ದ್ವಿಚಕ್ರ ವಾಹನಕ್ಕೆ ಫಾರ್ಚುನರ್ ಡಿಕ್ಕಿ, ಯುವತಿ ಸಾವು

Sunday, November 29th, 2020
Shreya

ಕೋಟ: ದ್ವಿಚಕ್ರ ವಾಹನಕ್ಕೆ ಫಾರ್ಚುನರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿಯಲ್ಲಿದ್ದ ಬೇಳೂರು ನಿವಾಸಿ ಶ್ರೇಯಾ ಶಾನುಭಾಗ್ (24) ಮೃತಪಟ್ಟಿದ್ದು, ಆಕೆಯ ಸ್ನೇಹಿತೆ ಉಜಿರೆ ಮೂಲದ ಕುಂದಾಪುರ ಕೋಡಿಯ ಪ್ರಜ್ಞಾ (25)ಸ್ಥಿತಿ ಚಿಂತಾಜನಕವಾಗಿದೆ. ಕೋಟದ ರಾಷ್ಟ್ರೀಯ ಹೆದ್ದಾರಿ ಕೃಷ್ಣಭವನ ಹೋಟೆಲ್ ಎದುರುಗಡೆ ಶನಿವಾರ ಕುಂದಾಪುರದಿಂದ ಉಡುಪಿ ಕಡೆ ಸ್ಕೂಟಿಯಲ್ಲಿ ಇಬ್ಬರು ಯುವತಿಯರು ಸಾಗುತ್ತಿದ್ದಾಗ ಹಿಂದಿನಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಸ್ಕೂಟಿಯಲ್ಲಿದ್ದ ಇಬ್ಬರೂ ಗಂಭೀರ ಗಾಯಗೊಂಡಿದ್ದು, ಶ್ರೇಯಾ ಉಡುಪಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರೆ, ಪ್ರಜ್ಞಾ […]

ಕೋವಿಡ್ ರೋಗಿಗಳನ್ನು ವಾಪಾಸ್ ಕಳುಹಿಸುವಂತಿಲ್ಲ: ಖಾಸಗೀ ಆಸ್ಪತ್ರೆಗಳಿಗೆ ಉಸ್ತುವಾರಿ ಸಚಿವರ ನಿರ್ದೇಶನ 

Monday, July 20th, 2020
hospital

ಮಂಗಳೂರು :  ಖಾಸಗೀ ಆಸ್ಪತ್ರೆಗಳು ತಮ್ಮಲ್ಲಿಗೆ ಬಂದ ಕೋರೋನಾ ಸೋಂಕಿತ ರೋಗಿಗಳಿಗೆ ಚಿಕಿತ್ಸೆ ನೀಡದೆ ಯಾವುದೇ ಕಾರಣಕ್ಕೂ ವಾಪಾಸು ಕಳುಹಿಸುವಂತಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದ್ದಾರೆ. ಅವರು ಸೋಮವಾರ ನಗರದ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನಲ್ಲಿ ಕೋರೋನಾ ರೋಗಿಗಳ ನಿರ್ವಹಣೆ ಕುರಿತು ಸಭೆ ನಡೆಸಿ, ಬಳಿಕ ಮಾಹಿತಿ ನೀಡಿದರು. ದಕ್ಷಿಣ ಕನ್ನಡ ಜಿಲ್ಲೆಯು ವೈದ್ಯಕೀಯ ಕ್ಷೇತ್ರದಲ್ಲಿ ಸಾಕಷ್ಟು ಮುಂದುವರಿದಿದೆ. ಹೀಗಿರುವಾಗ, ಕೋವಿಡ್ ಸೋಂಕಿತರು ಅಥವಾ ಇತರೆ ಯಾವುದೇ ರೋಗಿಗಳು ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ […]

ಮನೆಯಲ್ಲಿ ಪ್ರತ್ಯೇಕ ಕೊಠಡಿಯೊಂದಿಗೆ ಶೌಚಾಲಯ ವ್ಯವಸ್ಥೆ ಇದ್ದರಷ್ಟೇ ಹೋಂ ಐಸೊಲೇಶನ್‌ಗೆ ಅವಕಾಶ

Friday, July 17th, 2020
Kota Srinivas

ಮಂಗಳೂರು: ಕೋವಿಡ್ 19 ಸೋಂಕಿತರಿಗೆ ದ.ಕ. ಜಿಲ್ಲೆಯ 7 ಮೆಡಿಕಲ್‌ ಕಾಲೇಜು ಆಸ್ಪತ್ರೆಗಳಲ್ಲಿ ಹಾಗೂ ನಿಗದಿತ ಖಾಸಗಿ ಆಸ್ಪತ್ರೆಗಳಲ್ಲೂ ಆಯುಷ್ಮಾನ್‌ ಯೋಜನೆಯಡಿ ಉಚಿತ ಚಿಕಿತ್ಸೆ ಒದಗಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟಪಡಿಸಿದ್ದಾರೆ. ಪಾಸಿಟಿವ್‌ ಹೊಂದಿದ್ದು, ಯಾವುದೇ ರೋಗ ಲಕ್ಷಣಗಳಿಲ್ಲದೇ ಇದ್ದವರಿಗೆ ಮನೆಯಲ್ಲೇ ಚಿಕಿತ್ಸೆಗೆ ಸೂಚನೆ ನೀಡಲಾಗಿದೆ. ಆದರೆ, ಮನೆಯಲ್ಲಿ ಚಿಕಿತ್ಸೆ ಪಡೆಯುವ ಸಂದರ್ಭ ಇತರರಿಗೆ ತೊಂದರೆಯಾಗದಂತೆ ಇರಬೇಕಾಗಿದ್ದು, ಮನೆಯಲ್ಲಿ ಪ್ರತ್ಯೇಕ ಕೊಠಡಿ, ಅದರೊಂದಿಗೆ ಶೌಚಾಲಯ ವ್ಯವಸ್ಥೆ ಇದ್ದರಷ್ಟೇ […]

ಕೋಟ ರಸ್ತೆ ಅಪಘಾತ: ಇಬ್ಬರು ಮೃತ್ಯು

Tuesday, December 12th, 2017
kota-accident

ಕೋಟ:ಇಲ್ಲಿಗೆ ಸಮೀಪದ ಕೋಟ ಮೂರುಕೈ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮಹಿಳೆ ಸಹಿತ ಇಬ್ಬರು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ಆಲ್ಟೋ ಕಾರು ಹಾಗೂ ಲಾರಿ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಬಾರಕೂರು ಬೆಣ್ಣೆಕುದ್ರುವಿನ ಅವಿನಾಶ್ ಹಾಗೂ ಗಿರಿಜಾ ಎಂಬವರು ಮೃತ ಪಟ್ಟಿದ್ದಾರೆ. ಉಳಿದ ಇಬ್ಬರು ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತದಿಂದ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ […]

ನನ್ನ ವಿರುದ್ಧ ಬೆದರಿಕೆ ಹಾಕುವುದರಲ್ಲಿ ಅರ್ಥವಿಲ್ಲ :ನಟ ಪ್ರಕಾಶ್ ರಾಜ್

Wednesday, October 11th, 2017
prakash raj

ಉಡುಪಿ:  ಅಭಿಪ್ರಾಯಗಳನ್ನು ಯಾರಾದರೂ ಖಂಡಿಸಬೇಕೆಂದಿದ್ದರೆ ಡಾ.ಶಿವರಾಮ ಕಾರಂತ, ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಪಿ.ಲಂಕೇಶ್ ರಂಥಹ ಬರಹಗಾರರ ಬರಹಗಳ ಬಗ್ಗೆ ಹೇಳಲಿ, ನಾನು ಕೇವಲ ಅವರ ಪ್ರತಿಫಲನವಷ್ಟೆ. ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಮಾತನಾಡಿದ್ದಕ್ಕೆ ನನ್ನ ವಿರುದ್ಧ ಬೆದರಿಕೆ ಹಾಕುವುದರಲ್ಲಿ ಅರ್ಥವಿಲ್ಲ. ಅವರ ಪುಸ್ತಕಗಳನ್ನು ಸಾಕಷ್ಟು ಓದಿ ಬೆಳೆದ ನಾನು ಅವರ ಬರಹಗಳಿಂದ ಪ್ರಭಾವಿತನಾಗಿದ್ದೇನೆ. ನನಗೆ ಕಂಡಿದ್ದನ್ನು ನಾನು ಹೇಳದಿದ್ದರೆ ಅವರನ್ನು ಮೋಸಗೊಳಿಸಿದಂತೆ ಆಗುತ್ತದೆ ಎಂದು ಖ್ಯಾತ ನಟ ಪ್ರಕಾಶ್ ರಾಜ್ ಹೇಳಿದ್ದಾರೆ. ಅವರು ನಿನ್ನೆ ಶಿವರಾಮ ಕಾರಂತರ ಹುಟ್ಟೂರಾದ […]