Blog Archive

ಕೊರೊನಾ ನಿಯಂತ್ರಣಕ್ಕೆ ಸ್ವಯಂ ನಿಗಾ ಅನಿವಾರ್ಯ :  ದ.ಕ. ಜಿಲ್ಲಾಧಿಕಾರಿ ಸಿಂಧು ಬಿ.ರೂಪೇಶ್

Friday, March 20th, 2020
sindhu b roopesh

ಮಂಗಳೂರು :  ಕೊರೊನಾ ಸೋಂಕು ಹರಡದಂತೆ ತಡೆಗಟ್ಟಲು ಪ್ರತಿಯೊಬ್ಬರು ಸ್ವಯಂ ನಿಗಾ ಅಳವಡಿಸಿಕೊಳ್ಳಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧು ಬಿ.ರೂಪೇಶ್ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ಆರೋಗ್ಯ ಇಲಾಖೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ಶುಕ್ರವಾರ ನಗರದ ಪ್ರೆಸ್‍ಕ್ಲಬ್‍ನಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕೊರೊನಾ ವೈರಾಣು ಅತಿ ವೇಗವಾಗಿ ಹಬ್ಬುತ್ತದೆ. ಇದಕ್ಕೆ ತಕ್ಕ ಜನಸಾಮಾನ್ಯರು ಮುನ್ನೆಚ್ಚರಿಕೆ […]

ಕೊರೊನಾ ಶಮನಾರ್ಥ ನಾಳೆ ಶ್ರೀ ಕ್ಷೇತ್ರ ಕದ್ರಿಯಲ್ಲಿ ಧನ್ವಂತರಿ ಜಪ ಪಾರಾಯಣ ಹಾಗೂ ಸಾಮೂಹಿಕ ಪ್ರಾರ್ಥನೆ

Saturday, March 14th, 2020
kadri

ಮಂಗಳೂರು : ವಿಶ್ವದಾದ್ಯಾಂತ ವ್ಯಾಪಿಸಿರುವ ಮಾರಕ ಕಾಯಿಲೆ ಕೊರೊನಾದ ಶಮನಕ್ಕಾಗಿ ನಾಳೆ ತಾ.15. ಮಾರ್ಚ್, ರವಿವಾರ ಬೆಳಿಗೆ 6 ರಿಂದ ಕದ್ರಿ ಶ್ರೀ ಮಂಜುನಾಥ ದೇವಳದ ಪ್ರಾಂಗಣದಲ್ಲಿ ಧನ್ವಂತರಿ ಪಾರಾಯಣ, ರುದ್ರ ಪಠಣ, ವಿಷ್ಣು ಸಹಸ್ರನಾಮ ಹಾಗೂ 7.15ಕ್ಕೆಸಾಮೂಹಿಕ ಪ್ರಾರ್ಥನೆಯನ್ನು ಹಮ್ಮಿಕೊಳ್ಳಲಾಗಿದೆ. ಧಾರ್ಮಿಕ, ಸಾಮಾಜಿಕ ಪ್ರಮುಖರು ಹಾಗೂ ಗಣ್ಯರ ಉಪಸ್ಥಿತಿಯಲ್ಲಿ ಕಾರ್ಯಕ್ರಮ ಜರುಗಲಿದ್ದು ಸಾಮೂಹಿಕ ಪ್ರಾರ್ಥನೆಯಲ್ಲಿ ಸರ್ವರೂ ಸಹಭಾಗಿಗಳಾಗುವಂತೆ ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ಪ್ರಕಟನೆಯಲ್ಲಿ ವಿನಂತಿಸಿದ್ದಾರೆ.    

ಕೊರೊನಾ : ರಸ್ತೆ ಬದಿ ಫಾಸ್ಟ್ ಫುಡ್ ಅಂಗಡಿಗಳನ್ನು ತೆರವುಗೊಳಿಸಲು ಮನಪಾ ಆಯುಕ್ತರ ಆದೇಶ

Saturday, March 14th, 2020
ajith

ಮಂಗಳೂರು : ಮಾರ್ಚ್ 14 ಶನಿವಾರದಿಂದ ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬೀದಿ ಬದಿ ತಿಂಡಿ ತಿನಿಸು ವ್ಯಾಪಾರವನ್ನು ಸ್ಥಗಿತಗೊಳಿಸುವಂತೆ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರು ಶಾನಾಡಿ ಅಜಿತ್ ಕುಮಾರ್ ಹೆಗ್ಡೆ ಆದೇಶಿಸಿದ್ದಾರೆ. ಕೊರೊನಾ ವೈರಸ್‌ ಸಾಂಕ್ರಾಮಿಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಸಾರ್ವಜನಿಕ ಆರೋಗ್ಯದ ಹಾಗೂ ಸ್ವಚ್ಛತೆಯ ಹಿತ ದೃಷ್ಟಿಯಿಂದ ಎಲ್ಲಾ ರೀತಿಯ ಬೀದಿ ಬದಿ ತಿಂಡಿ ತಿನಿಸು ವ್ಯಾಪಾರವನ್ನು ಈ ಕೂಡಲೇ ಸ್ಥಗಿತಗೊಳಿಸಬೇಕು. ತಪ್ಪಿದ್ದಲ್ಲಿ ಸೋಮವಾರದಿಂದ ಪಾಲಿಕೆ ವತಿಯಿಂದ […]

ಕೊರೊನಾ ಭೀತಿ : ಶಬರಿಮಲೆ ಯಾತ್ರೆ ಮುಂದೂಡಲು ಸಲಹೆ

Wednesday, March 11th, 2020
shabari-male

ತಿರುವನಂತಪುರಂ : ದೇಶದಾದ್ಯಂತ ಕೊರೊನಾ ಕಳವಳ ಹೆಚ್ಚಾಗುತ್ತಿದ್ದು, ದೇವರ ನಾಡು ಕೇರಳ ಅಕ್ಷರಶಃ ನಲುಗಿದೆ. ಕೇರಳದಲ್ಲಿ ಇದುವರೆಗೆ 12 ಜನರಿಗೆ ಕೊರೊನಾ ಸೋಂಕು ಪ್ರಕರಣಗಳು ದೃಢವಾಗಿದ್ದು, ಇನ್ನಷ್ಟು ಜನರಿಗೆ ಹಬ್ಬದಂತೆ ಸರಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತಿದೆ. ಕೇರಳದಲ್ಲಿ ಹೊಸ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಮಾರ್ಚ್ 31ರವರೆಗೆ ಚಿತ್ರ ಮಂದಿರಗಳು, ಶಾಲೆ- ಕಾಲೇಜುಗಳನ್ನು ಮುಚ್ಚಲು ಆದೇಶಿಸಲಾಗಿದೆ. ಇದೇ ರೀತಿ ಧಾರ್ಮಿಕ ಉತ್ಸವಗಳು ಬೇಡ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಮನವಿ ಮಾಡಿದ್ದಾರೆ. ಇದೇ ವೇಳೆ ಧಾರ್ಮಿಕ ಕ್ಷೇತ್ರ […]