ಪಿಯುಸಿ ಉತ್ತೀರ್ಣರಾದ ಎಲ್ಲರಿಗೂ ಪದವಿಗೆ ಅವಕಾಶ : ಸುರೇಶ್ ಕುಮಾರ್

Tuesday, July 20th, 2021
Suresh Kumar

ಬೆಂಗಳೂರು: ಕೋವಿಡ್ ಸಾಂಕ್ರಾಮಿಕ ಪ್ರಸರಣ ಹಿನ್ನೆಲೆಯಲ್ಲಿ 2020-21ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರದ್ದುಗೊಳಿಸಿದ್ದರಿಂದ ಅವರ ಹಿಂದಿನ ಶೈಕ್ಷಣಿಕ ಸಾಧನೆಗಳನ್ನು ಆಧರಿಸಿ ಫಲಿತಾಂಶ ಘೋಷಿಸಿ ಎಲ್ಲರನ್ನು ಉತ್ತೀರ್ಣಗೊಳಿಸಿರುವುದರಿಂದ ಎಲ್ಲರಿಗೂ ಪದವಿ ತರಗತಿಗಳಲ್ಲಿ ಸೀಟುಗಳನ್ನು ದೊರೆಯುವ ಅವಕಾಶ ಕಲ್ಪಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಭರವಸೆ ನೀಡಿದ್ದಾರೆ. ಮಂಗಳವಾರ ಪಿಯುಸಿ ಫಲಿತಾಂಶಗಳನ್ನು ಸುದ್ದಿಗೋಷ್ಠಿಯಲ್ಲಿ ಪ್ರಕಟಿಸಿ ಮಾತನಾಡಿದ ಅವರು, ಪದವಿ ಕಾಲೇಜುಗಳಿಗೆ ಸೇರಲಿಚ್ಛಿಸುವ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು. […]

ಕೋವಿಡ್ – 19 ರೋಗಿಗಳ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳು ನೋಂದಣಿ ಮಾಡಲು ಮನವಿ

Tuesday, May 25th, 2021
private Hospital

ಬೆಂಗಳೂರು : ಕೋವಿಡ್ ಸಾಂಕ್ರಾಮಿಕ ರೋಗ ದಿನ ದಿನಕ್ಕೂ ಉಲ್ಬಣಗೊಳ್ಳುತ್ತಿದೆ. ಇಂತಹ ಸಂಕಷ್ಟದ ಸಮಯದಲ್ಲಿ ಕೋವಿಡ್ ರೋಗಿಗಳಿಗೆ ಸೂಕ್ತ ಚಿಕಿತ್ಸೆ ಒದಗಿಸುವುದು ಆರೋಗ್ಯ ಸೇವಾಕರ್ತರ ಬಹು ಮುಖ್ಯ ಹೊಣೆಗಾರಿಕೆಯಾಗಿರುತ್ತದೆ. ಸಾರ್ವಜನಿಕ ಆಸ್ಪತ್ರೆಗಳು ಹಾಗೂ ಖಾಸಗಿ ಆಸ್ಪತ್ರೆಗಳು ಜೊತೆಗೂಡಿ ಈ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಬೇಕಾಗಿದೆ. ಕೋವಿಡ್ – 19ರಿಂದ ಬಳಲುತ್ತಿರುವ ರೋಗಿಗಳಿಗೆ ಅಗತ್ಯ ಚಿಕಿತ್ಸೆ ಒದಗಿಸುವುದು ಅತ್ಯಂತ ಅವಶ್ಯಕವಾಗಿದೆ. ರಾಜ್ಯದಲ್ಲಿರುವ ಎಲ್ಲಾ ಖಾಸಗಿ ಆಸ್ಪತ್ರೆಗಳು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ನೊಂದಿಗೆ ನೋಂದಾವಣಿ ಮಾಡಿಕೊಳ್ಳಬೇಕೆಂದು ಈ ಮೂಲಕ ಎಲ್ಲಾ […]