ಕೋವಿಡ್ ಪ್ರಕರಣಗಳು ಅಗೋಸ್ಟ್ 24 : ದ.ಕ. 273, 4 ಸಾವು, ಉಡುಪಿ 128, 1 ಸಾವು

Tuesday, August 24th, 2021
corona

ಮಂಗಳೂರು : ದ.ಕ. ಜಿಲ್ಲೆಯಲ್ಲಿ ಮಂಗಳವಾರ 273 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ನಾಲ್ವರು ಸಾವಿಗೀಡಾಗಿದ್ದಾರೆ. 265 ಮಂದಿ ಗುಣಮುಖರಾಗಿದ್ದಾರೆ. ಉಡುಪಿ ಜಿಲ್ಲೆಯಲ್ಲಿ 128 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ. ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 1,08,466 ಕೊರೋನ ಪಾಸಿಟಿವ್ ಪ್ರಕರಣಗಳ ಪೈಕಿ ಈಗಾಗಲೇ 1,04,034 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 1,542 ಮಂದಿ ಸಾವಿಗೀಡಾಗಿದ್ದು, ಪ್ರಸ್ತುತ 2,890 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಟ್ಟು 85,674 ಮಾಸ್ಕ್ ಉಲ್ಲಂಘನೆ ಪ್ರಕರಣಗಳು ಇದುವರೆಗೆ ದಾಖಲಾಗಿದ್ದು, ಒಟ್ಟು 1,04,21,720 ರೂ. ದಂಡ ವಸೂಲಿ ಮಾಡಲಾಗಿದೆ. ಉಡುಪಿ ಜಿಲ್ಲೆಯಲ್ಲಿ […]

ಕೊರೊನಾ ಹೆಚ್ಚಳ – ಗಡಿಭಾಗಕ್ಕೆ ಹೊಂದಿಕೊಂಡಿರುವ ಎಲ್ಲಾ ಮದ್ಯದಂಗಡಿಗಳನ್ನು ಬಂದ್

Tuesday, August 3rd, 2021
wine Shop

ಮಂಗಳೂರು : ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಸರ್ಕಾರದ ನಿರ್ದೇಶನದಂತೆ ಜಿಲ್ಲಾಡಳಿತ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ, ಕಟ್ಟುನಿಟ್ಟಿನ ನಿಬರ್ಂಧಗಳ ನಂತರವು ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಮತ್ತೆ ಏರಿಕೆ ಆಗಿರುವ ಹಿನ್ನಲೆಯಲ್ಲಿ ಅದರ ಕಣ್ಗಾವಲು, ನಿಯಂತ್ರಣ ಮತ್ತು ಜಾಗೃತಿಗೆ ಸಂಬಂಧಿಸಿದಂತೆ ಕೇರಳದಿಂದ ರಾಜ್ಯಕ್ಕೆ ಆಗಮಿಸುವ ಪ್ರಯಾಣಿಕರಿಗೆ ವಿಶೇಷ ಸರ್ವೇಕ್ಷಣೆಯನ್ನು ನಿರ್ದೇಶಿಸಲಾಗಿದೆ. ಕಾಸರಗೋಡು ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿದ್ದು, ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಸಾರ್ವಜನಿಕರು ಮದ್ಯ ಸೇವನೆಗೆ ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಭಾಗಗಳ ಮದ್ಯದಂಗಡಿಗಳನ್ನೇ […]

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ 90 ಹೊಸ ಕೋವಿಡ್ 19 ಪ್ರಕರಣ ಪತ್ತೆ

Thursday, July 2nd, 2020
DK-corona

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ 90 ಹೊಸ ಕೋವಿಡ್ 19 ಪ್ರಕರಣಗಳು ದೃಢಪಟ್ಟಿವೆ ಇದರೊಂದಿಗೆ ಜಿಲ್ಲೆಯಲ್ಲಿನ ಸೋಂಕಿತರ ಸಂಖ್ಯೆ 915 ಕ್ಕೆ ಏರಿಕೆಯಾಗಿದೆ. ಸೋಂಕಿತರಲ್ಲಿ 15 ಮಂದಿ ಕುವೈಟ್, ಸೌದಿ, ಮತ್ತು ದುಬಾಯಿಯಿಂದ ಆಗಮಿಸಿದವರಾಗಿದ್ದರೆ, 19 ಮಂದಿ ILI ಪ್ರಕರಣದವರಾಗಿದ್ದಾರೆ, 8 ಮಂದಿ SARI ಪ್ರಕರಣದವರಾಗಿದ್ದಾರೆ, 31 ಮಂದಿ ಪ್ರಾಥಮಿಕ ಸಂಪರ್ಕ ಹೊಂದಿದವರಾಗಿದ್ದಾರೆ. ದಕ್ಷಿಣ ಕನ್ನಡ ಉಳ್ಳಾಲ ಪರಿಸರದಲ್ಲಿ ಇಂದು ಒಂದೇ ದಿನ 28 ಹೊಸ ಪ್ರಕರಣಗಳು ದೃಢಪಟ್ಟಿತ್ತು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ ಸಂಜೆಯ ವೇಳೆಗೆ 24 ಹೊಸ ಕೋವಿಡ್ ಪ್ರಕರಣ ದೃಢ

Thursday, May 28th, 2020
corona-virus

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ ಸಂಜೆಯ ಆರೋಗ್ಯ ಇಲಾಖೆ ಯ ವರದಿಯಲ್ಲಿ ಮತ್ತೆ 18 ಜನರಿಗೆ ಕೋವಿಡ್-19 ಸೋಂಕು ತಗಲಿರುವುದು ದೃಢವಾಗಿದೆ. ಇದರಿಂದಾಗಿ ಜಿಲ್ಲೆಯಲ್ಲಿ ಒಟ್ಟು 24 ಜನರಿಗೆ ಕೋವಿಡ್-19 ಸೋಂಕು ದೃಢವಾಗಿದೆ. ಜಿಲ್ಲೆಯ ಈಗಿನ 18 ಸೇರಿದಂತೆ ಇಂದಿನ ಎಲ್ಲಾ 24 ಮಂದಿ ಸೋಂಕಿತರು ಮಹಾರಾಷ್ಟ್ರ ರಾಜ್ಯದಿಂದ ಬಂದು ಜಿಲ್ಲೆಯಲ್ಲಿ ಕ್ವಾರಂಟೈನ್ ನಲ್ಲಿ ಇರುವವರು ಆಗಿದ್ದಾರೆ. ಇವರಿಗೆ ನಿಗಧಿತ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ ಶತಕದ ಅಂಚಿಗೆ ತಲುಪಿದೆ. ಜಿಲ್ಲೆಯಲ್ಲಿ ಒಟ್ಟು 97 […]