ದ.ಕ. ಜಿಲ್ಲೆಯಲ್ಲಿ ಕೊರೋನ ವೈರಸ್ ಸೋಂಕಿನಿಂದ ಶನಿವಾರ ಮೂವರು ಬಲಿ

Saturday, July 4th, 2020
corona-death

ಮಂಗಳೂರು : ದ.ಕ. ಜಿಲ್ಲೆಯಲ್ಲಿ ಕೊರೋನ ವೈರಸ್  ಸೋಂಕಿನಿಂದ ಶನಿವಾರ  ಮೂವರು ಮೃತಪಟ್ಟಿದ್ದಾರೆ. ಈ ಮೂಲಕ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 22ಕ್ಕೆ ಏರಿಕೆಯಾಗಿದೆ. ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿ, ಹೃದಯಾಘಾತದಿಂದ ಮೃತಪಟ್ಟ ಸುಳ್ಯದ ಕೆರೆಮೂಲೆಯ ಮಹಿಳೆಯ ಕೊರೋನ ಪರೀಕ್ಷೆಯ ವರದಿ ನಿನ್ನೆ ರಾತ್ರಿ ಪಾಸಿಟಿವ್ ಬಂದಿದೆ. ಶನಿವಾರ  ಮುಂಜಾನೆ ಕೂಳೂರು ಹಾಗೂ ಕೋಡಿಕಲ್ ನ ಇಬ್ಬರು ಕೊರೋನ ಸೋಂಕಿತರು ವೆನ್ಲಾಕ್ ಕೊವೀಡ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇದರಲ್ಲಿ ಒಬ್ಬರು ಮಹಿಳೆ ಮತ್ತು ಇನ್ನೊಬ್ಬರು ಪುರುಷ ಸೇರಿದ್ದಾರೆ.

ಮಂಗಳೂರು : ರಾಜ್ಯ ಸರಕಾರದ ಆದೇಶ ಕಟ್ಟುನಿಟ್ಟಾಗಿ ಪಾಲಿಸಲು ಡಿಸಿ ಸೂಚನೆ

Saturday, March 14th, 2020
Sindhu-B-Rupesh

ಮಂಗಳೂರು : ಕೊರೋನ ವೈರಸ್ ಹಿನ್ನೆಲೆಯಲ್ಲಿ ರಾಜ್ಯ ಸರಕಾರವು ಸಾರ್ವಜನಿಕ ಸ್ಥಳಗಳಲ್ಲಿ ಕೆಲವು ನಿರ್ಬಂಧಗಳನ್ನು ಹೇರಿದ್ದು, ಇವುಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ದ.ಕ. ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಸೂಚಿಸಿದ್ದಾರೆ. ಮಾಲ್ ಗಳು, ಚಿತ್ರಮಂದಿರ, ನಾಟಕ, ರಂಗಮಂದಿರ, ಪಬ್, ನೈಟ್ ಕ್ಲಬ್ ಗಳು, ವಸ್ತುಪ್ರದರ್ಶನ, ಸಂಗೀತ ಕಾರ್ಯಕ್ರಮಗಳು, ಮ್ಯಾರಥಾನ್, ಹೆಚ್ಚಿನ ಸಂಖ್ಯೆಯಲ್ಲಿ ಪ್ರೇಕ್ಷಕರು ಭಾಗವಹಿಸುವ ಕ್ರೀಡಾಕೂಟಗಳು, ಹೆಚ್ಚು ಜನರು ಭಾಗವಹಿಸುವ ಮದುವೆಗಳನ್ನು ರಾಜ್ಯ ಸರಕಾರ ನಿರ್ಬಂಧಿಸಿದೆ. ಜಾತ್ರೆ, ಧಾರ್ಮಿಕ ಕಾರ್ಯಕ್ರಮಗಳಲ್ಲಿ ಕಡಿಮೆ ಸಂಖ್ಯೆಯಲ್ಲಿ ಸಾರ್ವಜನಿಕರು ಸೇರುವಂತೆ ಆಯೋಜಕರು ಗಮನಹರಿಸಬೇಕು. ಹೆಚ್ಚು […]