10 ರಿಂದ ಮನೆ ಮನೆಗೆ ಲಸಿಕಾಮಿತ್ರ: ನೂತನ ಲಸಿಕಾ ಅಭಿಯಾನ

Monday, November 8th, 2021
Vacination

ಮಂಗಳೂರು : ಈಗಾಗಲೇ ಪ್ರಥಮ ಡೋಸ್ ಪಡೆದು, ಎರಡನೇ ಡೋಸ್‌ಗೆ ಬಾಕಿ ಉಳಿದಿರುವ ಫಲಾನುಭವಿಗಳನ್ನು ಗುರುತಿಸಿ, ಅವರಿಗೆ ಕೋವಿಡ್ ಲಸಿಕೆ ನೀಡುವ ಮನೆಮನೆಗೆ ಲಸಿಕಾ ಮಿತ್ರ ವಿನೂತನ ಅಭಿಯಾನಕ್ಕೆ ಇದೇ ನವೆಂಬರ್  10 ರಂದು ಚಾಲನೆ ನೀಡಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕಿಶೋರ್ ಕುಮಾರ್ ತಿಳಿಸಿದರು. ಅವರು ಮಂಗಳೂರು ಮಹಾನಗರ ಪಾಲಿಕೆಯ ಕೋವಿಡ್ ವಾರ್ ರೂಂನಲ್ಲಿ ನ.8ರ ಸೋಮವಾರ ಸಂಜೆ ಹಮ್ಮಿಕೊಳ್ಳಲಾಗಿದ್ದ ಮನೆ ಮನೆಗೆ ಲಸಿಕಾ ಅಭಿಯಾನದ ಪೂರ್ವಭಾವಿ ಸಿದ್ದತಾ ಸಭೆಯಲ್ಲಿ […]

ನರೇಂದ್ರ ಮೋದಿ ಜನ್ಮದಿನದಂದು ದೇಶಾದ್ಯಂತ ಎರಡು ಕೋಟಿಗೂ ಹೆಚ್ಚು ಮಂದಿಗೆ ಕೋವಿಡ್ ಲಸಿಕೆ ವಿತರಣೆ

Friday, September 17th, 2021
Narendra Modi

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನವಾದ ಶುಕ್ರವಾರ ದೇಶಾದ್ಯಂತ ದಾಖಲೆಯ ಎರಡು ಕೋಟಿಗೂ ಹೆಚ್ಚು ಮಂದಿಗೆ ಕೋವಿಡ್ ಲಸಿಕೆ ನೀಡಲಾಗಿದೆ.  ಇದು ದೇಶದ  ಕೋವಿಡ್ ಲಸಿಕೆ ಅಭಿಯಾನದಲ್ಲಿ  ಹೊಸ ಮೈಲುಗಲ್ಲು  ಎನ್ನಲಾಗಿದೆ. “ಪ್ರಧಾನಿ ಮೋದಿಯವರ ಜನ್ಮದಿನದಂದು ದೇಶಾದ್ಯಂತ ಎರಡು ಕೋಟಿ ಡೋಸ್ ಲಸಿಕೆ ನೀಡುವ ಗುರಿ ಹೊಂದಲಾಗಿತ್ತು ಎಂದು ಕೇಂದ್ರ ಸರ್ಕಾರದ ಉನ್ನತ ಮೂಲಗಳು ಈ ಮುಂಚೆ ತಿಳಿಸಿದ್ದವು. ಆರೋಗ್ಯ ಕಾರ್ಯಕರ್ತರು ಮತ್ತು ದೇಶದ ಜನರ ಪರವಾಗಿ ಪ್ರಧಾನಿಗೆ ಇದು ಉಡುಗೊರೆ. ಇಂದು ಪ್ರಧಾನಿ ನರೇಂದ್ರ […]

ಮಕ್ಕಳ ಸುರಕ್ಷತೆಗಾಗಿ ಶಾಲಾ ಸಿಬ್ಬಂದಿಗೆ ಕೋವಿಡ್ ಲಸಿಕೆ : ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್

Thursday, July 22nd, 2021
Dr Sudhakar

ಬೆಂಗಳೂರು : ಯಾವುದೋ ಒಂದು ದಿನ ಶಾಲೆಗಳನ್ನು ಆರಂಭಿಸಬೇಕಾಗುತ್ತದೆ. ಇದಕ್ಕೆ ಸಿದ್ಧತೆಯಾಗಿ ಶಾಲೆಗಳ ಎಲ್ಲ ಸಿಬ್ಬಂದಿಗೆ ಆದ್ಯತೆಯಲ್ಲಿ ಕೋವಿಡ್ ಲಸಿಕೆ ನೀಡಲಾಗುತ್ತದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಶಾಲೆಗಳನ್ನು ಯಾವುದೋ ಒಂದು ದಿನ ಆರಂಭಿಸಲೇಬೇಕು. ಮಕ್ಕಳು ಯಾವಾಗಲೂ ಆನ್ ಲೈನ್ ತರಗತಿಯ ಮುಂದೆ ಕುಳಿತುಕೊಳ್ಳಲು ಸಾಧ್ಯವಿಲ್ಲ. ಆನ್ ಲೈನ್ ಮಕ್ಕಳ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುವ ಅಪಾಯವಿದೆ. ಆದ್ದರಿಂದ ಎಲ್ಲವನ್ನೂ ಅಳೆದು ತೂಗಿ ನಿರ್ಧಾರ ಕೈಗೊಳ್ಳಲಾಗುತ್ತದೆ. […]

ತಿಂಗಳಿಗೆ ಕನಿಷ್ಠ 1.5 ಕೋಟಿ ಡೋಸ್ ಲಸಿಕೆ ಒದಗಿಸಲು ಪ್ರಧಾನಿಗೆ ಮನವಿ

Friday, July 16th, 2021
CM Video Conference

ಬೆಂಗಳೂರು : ತಿಂಗಳಿಗೆ ಕನಿಷ್ಠ 1.5 ಕೋಟಿ ಡೋಸ್ ಕೋವಿಡ್ ಲಸಿಕೆಗಳನ್ನು ಒದಗಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದರು. ಅವರು ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕೋವಿಡ್ 19 ಪರಿಸ್ಥಿತಿ ಕುರಿತಂತೆ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ನಡೆಸಿದ ವಿಡಿಯೋ ಕಾನ್ಫರೆನ್ಸಿನಲ್ಲಿ ಭಾಗವಹಿಸಿ ಮಾತನಾಡಿದರು. ಪ್ರಧಾನ ಮಂತ್ರಿಯವರು ಮಾತನಾಡಿ, ಯುರೋಪ್ ಮತ್ತಿತರ ರಾಷ್ಟ್ರಗಳಲ್ಲಿ ಪ್ರಕರಣಗಳ ಸಂಖ್ಯೆ ತೀವ್ರವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ವಹಿಸಬೇಕು.ಮೂರನೇ ಅಲೆಗೆ ಪೂರ್ವಸಿದ್ಧತೆ ಮಾಡಿಕೊಳ್ಳಬೇಕು. […]

1.5 ಕೋಟಿ ಕೋವಿಡ್ ಲಸಿಕೆಗೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮನವಿ

Wednesday, July 7th, 2021
Sudhakar

  ನವದೆಹಲಿ : ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಅವರನ್ನು ಭೇಟಿ ಮಾಡಿದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ರಾಜ್ಯಕ್ಕೆ ತಿಂಗಳಿಗೆ 1.5 ಕೋಟಿ ಡೋಸ್ ಕೋವಿಡ್ ಲಸಿಕೆ ಪೂರೈಸುವಂತೆ ಮನವಿ ಮಾಡಿದ್ದಾರೆ. ಇಂದು ಕೇಂದ್ರದ ಆರೋಗ್ಯ ಸಚಿವರನ್ನು ಭೇಟಿ ಮಾಡಿದ ಸಚಿವ ಡಾ.ಕೆ.ಸುಧಾಕರ್, ರಾಜ್ಯದ ಆರೋಗ್ಯ ಕ್ಷೇತ್ರದ ಅಭಿವೃದ್ಧಿ ಕ್ರಮಗಳ ಬಗ್ಗೆ ಚರ್ಚೆ ನಡೆಸಿದರು. ರಾಜ್ಯದಲ್ಲಿ ಕೋವಿಡ್ ಲಸಿಕಾಕರಣ ವೇಗವಾಗಿ ನಡೆಯುತ್ತಿದ್ದು, ಇದಕ್ಕಾಗಿ ಕೇಂದ್ರದಿಂದ ಪ್ರತಿ ತಿಂಗಳಿಗೆ ಪೂರೈಸುವ ಲಸಿಕೆ ಪ್ರಮಾಣವನ್ನು 1.5 […]

ಹೆಚ್ಚಿನ ಕೋವಿಡ್ ಲಸಿಕೆ ಪೂರೈಕೆಗೆ ಕೇಂದ್ರಕ್ಕೆ ಮನವಿ:ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್

Tuesday, June 29th, 2021
Dr.Sudhakar

ಬೆಂಗಳೂರು/ಮೈಸೂರು : ಕೇಂದ್ರ ಆರೋಗ್ಯ ಸಚಿವರೊಂದಿಗೆ ಚರ್ಚಿಸಿ ರಾಜ್ಯಕ್ಕೆ ಹೆಚ್ಚು ಕೋವಿಡ್ ಲಸಿಕೆ ಪೂರೈಸುವಂತೆ ಮನವಿ ಮಾಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಸೋಮವಾರ ಅಥವಾ ಮಂಗಳವಾರ ದೆಹಲಿಗೆ ಪ್ರವಾಸ ಹೋಗಲಿದ್ದು, ಆ ವೇಳೆ ಕೋವಿಡ್ ಲಸಿಕೆ ಪೂರೈಕೆ ಬಗ್ಗೆ ಚರ್ಚಿಸಲಾಗುವುದು. ಕೇಂದ್ರ ಆರೋಗ್ಯ ಸಚಿವರು, ಹಿರಿಯ ಅಧಿಕಾರಿಗಳೊಂದಿಗೆ ಮಾತನಾಡಿ, ರಾಜ್ಯಕ್ಕೆ ಹೆಚ್ಚು ಲಸಿಕೆ ಪೂರೈಸಲು ಮನವಿ ಮಾಡಲಾಗುವುದು. ಆದರೆ ರಾಜ್ಯದಲ್ಲಿ ಲಸಿಕೆಯೇ ಇಲ್ಲ ಎಂದು ಎಲ್ಲೂ […]

ಈ ವರ್ಷದೊಳಗೆ ದೇಶದ ಎಲ್ಲ ನಾಗರಿಕರಿಗೂ ಕೋವಿಡ್ ಲಸಿಕೆ – ಸದಾನಂದ ಗೌಡ

Friday, June 4th, 2021
DVS

  ಬೆಂಗಳೂರು :  ಕಪ್ಪುಶಿಲಿಂದ್ರ ರೋಗದ ಚಿಕಿತ್ಸೆಗಾಗಿ ಕೇಂದ್ರ ಸರ್ಕಾರವು ಬೇರೆ ಬೇರೆ ರಾಜ್ಯಗಳಿಗೆ ಇಂದು ಒಟ್ಟು 1.21 ಲಕ್ಷ ವಯಲ್ಸ್ ಎಂಫೊಟೆರಿಸಿನ್-ಬಿ ಹಂಚಿಕೆ ಮಾಡಿದ್ದು ಕರ್ನಾಟಕಕ್ಕೆ 9750 ವಯಲ್ಸ್ ಒದಗಿಸಲಾಗಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ ವಿ ಸದಾನಂದಗೌಡ ಅವರು ತಿಳಿಸಿದ್ದಾರೆ. ಇಂದು ಇಲ್ಲಿ ಹೇಳಿಕೆಯೊಂದರಲ್ಲಿ ಈ ವಿಷಯ ತಿಳಿಸಿದ ಕೇಂದ್ರ ಸಚಿವರು – ಸ್ವದೇಶಿಯವಾಗಿಯೂ ಈ ಚುಚ್ಚುಮದ್ದಿನ ಉತ್ಪಾದನೆ ಹೆಚ್ಚಾಗುತ್ತಿದೆ, ಅದೇ ರೀತಿ ಆಮದಿನ ಪ್ರಮಾಣವನ್ನು ಕೂಡಾ ಹೆಚ್ಚಿಸಲಾಗುತ್ತಿದೆ. ಇನ್ನು ಕೆಲವೇ […]

ದ.ಕ.ಜಿಲ್ಲೆಯಲ್ಲಿ ಮಂಗಳವಾರ 486 ಕೊರೋನ ಪಾಸಿಟಿವ್ ಪ್ರಕರಣಗಳು, ಮೂವರು ಬಲಿ

Wednesday, April 28th, 2021
Corona

ಮಂಗಳೂರು : ದ.ಕ.ಜಿಲ್ಲೆಯಲ್ಲಿ ಮಂಗಳವಾರ 486 ಕೊರೋನ ಪಾಸಿಟಿವ್ ಪ್ರಕರಣಗಳು ಕಂಡು ಬಂದಿದ್ದು, ಇದರೊಂದಿಗೆ 42,065 ಪಾಸಿಟಿವ್ ಪ್ರಕರಣಗಳು ಕಂಡು ಬಂದಂತಾಗಿದೆ. ಮಂಗಳವಾರ 225 ಮಂದಿ ಚಿಕಿತ್ಸೆ ಪಡೆದು ಮನೆಗೆ ಮರಳುವುದರೊಂದಿಗೆ ಈವರೆಗೆ 37,024 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಗೊಂಡಿದ್ದಾರೆ. ಮಂಗಳವಾರ  ಕೊರೋನಕ್ಕೆ ಮೂವರು ಬಲಿಯಾಗಿದ್ದಾರೆ. ಇದರಲ್ಲಿ ಮಂಗಳೂರಿನ ಇಬ್ಬರು ಮತ್ತು ಸುಳ್ಯ ತಾಲೂಕಿನ ಒಬ್ಬರು ಸೇರಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ ಕೋವಿಡ್‌ಗೆ ಬಲಿಯಾದವರ ಸಂಖ್ಯೆ 751ಕ್ಕೇರಿದೆ. ಕೇರಳದ ಮಲಪ್ಪುರಂ ನಿವಾಸಿ ಗರ್ಭಿಣಿ ವೈದ್ಯೆರೊಬ್ಬರು ಚಿಕಿತ್ಸೆಗಾಗಿ ಮಂಗಳೂರಿನ […]