ಕರ್ನಾಟಕದಲ್ಲಿ ಜೂನ್ 14 ರ ವರೆಗೆ ಲಾಕ್ ಡೌನ್ ಮುಂದುವರಿಕೆ

Thursday, June 3rd, 2021
bs Yedyurappa

ಬೆಂಗಳೂರು:  ರಾಜ್ಯದಲ್ಲಿ ಮತ್ತೆ ಒಂದು ವಾರ ಲಾಕ್ ಡೌನ್ ಮುಂದೂಡಲ್ಪಟ್ಟಿದ್ದು ಜೂನ್ 14 ರ ಬೆಳಿಗ್ಗೆ 6 ವರೆಗೆ ಈಗ ಇರುವ ನಿಯಮಗಳು ಯಥಾಸ್ಥಿತಿಯಲ್ಲಿ ಮುಂದುವರೆಯಲಿದೆ ಎಂದು ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ಲಾಕ್ ಡೌನ್ ವಿಸ್ತರಣೆ ಬಗ್ಗೆ ಜೂನ್ 03 ರಂದು ಸಂಜೆ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಯಡಿಯೂರಪ್ಪ, ಕೊರೋನಾ ನಿಯಂತ್ರಣಕ್ಕಾಗಿ ವಿಧಿಸಲಾಗಿಸಲಾಗಿರುವ ನಿಯಮಗಳಲ್ಲಿ ಸದ್ಯಕ್ಕೆ ಯಾವುದೇ ಸಡಿಲಿಕೆ, ಬದಲಾವಣೆಗಳೂ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಹೋಟೆಲ್  ಗಳಿಂದ ಪಾರ್ಸಲ್ ಪಡೆಯುವುದಕ್ಕೆ, ರಫ್ತು ಮಾಡುವುದಕ್ಕೆ ಅಗತ್ಯವಿರುವ ಚಟುವಟಿಕೆಗಳಿಗೆ ನಿರ್ಬಂಧವನ್ನು […]

ಲಾಕ್​ಡೌನ್ ವಿಸ್ತರಣೆ ಖಚಿತ, ಜೊತೆಗೆ ಬಿಗಿ ಕ್ರಮಗಳನ್ನು ಕೈಗೊಳ್ಳಲು ಸರಕಾರ ನಿರ್ಧರಿಸಿದೆ : ಮುಖ್ಯಮಂತ್ರಿ ಯಡಿಯೂರಪ್ಪ

Wednesday, June 2nd, 2021
CM Yedyurappa

ಬೆಂಗಳೂರು : ಕರ್ನಾಟಕದಲ್ಲಿ ಇನ್ನೂ ಕೊರೋನಾ ನಿಯಂತ್ರಣಕ್ಕೆ ಬಂದಿಲ್ಲ. ಹೀಗಾಗಿ, ಲಾಕ್ಡೌನ್ ವಿಸ್ತರಣೆ ಮಾಡಿ ಬಿಗಿ ಕ್ರಮಗಳನ್ನು ಕೈಗೊಳ್ಳಲು ನಿರ್ಧರಿಸಲಾಗಿದೆ. ಈ ಸಂಬಂಧ ಇಂದು ಸಂಜೆ ಸಚಿವರ ಜೊತೆ ಉನ್ನತ ಮಟ್ಟದ ಚರ್ಚೆ ನಡೆಸಿ, ಅಲ್ಲಿ ಅವರ ಸಲಹೆಗಳನ್ನು ಪಡೆದು ಮತ್ತಷ್ಟು ಕಠಿಣ ಕ್ರಮಗಳನ್ನು ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ರಾಜ್ಯದಲ್ಲಿ ಇನ್ನೂ ಕೊರೋನಾ ಕೇಸುಗಳು ನಿಯಂತ್ರಣಕ್ಕೆ ಬಂದಿಲ್ಲ. ಹೀಗಾಗಿ, ಲಾಕ್ಡೌನ್ ಮುಂದುವರಿಸಲಾಗುವುದು ಎಂದು ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ. ಲಾಕ್ಡೌನ್ನಿಂದಾಗಿ ಕೂಲಿ-ಕಾರ್ಮಿಕರಿಗೆ, ಅನೇಕ ಸಮುದಾಯಗಳಿಗೆ ತೊಂದರೆ […]