ರವಿವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾಜ್ಯದಲ್ಲೇ ಹೆಚ್ಚು 410 ಕೊರೊನಾ ಸೋಂಕು ಪತ್ತೆ, 6 ಮಂದಿ ಸಾವು, ಉಡುಪಿ ಜಿಲ್ಲೆ 162
Sunday, August 1st, 2021ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೋನ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿದ್ದು ರಾಜ್ಯದಲ್ಲಿ ರವಿವಾರ ಪತ್ತೆಯಾದ ಕೇಸುಗಳ ಪಟ್ಟಿಯಲ್ಲಿ ದ.ಕ. ಜಿಲ್ಲೆಯಲ್ಲಿ ಅತಿಹೆಚ್ಚು (410) ಪಾಸಿಟಿವ್ ಪ್ರಕರಣ ವರದಿಯಾಗಿವೆ. ದ.ಕ. ಜಿಲ್ಲೆಯಲ್ಲಿ ರವಿವಾರ 410 ಮಂದಿಗೆ ಕೋವಿಡ್ ಸೋಂಕು ತಗುಲಿದೆ. ಇದೇ ವೇಳೆ 6 ಮಂದಿ ಸಾವನ್ನಪ್ಪಿದ್ದು, 264 ಮಂದಿ ಗುಣಮುಖರಾಗಿದ್ದಾರೆ. ಸದ್ಯ 2,943 ಸಕ್ರಿಯ ಪ್ರಕರಣಗಳಿವೆ. ಜಿಲ್ಲೆಯಲ್ಲಿ ಇದುವರೆಗೆ 1,00,780 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, 1,430 ಮಂದಿ ಸಾವನ್ನಪ್ಪಿದ್ದಾರೆ. 96,407 ಮಂದಿ ಗುಣಮುಖ ರಾಗಿದ್ದಾರೆ. ಒಟ್ಟು […]