ಮಂಗಳೂರು : ದ.ಕ. ಮತ್ತು ಉಡುಪಿ ಜಿಲ್ಲೆಯನ್ನು ಒಳಗೊಂಡ ಸ್ಥಳೀಯಾಡಳಿತದ ವಿಧಾನ ಪರಿಷತ್‌ನ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ, ಹಾಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ ಭಂಡಾರಿ ಇಬ್ಬರೂ ಮೊದಲ ಪ್ರಾಶಸ್ತ್ಯದ ಮತಗಳಲ್ಲೇ ಜಯ ಗಳಿಸಿದ್ದಾರೆ. ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಖಾತೆ ಸಚಿವರಾಗಿರುವ ಕೋಟ ಶ್ರೀನಿವಾಸ 3,672 ಮತಗಳನ್ನು ಗಳಿಸಿ ಮತ್ತೊಮ್ಮೆ ರಾಜ್ಯ ಶಾಸಕಾಂಗದ ‘ಮೇಲ್ಮನೆ’ ಪ್ರವೇಶಿಸಿದ್ದಾರೆ. ಮಂಜುನಾಥ ಭಂಡಾರಿ 2,079 ಮತಗಳನ್ನು ಗಳಿಸಿ ಮೊದಲ ಬಾರಿ […]
ಪುತ್ತೂರು : ಭಾರತೀಯ ಜನತಾ ಪಾರ್ಟಿ ಪುತ್ತೂರು ನಗರ ಮಂಡಲ ವಿಧಾನ ಪರಿಷತ್ ಚುನಾವಣಾ ಪ್ರಚಾರ ಸಭೆಯು ಇಲ್ಲಿನ ಕಲ್ಲೇಗ ಭಾರತ್ ಮಾತಾ ಸಮುದಾಯ ಭವನದಲ್ಲಿ ಜರುಗಿತು. ಸಭೆಯಲ್ಲಿ ದಿಕ್ಸೂಚಿ ಭಾಷಣ ಮಾಡಿದ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು, “ಕೋಟ ಶ್ರೀನಿವಾಸ ಪೂಜಾರಿ ಅವರು ಪಂಚಾಯತ್ ರಾಜ್ ವ್ಯವಸ್ಥೆಯ ಬಗ್ಗೆ ಹೆಚ್ಚಿನ ಅಧ್ಯಯನ ಮಾಡಿದವರು. ಧಾರ್ಮಿಕ ದತ್ತಿ ಇಲಾಖೆಗೆ ಕೋಟ ಮಂತ್ರಿಯಾದಾಗ ಹಳ್ಳಿ ಹಳ್ಳಿಯ ಸಣ್ಣಪುಟ್ಟ ದೇವಸ್ಥಾನಗಳಿಗೂ ಅನುದಾನ ನೀಡಿದರು. ಸಾಮೂಹಿಕ ವಿವಾಹ […]
ಮಂಗಳೂರು: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಇದರ ವತಿಯಿಂದ ವಿಧಾನ ಪರಿಷತ್ ಚುನಾವಣಾ ಪ್ರಚಾರ ಸಭೆಯು ಕುವೆಟ್ಟು ಮತ್ತು ಕಣಿಯೂರು ಮಹಾಶಕ್ತಿ ಕೇಂದ್ರದ ಆಶ್ರಯದಲ್ಲಿ ಗುರುವಾಯನಕೆರೆಯ ನಮ್ಮ ಮನೆ ಹವ್ಯಕ ಸಭಾಭವನದಲ್ಲಿ ನೆರವೇರಿತು. ಸಭೆಯನ್ನು ಭಾರತಾಂಬೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಲಾಯಿತು. ಬಳಿಕ ಮಾತಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು, “ಕೋಟ ಶ್ರೀನಿವಾಸ ಪೂಜಾರಿಯವರು ದಣಿವರಿಯದ ನಾಯಕ. ಮುಜರಾಯಿ ಖಾತೆಯನ್ನು ಯಶಸ್ವಿಯಾಗಿ ನಿರ್ವಹಿಸಿದ ಇವರು ಈಗ ಸಮಾಜ ಕಲ್ಯಾಣ ಇಲಾಖೆ ಮೂಲಕ ಸಮಾಜದ […]
ಮಂಗಳೂರು : ಕರ್ನಾಟಕ ವಿಧಾನ ಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಮತಕ್ಷೇತ್ರದ ಚುನಾವಣೆಗೆ ಸ್ಪರ್ಧೆ ಬಯಸಿ ಉಮೇದುವಾರಿಕೆ ಸಲ್ಲಿಸಿದ್ದ 7 ಮಂದಿ ಅಭ್ಯರ್ಥಿಗಳಲ್ಲಿ ನಾಮಪತ್ರ ಹಿಂಪಡೆಯುವ ಕೊನೆಯ ದಿನವಾದ ನ.26ರ ಶುಕ್ರವಾರ ನಾಲ್ವರು ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆಯನ್ನು ಹಿಂದಕ್ಕೆ ಪಡೆದಿದ್ದಾರೆ. ಪಕ್ಷೇತರ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಿದ್ದ ನಿತಿನ್ ಕುಮಾರ್, ಕೌಶಿಕ್ ಡಿ ಶೆಟ್ಟಿ, ನವೀನ್ ಕುಮಾರ್ ರೈ ಹಾಗೂ ಶಶಿಧರ್ ಎಂ. ಅವರು ಉಮೇದುವಾರಿಕೆ ಹಿಂಪಡೆದುಕೊಂಡಿದ್ದಾರೆ. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮಂಜುನಾಥ ಭಂಡಾರಿ, […]
ಬೆಂಗಳೂರು: ಪರಿಶಿಷ್ಟ ಜಾತಿಯಲ್ಲಿನ ಬಡ ಕುಟುಂಬಗಳಿಗೆ ಮನೆ ನಿರ್ಮಾಣಕ್ಕೆ ನೀಡುತ್ತಿರುವ ಅನುದಾನವನ್ನು ತಲಾ ₹ 5 ಲಕ್ಷಕ್ಕೆ ಹೆಚ್ಚಿಸಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು. ಸೋಮವಾರ ವಿಕಾಸಸೌಧದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳ ಜತೆ ಸಭೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಈಗ ಪರಿಶಿಷ್ಟ ಜಾತಿಯ ಪ್ರತಿ ಕುಟುಂಬಕ್ಕೆ ಮನೆ ನಿರ್ಮಾಣಕ್ಕೆ ₹ 1.70 ಲಕ್ಷ ನೆರವು ನೀಡಲಾಗುತ್ತಿದೆ. ಈ ಮೊತ್ತದಿಂದ ಒಳ್ಳೆಯ ಮನೆ ನಿರ್ಮಿಸಲು ಸಾಧ್ಯವಿಲ್ಲ. ಆದ್ದರಿಂದ […]
ಬಂಟ್ವಾಳ : ನೂತನ ಸಚಿವ ಸಂಪುಟದಲ್ಲಿ ಸಮಾಜ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಅವರ ಕಾಲಿಗೆ ಬಿದ್ದು ಆರ್ಶೀವಾದ ಪಡೆದರು. ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರಕ್ಕೆ ಆಗಮಿಸಿ ಡಾ|ಪ್ರಭಾಕರ ಭಟ್ ಅವರನ್ನು ಭೇಟಿ ಮಾಡಿ ಕಾಲು ಮುಟ್ಟಿ ನಮಸ್ಕಾರ ಮಾಡಿದರು. ಪ್ರಭಾಕರ್ ಭಟ್ ಅವರಿಗೆ ಶಾಲು ಹೊದಿಸಿ ಸಿಹಿತಿಂಡಿ ಬಾಯಿಗೆ ತಿನ್ನಿಸಿದರು. ಬಳಿಕ ಕೆಲ ಹೊತ್ತು ಪ್ರಸ್ತುತ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಿದರು.
ನವದೆಹಲಿ : ಮಂತ್ರಿ ಮಂಡಲ ವಿಸ್ತರಣೆಯ ಅಂತಿಮ ಪಟ್ಟಿ ಸಿದ್ಧಗೊಂಡಿದ್ದು ನಾಳೆ ಬುಧವಾರ (ಆಗಸ್ಟ್4)ರಂದು 26 ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಪಕ್ಷದ ಮೂಲಗಳು ಮಾಹಿತಿ ನೀಡಿವೆ. ಹೈಕಮಾಂಡ್ ಹೇಳಿದ ತಿದ್ದುಪಡಿಗಳ ಜೊತೆಗೆ ಕೇಂದ್ರ ನಾಯಕರಿಗೆ ಒಲವಿರುವ ಒಂದಷ್ಟು ಮಂದಿಯನ್ನು ಸಚಿವರ ಪಟ್ಟಿಯಲ್ಲಿ ಸೇರಿಸಿ, ಅಂತೂ ಇಂತು ಒಪ್ಪಿಗೆ ಪಡೆದಿದ್ದಾರೆ, ಎರಡು ರಾತ್ರಿ, ಎರಡು ಹಗಲು ದೆಹಲಿಯಲ್ಲಿ ಬೀಡು ಬಿಟ್ಟಿದ್ದ ಸಿಎಂ ಬೊಮ್ಮಾಯಿ ಅವರು ನೂತನ ಸಚಿವರ ಪಟ್ಟಿಯೊಂದಿಗೆ ರಾಜ್ಯ ರಾಜಧಾನಿ ಬೆಂಗಳೂರಿಗೆ ಆಗಮಿಸಲಿದ್ದಾರೆ. […]
ಮಂಗಳೂರು : ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರ ಆದೇಶದಂತೆ ಹಿಂದೂ ಧಾರ್ಮಿಕ ದತ್ತಿ ಇಲಾಖೆ ಹಾಗೂ ದೇವಸ್ಥಾನದ ಹಣ ಅನ್ಯಮತೀಯ ಪ್ರಾರ್ಥನಾ ಕೇಂದ್ರಗಳಿಗೆ ತಡೆ ನೀಡುವಂತೆ ಸರ್ಕಾರದ ಅಧಿಕೃತ ಆದೇಶ ಹೊರಬಿದ್ದಿದೆ. ದೇವಸ್ಥಾನಗಳು ಮತ್ತು ಧಾರ್ಮಿಕ ದತ್ತಿ ಇಲಾಖೆಯ ಮೂಲಕ ಅನ್ಯಮತೀಯ ಪ್ರಾರ್ಥನ ಕೇಂದ್ರಗಳಿಗೆ ತಸ್ತಿಕ್ ಮತ್ತು ವರ್ಷಾಸನ ಬಿಡುಗಡೆ ಕುರಿತು ಎದ್ದಿರುವ ಚರ್ಚೆಯ ಕುರಿತು ಸರ್ಕಾರ ಅಂತಿಮ ತೀರ್ಮಾನ ಕೈಗೊಂಡಿದ್ದು, ರಾಜ್ಯದ 757 ಪ್ರಾರ್ಥನ ಕೇಂದ್ರಗಳಿಗೆ ಹಾಗೂ 111 ವರ್ಷಾಸನ […]
ಬಂಟ್ವಾಳ: ಸುಮಾರು 1.40 ಕೋ.ರೂ.ವೆಚ್ಚದಲ್ಲಿ ಅನುಷ್ಠಾನಗೊಂಡ ಆಕ್ಸಿಜನ್ ಘಟಕದಿಂದ ಬಂಟ್ವಾಳದ ಆಕ್ಸಿಜನ್ ಬೇಡಿಕೆಗಳ ಪೂರೈಕೆಯ ಜತೆಗೆ ಇತರ ಭಾಗಗಳಿಗೂ ಆಕ್ಸಿಜನ್ ಪೂರೈಕೆಗೆ ನೆರವಾಗಲಿದೆ ಎಂದು ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರ ಸ್ವಾಮ್ಯದ ಕಂಪೆನಿಗಳ ಸಾರ್ವಜನಿಕ ಹೊಣೆಗಾರಿಕಾ ನಿಧಿಯಿಂದ 1.40 ಕೋ.ರೂ.ವೆಚ್ಚದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ನೇತೃತ್ವದಲ್ಲಿ ಅನುಷ್ಠಾನಗೊಳಿಸಿದ ನಿಮಿಷಕ್ಕೆ 500 ಲೀ. ಉತ್ಪಾದನಾ ಸಾಮರ್ಥ್ಯದ ನೂತನ ಆಕ್ಸಿಜನ್ ಘಟಕದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು. […]