ತೀವ್ರ ಉಸಿರಾಟದ ಸಮಸ್ಯೆಯಿಂದ ಯುವಕ ಮೃತ ; ಗಂಟಲ ದ್ರವ ಕೊರೋನಾ ಪರೀಕ್ಷೆಗೆ

Wednesday, April 15th, 2020
Youth

ಮಂಗಳೂರು : ಯುವಕನೊಬ್ಬ ತೀವ್ರ ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ಕರೆದೊಯ್ಯುವ ದಾರಿಮಧ್ಯೆ ಮೃತಪಟ್ಟ ಘಟನೆ ಇಂದು ಸಂಜೆ ಸುರತ್ಕಲ್ ಸಮೀಪದ ಅಗರಮೇಲು ಎಂಬಲ್ಲಿ ನಡೆದಿದೆ. ಕೊರೋನಾ ಶಂಕೆಯ ಹಿನ್ನೆಲೆಯಲ್ಲಿ ಕೋವಿಡ್ ಆಸ್ಪತ್ರೆಯ ವೈದ್ಯರು ಆತನ ಗಂಟಲ ದ್ರವವನ್ನು ಪರೀಕ್ಷೆಗಾಗಿ ರವಾನಿಸಿದ್ದಾರೆ. 27ರ ಹರೆಯದ ಯುವಕನಿಗೆ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು ಮನೆಮಂದಿ ಆಸ್ಪತ್ರೆಗೆ ದಾಖಲಿಸಲು ಆಂಬುಲೆನ್ಸ್ ಕರೆಸಿದ್ದರು. ಆಂಬುಲೆನ್ಸ್ ನಲ್ಲಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ದಾರಿಮಧ್ಯೆ ಸಾವನ್ನಪ್ಪಿದ್ದಾರೆ. ವೆನ್ ಲಾಕ್ ಆಸ್ಪತ್ರೆಯಲ್ಲಿ ಮೃತ ಯುವಕನ ಗಂಟಲ ದ್ರವವನ್ನು ಸಂಗ್ರಹಿಸಿ […]

ಮಂಗಳೂರು : ಕೊರೋನಾ ಪರೀಕ್ಷೆ ನಡೆಸುವಂತೆ ಶಿಕ್ಷಕರಿಂದ ಒತ್ತಡ ; ದೂರು

Wednesday, March 4th, 2020
Corona

ಮಂಗಳೂರು : ಜಿಲ್ಲೆಯ ಕೆಲವು ಖಾಸಗೀ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಸಾಮಾನ್ಯ ಜ್ವರ ಬಂದರೂ, ಕೊರೋನಾ ಪರೀಕ್ಷೆ ನಡೆಸುವಂತೆ ಶಿಕ್ಷಕರು ಒತ್ತಡ ಹೇರುತ್ತಿರುವ ಬಗ್ಗೆ ದೂರುಗಳು ಬಂದಿದ್ದು, ಇದನ್ನು ನಿಲ್ಲಿಸಲು ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಸೂಚಿಸಿದ್ದಾರೆ. ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೋರೋನಾ ರೋಗ ಸಂಬಂಧ ಆರೋಗ್ಯ ಇಲಾಖೆ ಅಧಿಕಾರಿಗಳು, ವೈದ್ಯಕೀಯ ಕಾಲೇಜುಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೊರೋನಾ ಹಿನ್ನೆಲೆಯಲ್ಲಿ ಶಿಕ್ಷಣ ಸಂಸ್ಥೆಗಳಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆಗಳ ಬಗ್ಗೆ ಈಗಾಗಲೇ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. […]