ಕೊರೋನಾ ಸೋಂಕು ಭಾನುವಾರ : ದ.ಕ. ಜಿಲ್ಲೆಯಲ್ಲಿ 183- ಸಾವು 1, ಉಡುಪಿ ಜಿಲ್ಲೆ – 130

Sunday, September 5th, 2021
corona

ಮಂಗಳೂರು : ದ.ಕ. ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ಶೇ.1.70ಕ್ಕೆ ಇಳಿಕೆಯಾಗಿದ್ದು, ಭಾನುವಾರ 183 ಮಂದಿಗೆ ಹೊಸದಾಗಿ ಕೊರೋನಾ ಸೋಂಕು ತಗುಲಿದೆ,  ಓರ್ವ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ 221 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯ 1,11,058 ಸೋಂಕಿತರ ಪೈಕಿ 1,07,357 ಮಂದಿ ಕೊರೋನದಿಂದ ಮುಕ್ತರಾಗಿದ್ದಾರೆ. ಕೋವಿಡ್‌ಗೆ ಇಲ್ಲಿಯವರೆಗೆ 1,594 ಮಂದಿ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ 2107 ಸಕ್ರಿಯ ಪ್ರಕರಣಗಳಿವೆ. ಉಡುಪಿ ಜಿಲ್ಲೆಯಲ್ಲಿ ಭಾನುವಾರ 130 ಮಂದಿಯಲ್ಲಿ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 1432ಕ್ಕೇರಿದೆ. 70 ಮಂದಿ ಸೋಂಕಿನಿಂದ ಚೇತರಿಸಿಕೊಂಡರೆ, ಭಾನುವಾರ ಯಾರೂ ಸೋಂಕಿನಿಂದ […]

ದ.ಕ. ಜಿಲ್ಲೆಯಲ್ಲಿ4 ಬ್ಲ್ಯಾಕ್ ಫಂಗಸ್ ಪ್ರಕರಣಗಳು ಪತ್ತೆ

Saturday, June 5th, 2021
black fungus

ಮಂಗಳೂರು : ಕೊರೋನಾ ಸೋಂಕು ಸಕ್ರಿಯವಾಗಿರುವಾಗಲೇ ಮತ್ತೊಂದು ಅಪಾಯಕಾರಿ ರೋಗ ಬ್ಲ್ಯಾಕ್ ಫಂಗಸ್ ಜನರನ್ನು ಕಾಡುತ್ತಿದೆ.  ಗುರುವಾರ ದ.ಕ. ಜಿಲ್ಲೆಯಲ್ಲಿ4 ಬ್ಲ್ಯಾಕ್ ಫಂಗಸ್ ಪ್ರಕರಣಗಳು ಪತ್ತೆಯಾಗಿವೆ. ದ.ಕ. ಜಿಲ್ಲೆಯ ಒಬ್ಬರು, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆ ಹಾಗೂ ಕೇರಳದ ತಲಾ ಒಬ್ಬರಿಗೆ ಈ ರೋಗ ತಗುಲಿದೆ. ಪ್ರಸ್ತುತ ದ.ಕ.ಜಿಲ್ಲೆಯಲ್ಲಿ ಸದ್ಯ 43 ಬ್ಲ್ಯಾಕ್ ಫಂಗಸ್ ಪ್ರಕರಣಗಳು ಇದೆ. ಇದರಲ್ಲಿ 9 ದ.ಕ.ಜಿಲ್ಲೆಗೆ ಮತ್ತು 34 ಪ್ರಕರಣಗಳು ಹೊರಜಿಲ್ಲೆಗೆ ಸಂಬಂಧಿಸಿ ದ್ದಾಗಿದೆ. ಚಿಕಿತ್ಸೆ ಪಡೆಯುತ್ತಿದ್ದವರ ಪೈಕಿ ಒಬ್ಬರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. […]

ಕೊರೋನಾ ಸೋಂಕು ಹೆಚ್ಚಳ : 20 ಮಂದಿ ಕೈದಿಗಳನ್ನು ಬಿಡುಗಡೆ ಮಾಡಿದ ಜಿಲ್ಲಾ ಕಾರಾಗೃಹ

Friday, May 28th, 2021
mandya-jail

ಮಂಡ್ಯ:  ಸುಪ್ರೀಂ ಕೋರ್ಟ್‌ ಹಾಗೂ ಹೈಕೋರ್ಟ್‌ನ ನಿರ್ದೇಶನ ಮೇರೆಗೆ ಜಿಲ್ಲಾ ಕಾರಾಗೃಹದಿಂದ 20 ಮಂದಿ ಕೈದಿಗಳನ್ನುಬಿಡುಗಡೆ ಮಾಡಲಾಗಿದೆ. ಪ್ರಸ್ತುತ ಮಂಡ್ಯ ಜಿಲ್ಲಾ ಕಾರಾಗೃಹದಲ್ಲಿದ್ದ 20 ಮಂದಿಗೆ 45ದಿನಗಳ ಮಧ್ಯಂತರ ಜಾಮೀನು ದೊರಕಿದೆ. ಕೊರೊನಾ ಸೋಂಕು ನಿಮಿತ್ತ ಕೊಲೆ, ದರೋಡೆ, ಸಣ್ಣಪುಟ್ಟಪ್ರಕರಣಗಳು ಸೇರಿದಂತೆ 7 ವರ್ಷ ಮೇಲ್ಮಟ್ಟ ಶಿಕ್ಷೆಯಾಗುವ ಬಂಧಿತರನ್ನು ಹೊರತುಪಡಿಸಿ 7 ವರ್ಷದೊಳಗಿನ ಕಾರಾಗೃಹ ಶಿಕ್ಷೆಯಾಗುವ ನ್ಯಾಯಾಂಗ ಬಂಧಿತರಿಗೆ ಮಧ್ಯಂತರ ಜಾಮೀನು ನೀಡಲು ಸುಪ್ರಿಂಕೋರ್ಟ್‌ಹಾಗೂ ಹೈಕೋರ್ಟ್‌ ನಿರ್ದೇಶನ ನೀಡಿದೆ. ಆಮೇರೆಗೆ ಬಂಧಿತರು ಜಿಲ್ಲಾ ಕಾನೂನುಸೇವೆಗಳ ಪ್ರಾ ಧಿಕಾರಕ್ಕೆ […]

ಪತ್ನಿ ಸಾವಿನ ನಾಲ್ಕೇ ದಿನದಲ್ಲಿ, ಸ್ಯಾಕ್ಸೊಫೋನ್ ಕಲಾವಿದ ಮಚ್ಚೇಂದ್ರನಾಥ್ ಜೋಗಿ ಮೃತ್ಯು

Sunday, May 23rd, 2021
Machendranath

ಮಂಗಳೂರು : ಮಂಗಳಾದೇವಿ ದೇವಸ್ಥಾನದಲ್ಲಿ ಸುಮಾರು ಮೂವತ್ತ ನಾಲ್ಕು ವರ್ಷಗಳಿಂದ ಸ್ಯಾಕ್ಸೊಫೋನ್ ಕಲಾವಿದ ರಾಗಿದ್ದ, ಅಂತರರಾಷ್ಟ್ರೀಯ ಸ್ಯಾಕ್ಸೊಫೋನ್ ಕಲಾವಿದ ಮಚ್ಚೇಂದ್ರನಾಥ್ ಜೋಗಿ ಅವರು ಕೊರೋನಾ ಸೋಂಕು ಬಾಧಿತರಾಗಿ ಭಾನುವಾರ ಮದ್ಯಾಹ್ನ ನಿಧನರಾಗಿದ್ದಾರೆ. ಅವರಿಗೆ 66 ವರ್ಷ ವಯಸ್ಸಾಗಿತ್ತು. ಅವರ ಪತ್ನಿ ಸುಶೀಲಾ ಮಚ್ಚೇಂದ್ರನಾಥ್ ಅವರು ನಾಲ್ಕು ದಿನದ ಹಿಂದೆ ಮೇ 19ರಂದು ಕೊರೋನಾ ಸೋಂಕಿಗೆ ತುತ್ತಾಗಿ ಮೃತರಾಗಿದ್ದರು. ಗಂಡ ಹೆಂಡತಿ ಇಬ್ಬರು ಕೊರೋನಾ ಸೋಂಕು ಕಾಣಿಸಿಕೊಂಡು ದೇರಳಕಟ್ಟೆಯ ಕೆ.ಯಸ್ ಹೆಗ್ಡೆ ಆಸ್ಪತ್ರೆಯಲ್ಲಿ ಮೇ  ಮೊದಲ ವಾರದಿಂದ  ಚಿಕಿತ್ಸೆ ಪಡೆಯುತ್ತಿದ್ದರು. ಕಳೆದ ಬುಧವಾರ […]

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ 272 ಮಂದಿಗೆ ಕೊರೋನಾ ಸೋಂಕು ಪತ್ತೆ

Monday, April 19th, 2021
corona

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ  272 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಜಿಲ್ಲೆಯಲ್ಲಿ ರವಿವಾರ 131 ಮಂದಿ ಕೊರೋನಾದಿಂದ ಗುಣಮುಖರಾಗಿದ್ದಾರೆ. ಕೊರೋನಾಗೆ ಜಿಲ್ಲೆಯಲ್ಲಿ ಈವರೆಗೆ 744 ಮಂದಿ ಬಲಿಯಾಗಿದ್ದಾರೆ. ದ. ಕ.ಜಿಲ್ಲೆಯಲ್ಲಿ ಈವರೆಗೆ ಒಟ್ಟು 38,143 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಪ್ರಸ್ತುತ ಜಿಲ್ಲೆಯಲ್ಲಿ ಒಟ್ಟು 1,764 ಸಕ್ರಿಯ  ಕೇಸ್ ಗಳಿವೆ. ಕಾಸರಗೋಡು ಜಿಲ್ಲೆಯಲ್ಲಿ ಭಾನುವಾರ 622 ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಈವರೆಗೆ 37,372 ಮಂದಿ ಗೆ ಸೋಂಕು ದೃಢಪಟ್ಟಿದೆ.

ಕರ್ನಾಟಕ ಯಕ್ಷಗಾನ, ಬಯಲಾಟ ಅಕಾಡೆಮಿ ಅಧ್ಯಕ್ಷ ಎಂ.ಎ.ಹೆಗಡೆ ಕೊರೋನಾ ಸೋಂಕಿನಿಂದ ನಿಧನ

Sunday, April 18th, 2021
MA Hegde

ಶಿರಸಿ : ಕರ್ನಾಟಕ ಯಕ್ಷಗಾನ, ಬಯಲಾಟ ಅಕಾಡೆಮಿ ಅಧ್ಯಕ್ಷ ಎಂ.ಎ.ಹೆಗಡೆ (74) ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. ಏಪ್ರಿಲ್ 13 ರಂದು ಕೊರೋನಾ ಸೋಂಕು ತಗುಲಿದ್ದು, ತೀವ್ರ ಉಸಿರಾಟದ ತೊಂದರೆಯಿಂದ ಎಂ.ಎ.ಹೆಗಡೆ ಭಾನುವಾರ ಬೆಳಗ್ಗೆ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಎಂ.ಎ.ಹೆಗಡೆ ಅವರು ಸಿದ್ದಾಪುರ ತಾಲೂಕಿನ ಜೋಗಿಮನೆಯವರಾಗಿದ್ದು 1948ರಲ್ಲಿ ಜನಿಸಿದರು. ಇಲ್ಲಿನ ಹೆಗ್ಗರಣಿಯಲ್ಲಿ ಪ್ರಾಥಮಿಕ ಶಿಕ್ಷಣ ಪಡೆದ ಹೆಗಡೆ ಅವರು ಶಿರಸಿಯಲ್ಲಿ ಪದವಿ ಪಡೆದು ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಸಂಸ್ಕೃತದಲ್ಲಿ ಸ್ನಾತಕೋತ್ತರ ಪದವಿ ಪಡೆದರು. ಬಳಿಕ ಪ್ರಾಧ್ಯಾಪಕರಾಗಿಯೂ ಅವರು ಕಾರ್ಯನಿರ್ವಹಿಸಿದರು. ಯಕ್ಷಗಾನ ಅವರ ಹವ್ಯಾಸವಾಗಿದ್ದು […]

ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಕೊರೋನಾ ಸೋಂಕು ದೃಢ

Saturday, April 10th, 2021
kota

ಉಡುಪಿ : ಕೇರಳ ರಾಜ್ಯದಲ್ಲಿ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಊರಿಗೆ ಬಂದಿದ್ದ ರಾಜ್ಯ ಮುಜರಾಯಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಕೋವಿಡ್-19 ಸೋಂಕು ತಗಲಿರುವುದು ದೃಢಪಟ್ಟಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವರು, ಕೋವಿಡ್-19 ಪಾಸಿಟಿವ್ ಕಾರಣಕ್ಕೆ ನಾನು ಆಸ್ಪತ್ರೆಗೆ ದಾಖಲಾಗಿದ್ದು, ಅನಿವಾರ್ಯವಾದರೆ ದೂರವಾಣಿ ಮೂಲಕ ಸಂಪರ್ಕಿಸಬಹುದು. ಒಂದೆರಡು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್-19 ಟೆಸ್ಟ್ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ. […]

ಕೊರೋನಾ ಸೋಂಕು : ದಕ್ಷಿಣ ಕನ್ನಡ – 447, ಸಾವು 7 ಮಂದಿ, ಉಡುಪಿ – 207

Wednesday, October 7th, 2020
corona

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಬುಧವಾರ 447 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ, 7 ಮಂದಿ ಸಾವನ್ನಪ್ಪಿದ್ದಾರೆ.  ಉಡುಪಿ ಜಿಲ್ಲೆಯಲ್ಲಿ ಬುಧವಾರ ಹೊಸದಾಗಿ 207 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ಜಿಲ್ಲೆಯಲ್ಲಿ ಮೃತರ ಸಂಖ್ಯೆ ಜಿಲ್ಲೆಯಲ್ಲಿ 588ಕ್ಕೆ ತಲುಪಿದೆ. ಈ ನಡುವೆ ಗುಣಮುಖರಾದವರ ಸಂಖ್ಯೆ ಉತ್ತಮವಾಗಿದ್ದು, ಬುಧವಾರ ಒಂದೇ ದಿನ 1,214 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಇದರೊಂದಿಗೆ ದ.ಕ. ಜಿಲ್ಲೆಯಲ್ಲಿ ಇಲ್ಲಿಯ ತನಕ ಗುಣಮುಖರಾದವರ ಸಂಖ್ಯೆ 20 ಸಾವಿರಕ್ಕೇರಿದೆ. ಆ ಮೂಲಕ ಜಿಲ್ಲೆಯಲ್ಲಿ ಇಲ್ಲಿಯ ತನಕ […]

ಕೊರೋನಾ ಸೋಂಕು : ದಕ್ಷಿಣ ಕನ್ನಡ – 380, ಉಡುಪಿ – 293, ಕಾಸರಗೋಡು – 208

Sunday, September 20th, 2020
Corona

ಮಂಗಳೂರು : ದ.ಕ. ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ರವಿವಾರದಂದು 380 ಏರಿಕೆಯಾಗಿದೆ . ಆ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 20 ಸಾವಿರ ದಾಟಿದೆ. ರವಿವಾರದಂದು ದ.ಕ. ಜಿಲ್ಲೆಯಲ್ಲಿ 127 ಮಂದಿಯಲ್ಲಿ ಪ್ರಾಥಮಿಕ  ಸಂಪರ್ಕದಿಂದ ಸೋಂಕು ದೃಢಪಟ್ಟಿದೆ. 139 ಮಂದಿಯಲ್ಲಿ ಐಎಲ್ ಐ ಕೇಸ್ ದೃಢಪಟ್ಟಿದೆ. 8 ಮಂದಿಯಲ್ಲಿ ಸಾರಿ ಕೇಸ್ ಪತ್ತೆಯಾಗಿದ್ದು, 106 ಮಂದಿಯ ಸೋಂಕಿನ ಮೂಲ ಪತ್ತೆ ಹಚ್ಚಲಾಗುತ್ತಿದೆ. ರವಿವಾರ ಉಡುಪಿ ಜಿಲ್ಲೆಯಲ್ಲಿ ಒಟ್ಟು 293 ಮಂದಿಯಲ್ಲಿ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ […]

ಕೊರೋನಾ ಸೋಂಕು ಆಗಸ್ಟ್ 9 : ದಕ್ಷಿಣ ಕನ್ನಡ 132, ಸಾವು 6, ಉಡುಪಿ 282

Monday, August 10th, 2020
corona

ಮಂಗಳೂರು : ದಕ್ಷಿಣ ಕನ್ನಡದಲ್ಲಿ ರವಿವಾರ 132 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ಇದರಿಂದ ಸೋಂಕಿತರ ಸಂಖ್ಯೆ 7207ಕ್ಕೆ ಏರಿಕೆಯಾಗಿದೆ ಜಿಲ್ಲೆಯಲ್ಲಿ ರವಿವಾರ 195 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಜಿಲ್ಲೆಯಲ್ಲಿ ಸದ್ಯ 3305 ಕೊರೋನಾ ಸಕ್ರಿಯ ಪ್ರಕರಣಗಳಿವೆ. ಆ ಮೂಲಕ ಒಟ್ಟು ಬಿಡುಗಡೆಯಾದವರ ಸಂಖ್ಯೆ 3682ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ರವಿವಾರ ಮತ್ತೆ 6 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ರವಿವಾರ 282 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 6201ಕ್ಕೆ ಏರಿಕೆಯಾಗಿದೆ. ರವಿವಾರ ಉಡುಪಿ ತಾಲೂಕಿನ […]