ಕೊರೊನಾ ಪಾಸಿಟಿವ್ ಇದ್ದ ಯುವಕ ಕಟ್ಟಡದಿಂದ ಹಾರಿ ಆತ್ಮಹತ್ಯೆ

Saturday, May 29th, 2021
Jumping

ಮಂಗಳೂರು : ಕೊರೊನಾ ಪಾಸಿಟಿವ್ ಇದ್ದ ಯುವಕನೋರ್ವ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಪಡೀಲ್ ಬಳಿ ಮೇ 27 ರ ಗುರುವಾರ ರಾತ್ರಿ ನಡೆದಿದೆ. ಮೃತ ಯುವಕನನ್ನು ಸಮೀರ್ (30)ಎಂದು ಗುರುತಿಸಲಾಗಿದೆ. ಪಡೀಲ್ ನ 7 ನೇ ಮಹಡಿಯ ಫ್ಲ್ಯಾಟ್ ನಿಂದ ಸಮೀರ್ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ಸಮೀರ್ ಅವಿವಾಹಿತರಾಗಿದ್ದು, ಮೃತದೇಹ ಪರೀಕ್ಷಿಸಿದಾಗ ಕೊರೊನಾ ಪಾಸಿಟಿವ್ ಆಗಿರುವುದು ತಿಳಿದುಬಂದಿದೆ. ಕಂಕನಾಡಿ ನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಕಾಸರಗೋಡು ಜಿಲ್ಲೆಯಲ್ಲಿ ರವಿವಾರ 75 ಮಂದಿಗೆ ಕೊರೊನಾ ಪಾಸಿಟಿವ್

Sunday, December 6th, 2020
CORONA

ಕಾಸರಗೋಡು : ಜಿಲ್ಲೆಯಲ್ಲಿ ರವಿವಾರ 75 ಮಂದಿಗೆ ಕೊರೊನಾ ಪಾಸಿಟಿವ್‌ ದೃಢಪಟ್ಟಿದೆ. ರವಿವಾರ ಕೊರೊನಾ ದೃಢಪಟ್ಟ 75 ಮಂದಿಯ ಪೈಕಿ 72 ಮಂದಿಗೆ ಪ್ರಾಥಮಿಕ ಸಂಪರ್ಕದಿಂದ ಸೋಂಕು ತಗುಲಿದೆ ಎಂದು ತಿಳಿದು ಬಂದಿದೆ. ರವಿವಾರ 110 ಮಂದಿ ಗುಣಮುಖರಾಗಿದ್ದು, ಇಲ್ಲಿಯವರೆಗೆ ಒಟ್ಟು 1,086 ಮಂದಿ ಗುಣಮುಖರಾಗಿದ್ದಾರೆ.

ಹಿರಿಯ ಕಾಂಗ್ರೆಸ್‌ ನಾಯಕ ಅಹ್ಮದ್ ಪಟೇಲ್ ನಿಧನ

Wednesday, November 25th, 2020
Ahmed Pateel

ಹೊಸದಿಲ್ಲಿ: ಹಿರಿಯ ಕಾಂಗ್ರೆಸ್‌ ನಾಯಕ ಅಹ್ಮದ್ ಪಟೇಲ್ (71 ವರ್ಷ) ಅವರು ಬುಧವಾರ ಮುಂಜಾನೆ 3.30ರ ಸುಮಾರಿಗೆ ನಿಧನರಾಗಿದ್ದಾರೆ. ಸೋನಿಯಾ ಗಾಂಧಿ ಆಪ್ತ ಎಂದೇ ಬಿಂಬಿತವಾಗಿದ್ದ ಕಾಂಗ್ರೆಸ್‌ನ ನಿಷ್ಠಾವಂತ ನಾಯಕ  ಅಹ್ಮದ್ ಪಟೇಲ್ ಕಳೆದ ತಿಂಗಳು ಕೊರೊನಾ ಪಾಸಿಟಿವ್‌ ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದ ಅಹ್ಮದ್‌ ಪಟೇಲ್ ಅವರು ಕೊರೊನಾ ಪಾಸಿಟಿವ್ ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದರಾದರೂ, ಬಹುಅಂಗಾಂಗ ವೈಫಲ್ಯದಿಂದ ಸಾವನ್ನಪ್ಪಿದ್ದಾರೆ. ಇದೀಗ ಅವರ ನಿಧನದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಅಹ್ಮದ್ ಪಟೇಲ್ ಸುದ್ದಿ ಅಘಾತವನ್ನುಂಟು […]

ಕೊರೊನಾ ಪಾಸಿಟಿವ್ : ದಕ್ಷಿಣ ಕನ್ನಡ 297, ಉಡುಪಿ ಜಿಲ್ಲೆ 209

Friday, August 28th, 2020
CORONA

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ 297ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಆ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 11389ಕ್ಕೆ ಏರಿಕೆಯಾಗಿದೆ. ಸದ್ಯ ಜಿಲ್ಲೆಯಲ್ಲಿ 2372 ಮಂದಿ ಕೊರೊನಾಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಇಂದು 257 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 8680 ಕ್ಕೆ ಏರಿಕೆಯಾಗಿದೆ. ಪ್ರಾಥಮಿಕ ಸಂಪರ್ಕದಿಂದ 61ಮಂದಿಗೆ ಸೋಂಕು ದೃಢಪಟ್ಟಿದೆ. 99 ಐಎಲ್‌ಐ ಪ್ರಕರಣಗಳಾಗಿದ್ದು, 14 ಸಾರಿ ಪ್ರಕರಣಗಳಾಗಿವೆ. ಈ ನಡುವೆ 123ಮಂದಿಯ ಸೋಂಕಿನ ಮೂಲ […]

ಕೊರೊನಾ ಪಾಸಿಟಿವ್ ಪ್ರಕರಣಗಳು : ದಕ್ಷಿಣ ಕನ್ನಡ ಜಿಲ್ಲೆ247 , ಉಡುಪಿ ಜಿಲ್ಲೆ 217 , ಕಾಸರಗೋಡು ಜಿಲ್ಲೆ 99

Wednesday, August 26th, 2020
corona

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ 247 ಮಂದಿಯಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಆ ಮೂಲಕ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 10774ಕ್ಕೆ ಏರಿಕೆಯಾಗಿದೆ. 247 ಮಂದಿ ಸೋಂಕಿತರ ಪೈಕಿ ಪ್ರಾಥಮಿಕ ಸಂಪರ್ಕದಿಂದ 85 ಮಂದಿಗೆ ಕೊರೊನಾ ದೃಢಪಟ್ಟಿದೆ. 72 ಐಎಲ್‌ಐ ಪ್ರಕರಣಗಳಾಗಿದ್ದು, 11 ಸಾರಿ ಪ್ರಕರಣಗಳಾಗಿವೆ. 78 ಮಂದಿಯ ಸೋಂಕಿನ ಸಂಪರ್ಕ ಪತ್ತೆಹಚ್ಚಲಾಗುತ್ತಿದೆ. ಮಂಗಳವಾರದಂದು 218 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಆ ಮೂಲಕ ಇಲ್ಲಿಯ ತನಕ 8136 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದಂತಾಗಿದೆ. ಮಂಗಳವಾರ […]

ಕೊರೊನಾ ಪಾಸಿಟಿವ್ : ದಕ್ಷಿಣ ಕನ್ನಡ ಜಿಲ್ಲೆ 234, ಸಾವು ನಾಲ್ಕು, ಉಡುಪಿ ಜಿಲ್ಲೆ 375, ಕಾಸರಗೋಡು ಜಿಲ್ಲೆ 174

Thursday, August 20th, 2020
coronavirus

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 234 ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಬುಧವಾರ 115 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ಬುಧವಾರದ ವರದಿ ಪ್ರಕಾರ  ಒಟ್ಟು ಸೋಂಕಿತರ ಸಂಖ್ಯೆ 9535ಕ್ಕೆ ಏರಿಕೆಯಾಗಿದೆ. ಈ ವರೆಗೆ  6942 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ಸದ್ಯ ದ.ಕ ಜಿಲ್ಲೆಯಲ್ಲಿ 2303 ಕೊರೊನಾ ಸಕ್ರಿಯ ಪ್ರಕರಣಗಳಿವೆ. ಇನ್ನು ಕೊರೊನಾ ಸೋಂಕಿಗೆ ಬುಧವಾರ ನಾಲ್ವರು ಸಾವನ್ನಪ್ಪಿದ್ದು, ಒಟ್ಟು ಸಾವಿನ ಸಂಖ್ಯೆ 290ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ ಸಂಪರ್ಕದಿಂದ 35 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. […]

ಕೊರೊನಾ ಪಾಸಿಟಿವ್ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 34, ಉಡುಪಿ ಜಿಲ್ಲೆಯಲ್ಲಿ 40 ಮಂದಿಯಲ್ಲಿ ಪತ್ತೆ

Monday, July 6th, 2020
corona positive

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ  34 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಉಡುಪಿ ಜಿಲ್ಲೆಯಲ್ಲಿ ಇಂದು 40 ಮಂದಿಯಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿದೆ ಸೋಮವಾರದಂದು  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 30 ಮಂದಿಯಲ್ಲಿ ಕೊರೊನಾ ಸೋಂಕಿತರು ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ದ.ಕ. ಜಿಲ್ಲೆಯಲ್ಲಿ ಒಟ್ಟು 1276 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಈ ಪೈಕಿ 584 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. 667 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಇಲ್ಲಿಯ ತನಕ 25 ಮಂದಿ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. […]

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ 97 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಪತ್ತೆ

Friday, July 3rd, 2020
corona- positive

ಮಂಗಳೂರು : ದಕ್ಷಿಣ ಕನ್ನಡ  ಜಿಲ್ಲೆಯಲ್ಲಿ ಶುಕ್ರವಾರ  97 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ಆ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಸಾವಿರದ ಗಡಿದಾಟಿ 1010 ಕ್ಕೆ ತಲುಪಿದೆ. ಶುಕ್ರವಾರದ ವರೆಗೆ 498 ಸಕ್ರಿಯ ಪ್ರಕರಣಗಳು ಇವೆ. 425 ಮಂದಿಯ ಪರೀಕ್ಷಾ ವರದಿ ಲಭ್ಯವಾಗಿದೆ. ದೊಡ್ಡ ಸಂಖ್ಯೆಯಲ್ಲಿ ಪರೀಕ್ಷಾ ವರದಿ ಲಭ್ಯವಾಗಿರುವ ಕಾರಣದಿಂದಾಗಿ 97 ಮಂದಿಯಲ್ಲಿ ಪಾಸಿಟಿವ್ ಕಂಡುಬಂದಿದೆ. ಉಳಿದಂತೆ 328 ಮಂದಿಯ ವರದಿ ನೆಗೆಟಿವ್ ಆಗಿದೆ. ದ.ಕ. ಜಿಲ್ಲೆಯಲ್ಲಿ  ಇದುವರೆಗೆ  503 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. […]

ಮಂಗಳೂರು ಕೊರೊನಾ ಆಸ್ಪತ್ರೆಯ 10 ವೈದ್ಯರಿಗೆ ಕೊರೊನಾ ಪಾಸಿಟಿವ್‌‌‌ ದೃಢ

Tuesday, June 30th, 2020
corona positive

ಮಂಗಳೂರು : ದ.ಕದಲ್ಲಿ ಮಂಗಳವಾರ 10 ವೈದ್ಯರಿಗೆ ಕೊರೊನಾ ಪಾಸಿಟಿವ್‌‌‌ ದೃಢಪಟ್ಟಿದೆ. ಕೆಎಂಸಿ  ಕೊರೊನಾ ಆಸ್ಪತ್ರೆಯ ಮುಖ್ಯ ವೈದ್ಯರೊಬ್ಬರಿಗೆ ಹಾಗೂ ಕೊರೊನಾ ವಿಭಾಗದ ಮುಖ್ಯಸ್ಥರಿಗೆ ಕೊರೊನಾ ಪಾಸಿಟಿವ್‌ ವರದಿಯಾಗಿದೆ. ಮುಖ್ಯ ವೈದ್ಯರು ಸೇರಿದಂತೆ ಕೊರೊನಾ ಆಸ್ಪತ್ರೆಯ ಹಲವು ವೈದ್ಯರಿಗೆ ಕೊರೊನಾ ಪಾಸಿಟಿವ್‌‌ ವರದಿಯಾಗಿದ್ದು, ಈ ಮೂಲಕ ಮಂಗಳವಾರ ದ.ಕ ಜಿಲ್ಲೆಯಲ್ಲಿ 44 ಕೊರೊನ ಪಾಸಿಟಿವ್ ಪತ್ತೆಯಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ 12 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಪತ್ತೆ

Monday, June 22nd, 2020
DK-corona

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 12 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಇರುವುದು  ಜೂನ್ 22, ಸೋಮವಾರ ವರದಿಯಾಗಿದೆ. ಹೊಸ ಪ್ರಕರಣಗಳ ಪೈಕಿ 11 ಮಂದಿ ವಿದೇಶದಿಂದ ಮರಳಿದವರಾಗಿದ್ದಾರೆ. ಒಬ್ಬರ ಪಾಸಿಟಿವ್ ಪ್ರಕರಣ ಐ ಎಲ್ ಐ ಎಂದು ಗುರುತಿಸಲಾಗಿದೆ. 7  ಪುರುಷರಲ್ಲಿ ಸೋಂಕು ದೃಢಪಟ್ಟರೆ,  45 ವರ್ಷದ ಓರ್ವ ಮಹಿಳೆಯಲ್ಲೂ ಪಾಸಿಟಿವ್ ಕಂಡುಬಂದಿದೆ. ಇಬ್ಬರು ಯುವಕರಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಈ ನಡುವೆ ಸೋಮವಾರದಂದು 257 ಮಂದಿಯ ವರದಿ ನೆಗೆಟಿವ್ ಬಂದಿದೆ.  ಹನ್ನೆರಡು ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ […]