ಆಳ್ವಾಸ್​ ಶಿಕ್ಷಣ ಸಂಸ್ಥೆಯ ಹಾಸ್ಟೆಲ್​ನಲ್ಲಿ ಕೋಲಾರ ಮೂಲದ ವಿದ್ಯಾರ್ಥಿ ಆತ್ಮಹತ್ಯೆ, ಒಕ್ಕೂಟದಿಂದ ಪ್ರತಿಭಟನೆ

Thursday, March 14th, 2024
Alvas-student

ಮೂಡಬಿದ್ರೆ : ಆಳ್ವಾಸ್​ ಶಿಕ್ಷಣ ಸಂಸ್ಥೆಯ ಹಾಸ್ಟೆಲ್​ನಲ್ಲಿ ಕೋಲಾರ ಮೂಲದ ಸಂಜಯ್ ಭುವನ್ (16) ಎಂಬ ವಿದ್ಯಾರ್ಥಿ ಮಾ.12 ರಂದು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ತಡವಾಗಿ ಬೆಳಕಿಗೆ ಬಂದಿದೆ. ವಿಷಯ ತಿಳಿಯುತ್ತಿದ್ದಂತೆ ಕಾಲೇಜಿಗೆ ರಾಷ್ಟ್ರೀಯ ವಿದ್ಯಾರ್ಥಿಗಳ ಒಕ್ಕೂಟ (NSUI) ನ ಜಿಲ್ಲಾಧ್ಯಕ್ಷ ಸುಹಾನ್ ನೇತೃತ್ವದಲ್ಲಿ ಮುತ್ತಿಗೆ‌ ಹಾಕಲಾಗಿದೆ. ಸ್ಥಳದಲ್ಲಿ ಬಿಗುವಿನ ಪರಿಸ್ಥಿತಿ ನಿರ್ಮಾಣವಾಗಿದ್ದು, ಪೊಲೀಸರಿಂದ ಕಾಲೇಜು ಬಳಿ ಭದ್ರತೆ ಒದಗಿಸಲಾಗಿದೆ. ಸಂಜಯ್ ಭುವನ್ ಚಿಲ್ಲರೆ ಹಣ ತೆಗೆದು ಆಡಳಿತ ಮಂಡಳಿಗೆ ತಿಳಿದು ಅವಮಾನಗೊಂಡು ಈ ನಿರ್ಧಾರಕೈ ಗೊಂಡಿದ್ದಾಗಿ […]

ಏಳು ತಿಂಗಳ ಗರ್ಭಿಣಿ, ಪ್ರೊಬೇಷನರಿ ಮಹಿಳಾ ಪೊಲೀಸ್ ಇನ್ಸ್ ಪೆಕ್ಟರ್ ಶಾಮಿಲಿ ಕೋವಿಡ್ ಗೆ ಬಲಿ

Tuesday, May 18th, 2021
Shalini

ಮಂಗಳೂರು : ದಕ್ಷಿಣ ಕನ್ನಡ ಪೊಲೀಸ್ ಠಾಣೆಯಲ್ಲಿ ಪ್ರೊಬೇಷನರಿ ಮಹಿಳಾ ಪೊಲೀಸ್ ಇನ್ಸ್ ಪೆಕ್ಟರ್ 24 ವರ್ಷದ ಶಾಮಿಲಿ ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ಕೋಲಾರ ಮೂಲದ ಶಾಮಿಲಿ ದಕ್ಷಿಣ ಕನ್ನಡ ಪೊಲೀಸ್ ಠಾಣೆಯಲ್ಲಿ ಕರ್ತವ್ಯದಲ್ಲಿದ್ದು 7 ತಿಂಗಳ ಗರ್ಭಿಣಿ ಯಾಗಿದ್ದರು. ಅತಿ ಸಣ್ಣ ವಯಸ್ಸಿನ ಶಾಮಿಲಿ ಮಾರಕ ಕೊರೋನಾ ಗೆ ಬಲಿಯಾಗಿದ್ದಾರೆ ಎಂದು ಡಿಜಿಪಿ ಪ್ರವೀಣ್ ಸೂದ್ ಟ್ವೀಟ್ ಮಾಡಿದ್ದಾರೆ. ಶಾಮಿಲಿ ಕೋಲಾರದ ಆರ್ ಎಲ್ ಜಾಲಪ್ಪ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ದಕ್ಷಿಣ ಕನ್ನಡ ಸೂಪರಿಂಡೆಂಟ್ ರಿಷಿಕೇಶ್ ಸೋನಾವಾನೆ ಟ್ವೀಟ್ ಮಾಡಿದ್ದಾರೆ. […]

ಉಜಿರೆಯ ಎಂಟರ ಬಾಲಕ ಅನುಭವ್ ಕೋಲಾರದಲ್ಲಿ ಪತ್ತೆ, ಆರು ಮಂದಿ ಅಪಹರಣಕಾರರು ವಶಕ್ಕೆ

Saturday, December 19th, 2020
Anubhav

ಬೆಳ್ತಂಗಡಿ : ಉಜಿರೆಯ ಎಂಟರ ಹರೆಯದ ಬಾಲಕ ಅನುಭವ್ ನನ್ನು ಕೋಲಾರದಲ್ಲಿ ಸುರಕ್ಷಿತವಾಗಿ ಪತ್ತೆ ಹಚ್ಚವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.‌ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಆರು  ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕೋಲಾರ ಜಿಲ್ಲೆಯ ಮಾಸ್ತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಹರಣಕಾರರನ್ನು ಮಗುವಿನೊಂದಿಗೆ ವಿಶೇಷ ತಂಡ ಪೊಲೀಸರು ಶನಿವಾರ ಬೆಳಗ್ಗೆ 5ರ ಹೊತ್ತಿಗೆ ಪತ್ತೆ ಹಚ್ಚಿದ್ದಾರೆ. ಆರೋಪಿಗಳನ್ನೂ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದು ಕೋಲಾರದಿಂದ ವಿಶೇಷ ತನಿಖಾ ತಂಡ ಪ್ರಯಾಣ ಆರಂಭಿಸಿದೆ. ಕೋಲಾರದ ಮಾಲೂರು ತಾಲೂಕಿನ ಕೂರ್ನ ಹೊಸಹಳ್ಳಿ […]

ಇಂದಿನಿಂದ ರಾಜ್ಯಕ್ಕೆ ಹಿಂಗಾರು ಮಳೆ ಪ್ರವೇಶ

Friday, November 2nd, 2018
bengalore

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬೆಳಗ್ಗೆಯಿಂದಲೂ ಕೂಲ್ ಕೂಲ್ ವಾತಾವರಣ ಇದೆ. ಇದೇನಪ್ಪ ಮಳೆ ಬರೋ ಹಾಗಿದೆಯಲ್ಲ ಅಂತೆಲ್ಲ ನೀವು ಅನ್ಕೊಂಡ್ರೆ ನಿಮ್ಮ ಊಹೆ ಸರಿ. ಹೌದು, ಇಂದಿನಿಂದ ಹಿಂಗಾರು ಮಳೆ ರಾಜ್ಯಕ್ಕೆ ಪ್ರವೇಶ ಆಗಲಿದೆ. ನಿನ್ನೆಯೇ ಕೇರಳ ಹಾಗೂ ತಮಿಳುನಾಡಿಗೆ ಮಳೆಯಾಗಿದ್ದು, ಇಂದು ರಾಜ್ಯಕ್ಕೆ ಪ್ರವೇಶ ಆಗಲಿದೆ. ದಕ್ಷಿಣ ಒಳನಾಡಿನ ಕೆಲವು ಭಾಗಗಳಾದ ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಚಾಮರಾಜನಗರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಪ್ರಕೃತಿ ವಿಕೋಪ ಉಸ್ತುವಾರಿ […]

ರೈಲಿಗೆ ತಲೆ ಕೊಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ

Friday, October 5th, 2018
kolara

ಕೋಲಾರ : ರೈಲಿಗೆ ತಲೆ ಕೊಟ್ಟು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಖಾದ್ರಿಪುರ ಗೇಟ್ ಬಳಿ ನಡೆದಿದೆ. ರೈಲಿಗೆ ತಲೆಯಿಟ್ಟು ಆತ್ಮಹತ್ಯೆ ಮಾಡಿಕೊಂಡ ಹಿನ್ನಲೆಯಲ್ಲಿ ವಿದ್ಯಾರ್ಥಿನಿಯ ರುಂಡ ಮತ್ತು ದೇಹ ತುಂಡಾಗಿ ಬೇರ್ಪಟ್ಟು ಬಿದ್ದಿದೆ. ಕೋಲಾರದ ಶಾಂತಿನಗರದ ರಕ್ಷಿತಾ (16) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಎಂದು ತಿಳಿದುಬಂದಿದೆ. ಬಾಲಕಿ ಆತ್ಮಹತ್ಯೆ ಗೆ‌ ನಿಖರವಾದ ಮಾಹಿತಿ ತಿಳಿದು ಬಂದಿಲ್ಲ. ಇಂದು ನಸುಕಿನಜಾವ ೪ ಗಂಟೆ ಸುಮಾರಿಗೆ ಮನೆ ಬಿಟ್ಟು ಬಂದಿದ್ದಳೆನ್ನಲಾದ ವಿದ್ಯಾರ್ಥಿನಿ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. […]

ಮಧ್ಯಾಹ್ನದ ಬಿಸಿಯೂಟದ ಸಾಂಬಾರ್​ನಲ್ಲಿ ಹಲ್ಲಿ…15 ಮಂದಿ ವಿದ್ಯಾರ್ಥಿಗಳು ಅಸ್ವಸ್ಥ!

Friday, July 13th, 2018
students

ಕೋಲಾರ: ಮಧ್ಯಾಹ್ನದ ಬಿಸಿಯೂಟದ ಸಾಂಬಾರ್ನಲ್ಲಿ ಹಲ್ಲಿ ಬಿದ್ದಿರುವುದನ್ನು ಗಮನಿಸದೆ ಮಕ್ಕಳಿಗೆ ಊಟ ನೀಡಿದ್ದ ಪರಿಣಾಮ 15 ಮಂದಿ ವಿದ್ಯಾರ್ಥಿಗಳು ಅಸ್ವಸ್ಥರಾದ ಘಟನೆ ಕೋಲಾರ ಜಿಲ್ಲೆ ಬಂಗಾರಪೇಟೆ ಡಿ.ಪಿ.ಹಳ್ಳಿಯ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಊಟ ಮಾಡಿದ ಬಳಿಕ ಮಕ್ಕಳು ವಾಂತಿ-ಬೇಧಿಯಿಂದ ಅಸ್ವಸ್ಥರಾಗಿದ್ದು, ಮಕ್ಕಳನ್ನು ಕಾಮಸಮುದ್ರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ. ಇದೀಗ ಪೋಷಕರು ಪ್ರಾಂಶುಪಾಲ ವೆಂಕೋಬರಾವ್ ಹಾಗೂ ಅಡುಗೆ ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ಕಾಮಸಮುದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಬಾವಿಯಲ್ಲಿ ನಾಲ್ವರು ಅಪರಿಚಿತರ ಮೃತದೇಹ ಪತ್ತೆ..!

Thursday, July 12th, 2018
suicide

ಕೋಲಾರ: ಬಾವಿಯಲ್ಲಿ ಅನುಮಾನಾಸ್ಪದವಾಗಿ ನಾಲ್ಕು ಮಂದಿ ಅಪರಿಚಿತರ ಶವ‌ ಪತ್ತೆಯಾಗಿರುವುದು ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಬೆಟ್ಟಗೇರಹಳ್ಳಿ ಬಳಿ ಕಂಡುಬಂದಿದೆ. ಗ್ರಾಮದ‌ ನಾರಾಯಣಸ್ವಾಮಿ ಎಂಬುವರ ಬಾವಿಯಲ್ಲಿ ಶವ ಪತ್ತೆಯಾಗಿದ್ದು, ಕಳೆದ ಎರಡು ದಿನಗಳ‌ ಹಿಂದೆ ಬಾವಿಗೆ ಬಿದ್ದಿರುವ ಶಂಕೆ ವ್ಯಕ್ತವಾಗಿದೆ. ಇಬ್ಬರು ಮಹಿಳೆಯರು ಮತ್ತು ಇಬ್ಬರ ಮಕ್ಕಳ ಮೃತದೇಹಗಳು ಪತ್ತೆಯಾಗಿದ್ದು, ಮೃತರ ಹೆಸರುಗಳು ಹಾಗೂ ಗುರುತು ತಿಳಿದು ಬಂದಿಲ್ಲ. ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಾಮಾಣಿಕ ಅಧಿಕಾರಿ ಡಿ.ಕೆ.ರವಿವರ ಸಾವಿನ ಪ್ರಕರಣವನ್ನು ಉನ್ನತ ತನಿಖೆಗೆ ವಹಿಸಿ

Tuesday, March 17th, 2015
ABvp protest

ಮಂಗಳೂರು : ರಾಜ್ಯದ ದಕ್ಷ ಐ.ಎ.ಎಸ್ ಅಧಿಕಾರಿ ಡಿ.ಕೆ.ರವಿಯವರ ಸಾವಿನ ಕುರಿತಂತೆ ಉನ್ನತ ತನಿಖೆಯನ್ನು ನಡೆಸಬೇಕು ಮತ್ತು ರಾಜ್ಯದ ಪ್ರಾಮಾನಿಕ ಅಧಿಕಾರಿಗಳಿಗೆ ರಕ್ಷಣೆ ನೀಡಬೇಕೆಂದು ಎಬಿವಿಪಿ ಆಗ್ರಹಿಸಿ ಮಂಗಳವಾರ ಎಬಿವಿಪಿ ನಗರದಲ್ಲಿ ಪ್ರತಿಭಟನೆಯನ್ನು ನಡೆಸಿತು. ಶಾರದ ಕಾಲೇಜಿನಿಂದ ಹೊರಟ ನೂರಾರು ಎಬಿವಿಪಿ ಕಾರ್ಯಕರ್ತರು ಘೋಷಣೆಗಳನ್ನು ಕೂಗುತ್ತಾ ಮೆರವಣಿಗೆಯ ಮೂಲಕ ಬಂದು ಬೆಸೆಂಟ್ ಕಾಲೇಜು ವೃತ್ತದ ಬಳಿ ಸೇರಿದರು. ಅಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಎಬಿವಿಪಿ ನಗರ ಕಾರ್ಯದರ್ಶಿ ಜಯೇಶ್ ಮಾತನಾಡಿ, ಐಎಎಸ್ ಅಧಿಕಾರಿ ಡಿ. ಕೆ. ರವಿಯವರು ರಾಜ್ಯದ […]

ರೈತರಿಂದ ಮುತ್ತಿಗೆ : ಸಚಿವ ಯುಟಿ ಖಾದರ್

Tuesday, March 4th, 2014
U.T.-Khadar

ಕೋಲಾರ: ಜಿಲ್ಲಾ ಉಸ್ತುವಾರಿ ಸಚಿವ ಯುಟಿ ಖಾದರ್‌ ಎತ್ತಿನ ಹೊಳೆ ಯೋಜನೆ ವಿರುದ್ಧ ಮಾತನಾಡಿದ ಅವರಿಗೆ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರು  ಮುತ್ತಿಗೆ ಹಾಕಿದ ಘಟನೆ ಮಂಗಳವಾರ ನಡೆದಿದೆ. ಕೋಲಾರ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಗೆ ಜಿಲ್ಲಾ  ಪಂಚಾಯತ್‌ ಕಛೇರಿಗೆ ಆಗಮಿಸುತ್ತಿದ್ದ ಸಚಿವರ ವಿರುದ್ಧ  ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರು  ಕಪ್ಪು ಬಾವುಟ  ಪ್ರದರ್ಶಿಸಿ ಆಕ್ರೋಶ ವ್ಯಕ್ತ ಪಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಖಾದರ್‌ ಅವರು ಎತ್ತಿನಹೊಳೆ ಯೋಜನೆಜಾರಿಗೆ ನನ್ನ ಸಹಮತವಿದೆ,ಯೋಜನೆ […]

ಕೋಲಾರದಲ್ಲಿ ಆನೆ ದಾಳಿಗೆ ಪತ್ರಕರ್ತ ಸಹಿತ ಒಟ್ಟು ನಾಲ್ವರು ಬಲಿ

Sunday, June 23rd, 2013
Elephant kills Jounalist

ಹೊಸಕೋಟೆ  : ಹೊಸಕೋಟೆ ತಾಲೂಕಿನ ಇಂಜನಹಳ್ಳಿ ಯಲ್ಲಿ ಕಾಡನ್ನು ಬಿಟ್ಟು ನಾಡಿಗೆ ನುಗ್ಗಿರುವ ಕಾಡಾನೆಗಳು ವರದಿಗೆಂದು ತೆರಳಿದ್ದ ಪತ್ರಕರ್ತರೊಬ್ಬರ ಮೇಲೆ ದಾಳಿ ಮಾಡಿ ಕೊಂದುಹಾಕಿದ ಘಟನೆ ಭಾನುವಾರ ನಡೆದಿದೆ. ಹತ್ತು ದೊಡ್ಡ ಆನೆಗಳು ಮತ್ತು ನಾಲ್ಕು ಮರಿ ಆನೆಗಳಿದ್ದ ಹಿಂಡು ಇಂಜನಹಳ್ಳಿಯಲ್ಲಿರುವ 25 ಎಕರೆ ನೀಲಗಿರಿ ತೋಪಿಗೆ ನುಗ್ಗಿದ್ದವು. ಅಕ್ಕಪಕ್ಕದಲ್ಲಿ ದೊಡ್ಡಮೆಣಸಿನಕಾಯಿ ಸೇರಿದಂತೆ ಹಲವಾರು ಬೆಳೆಗಳನ್ನು ಬೆಳೆಯುತ್ತಿದ್ದ ರೈತರು ಆನೆಗಳನ್ನು ಓಡಿಸಲು ಯತ್ನಿಸಿದ್ದಾರೆ. ಕಾಡಾನೆಗಳು ಎಬ್ಬಿಸುತ್ತಿರುವ ಹಾವಳಿಯ ವರದಿಗೆಂದು ತೆರಳಿದ್ದ ವಿಜಯವಾಣಿ ದಿನಪತ್ರಿಕೆಯ ವರದಿಗಾರ ಮಂಜುನಾಥ್ ಎಂಬುವವರನ್ನು […]