ಕೋರೋನಾ ಪ್ರಕರಣಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯು ಇದೀಗ 6ನೇ ಸ್ಥಾನಕ್ಕಿಳಿದಿದೆ
Monday, April 13th, 2020ಮಂಗಳೂರು : ಕೋರೋನಾ ಪ್ರಕರಣಗಳಲ್ಲಿ ಬೆಂಗಳೂರು, ಮೈಸೂರು ನಂತರ 3 ನೇ ಸ್ಥಾನದಲ್ಲಿದ್ದ ದಕ್ಷಿಣ ಕನ್ನಡ ಜಿಲ್ಲೆಯು ಇದೀಗ 6ನೇ ಸ್ಥಾನಕ್ಕಿಳಿದಿದೆ. ಜಿಲ್ಲೆಯ ಮಟ್ಟಿಗೆ ಇದು ಸಮಾಧಾನಕರ ಸಂಗತಿ. ಆದರೂ, ಇನ್ನೂ ಬಹಳಷ್ಟು ಜಾಗರೂಕರಾಗಿರಬೇಕಿದೆ. ಜಿಲ್ಲೆಯಲ್ಲಿ 12 ಪ್ರಕರಣಗಳಲ್ಲಿ 8 ಮಂದಿ ಗುಣಮುಖರಾಗಿದ್ದಾರೆ. ಕೊರೋನ ವೈರಸ್ ರೋಗಕ್ಕೆ ಸಂಬಂಧಿಸಿ ಸೋಮವಾರ ಪ್ರಯೋಗಾಲಯದಿಂದ ಸ್ವೀಕರಿಸಲಾದ 26 ಮಂದಿಯ ವರದಿಯು ನೆಗೆಟಿವ್ ಆಗಿದೆ. ಇನ್ನೂ 24 ಮಂದಿಯ ವರದಿಗಾಗಿ ಕಾಯಲಾಗುತ್ತಿದೆ. ಜ್ವರದ ಹಿನ್ನೆಲೆಯಲ್ಲಿ 7 ಮಂದಿಯ ಮೇಲೆ ನಿಗಾ ಇಡಲಾಗಿದೆ. […]