ರಾಜ್ಯದಲ್ಲಿ ಶುಕ್ರವಾರ ಒಂದೇ ದಿನ ಒಟ್ಟು 248 ಕೊರೋನಾ ಪ್ರಕರಣಗಳು ದಾಖಲು
Friday, May 29th, 2020ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ ಒಂದೇ ದಿನ ಒಟ್ಟು 248 ಕೊರೋನಾ ಪ್ರಕರಣಗಳು ವರದಿಯಾಗಿವೆ. ಇದು ಇಲ್ಲಿಯವರೆಗೆ ದಾಖಲಾಗಿರುವ ಅತಿ ಹೆಚ್ಚಿನ ಸೋಂಕಿತ ಪ್ರಕರಣಗಳಾಗಿವೆ. ಇವರಲ್ಲಿ 227 ಜನರು ಅಂತಾರಾಜ್ಯ ಪ್ರಯಾಣದ ಇತಿಹಾಸ ಹೊಂದಿದ್ದಾರೆ. ಓರ್ವ ವ್ಯಕ್ತಿ ಅಂತಾರಾಷ್ಟ್ರೀಯ ಪ್ರಯಾಣದಿಂದ ಹಿಂದಿರುಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2781ಕ್ಕೇರಿಕೆಯಾಗಿದೆ. ಇಂದು ಒಂದೇ ದಿನ ರಾಜ್ಯದಲ್ಲಿ 60 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಇಲ್ಲಿಯವರೆಗೆ ಒಟ್ಟು 894 ಜನರು ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಸದ್ಯ 1837 ಸಕ್ರಿಯ ಪ್ರಕರಣಗಳಿವೆ. […]