Blog Archive

ಮೈಸೂರು : ಕೊರೊನಾದಿಂದ ಮೃತ ತಂದೆಯ ಹೆಣ ಬೇಡ ಹಣ ಬೇಕು ಅಂದ ಮಗ

Sunday, May 23rd, 2021
Mysore corona

ಮೈಸೂರು: ತಂದೆಯ ಅಂತ್ಯಕ್ರಿಯೆ ನೀವೆ ಮುಗಿಸಿ. ಆದರೆ ತಂದೆಯ ಬಳಿ ಇರುವ 6 ಲಕ್ಷ ಹಣ ಹಾಗೂ ಇನ್ನಿತರೆ ದಾಖಲೆಗಳನ್ನು ತಂದು ಕೊಡಿ ಎಂದು ಕೊರೊನಾದಿಂದ ಮೃತಪಟ್ಟ ವ್ಯಕ್ತಿಯ ಮಗ ಹೇಳಿರುವ ಘಟನೆ ಮೈಸೂರಿನ ಹೆಬ್ಬಾಳದಲ್ಲಿ ನಡೆದಿದೆ. ತಂದೆಯ ಶವ ಕೂಡ ನೋಡಲು ಬಾರದ ಮಗ, ತಂದೆ ಶವ ಬೇಡ, ಹಣ ಬೇಕು ಎಂದು  ಆತನಿಗೆ ಕರೆ ಮಾಡಿ ವಿಷಯ ತಿಳಿಸಿದವರಿಗೆ ಹೇಳಿದ್ದಾನೆ, ತಂದೆ ಮನೆಯಲ್ಲಿ ಇಟ್ಟಿರುವ ಹಣವನ್ನು ನಾನು ಇರುವ ಸ್ಥಳಕ್ಕೆ ತಂದು ಕೊಡಿ. ತಂದೆಯ ಶವ ನೀವೇ ಸುಟ್ಟು ಹಾಕಿ, […]

ಉಳ್ಳಾಲ : ಸೋಮೇಶ್ವರ ದೇವಸ್ಥಾನದಲ್ಲಿ ಕೊರೊನಾ ನಿಯಮ ಉಲ್ಲಂಘಿಸಿ ಪಾಲ್ಗೊಂಡ ಸಾವಿರಾರು ಭಕ್ತರು

Tuesday, April 27th, 2021
Someshwara

ಮಂಗಳೂರು : ಉಳ್ಳಾಲದ ಸೋಮೇಶ್ವರ ದೇವಸ್ಥಾನದಲ್ಲಿ ಏಪ್ರಿಲ್ 26 ರ ರಾತ್ರಿ  ಬ್ರಹ್ಮಕಲಶೋತ್ಸವ ದ ರಥೋತ್ಸವದಲ್ಲಿ ಕೊರೊನಾ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಮಾಸ್ಕ್ ಧರಿಸದೇ ಜನರು ಗುಂಪಾಗಿ ಸೇರಿದ ಘಟನೆ ನಡೆದಿದೆ. ಈ  ವೇಳೆ  ಸಹಾಯಕ ಆಯುಕ್ತ(ಎಸಿ) ಮದನ್ ಮೋಹನ್ ದೇವಾಲಯದ ಆವರಣದ ಮೇಲೆ ದಾಳಿ ನಡೆಸಿ ನೆರೆದಿದ್ದ ಜನರನ್ನು ವಾಪಸ್ ಕಳುಹಿಸಿದ್ದಾರೆ. ಈ ದೇವಾಲಯವು ಕೊರೊನಾ ಮಾರ್ಗಸೂಚಿಯನ್ನು ಉಲ್ಲಂಘಿಸಿ ದೇವಸ್ಥಾನಕ್ಕೆ ನೂತನ ರಥ ಮತ್ತು ಹೊರೆ ಕಾಣಿಕೆ ಮೆರವಣಿಗೆ ನಡೆಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಮಾಸ್ಕ್ ಧರಿಸದೇ ಅಂತರ ಕಾಯ್ದುಕೊಳ್ಳದೇ […]

ನಾಳೆ (ಏಪ್ರಿಲ್ 27) ರಾತ್ರಿಯಿಂದ 14 ದಿನ ರಾಜ್ಯಾದ್ಯಂತ ಸಂಪೂರ್ಣ ಲಾಕ್ ಡೌನ್

Monday, April 26th, 2021
yedyurappa

ಬೆಂಗಳೂರು: ಕೊರೊನಾ 2 ನೇ ಅಲೆ ವ್ಯಾಪಿಸುತ್ತಿದ್ದಂತೆ ಕರ್ನಾಟಕ ಸರ್ಕಾರ ಎಚ್ಚೆತ್ತುಕೊಂಡಿದೆ. ಇದರ ನಿಯಂತ್ರಣಕ್ಕೆ ನಾಳೆ ರಾತ್ರಿಯಿಂದ 14 ದಿನ ರಾಜ್ಯಾದ್ಯಂತ ಮತ್ತಷ್ಟು ಬಿಗಿ ಕ್ರಮಗಳನ್ನು ಸರ್ಕಾರ ಕೈಗೊಂಡಿದೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಇಂದು ನಡೆದ ಮಹತ್ವದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಏಪ್ರಿಲ್ 27 ರಿಂದ 14 ದಿನ ರಾಜ್ಯಾದ್ಯಂತ ಸಂಪೂರ್ಣ ಲಾಕ್ ಡೌನ್ ಇರಲಿದೆ,   15 ದಿನದ ಬಳಿಕವೂ ಪರಿಸ್ಥಿತಿ ಮತ್ತೆ ಹತೋಟಿಗೆ ಬಾರದಿದ್ದಲ್ಲಿ ಮತ್ತೆ ಲಾಕ್ ಡೌನ್ ವಿಸ್ತರಣೆಯಾಗುವ ಸಾಧ್ಯತೆಯಿದೆ. […]

ಕೇರಳದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾದ ಹಿನ್ನೆಲೆ ; ಕರ್ನಾಟಕ ಪ್ರವೇಶ ನಿರ್ಬಂಧ

Monday, February 22nd, 2021
keralagate

ಮಂಗಳೂರು  : ಕೇರಳದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ವಯನಾಡ್ ಮತ್ತು ಕಾಸರಗೋಡು ಜಿಲ್ಲೆಯಲ್ಲಿರುವ 13  ಪ್ರವೇಶ ದ್ವಾರಗಳನ್ನು ಮುಚ್ಚಲು ನಿರ್ಧರಿಸಲಾಗಿದೆ. ಗಡಿಭಾಗ ತಲಪಾಡಿಯಲ್ಲಿ ಆರೋಗ್ಯ ಅಧಿಕಾರಿಗಳ ಪರಿಶೀಲನಾ ಕೇಂದ್ರ ಇಂದಿನಿಂದ ಮತ್ತೆ ಆರಂಭಗೊಂಡಿದ್ದು, ಆರ್ಟಿಪಿಸಿಆರ್ ವರದಿ ಇದ್ದರೆ ಮಾತ್ರ ನಾಳೆಯಿಂದ ಕರ್ನಾಟಕ ಪ್ರವೇಶಕ್ಕೆ ಅವಕಾಶ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲಾ ಆರೋಗ್ಯ ಅಧಿಕಾರಿ ರಾಮಕೃಷ್ಣ ಬಾಯರಿ, ತಹಶೀಲ್ದಾರ್ ಗುರುಪ್ರಸಾದ್ ನೇತೃತ್ವದ ತಂಡ ತಲಪಾಡಿ ಗಡಿಭಾಗದಲ್ಲಿ ನಿಂತು ಕೇರಳದಿಂದ ಬರುವವರನ್ನು ತಡೆದು ಟೆಸ್ಟ್ ವರದಿ ನೀಡುವಂತೆ […]

ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ಮೇಲ್ವಿಚಾರಕಿಯರಿಗೆ ಸ್ಮಾರ್ಟ್ ಫೋನ್ ವಿತರಣೆ

Saturday, January 2nd, 2021
smartPhone

ಮಂಗಳೂರು : ಕೋವಿಡ್-19 ಸಮಯದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಮೇಲ್ವಿಚಾರಕಿಯರು ಜೀವದ ಹಂಗು ತೊರೆದು , ಕೊರೊನಾ ನಿಯಂತ್ರಣಕ್ಕೆ ಮಹತ್ವದ ಪಾತ್ರ ವಹಿಸಿದ್ದಾರೆ ಎಂದು ಸಂಸದ ನಳೀನ್ ಕುಮಾರ್ ಕಟೀಲ್ ತಿಳಿಸಿದರು. ಅವರು ಇಂದು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ಮೇಲ್ವಿಚಾರಕಿಯರಿಗೆ ಸ್ಮಾರ್ಟ್‍ಫೋನ್ ವಿತರಣಾ ಕಾರ್ಯಕ್ರಮದಲ್ಲಿ ವಿತರಿಸಿ ಮಾತನಾಡಿದರು. ಪೋಷಣ ಅಭಿಯಾನ ಯೋಜನೆಯು ಕುಂಠಿತ ಬೆಳವಣಿಗೆ, ಅಪೌಷ್ಠಿಕತೆ, ರಕ್ತಹೀನತೆ, ಕಡಿಮೆ […]

ಸರ್ಕಾರದ ಪರಿಹಾರ ಹಣ ಕೊಡಿಸುತ್ತೇನೆಂದು, ಮಹಿಳೆಯ ಬೆಂಡೋಲೆ ಎಗರಿಸಿದ ಖದೀಮ

Monday, November 9th, 2020
jayanti

ಬಂಟ್ವಾಳ : ಕೊರೊನಾ ಸಂಕಷ್ಟದ ಸಮಯದಲ್ಲಿ ಜನರಿಗೆ  ಪರಿಹಾರ ರೂಪದಲ್ಲಿ ನೀಡುವ ಸರ್ಕಾರ ಹಣ  ಪಡೆಯಬೇಕೆಂದರೆ ಮೊದಲು ನಾವು ಹಣ ಕಟ್ಟಬೇಕು ಎಂದು ಹೇಳಿ ಮಹಿಳೆಯಿಂದ ಒಡವೆಗಳನ್ನು ತೆಗೆದುಕೊಂಡು ಹೋಗಿರುವ ಘಟನೆ ಬಂಟ್ವಾಳದ ಮಿನಿ ವಿಧಾನಸೌಧದ ಬಳಿ ನಡೆದಿದೆ. ವ್ಯಕ್ತಿಯೊಬ್ಬ ಮಹಿಳೆಯೊಂದಿಗೆ ಪರಿಚಿತನಂತೆ ನಟಿಸಿ, ಕೊರೊನಾ ಹಿನ್ನೆಲೆ ನಿಮಗೆ ಒಂದೂವರೆ ಲಕ್ಷ ರೂಪಾಯಿ ಹಣ ಬಂದಿದೆ. ಅದನ್ನು ಪಡೆಯಲು 10 ಸಾವಿರ ರೂಪಾಯಿ ಕಟ್ಟಬೇಕು. ಆಧಾರ್ ಕಾರ್ಡ್ ತೆಗೆದುಕೊಂಡು ಮಿನಿ ವಿಧಾನಸೌಧಕ್ಕೆ ಬನ್ನಿ, ಅರ್ಜಿ ನೀಡಬೇಕು ಎಂದು ಕರೆದು […]

ಕೊರೊನಾ ಪ್ರಕರಣ : ದ.ಕ.ಜಿಲ್ಲೆ – 265 ಸಾವು 5

Monday, October 12th, 2020
corona

ಮಂಗಳೂರು: ದ.ಕ.ಜಿಲ್ಲೆಯಲ್ಲಿ ಭಾನುವಾರ 265 ಜನರಲ್ಲಿ ಕೊರೊನಾ ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 26 ಸಾವಿರ ಗಡಿ ದಾಟಿದೆ. ಭಾನುವಾರ  ಪತ್ತೆಯಾಗಿರುವ ಕೊರೊನಾ ಪ್ರಕರಣಗಳು ಸೇರಿದಂತೆ ಜಿಲ್ಲೆಯಲ್ಲಿ ಸೋಂಕಿತ ಪ್ರಕರಣ ಸಂಖ್ಯೆ 26,529 ಕ್ಕೆ ಏರಿಕೆಯಾಗಿದೆ. ಕೊರೊನಾಗೆ ಭಾನುವಾರ  ಐವರು ಬಲಿಯಾಗಿದ್ದು, ಇದುವರೆಗೆ ಸೋಂಕಿಗೆ 605 ಜನರು ಸಾವನ್ನಪ್ಪಿದ್ದಾರೆ. ಇನ್ನು ಜಿಲ್ಲೆಯಲ್ಲಿ 4,180 ಸಕ್ರಿಯ ಪ್ರಕರಣಗಳಿವೆ. ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಾಗೂ ಹೋಮ್ ಐಸೋಲೇಷನ್ ನಲ್ಲಿದ್ದ 283 ಮಂದಿ ಗುುಣಮುಖರಾಗಿ […]

ಪ್ರೊ.ಅಮೃತ ಸೋಮೇಶ್ವರ ಅವರಿಗೆ 2020ರ ಡಾ. ಶಿವರಾಮ ಕಾರಂತ ಬಾಲವನ ಪ್ರಶಸ್ತಿ

Wednesday, October 7th, 2020
Amrutha Somehwara

ಮಂಗಳೂರು  : ಹಿರಿಯ ಸಾಹಿತಿ, ಜನಪದ ವಿದ್ವಾಂಸ, ನಿವೃತ್ತ ಪ್ರಾಧ್ಯಾಪಕ ಪ್ರೊ.ಅಮೃತ ಸೋಮೇಶ್ವರ ಅವರಿಗೆ 2020ರ ಡಾ. ಶಿವರಾಮ ಕಾರಂತ ಬಾಲವನ ಪ್ರಶಸ್ತಿ ಘೋಷಿಸಲಾಗಿದೆ. ಪುತ್ತೂರು ಸಹಾಯಕ ಆಯುಕ್ತ ಯತೀಶ್‌ ಉಳ್ಳಾಲ್‌ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ್ದಾರೆ.  ಅ.10ರಂದು ಇಲ್ಲಿನ ಬಾಲವನದಲ್ಲಿ ನಡೆಯಲಿರುವ ಡಾ. ಕಾರಂತರ ಜನ್ಮ ದಿನಾಚರಣೆ ಕಾರ‍್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.  ಅಪರಾಹ್ನ 2.30ಕ್ಕೆ ಕಾರ್ಯಕ್ರಮ ಆರಂಭಗೊಳ್ಳಲಿದೆ. ಕೊರೊನಾ ನಿಯಮಾವಳಿ ಹಿನ್ನೆಲೆಯಲ್ಲಿ ಈ ಬಾರಿ ಜನ್ಮದಿನಾಚರಣೆ ಸರಳವಾಗಿ ನಡೆಯಲಿದೆ. ಪ್ರೊ.ಅಮೃತ ಸೋಮೇಶ್ವರ ಖ್ಯಾತ […]

ಕೊರೊನಾ ಸೋಂಕಿತನಿಗೆ ಯುನಿಟಿ ಆಸ್ಪತ್ರೆ ನೀಡಿದ ಬಿಲ್ 2.97,518 ರೂ‌. ಆದರೆ ಪಿಪಿಇ ಕಿಟ್ ಉಚಿತ !

Friday, September 4th, 2020
ppeKit

ಮಂಗಳೂರು: ನಗರದ ಯುನಿಟಿ ಆಸ್ಪತ್ರೆ ಕೊರೊನಾ ಸೋಂಕಿತರೋರ್ವರಿಗೆ  11 ದಿನಗಳ ಕಾಲ ಚಿಕಿತ್ಸೆ ನೀಡಿ 2.97,518 ರೂ‌. ಬಿಲ್ ನೀಡಿದೆ. ಆದರೆ ಪಿಪಿಇ ಕಿಟ್ ಉಚಿತ  ಎಂದು 45,110 ರೂ‌. ರಿಯಾಯಿತಿ ನೀಡಿದ ಬಿಲ್ ಹಾಕಿ ಮತ್ತೆ ವಿನಾಯಿತಿ ಎಂದು ತೋರಿಸಿದೆ. ಸರ್ಕಾರದ ನಿಯಮವನ್ನೂ ಮೀರಿ ಖಾಸಗಿ ಆಸ್ಪತ್ರೆ ಗಳು ಸೋಂಕಿತರಿಂದ ವಸೂಲಿ ಮಾಡಲು ಇದು ಸುವರ್ಣಾವಕಾಶ ಎಂಬಂತೆ ವರ್ತಿಸಲಾರಂಭಿಸಿದೆ, ದೇಶದಲ್ಲಿ ಸಾಂಕ್ರಾಮಿಕ ರೋಗಗಳು ಬಂದಾಗ ಉಚಿತ ಚಿಕಿತ್ಸೆ ನೀಡಿ ಸರಕಾರದೊಂದಿಗೆ ಕೈಜೋಡಿಸಬೇಕಾದ ಖಾಸಗಿ ಆಸ್ಪತ್ರೆಗಳು, ಇದೆ ಸದಾವಕಾಶ ಎಂದು ರೋಗಿಗಳಿಂದ ದೋಚಲು ಆರಂಭಿಸಿದೆ. ಸರ್ಕಾರದ ನಿಯಮದಂತೆ ಕೊರೊನಾ ಸೋಂಕಿತರಿಗೆ […]

ಮಾಜಿ ಡಾನ್ ಎಕ್ಕೂರು ಬಾಬಾ ಕೊರೊನಾಗೆ ಬಲಿ

Friday, August 14th, 2020
Yekkuru Baba

ಮಂಗಳೂರು : ಮುಡಿಪು ಬಾರ್ ನಲ್ಲಿ ನಡೆದ ಪೃಥ್ವಿಪಾಲ್ ರೈ ಕೊಲೆ ಪ್ರಕರಣ ಸೇರಿದಂತೆ ಕೊಲೆ, ಕೊಲೆಯತ್ನ, ಹಫ್ತಾ ವಸೂಲಿ ಸೇರಿದಂತೆ ಹಲವು ಪ್ರಕರಣಗಳನ್ನು ಎದುರಿಸುತ್ತಿದ್ದ ಎಕ್ಕೂರು ಬಾಬಾ (61) ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಹಿಂದೂ ಯುವಸೇನೆಯಲ್ಲಿ ಗುರುತಿಸಿಕೊಂಡಿದ್ದ ಎಕ್ಕೂರು ಬಾಬಾ 1980 ರಲ್ಲಿ ತನ್ನದೇ ಗ್ಯಾಂಗ್ ಕಟ್ಟಿಕೊಂಡಿದ್ದ ಬಾಬಾ ಫೈನಾನ್ಸ್ ವ್ಯವಹಾರ, ವಸೂಲಿ  ಮಾಡುವುದರಲ್ಲಿ ಮುಂಚೂಣಿಯಲ್ಲಿತ್ತು, ಎಕ್ಕೂರು ಶೀನ ಬಾಬಾನ ಬಲಗೈ ಬಂಟ ನಂತಿದ್ದು ಹಲವಾರು ಪ್ರಕರಣಗಳಲ್ಲಿ ಸಹಾಯ ಮಾಡಿದ್ದ. ಲಿವರ್ ಕಾಯಿಲೆಯಿಂದ ಬಳಲುತ್ತಿದ್ದ ಶುಭಕರ ಶೆಟ್ಟಿ ನಿನ್ನೆ ರಾತ್ರಿ ಉಸಿರಾಟದ […]