ಕೊರೊನಾ ಸೋಂಕು ಆಗಸ್ಟ್ 17 : ದಕ್ಷಿಣ ಕನ್ನಡ ಜಿಲ್ಲೆ 144, ಎಂಟು ಮಂದಿ ಸಾವು, ಉಡುಪಿ ಜಿಲ್ಲೆ 270
Tuesday, August 18th, 2020
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ ಹೊಸದಾಗಿ 144 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಮತ್ತೆ ಎಂಟು ಮಂದಿ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 9,022ಕ್ಕೆ ಏರಿಕೆಯಾಗಿದೆ. ಮಂಗಳೂರಿನ ಮೂವರು, ಬಂಟ್ವಾಳ ಮತ್ತು ಪುತ್ತೂರು ತಾಲೂಕಿನ ತಲಾ ಓರ್ವರು, ಮೂವರು ಕೊರೋನ ಸೋಂಕಿನಿಂದ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಕೊರೋನ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 277ಕ್ಕೆ ಏರಿಕೆಯಾಗಿದೆ. ದ.ಕ. ಜಿಲ್ಲೆಯಲ್ಲಿ ಕೊರೋನ ಸೋಂಕಿನ ಪ್ರಮಾಣದ ದಿನೇದಿನೇ ಹೆಚ್ಚುತ್ತಲೇ ಸಾಗಿದೆ. ಸೋಮವಾರವೂ 144 ಮಂದಿಯಲ್ಲಿ ಪಾಸಿಟಿವ್ ಕಂಡುಬಂದಿದೆ. ಸೋಂಕಿತರ ಸಂರ್ಪದಲ್ಲಿದ್ದ 21 […]