ಕೋವಿಡ್ ಸೋಂಕಿನ 2ನೇ ಅಲೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಿ – ಡಾ. ರಾಜೇಂದ್ರ ಕೆ.ವಿ

Saturday, January 16th, 2021
Rajendra KV

ಮಂಗಳೂರು : ಕೋವಿಡ್ ಸೋಂಕಿನ ಎರಡನೇ ಅಲೆ ಉಂಟಾಗದಂತೆ ತಡೆಯಲು ಜಿಲ್ಲೆಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಇಂದು ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಮಾತನಾಡಿದರು. ವಿದೇಶಗಳಲ್ಲಿ ಈಗಾಗಲೇ ಕೊರೋನಾದ ಎರಡನೇ ಅಲೆ ಬಾಧಿಸಿ ಹೆಚ್ಚು ಜನರು ಸೋಂಕಿತರಾಗಿದ್ದಾರೆ. ಈ ವರೆಗೆ ನಮ್ಮ ದೇಶದಲ್ಲಿ ಎರಡನೇ ಅಲೆ ಕಂಡುಬಂದಿರುವುದಿಲ್ಲ ಆದರೂ ಸಹ ನಿರ್ಲಕ್ಷ್ಯ ವಹಿಸದೇ ಕೊರೊನಾ ಎರಡನೇ ಅಲೆಯನ್ನು […]

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾ ಷಷ್ಠೀ, ಬ್ರಹ್ಮರಥೋತ್ಸವ

Sunday, December 20th, 2020
Kukke subrahmanya

ಸುಬ್ರಹ್ಮಣ್ಯ : ದಕ್ಷಿಣ ಭಾರತದ ಪ್ರಮುಖ ನಾಗ ಕ್ಷೇತ್ರ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾ ಷಷ್ಠೀ ಮಹೊತ್ಸವ ಸಂಪನ್ನಗೊಂಡಿದೆ. ದೇವಳದ ರಾಜಮಾರ್ಗದಲ್ಲಿ ಯಶಸ್ವಿನಿ ಅನೆಯೊಂದಿಗೆ ಸಂಭ್ರಮದ ಬ್ರಹ್ಮರಥೋತ್ಸವ ಜರಗಿತು.ಕೋಟ್ಯಾಂತರ ಭಕ್ತರ ಅರಾಧ್ಯ ದೈವ ಸುಬ್ರಹ್ಮಣ್ಯ ಸ್ವಾಮಿ ಮುಂಜಾನೆಯ 7.25 ರ ಧನು ಲಗ್ನ ಸುಮುಹೂರ್ತದಲ್ಲಿ ಬ್ರಹ್ಮರಥದಲ್ಲಿ ರಥಾರೂಢನಾಗಿ ಭಕ್ತರಿಗೆ ದರ್ಶನ ನೀಡಿದ್ದಾನೆ. ಕೋವಿಡ್ ಕಾರಣದಿಂದಾಗಿ ಪರ ಊರಿನ ಭಕ್ತರಿಗೆ ಪ್ರವೇಶ ನಿರ್ಬಂನಿರ್ಬಂಧವಿದ್ದರೂ ಕೂಡಾ ಅಪಾರ ಸಂಖ್ಯೆಯಲ್ಲಿ ಭಕ್ತರು  ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮ ರಥೋತ್ಸವವನ್ನು ನೋಡಿ ಕಣ್ತುಂಬಿಕೊಂಡರು. […]

ಕೊರೋನಾ ಸೋಂಕು : ದಕ್ಷಿಣ ಕನ್ನಡ – 447, ಸಾವು 7 ಮಂದಿ, ಉಡುಪಿ – 207

Wednesday, October 7th, 2020
corona

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಬುಧವಾರ 447 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ, 7 ಮಂದಿ ಸಾವನ್ನಪ್ಪಿದ್ದಾರೆ.  ಉಡುಪಿ ಜಿಲ್ಲೆಯಲ್ಲಿ ಬುಧವಾರ ಹೊಸದಾಗಿ 207 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ಜಿಲ್ಲೆಯಲ್ಲಿ ಮೃತರ ಸಂಖ್ಯೆ ಜಿಲ್ಲೆಯಲ್ಲಿ 588ಕ್ಕೆ ತಲುಪಿದೆ. ಈ ನಡುವೆ ಗುಣಮುಖರಾದವರ ಸಂಖ್ಯೆ ಉತ್ತಮವಾಗಿದ್ದು, ಬುಧವಾರ ಒಂದೇ ದಿನ 1,214 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಇದರೊಂದಿಗೆ ದ.ಕ. ಜಿಲ್ಲೆಯಲ್ಲಿ ಇಲ್ಲಿಯ ತನಕ ಗುಣಮುಖರಾದವರ ಸಂಖ್ಯೆ 20 ಸಾವಿರಕ್ಕೇರಿದೆ. ಆ ಮೂಲಕ ಜಿಲ್ಲೆಯಲ್ಲಿ ಇಲ್ಲಿಯ ತನಕ […]

ಕೋವಿಡ್ ಹೆಸರಿನಲ್ಲಿ ರಾಜ್ಯ ಸರಕಾರ ನಡೆಸಿರುವ ಭ್ರಷ್ಟಾಚಾರ ತಿಳಿಸಲು ಕಾಂಗ್ರೆಸ್ನಿಂದ ಲೆಕ್ಕಕೊಡಿ ಅಭಿಯಾನ

Sunday, September 13th, 2020
saleem

ಮಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಲೆಕ್ಕಕೊಡಿ ಅಭಿಯಾನದೊಂದಿಗೆ ರಾಜ್ಯ ಸರಕಾರ ಕೋವಿಡ್ ಹೆಸರಿನಲ್ಲಿ ನಡೆಸಿರುವ ಭ್ರಷ್ಟಾಚಾರ ವನ್ನು ಜನರಿಗೆ ತಿಳಿಸುವ ಅಭಿಯಾನ ವನ್ನು ಹಮ್ಮಿಕೊಂಡಿದೆ  ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ತಿಳಿಸಿದ್ದಾರೆ. ರಾಜ್ಯಕ್ಕೆ ಜಿ.ಎಸ್ ಟಿ ಮೂಲಕ ಬರಬೇಕಾದ ಪಾಲು ಬಂದಿಲ್ಲ, ನೆರೆ ಪರಿಹಾರ ವಾಗಿ ಕಳೆದ ವರ್ಷ ಬರಬೇಕಾದ 50 ಸಾವಿರ ಕೋಟಿ ರೂ ನಷ್ಟ ಆಗಿತ್ತು. ಕೇಂದ್ರ ಸರಕಾರದಿಂದ ಕೇವಲ 1800 ಕೋಟಿ ನೆರವು ಮಾತ್ರ ಬಂದಿದೆ. ಈ ಬಾರಿ 10 ಸಾವಿರ […]

ಆರೋಗ್ಯ ಸಚಿವ ಬಿ. ಶ್ರೀರಾಮುಲು ಗೆ ಮಾತೃ ವಿಯೋಗ

Friday, August 21st, 2020
Ramulu mother

ಬಳ್ಳಾರಿ: ಕೋವಿಡ್ ಸೋಂಕಿಗೆ ತುತ್ತಾಗಿ ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಸಂಪೂರ್ಣವಾಗಿ ಗುಣಮುಖರಾಗಿ ಬಳ್ಳಾರಿಯ ಮನೆಗೆ ಹಿಂದಿರುಗಿ ದ  ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರ ತಾಯಿ ಹೊನ್ನೂರಮ್ಮ (95) ಬುಧವಾರ ತಡರಾತ್ರಿ ವಯೋಸಹಜ ಕಾರಣದಿಂದ ನಿಧನರಾದರು. ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಸಂಪೂರ್ಣ ಗುಣಮುಖರಾದ ಬಳಿಕ ಬಳ್ಲಾರಿಯ ತಮ್ಮ ನಿವಾಸಕ್ಕೆ ತೆರಳಿದ್ದರು. ತಾಯಿಯ ನಿಧನದ ಬಗೆಗೆ ಸಚಿವ ಶ್ರೀರಾಮುಕು ಟ್ವೀಟ್ ಮಾಡಿದ್ದು “ನನ್ನ ತಾಯಿಯವರಾದ ಹೊನ್ನೂರಮ್ಮ ಅವರು ನಿನ್ನೆ ತಡ ರಾತ್ರಿ ವಯೋಸಹಜ […]

ಬಿಜೆಪಿ ಧುರೀಣ ಸಿ. ಗುರುಸ್ವಾಮಿ ಕೋವಿಡ್ ನಿಂದ ಸಾವು

Wednesday, August 19th, 2020
bjp MLA

ಚಾಮರಾಜನಗರ: ಚಾಮರಾಜನಗರ ಮಾಜಿ ಶಾಸಕ, ಬಿಜೆಪಿ ಧುರೀಣ ಸಿ. ಗುರುಸ್ವಾಮಿ (68) ಬುಧವಾರ ಬೆಳಿಗ್ಗೆ ಸಾವನ್ನಪ್ಪಿದ್ದಾರೆ. ಆಗಸ್ಟ್ 5 ರಂದು ಕೋವಿಡ್ ದೃಢಪಟ್ಟ ಹಿನ್ನೆಲೆ ಅವರು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಫಲಿಸದೆ ಬುಧವಾರ ಬೆಳಿಗ್ಗೆ ಮೃತರಾದರು ಮೃತರು  ಪತ್ನಿ, ಇಬ್ಬರು ಪುತ್ರಿಯ ರನ್ನು ಅಗಲಿದ್ದಾರೆ. ವಕೀಲರಾಗಿದ್ದ ಸಿ. ಗುರುಸ್ವಾಮಿಯವರು ಜನತಾ ಪಕ್ಷ, ಜನತಾದಳದಿಂದ ರಾಜಕೀಯ ಪ್ರವೇಶಿಸಿದ್ದು ಮೈಸೂರು ಜಿಲ್ಲಾ ಪರಿಷತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದ ಗುರುಸ್ವಾಮಿ ಹಿರಿಯ ರಾಜಕೀಯ ನಾಯಕ, ಕೇಂದ್ರದ ಮಾಜಿ ಸಚಿವ […]

ಶಾಸಕ ಜಮೀರ್ ಅಹಮದ್ ಖಾನ್ ಗೆ ಕೋವಿಡ್ ಸೋಂಕು

Tuesday, August 18th, 2020
Zameer Ahmed

ಬೆಂಗಳೂರು: ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಖಾನ್ ಗೆ ಕೋವಿಡ್ ಸೋಂಕು ದೃಢವಾಗಿದೆ. ಈ ಬಗ್ಗೆ ಸ್ವತಃ ಜಮೀರ್ ಅಹಮದ್ ಟ್ವಿಟ್ಟರ್ ನಲ್ಲಿ ಈ ವಿಚಾರವನ್ನು ಖಚಿತಪಡಿಸಿದ್ದಾರೆ. ಟ್ವೀಟ್ ಮಾಡಿರುವ ಶಾಸಕ ಜಮೀರ್ ಅಹಮದ್, ಸಣ್ಣ ಪ್ರಮಾಣದ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಂದು ಕೋವಿಡ್-19 ಸೋಂಕು ಪರೀಕ್ಷೆಗೆ ಒಳಗಾಗಿದ್ದೆ. ವರದಿಯಲ್ಲಿ ಸೋಂಕು ದೃಢಪಟ್ಟಿದೆ. ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನೊಂದಿಗೆ ಸಂಪರ್ಕವಿದ್ದವರು ಸೋಂಕು ಪರೀಕ್ಷೆಗೆ ಒಳಗಾಗಿ ಎಂದು ಮನವಿ ಮಾಡಿದ್ದಾರೆ.

ಕೊರೊನಾ ಸೋಂಕು ಆಗಸ್ಟ್ 17 : ದಕ್ಷಿಣ ಕನ್ನಡ ಜಿಲ್ಲೆ 144, ಎಂಟು ಮಂದಿ ಸಾವು, ಉಡುಪಿ ಜಿಲ್ಲೆ 270

Tuesday, August 18th, 2020
CORONA

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ ಹೊಸದಾಗಿ 144 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಮತ್ತೆ ಎಂಟು ಮಂದಿ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 9,022ಕ್ಕೆ ಏರಿಕೆಯಾಗಿದೆ. ಮಂಗಳೂರಿನ ಮೂವರು, ಬಂಟ್ವಾಳ ಮತ್ತು ಪುತ್ತೂರು ತಾಲೂಕಿನ ತಲಾ ಓರ್ವರು, ಮೂವರು ಕೊರೋನ ಸೋಂಕಿನಿಂದ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಕೊರೋನ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 277ಕ್ಕೆ ಏರಿಕೆಯಾಗಿದೆ. ದ.ಕ. ಜಿಲ್ಲೆಯಲ್ಲಿ ಕೊರೋನ ಸೋಂಕಿನ ಪ್ರಮಾಣದ ದಿನೇದಿನೇ ಹೆಚ್ಚುತ್ತಲೇ ಸಾಗಿದೆ. ಸೋಮವಾರವೂ 144 ಮಂದಿಯಲ್ಲಿ ಪಾಸಿಟಿವ್ ಕಂಡುಬಂದಿದೆ. ಸೋಂಕಿತರ ಸಂರ್ಪದಲ್ಲಿದ್ದ 21 […]

ಸರ್ಕಾರದ ಜನ ಸ್ನೇಹಿ ಯೋಜನೆಗಳನ್ನು ಪ್ರತಿ ಮನೆಗೆ ತಲುಪುವಂತೆ ಮಾಡುವುದು ನಮ್ಮಉದ್ದೇಶ : ಕೋಟ ಶ್ರೀನಿವಾಸ ಪೂಜಾರಿ

Saturday, August 15th, 2020
independence day

ಮಂಗಳೂರು : ನಗರದ ನೆಹರೂ ಮೈದಾನದಲ್ಲಿ ನಡೆದ ದ.ಕ. ಜಿಲ್ಲಾ ಮಟ್ಟದ 74ನೇ ಸ್ವಾತಂತ್ರ್ಯೋತ್ಸವ ಸಮಾರಂಭದ ಧ್ವಜಾರೋಹಣವನ್ನು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ನೆರವೇರಿಸಿ  ಸ್ವಾತಂತ್ರ್ಯೋತ್ಸದ  ಸಂದೇಶ ನೀಡಿದರು. ಗೌರವವಂದನೇ ಸ್ವೀಕರಿಸಿದ ಬಳಿಕ ಮಾತನಾಡಿದ ಉಸ್ತುವಾರಿ ಸಚಿವರು  ಸುಮಾರು 5 ಕೋಟಿ ಜನರು ಆಯುಷ್ಮಾನ್ ಭಾರತ್, ಕಿಸಾನ್‌‌‌ ಸಮ್ಮಾನ್‌‌ ಮುಂತಾದ ಸರ್ಕಾರದ ಯೋಜನೆಗಳನ್ನು ಬಳಸಿಕೊಂಡಿದ್ದಾರೆ. ಬಿ.ಎಸ್‌‌. ಯಡಿಯೂರಪ್ಪ ಅವರ ನೇತೃತ್ವದ ರಾಜ್ಯ ಸರ್ಕಾರವು ರೈತರ ಪರವಾಗಿದ್ದು, ರೈತರಿಗೆ ನೆರವಾಗುವ ನಿಟ್ಟಿನಲ್ಲಿ ನಾವು ರೈತರ ಬೆಳೆ ಸಮೀಕ್ಷೆ […]

ಖಾಸಗಿ ಆಸ್ಪತ್ರೆಗಳು ಕೋವಿಡ್‌ ನಿರ್ವಹಣೆಗೆ ಶೇ. 50ರಷ್ಟನ್ನು ಸರಕಾರಕ್ಕೆ ಬಿಟ್ಟು ಕೊಡಲೇಬೇಕು : ಶ್ರೀನಿವಾಸ ಪೂಜಾರಿ

Friday, August 7th, 2020
srinivas-poojary

ಮಂಗಳೂರು: ಖಾಸಗಿ ಆಸ್ಪತ್ರೆಗಳು ಹಾಗೂ ಮೆಡಿಕಲ್‌ ಕಾಲೇಜುಗಳು ಕೋವಿಡ್‌ ನಿರ್ವಹಣೆಗೆ ತಮ್ಮ ಹಾಸಿಗೆ ಸಾಮರ್ಥ್ಯದ ಶೇ. 50ರಷ್ಟನ್ನು ಸರಕಾರಕ್ಕೆ ಬಿಟ್ಟು ಕೊಡಲೇಬೇಕು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಎ.ಜೆ. ಆಸ್ಪತ್ರೆ ಹಾಗೂ ಶ್ರೀನಿವಾಸ ವೈದ್ಯಕೀಯ ಕಾಲೇಜುಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಸಾರ್ವಜನಿಕ ಆರೋಗ್ಯ ರಕ್ಷಣೆ ಸರಕಾರದ ಆದ್ಯತೆ. ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕಿತರ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳು ಸರಕಾರದೊಂದಿಗೆ ಸಹಕರಿಸಬೇಕು. ರಾಜ್ಯ ಸರಕಾರವು ಆಯುಷ್ಮಾನ್‌ ಯೋಜನೆಯಡಿ ಕೋವಿಡ್‌ ರೋಗಿಗಳಿಗೆ ಉಚಿತ […]