ಬೈಕ್‌ ಸವಾರನ ಮೇಲೆ ಹರಿದ ಕೋಳಿ ಸಾಗಣೆಯ ಲಾರಿ

Friday, February 23rd, 2018
accident

ಮಂಗಳೂರು: ಕೋಳಿಗಳನ್ನು ಸಾಗಿಸುತ್ತಿದ್ದ ಲಾರಿ ಗುದ್ದಿದ ಪರಿಣಾಮ ಬೈಕ್ ಸವಾರನೋರ್ವ ದಾರುಣವಾಗಿ ಸಾವನ್ನಪ್ಪಿರುವ ಭೀಕರ ಅಪಘಾತ ಬೆಳ್ತಂಗಡಿ ತಾಲೂಕಿನ ವೇಣೂರಿನಲ್ಲಿ ನಡೆದಿದೆ. ಬೆಳಗ್ಗೆ 7.30 ಸುಮಾರಿಗೆ ಈ ಘಟನೆ ನಡೆದಿದೆ. ಬೈಕ್‌ಗೆ ವಿರುದ್ಧ ದಿಕ್ಕಿನಲ್ಲಿ ಅತಿಯಾದ ವೇಗದಲ್ಲಿ ಬಂದ ಕೋಳಿ ಸಾಗಣೆಯ ಲಾರಿ ಬೈಕ್ ಸವಾರರ ಮೇಲೆಯೇ ಹರಿದಿದೆ. ಅಪಘಾತದ ತೀವ್ರತೆಗೆ ಕರಿಮಣೇಲು‌ ನಿವಾಸಿ ಆನಂದ ಎಂಬುವವರು ಸ್ಥಳದಲ್ಲೇ ಸಾವನ್ನಪ್ಪಿದ್ದು ಹಿಂಬದಿ ಕುಳಿತಿದ್ದ ಪುತ್ರಿಯರಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದ ದೃಶ್ಯ ಸ್ಥಳೀಯ ಅಂಗಡಿಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.