ಅಕ್ಟೋಬರ್ 25ರಿಂದ 1ರಿಂದ 5ನೇ ತರಗತಿ ಶಾಲೆ ಆರಂಭ

Monday, October 18th, 2021
school re open

ಮಂಗಳೂರು : ಕೊರೋನಾ ಮಹಾಮಾರಿಯಿಂದ ಮುಚ್ಚಲಾಗಿದ್ದ ಶಾಲೆಗಳ ಆರಂಭ ಕ್ರಮವಾಗಿ ನಡೆಯುತ್ತಿದ್ದು ಇದೀಗ ಅಕ್ಟೋಬರ್ 25ರಿಂದ 1ರಿಂದ 5ನೇ ತರಗತಿ ಶಾಲೆ ಆರಂಭ ಆಗಲಿದೆ. ರಾಜ್ಯದಲ್ಲಿ ಕೊರೋನಾ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಾಲೆಗಳ ಆರಂಭಕ್ಕೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಒಪ್ಪಿಗೆ ನೀಡಿದ್ದರಿಂದ ಶಾಲೆ ಆರಂಭಿಸುವುದಕ್ಕೆ ಶಿಕ್ಷಣ ಇಲಾಖೆ ತೀರ್ಮಾನಿಸಿದೆ. ಇನ್ನು ಶಾಲೆಗಳ ಆರಂಭ ಕುರಿತಂತೆ ರಾಜ್ಯ ಸರ್ಕಾರ ಮಾರ್ಗಸೂಚಿ ಪ್ರಕಟಿಸಿದೆ. ಅದರಂತೆ ಮಕ್ಕಳನ್ನು ಶಾಲೆಗೆ ಕಳುಹಿಸಲು ಪೋಷಕರ ಅನುಮತಿ ಕಡ್ಡಾಯ. ಮಕ್ಕಳಿಗೆ ಶಾಲೆ ಹಾಜರಾತಿ ಕಡ್ಡಾಯವಿಲ್ಲ. ಶಿಕ್ಷಕರು ಮತ್ತು […]

ಸಾರ್ವಜನಿಕ ಗಣೇಶೋತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ  ಅವಕಾಶ ಕಲ್ಪಿಸಲಿ – ಕಲ್ಕೂರ

Monday, September 6th, 2021
Pradeep Kumar Kalkura

ಮಂಗಳೂರು  : ಕೊರೋನಾ ಸೋಂಕಿನ ಹಿನ್ನಲೆಯಲ್ಲಿ 5 ದಿನಗಳ ಕಾಲ ಸಾರ್ವಜನಿಕ ಗಣೇಶೋತ್ಸವ ಆಚರಿಸುವುದಕ್ಕೆ ಸರಕಾರ ಅನುಮತಿಯನ್ನು ಕಲ್ಪಿಸಿರುವುದು ಸ್ವಾಗತಾರ್ಹವಾಗಿದೆ ಎಂದು ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ತಿಳಿಸಿದ್ದಾರೆ. ಉತ್ಸವಾದಿ ಪೂಜಾ ಪ್ರಕ್ರಿಯೆಗಳ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳೂ ಅಷ್ಟೇ ಪ್ರಮುಖ ಪಾತ್ರವನ್ನು ವಹಿಸುತ್ತದೆ. ವೇದದ ಜತೆಗೆ ನಾದವಿದ್ದರಷ್ಟೇ ಪರಿಪೂರ್ಣತೆ. ಹಬ್ಬಗಳ ಆಚರಣೆಯ ಔಚಿತ್ಯ, ಯಕ್ಷಗಾನ, ನಾಟಕ, ಶಾಸ್ತಿçÃಯ ಸಂಗೀತ, ವಾದ್ಯ ಸಂಗೀತ ಉಪನ್ಯಾಸ, ಸಭಾಕಾರ್ಯಕ್ರಮ ಹೀಗೆ ಭಕ್ತಿಯ ತೃಷೆ ನೀಗಿಸುವುದರೊಂದಿಗೆ ಭಾವನಾತ್ಮಕ ಹಾಗೂ ಆಧ್ಯಾತ್ಮಿಕ […]

ರಾಜ್ಯದ ಮುನ್ನಡೆಯ ಬಗ್ಗೆ ಸರ್ಕಾರದ ಚಿಂತನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Sunday, August 15th, 2021
basavaraja Bommai

ಬೆಂಗಳೂರು :  “75ನೇ ಸ್ವಾತಂತ್ರ್ಯೋತ್ಸವ ಆಚರಿಸುವ ಸೌಭಾಗ್ಯ ಒದಗಿಬಂದಿದೆ. ಕನ್ನಡ ನಾಡು, ನುಡಿ, ಸಾಹಿತ್ಯ, ಆಡಳಿತ ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ದೇಶದಲ್ಲೇ ಮಾದರಿಯಾಗಿದೆ. 75 ವರ್ಷ ನಡೆದು ಬಂದ ದಾರಿ, ಇನ್ನೂ ನಡೆಯಬೇಕಾದ ದಾರಿಯ ಬಗ್ಗೆ ಚಿಂತನೆ ಮಾಡಬೇಕಿದೆ. ನಮ್ಮ ಸರ್ಕಾರ ಕೂಡ ಅದೇ ದಿಕ್ಕಿನಲ್ಲಿ ಚಿಂತನೆ ಮಾಡುತ್ತಿದೆ”- ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು “ಕೋವಿಡ್ ಮಾರ್ಗಸೂಚಿ ಪ್ರಕಾರ, ಅಂತರ ಕಾಪಾಡಿಕೊಂಡು ಸ್ವಾತಂತ್ರ್ಯ ದಿನ […]

ಮೂಲ್ಕಿ ತಾಲೂಕು ಪತ್ರಕರ್ತರ ಸಂಘದ ಅಧಿಕೃತ ರಚನೆಗೆ ಚಾಲನೆ

Friday, June 18th, 2021
Mulki Press

ಮಂಗಳೂರು : ರಾಜ್ಯದಲ್ಲಿ 100 ಕ್ಕೂ ಅಧಿಕ ಮಂದಿ ಪತ್ರಕರ್ತರು ಕೊರೋನಾ ಸಂಕಷ್ಟದ ಎರಡು ಅಲೆಗಳ ಸಂದರ್ಭದಲ್ಲಿ ಸಾವಿಗೀಡಾ ಗಿದ್ದಾರೆ ಎಂದು ಕರ್ನಾಟಕ ರಾಜ್ಯ ಕಾರ್ಯ ನಿರತ ಪತ್ರಕರ್ತರ ಸಂಘದ ರಾ ಜ್ಯಾಧ್ಯಕ್ಷ ಶಿವಾನಂದ ತಗಡೂರು ತಿಳಿಸಿದ್ದಾರೆ. ಅವರು ಮಂಗಳೂರು ಪ್ರೆಸ್ ಕ್ಲಬ್ ನಲ್ಲಿಂದು ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಸದಸ್ಯ ರನ್ನು ಭೇಟಿ ಮಾಡಿ. ಅಗಲಿದ ಪತ್ರಕರ್ತರಿಗೆ ಸಂತಾಪ ಸೂಚಿಸಿ ಮಾತನಾಡುತ್ತಿದ್ದರು. ಕೊರೋನಾ ಸಂದರ್ಭದಲ್ಲಿ ವ್ರತ್ತಿನಿರತ ಪತ್ರಕರ್ತರು ಸವಾಲುಗಳ ಮಧ್ಯೆ ಕಾರ್ಯ ನಿರ್ವಹಿಸಿದ್ದಾರೆ.ಈ […]

ಕೊರೋನಾ ನಡುವೆ ಜಿಲ್ಲಾಧಿಕಾರಿಗಳಿಗೆ ಹೈಟೆಕ್​ ಕಾರು ಕೊಡಿಸಿದ ಸರಕಾರ, ವಿರೋಧ ಪಕ್ಷಗಳ ವಿರೋಧ

Monday, June 14th, 2021
telangana

ಹೈದರಾಬಾದ್ :  ತೆಲಂಗಾಣ ಸರ್ಕಾರವು ತನ್ನ 32 ಹೆಚ್ಚುವರಿ ಜಿಲ್ಲಾಧಿಕಾರಿಗಳಿಗೆ ಹೈಟೆಕ್ ಕಾರು ಕೊಡಿಸಿ, ಬಂಪರ್ ಕೊಡುಗೆ ನೀಡಿದೆ. ರಾಜ್ಯವು ಸುಮಾರು 40,000 ಕೋಟಿ ರೂ.ಗಳ ಖೋತಾ ಬಜೆಟ್ಅನ್ನು ಎದುರಿಸುತ್ತಿರುವ ಸಂದರ್ಭದಲ್ಲಿ ಸಿಎಂ ಕೆ.ಚಂದ್ರಶೇಖರ್ ರಾವ್ ಅವರ ಈ ‘ದುಂದುವೆಚ್ಚ’ದ ಬಗ್ಗೆ ವಿರೋಧ ಪಕ್ಷಗಳು ವಿರೋಧ ವ್ಯಕ್ತಪಡಿಸಿದೆ. ಕರೊನಾ ಎರಡನೇ ಅಲೆಯಿಂದ ಆರ್ಥಿಕತೆ ತತ್ತರಿಸಿರುವ ಸಮಯದಲ್ಲಿ, ತಲಾ 25 ರಿಂದ 30 ಲಕ್ಷ ರೂಪಾಯಿ ಮೌಲ್ಯದ 32 ಕಿಯಾ ಕಾರ್ನಿವಲ್ ಕಾರುಗಳನ್ನು ತೆಲಂಗಾಣ ಸರ್ಕಾರ ಖರೀದಿಸಿದ್ದು, ಭಾನುವಾರ ಹೈದರಾಬಾದ್ನ […]

ದಕ್ಷಿಣ ಕನ್ನಡ ಮತ್ತು ಇತರ ಎಂಟು ಜಿಲ್ಲೆಗಳಲ್ಲಿ ಮತ್ತೆ ಒಂದು ವಾರ ಲಾಕ್ ಡೌನ್ ಮುಂದುವರಿಕೆ

Thursday, June 10th, 2021
Koata Srinivas

ಮಂಗಳೂರು : ರಾಜ್ಯದ ಎಂಟು ಜಿಲ್ಲೆಗಳಲ್ಲಿ ಕೊರೋನಾ ನಿಯಂತ್ರಣಕ್ಕೆ ಬಾರದೇ ಇರುವುದರಿಂದ ಮತ್ತೆ ಒಂದು ವಾರಗಳ ಕಾಲ ಲಾಕ್ ಡೌನ್ ಮುಂದುವರಿಯಲಿದೆ ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಬೆಳಗಾವಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಮೈಸೂರು, ಮಂಡ್ಯ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲಾಧಿಕಾರಿಗಳೊಂದಿಗೆ ಮುಖ್ಯಮಂತ್ರಿ ನಡೆಸಿದ ವಿಡಿಯೊ ಕಾನ್ಫರೆನ್ಸ್ ಬಳಿಕ ಅವರು ಮಂಗಳೂರಿನಲ್ಲಿ  ಮಾಧ್ಯಮದೊಂದಿಗೆ ಹೇಳಿದರು, ಜಿಲ್ಲೆಯಲ್ಲಿ ಒಂದು ವಾರ ಲಾಕ್ ಡೌನ್ ವಿಸ್ತರಿಸುವಂತೆ ಮುಖ್ಯಮಂತ್ರಿಗೆ ಮನವಿ ಮಾಡಿದ್ದೆವು. ಇದಕ್ಕೆ ಮುಖ್ಯಮಂತ್ರಿ ಒಪ್ಪಿಗೆ […]

ಮಹಾಮಾರಿಗೆ 5 ತಿಂಗಳ ಗರ್ಭಿಣಿ ಪೊಲೀಸ್ ಪೇದೆ ಬಲಿ

Tuesday, June 8th, 2021
chandrakala

ದಾವಣಗೆರೆ:  ಹೊನ್ನಾಳಿ ವೃತ್ತ ಕಚೇರಿಯಲ್ಲಿ ಕರ್ತವ್ಯದಲ್ಲಿದ್ದ 5 ತಿಂಗಳ ಗರ್ಭಿಣಿ ಪೇದೆ ಮಹಾಮಾರಿಗೆ ಕೊರೋನಾಗೆ ಬಲಿಯಾಗಿದ್ದಾರೆ. ಮಹಿಳಾ ಪೊಲೀಸ್ ಪೇದೆ ಚಂದ್ರಕಲಾ (34) ಮೃತರು. ದಾವಣಗೆರೆ ಜಿಲ್ಲೆ ಹೊನ್ನಾಳಿ ವೃತ್ತ ಕಚೇರಿಯಲ್ಲಿ ಚಂದ್ರಕಲಾ ಕರ್ತವ್ಯ ನಿರ್ವಹಿಸುತ್ತಿದ್ದರು. ಇವರ ಪತಿ ಓಜಪ್ಪ ಅವರು ಬಸವಾಪಟ್ಟಣ ಪೊಲೀಸ್‌ ಠಾಣೆ ಪೇದೆ ಯಾಗಿದ್ದಾರೆ. ಈ ದಂಪತಿಗಳು  ಇನ್ನು ನಾಲ್ಕು ತಿಂಗಳಲ್ಲಿ ಮಗುವಿನ ಆಗಮದ ಸಂಭ್ರಮದಲ್ಲಿದ್ದರು. 5 ತಿಂಗಳ ಗರ್ಭಿಣಿ ಚಂದ್ರಕಲಾ ಅವರಿಗೆ  10 ದಿನದ ಹಿಂದೆಯೇ ಕರೊನಾ ಸೋಂಕು ಕಾಣಸಿಕೊಂಡಿತ್ತು. ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ […]

ನಾವೂ ಕೊರೊನಾ ವಾರಿಯರ್ಸ್ ಅಲ್ಲವೆ? ಔಷಧಿ ವಿತರಕರ ಪ್ರಶ್ನೆ

Friday, June 4th, 2021
medical

ಹುಬ್ಬಳ್ಳಿ: ಆರೋಗ್ಯದಲ್ಲಿ ಏರು ಪೇರು ಕಂಡುಬಂದ ತಕ್ಷಣ ಜನರು ಹೋಗುವುದು ಮೆಡಿಕಲ್ ಸ್ಟೋರ್ ಗಳತ್ತ, ಹೀಗಿರುವಾಗ ಇದೀಗ ಕೊರೋನಾ ಹಾವಳಿಯಲ್ಲಿ ಸೋಂಕಿತರೆ ಹೆಚ್ಚಿನ ಸಂಖ್ಯೆಯಲ್ಲಿ ಔಷಧ ಖರೀದಿಗೆ ಬರುತ್ತಾರೆ. ಈ ವೇಳೆ ಫಾರ್ಮಸಿಸ್ಟ್‌ಗಳು ಹಾಗೂ ಅಲ್ಲಿನ ಕೆಲಸಗಾರರು ಸೋಂಕಿತರ ನೇರ ಸಂಪರ್ಕಕ್ಕೆ ಸಿಲುಕುವಂತಾಗಿದ್ದು. ಈ ಕಠಿಣ ಸ್ಥಿತಿಯಲ್ಲಿ ಕಾರ್ಯನಿರ್ವಹಿಸುವುದೇ ಸವಾಲಾಗಿದೆ ಎಂದು ಅಳಲು ತೋಡಿಕೊಳ್ಳುತ್ತಿದ್ದಾರೆ. ಸಣ್ಣಪುಟ್ಟ ಆರೋಗ್ಯ ಸಮಸ್ಯೆಯ ಜೊತೆಗೆ ಕೊರೊನಾ ಸೋಂಕಿನ ಲಕ್ಷಣ ಕಂಡು ಬಂದವರೂ ಔಷಧ ಖರೀದಿಗೆ ಮಳಿಗೆಗಳತ್ತ ಮೊದಲು ಧಾವಿಸುತ್ತಾರೆ. ಔಷಧ ಮಾರಾಟದ […]

ಸಚಿವರ ಉಪಸ್ಥಿತಿಯಲ್ಲಿಕೊರೋನಾ ನಿರ್ಮೂಲನೆಗಾಗಿ ಧನ್ವಂತರಿ ಹೋಮ

Thursday, June 3rd, 2021
Danwantari Homa

ಬೆಂಗಳೂರು  :  ಬೆಂಗಳೂರಿ‌ನ ಕೆಂಗೇರಿ ಉಪನಗರ ದಲ್ಲಿರುವ ಗಾಯತ್ರಿ ಮಂದಿರದಲ್ಲಿ ಕೆಂಗೇರಿ ಬ್ರಾಹ್ಮಣರ ಸಂಘದ ವತಿಯಿಂದ ಲೋಕ ಕಲ್ಯಾಣ ಹಾಗೂ ಕೊರೋನಾ ನಿರ್ಮೂಲನೆಗಾಗಿ ಧನ್ವಂತರಿ ಹೋಮ ಮಾಡಲಾಗಿದೆ. ಸಚಿವ ಎಸ್‌ ಟಿ ಸೋಮಶೇಖರ್ ಉಪಸ್ಥಿತಿಯಲ್ಲಿ ಕೊರೋನಾ ನಿರ್ಮೂಲನೆಗಾಗಿ ಹೋಮ ನಡೆಸಲಾಗಿದೆ.  ಹೋಮದಲ್ಲಿ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ ಭಾಗಿದ್ದರು,

ಮದುವೆಯಾದ ನಾಲ್ಕೇ ದಿನಕ್ಕೆ ಮದುಮಗಳನ್ನು ಬಲಿ ಪಡೆದ ಕೊರೋನಾ

Saturday, May 29th, 2021
Pooja

ಶಿವಮೊಗ್ಗ: ನವವಿವಾಹಿತೆಯೊಬ್ಬರು ಕೊರೋನಾ  ಮಹಾಮಾರಿಯಿಂದ ಜೀವ ಕಳೆದುಕೊಂಡಿದ್ದು, ಮದುವೆ ಖುಷಿಯಲ್ಲಿದ್ದ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ. ಮೇ 24ರ ಸೋಮವಾರದಂದು ವಿವಾಹವಾದ ನಾಲ್ಕೇ ದಿನಕ್ಕೆ ನವವಿವಾಹಿತೆ ಪೂಜಾ (27) ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಶಿವಮೊಗ್ಗದ ನಿದಿಗೆಯ ಪೂಜಾ ಹಾಗೂ ಹರಿಗೆಯ ಮಹೇಶ್ ಜೊತೆ ಸೋಮವಾರ ವಿವಾಹ ನಡೆದಿತ್ತು. ಸೋಮವಾರ ವಿವಾಹ ಗುರುವಾರ ಸಂಜೆ ಪೂಜಾ ಮೃತಪಟ್ಟಿದ್ದಾರೆ. ವಿವಾಹವಾದ ಎರಡೇ ದಿನಕ್ಕೆ ಪೂಜಾಗೆ ಮೈಕೈ ನೋವು ಕಾಣಿಸಿಕೊಂಡಿದೆ. ಹೀಗಾಗಿ ಅವರು ಮಲವಗೊಪ್ಪದ ಖಾಸಗಿ ಕ್ಲಿನಿಕ್ ನಲ್ಲಿ ಚಿಕಿತ್ಸೆ ಪಡೆದಿದ್ದರು.  ಈ […]