ಮಂಗಳೂರು : ಕೊರೋನಾ ಅಪ್ ಡೇಟ್ ನೀಡದ ಜಿಲ್ಲಾಡಳಿತ
Friday, April 3rd, 2020ಮಂಗಳೂರು : ಕೋವಿಡ್- 19 ದೃಢಪಟ್ಟು ನಗರದ ವೆನ್ಲಾಕ್ ಜಿಲ್ಲಾಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಬಗ್ಗೆ ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ಯಾವುದೇ ರೀತಿಯ ಮಾಹಿತಿ ನೀಡುತ್ತಿಲ್ಲ. ಜಿಲ್ಲಾಡಳಿತದಿಂದ ಬಿಡುಗಡೆಗೊಳ್ಳುವ ಹೆಲ್ತ್ ಬುಲೆಟಿನ್‌ನಲ್ಲಿ ಒಂದು ಬಾರಿಯಷ್ಟೇ ಸೋಂಕಿತರ ಆರೋಗ್ಯ ಸುಧಾರಿಸುತ್ತಿದೆ ಎಂದು ಮಾಹಿತಿ ನೀಡಲಾಗಿತ್ತು. ಈ ನಡುವೆ, ಕೋವಿಡ್- 19 ಪಾಸಿಟಿವ್ ಕಂಡುಬಂದ ಹಿನ್ನೆಲೆಯಲ್ಲಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 10 ತಿಂಗಳ ಶಿಶುವಿನ ಆರೋಗ್ಯ ಸುಧಾರಿಸುತ್ತಿರುವುದಾಗಿ ಮಗುವಿನ ಸಂಬಂಧಿಕರು ಹೇಳಿಕೊಂಡಿದ್ದಾರೆ. ಉಸಿರಾಟದ […]