಂತದಲ್ಲಿ ನಾಪತ್ತೆಯಾಗಿರಬಹುದೆಂದು ಇದೀಗ ಶಂಕಿಸಲಾಗುತ್ತಿದೆ. 24 ವರ್ಷದ ರವಿಕಿರಣ್ ಅವರು ರಾಮಕೃಷ್ಣ ಮತ್ತು ರೇಣುಕಾ ಭಟ್ (ಅಪ್ಪು ಭಟ್) ದಂಪತಿಯ ಪುತ್ರನಾಗಿದ್ದಾರೆ. ಲಾಕ್ ಡೌನ್ ಸಂದರ್ಭದಲ್ಲಿ ಊರಿನಲ್ಲೇ ಇದ್ದ ರವಿಕಿರಣ್ ಅವರು ಬಳಿಕ […]

ಕೊಡಗು ಜಿಲ್ಲೆಯಲ್ಲಿ ಭಾರೀ ವಾಹನಗಳ ಸಂಚಾರ ನಿಷೇಧ

Friday, June 12th, 2020
Madikeri

ಮಂಗಳೂರು :  ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆ ಪ್ರಾರಂಭವಾಗಿದ್ದು ಮಂದಿನ ದಿನಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾದಲ್ಲಿ ರಸ್ತೆಯ ಪರಿಸ್ಥಿತಿ ಹದಗೆಡುತ್ತದೆಯಲ್ಲದೆ ಕಳೆದ 2 ವರ್ಷಗಳಲ್ಲಿ ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆ ಮತ್ತು ನೆರೆಹಾವಳಿಯಿಂದಾಗಿ ಹಲವಾರು ರಸ್ತೆಗಳು ಹಾಳಾಗಿರುತ್ತದೆ. ರಸ್ತೆಗಳನ್ನು ಮಳೆಹಾನಿ ದುರಸ್ಥಿಯಡಿ ಸರಿಪಡಿಸಲಾಗುತ್ತಿದ್ದು, ಪ್ರಸಕ್ತ ವರ್ಷದ ಮಳೆಗಾಲ ಸಹ ಪ್ರಾರಂಭವಾಗಿರುತ್ತದೆ. ಇದರಿಂದ ಮುಂದೆ ಸಂಭವಿಸಬಹುದಾದ ಅಪಾಯವನ್ನು ತಡೆಗಡ್ಡುವ ನಿಟ್ಟಿನಲ್ಲಿ ಹಾಗೂ ಭಾರಿ ವಾಹನ ಸಂಚಾರದಿಂದ ರಸ್ತೆಗೆ ಅಪಾಯವಾಗುವ ಸಾಧ್ಯತೆ ಇರುತ್ತದೆ. ಈ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ರಸ್ತೆಗಳು, ಸಾರ್ವಜನಿಕ […]

ಮಡಿಕೇರಿ ರಕ್ಷಣಾ ವೇದಿಕೆಯಿಂದ ಮುಖ್ಯಮಂತ್ರಿಗಳಿಗೆ ಮನವಿ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ

Tuesday, January 28th, 2020
rakshana-vedike

ಮಡಿಕೇರಿ : ಮಡಿಕೇರಿ ನಗರದ ಸ್ಟೋನ್‌ಹಿಲ್ ಮೇಲಿರುವ ತ್ಯಾಜ್ಯ ವಿಲೇವಾರಿ ಕೇಂದ್ರವನ್ನು ಸುರಕ್ಷಿತ ಮತ್ತು ಜನವಸತಿಯಿಂದ ದೂರವಿರುವ ಪ್ರದೇಶಕ್ಕೆ ಸ್ಥಳಾಂತರಿಸಿ ವೈಜ್ಞಾನಿಕ ರೂಪದಲ್ಲಿ ಕಸ ವಿಲೇವಾರಿಗೆ ಕ್ರಮ ಕೈಗೊಳ್ಳಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಡಿಕೇರಿ ರಕ್ಷಣಾ ವೇದಿಕೆಯ ಪ್ರಮುಖರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದರು. ಕೊಡಗು ಜಿಲ್ಲೆಯನ್ನು ಮಡಿಕೇರಿ ಜಿಲ್ಲೆಯೆಂದು ಕೆಲವು ಅಧಿಕಾರಿಗಳು ಉಲ್ಲೇಖಿಸುತ್ತಿದ್ದು, ಎಲ್ಲಾ ದಾಖಲೆ ಮತ್ತು ಸುತ್ತೋಲೆಗಳಲ್ಲಿ ಕೊಡಗು ಜಿಲ್ಲೆ ಎಂದೇ ಸ್ಪಷ್ಟವಾಗಿ ನಮೂದಿಸಲು ಸೂಚನೆ ನೀಡಬೇಕು. ನಗರದ ತ್ಯಾಜ್ಯ […]

ಕೊಡಗು ಜಿಲ್ಲೆಯ ಬಿಜೆಪಿ ನೂತನ ಜಿಲಾಧ್ಯಕ್ಷರಾಗಿ ರಾಬೀನ್ ದೇವಯ್ಯ

Sunday, January 12th, 2020
ಕೊಡಗು ಜಿಲ್ಲೆಯ ಬಿಜೆಪಿ ನೂತನ ಜಿಲಾಧ್ಯಕ್ಷರಾಗಿ ರಾಬೀನ್ ದೇವಯ್ಯ

ಮಂಗಳೂರು : ಕೊಡಗು ಜಿಲ್ಲಾ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಸಂಬಂದ ಪಟ್ಟಂತೆ ಮಂಗಳೂರು ವಿಭಾಗದ ವ್ಯಾಪ್ತಿಗೆ ಒಳಪಡುವುದರಿಂದ ಕೊಡಗು ಜಿಲ್ಲಾ ಬಿಜೆಪಿ ಅಧ್ಯಕ್ಷರ ಆಯ್ಕೆಯನ್ನು ಸಹ ಮಂಗಳೂರು ಕಚೇರಿಯಲ್ಲಿ ರಾಜ್ಯದ ಸೂಚನೆಯ ಮೇರೆಗೆ ಉಸ್ತುವಾರಿಗಳಾದ ಶ್ರೀ.ನಿರ್ಮಲ್ ಕುಮಾರ್ ಸುರಾಣ ಮತ್ತು ಕೊಡಗು ಜಿಲ್ಲಾ ಚುನಾವಣಾ ಸಹಾಯಕ ಅಧಿಕಾರಿಯಾಗಿರುವ ರವಿಕಾಳಪ್ಪರವರು , ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯ ಕುಮಾರ್ ಶೆಟ್ಟಿ, ಸಹಪ್ರಭಾರಿ ಗೋಪಾಲಕೃಷ್ಣ ಹೇರಳೆ ,ಜಿಲ್ಲೆಯ ಶಾಸಕರುಗಳಾದ ಕೆ.ಜಿ.ಬೋಪಯ್ಯ,, ಸುನೀಲ್ ಸುಬ್ರಮಣಿ, ಹಾಲಿ ಜಿಲ್ಲಾಧ್ಯಕ್ಷರಾದ ಭಾರತೀಶ್ ಮತ್ತಿತ್ತರ ಜಿಲ್ಲಾ […]

ಕಾರ್ಮಿಕ ನೀತಿ ವಿರುದ್ಧ ಕಾರ್ಮಿಕ ಸಂಘಟನೆಗಳಿಂದ ಕೊಡಗು ಜಿಲ್ಲೆಯಾದ್ಯಂತ ಬೃಹತ್ ಪ್ರತಿಭಟನೆ

Thursday, January 9th, 2020
madikeri

ಮಡಿಕೇರಿ : ಕೇಂದ್ರ ಸರ್ಕಾರ ಕಾರ್ಮಿಕ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ ಎಂದು ಆರೋಪಿಸಿ ವಿವಿಧ ಕಾರ್ಮಿಕ ಸಂಘಟನೆಗಳು ಜಿಲ್ಲೆಯಾದ್ಯಂತ ಪ್ರತಿಭಟನೆ ನಡೆಸಿದವು. ಮಡಿಕೇರಿ, ಸೋಮವಾರಪೇಟೆ ಹಾಗೂ ವಿರಾಜಪೇಟೆ ತಾಲ್ಲೂಕಿನಲ್ಲಿ ಪ್ರತಿಭಟನಾಕಾರರು ಮೆರವಣಿಗೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಕನಿಷ್ಠ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿದರು. ಮಡಿಕೇರಿ ನಗರದ ಫೀ.ಮಾ.ಕಾರ್ಯಪ್ಪ ವೃತ್ತದಿಂದ ಮೆರವಣಿಗೆ ಮೂಲಕ ಸಾಗಿದ ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಸಮಾವೇಶಗೊಂಡು ಬೇಡಿಕೆಯನ್ನು ಈಡೇರಿಸುವಂತೆ ಘೋಷಣೆಗಳನ್ನು ಕೂಗಿದರು. ರಾಷ್ಟ್ರೀಯ ಸಮಾನ […]

ಕೊಡಗು ಜಿಲ್ಲೆ ಮತ್ತು ಸಕಲೇಶಪುರ ಅತೀವೃಷ್ಠಿ ಪೀಡಿತರಿಗೆ ಕ್ಷೇತ್ರ ಧರ್ಮಸ್ಥಳದಿಂದ ರೂ. 10 ಕೋಟಿ ಬಿಡುಗಡೆ

Friday, September 7th, 2018
Veerendra-Hegde

ಧರ್ಮಸ್ಥಳ : ಇತ್ತೀಚೆಗೆ ಕೊಡಗು ಜಿಲ್ಲೆಯಲ್ಲಿ ಅತೀವೃಷ್ಠಿಯಿಂದ ಉಂಟಾಗಿರುವ ವ್ಯಾಪಕ ಹಾನಿಯ ಬಗ್ಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆಯವರು ಇಂದು ಧರ್ಮಸ್ಥಳದಲ್ಲಿ ವಿಶ್ಲೇಷಣೆ ನಡೆಸಿದರು. ಕೊಡಗು ಜಿಲ್ಲೆಯಲ್ಲಿ ಕುಟುಂಬಗಳಿಗೆ ಉಂಟಾಗಿರುವ ಹಾನಿಯ ಬಗ್ಗೆ ನಡೆಸಿದ ಸರ್ವೇಕ್ಷಣೆ ವರದಿಯನ್ನು ಕೊಡಗು ಜಿಲ್ಲೆಯ ನಿರ್ದೇಶಕ ಶ್ರೀ ಯೋಗೀಶ್‌ರವರು ನೀಡಿದರು. ಜಿಲ್ಲೆಯಲ್ಲಿ ಸುಮಾರು 1,715 ಯೋಜನೆಯ ಕುಟುಂಬಗಳಿಗೆ ವ್ಯಾಪಕವಾಗಿ ಹಾನಿಯಾಗಿದೆ. ಈ ಪೈಕಿ 1,000 ಕುಟುಂಬಗಳ ಮನೆಗಳು ಸಂಪೂರ್ಣವಾಗಿ ನಾಶವಾಗಿದೆ ಇಲ್ಲವೇ ಹಾನಿಯುಂಟಾಗಿದೆ. ಸುಮಾರು ರೂ. 2.50 ಕೋಟಿಯ ಉಪಕರಣಗಳು, ಬೆಲೆಬಾಳುವ ವಸ್ತುಗಳು ಕಣ್ಮರೆಯಾಗಿದೆ. […]