ರಾಜ್ಯದಲ್ಲಿ 5 ದಿನಗಳ ಕಾಲ ಗಣೇಶೋತ್ಸವ ಆಚರಣೆಗೆ ಅನುಮತಿ
Sunday, September 5th, 2021ಬೆಂಗಳೂರು: ರಾಜ್ಯದಲ್ಲಿ 5 ದಿನಗಳ ಕಾಲ ಗಣೇಶೋತ್ಸವ ಆಚರಣೆಗೆ ಕರ್ನಾಟಕ ಸರ್ಕಾರ ಷರತ್ತುಬದ್ಧ ಅನುಮತಿ ನೀಡಿದೆ. ರಾಜ್ಯದಾದ್ಯಂತ ಐದು ದಿನಗಳ ಕಾಲ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಷರತ್ತುಬದ್ಧ ಅನುಮತಿ ನೀಡಲಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಭಾನುವಾರ ನಡೆದ ಕೋವಿಡ್ ನಿರ್ವಹಣೆಗೆ ಸಂಬಂಧಿಸಿದ ಉನ್ನತಮಟ್ಟದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಪೊಲೀಸ್ ಇಲಾಖೆ ಹಾಗೂ ಸ್ಥಳೀಯ ಆಡಳಿತ ಸಂಸ್ಥೆಗಳು ವಿಧಿಸುವ ಷರತ್ತುಗಳನ್ನು ಪಾಲಿಸಿಕೊಂಡು ಗಣೇಶೋತ್ಸವ ಆಚರಣೆಗೆ ಅವಕಾಶ ನೀಡಲು ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಮೆರವಣಿಗೆ ಮತ್ತು ಸಾಂಸ್ಕೃತಿಕ […]