ಕೋವಿಡ್ ಸೋಂಕು ತಡೆಯುವಲ್ಲಿ ಏರ್ ಪೋಟ್೯, ಎನ್ ಎಂ ಪಿ ಟಿ ಪಾತ್ರ ಅತಿ ಮುಖ್ಯ: ಡಿಸಿ ಡಾ. ರಾಜೇಂದ್ರ ಕೆ.ವಿ

Tuesday, November 30th, 2021
DC

ಮಂಗಳೂರು  : ಜಿಲ್ಲೆಯಲ್ಲಿ  ಕೋವಿಡ್ ಸೋಂಕು ಹಾಗೂ ಇತ್ತೀಚೆಗೆ ಹೊರ ರಾಷ್ಟ್ರಗಳಲ್ಲಿ ವರದಿಯಾಗುತ್ತಿರುವ ಅದರ ರೂಪಾಂತರಿಯನ್ನು  ತಡೆಗಟ್ಟುವಲ್ಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ನವ ಮಂಗಳೂರು ಬಂದರು ಟ್ರಸ್ಟ್ ನ ಪಾತ್ರ ಅತಿ ಮುಖ್ಯವಾಗಿದ್ದು,  ಕೋವಿಡ್ ಸೋಂಕಿತರ  ಪತ್ತೆಗಾಗಿ ಅತ್ಯಂತ ಎಚ್ಚರಿಕೆಯ ಕ್ರಮಗಳನ್ನು ವಹಿಸುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಅವರು ಸಂಬಂಧಿಸಿದವರಿಗೆ ಸೂಚಿಸಿದರು. ಅವರು, ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನ.30ರ  ಮಂಗಳವಾರ ಜಿಲ್ಲೆಯ ಚೆಕ್ ಪೋಸ್ಟ್ ಗಳಲ್ಲಿ ಅಂತರಾಷ್ಟ್ರೀಯ ಹಾಗೂ ಹೊರ ರಾಜ್ಯಗಳಿಂದ ಆಗಮಿಸುವ […]

ಜಿಲ್ಲಾಡಳಿತದ ಆದೇಶಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ವರ್ತಕರಿಗೆ ಜಿಲ್ಲಾಧಿಕಾರಿ ಸೂಚನೆ

Friday, September 3rd, 2021
KV Rajendra

ಮಂಗಳೂರು :  ಕೋವಿಡ್ ಸೋಂಕು ಹರಡುವಿಕೆಯನ್ನು ನಿಯಂತ್ರಿಸಲು ಜಿಲ್ಲಾಡಳಿತ ಕಾಲಕಾಲಕ್ಕೆ ಹೊರಡಿಸುವ ಆದೇಶಗಳನ್ನು ಜಿಲ್ಲೆಯ ವರ್ತಕರು ಪಾಲಿಸಬೇಕು, ಉಲ್ಲಂಘಿಸಿದ್ದಲ್ಲಿ, ಸೂಕ್ತ ಕ್ರಮ ಜರುಗಿಸುವ ಬಗ್ಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು. ಅವರು ಸೆಪ್ಟೆಂಬರ್ 3ರ ಶುಕ್ರವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಕೋವಿಡ್-19 ನಿಯಂತ್ರಣ ಕುರಿತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕಿಶೋರ್, ಜಿಲ್ಲೆಯ ಎಲ್ಲಾ ತಾಲೂಕುಗಳ ವೈದ್ಯಾಧಿಕಾರಿಗಳು, ಗ್ರಾಮ ಪಂಚಾಯತ್ […]

ಕೋವಿಡ್ ಸೋಂಕು ಹೆಚ್ಚಿರುವ ಗಡಿ ಜಿಲ್ಲೆಗಳಿಗೆ ಭೇಟಿ

Monday, August 9th, 2021
Basavaraja Bommai

ಬೆಂಗಳೂರು: ಸೋಂಕು ಹೆಚ್ಚಾಗಿರುವ ರಾಜ್ಯದ ಎಲ್ಲಾ ಗಡಿ ಜಿಲ್ಲೆಗಳಿಗೆ ಭೇಟಿ ನೀಡಲು ನಿರ್ಧರಿಸಿರುವುದಾಗಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ತಿಳಿಸಿದರು. ಬೆಂಗಳೂರಿನಲ್ಲಿ ಇಂದು ತಮ್ಮ ನಿವಾಸದ ಬಳಿ ಮೈಸೂರಿಗೆ ತೆರಳುವ ಮುನ್ನ ಸುದ್ದಿಗಾರರ ಜತೆ ಮಾತನಾಡಿ ಈ ವಿಷಯ ತಿಳಿಸಿದರು. ನಾನು ಇಂದು ಮೈಸೂರಿಗೆ ಭೇಟಿ ನೀಡುತ್ತಿದ್ದೇನೆ. ಮೈಸೂರು ಜಿಲ್ಲೆಯಲ್ಲಿನ ಕೋವಿಡ್ ಪರಿಸ್ಥಿತಿ ಬಗ್ಗೆ ಅಧಿಕಾರಿಗಳ ಜತೆ ಸಭೆ ನಡೆಸುತ್ತೇನೆ. ಕೋವಿಡ್ ನಿಯಂತ್ರಣ ಕ್ರಮಗಳನ್ನು ಪರಿಶೀಲನೆ ನಡೆಸುತ್ತೇನೆ. ಕೋವಿಡ್ ಸೋಂಕು ಹೆಚ್ಚಾಗಿರುವ ಎಲ್ಲಾ ಗಡಿ ಜಿಲ್ಲೆಗಳಿಗೆ ಭೇಟಿ ನೀಡಲು […]

ಕೋವಿಡ್ ಸೋಂಕು ನಿಯಂತ್ರಿಸಲು ಕಠಿಣಾತಿ ಕಠಿಣ ಕ್ರಮಕೈಗೊಳ್ಳಲು ಮುಖ್ಯಮಂತ್ರಿಗಳ ಸೂಚನೆ

Sunday, August 1st, 2021
Basavaraaja Bommai

ಮಂಗಳೂರು : ಕೋವಿಡ್-19 ಸೋಂಕು ನಿರ್ವಹಣೆಯಲ್ಲಿ ಜಿಲ್ಲಾಡಳಿತ ಕೈಗೊಂಡ ಉಪಯುಕ್ತ ಕ್ರಮಗಳಿಗೆ ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಜಿಲ್ಲಾಧಿಕಾರಿ ಡಾ. ರಾಜೇಂದ್ರ.ಕೆ.ವಿ ಅವರನ್ನು ಅಭಿನಂದಿಸಿದರು. ಕೋವಿಡ್‍ಗೆ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಅತ್ಯಂತ ಅಗತ್ಯವಿರುವ ಪ್ರಾಣವಾಯು ವೈದ್ಯಕೀಯ ಆಮ್ಲಜನಕದ 17 ಘಟಕಗಳು ಜಿಲ್ಲೆಯಲ್ಲಿ ಅನುಷ್ಠಾನವಾಗುತ್ತಿದ್ದು, ಅವುಗಳಲ್ಲಿ ಈಗಾಗಲೇ 8 ಆಮ್ಲಜನಕ ಘಟಕಗಳ ಅನುಷ್ಠಾನ ಕಾರ್ಯ ಪೂರ್ಣಗೊಂಡಿದೆ, ಉಳಿದ ಘಟಕಗಳನ್ನು ಮುಂದಿನ 2 ವಾರಗಳಲ್ಲಿ ಪೂರ್ತಿಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿಯವರಿಂದ ಮಾಹಿತಿ ಪಡೆದ ಮುಖ್ಯಮಂತ್ರಿಗಳು ಡಿಸಿ ಡಾ.ರಾಜೇಂದ್ರ ಅವರ ಕೆಲಸಕ್ಕೆ ಅತೀವ […]

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 17 ಗ್ರಾಮ ಪಂಚಾಯತ್ ಗಳು ಸೀಲ್ ಡೌನ್

Sunday, June 13th, 2021
KV Rajendra Kumar

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ  ಪ್ರಮಾಣ ಹೆಚ್ಚಳವಾಗಿರುವ ಹದಿನೇಳು ಗ್ರಾಮಗಳನ್ನು ಸಂಪೂರ್ಣ ಸೀಲ್ ಡೌನ್ ಗೊಳಿಸಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ. ಮಂಗಳೂರು ತಾಲೂಕಿನ ಕೊಣಾಜೆ ಮತ್ತು ನೀರುಮಾರ್ಗ, ಬೆಳ್ತಂಗಡಿ ತಾಲೂಕಿನ ನಾರಾವಿ, ಕೊಯ್ಯೂರು, ಮಿತ್ತಬಾಗಿಲು, ಮಾಲಾಡಿ, ನೆರಿಯ, ಲಾಯಿಲ, ಉಜಿರೆ ಮತ್ತು ಚಾರ್ಮಾಡಿ, ಸುಳ್ಯ ತಾಲೂಕಿನ ಐವರ್ನಾಡು, ಅಮರ ಮುಡ್ನೂರು, ಕೊಲ್ಲಮೊಗರು, ಗುತ್ತಿಗಾರು, ಅರಂತೋಡು, ಕಡಬ ತಾಲೂಕಿನ ಸುಬ್ರಮಣ್ಯ ಹಾಗೂ ಸವಣೂರು ಸೀಲ್ ಡೌನ್ ಆಗಲಿದೆ. ದ.ಕ. ಜಿಲ್ಲೆಯ 17 ಗ್ರಾಪಂ.ಗಳು  […]

ಸಂಭವನೀಯ ಕೋವಿಡ್ ಮೂರನೇ ಅಲೆಯನ್ನು ಎದುರಿಸಲು ಅಗತ್ಯದ ಸಿದ್ದತೆಗೆ ಈಗಿನಿಂದಲೇ ಕ್ರಮ ಜರುಗಿಸಿ

Monday, June 7th, 2021
Gadaga

ಗದಗ : ಜಿಲ್ಲೆಯಲ್ಲಿ ಕೋವಿಡ್ ಸೋಂಕು ದಿನದಿಂದ ದಿನಕ್ಕೆ ನಿಯಂತ್ರಣಕ್ಕೆ ಬರುತ್ತಿರುವದು ಸಮಾಧಾನಕರವಾದ ಸಂಗತಿಯಾಗಿದೆ. ತಜ್ಞರ ವರದಿಯಂತೆ ಮುಂದೆ ಬರಬಹುದಾದ ಸಂಭವನೀಯ ಮೂರನೇ ಅಲೆಯನ್ನು ಎದುರಿಸಲು ಅಧಿಕಾರಿಗಳು ಮೈಮರೆಯದೆ ಬೇಕಾದ ಅಗತ್ಯದ ಸಿದ್ಧತೆಗಳನ್ನು ಈಗಿನಿಂದಲೇ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ಅವರು ಸೂಚಿಸಿದರು. ಜಿಲ್ಲಾಧಿಕಾರಿಗಳ ವಿಡಿಯೋ ಸಭಾಂಗಣದಲ್ಲಿ ಜರುಗಿದ ಕೋವಿಡ್ ಸೋಂಕು ನಿಯಂತ್ರಣ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ತಜ್ಞರ ವರದಿಯಂತೆ ಸಂಭವನೀಯ ಮೂರನೇ ಅಲೆಯು ಮಕ್ಕಳ ಮೇಲೆ ಹೆಚ್ಚು ಪ್ರಭಾವ ಬೀರುವ ಸಂಭವವಿದ್ದು […]

ಜೂನ್ 14ರ ವರೆಗೆ ರಾಜ್ಯ ಸರ್ಕಾರದ ಮಾರ್ಗಸೂಚಿಗಳು ಜಾರಿ

Sunday, June 6th, 2021
Sundaresh Babu

ಗದಗ : ರಾಜ್ಯದಲ್ಲಿ ಕೋವಿಡ್ ಸೋಂಕು ಹರಡುವುದನ್ನು ತಡೆಗಟ್ಟಲು ಸರ್ಕಾರ ಪ್ರಕಟಿಸಿದ ಮಾರ್ಗಸೂಚಿಗಳು ಜೂನ್ 7ರ ಬೆಳಗ್ಗೆ 6 ಗಂಟೆಯಿಂದ ಜೂನ್ 14 ರ ಬೆಳಿಗ್ಗೆ 6 ಗಂಟೆಯವರೆಗೆ ಜಾರಿಯಲ್ಲಿರಲಿವೆ. ಈ ಅವಧಿಯಲ್ಲಿ ಯಾವುದಕ್ಕೆ ಅವಕಾಶ ಕಲ್ಪಿಸಲಾಗಿದೆ ಹಾಗೂ ನಿರ್ಬಂಧಿಸಲಾಗಿದೆ ಎಂಬ ಮಾಹಿತಿಯು ಈ ಕೆಳಕಂಡಂತಿದೆ ಹಾಗೂ ರಾಜ್ಯ ಸರ್ಕಾರದ ಮಾರ್ಗಸೂಚಿಗಳನ್ನು ಗದಗ ಜಿಲ್ಲೆಯಲ್ಲಿ ಯಥಾವತ್ತಾಗಿ ಜಾರಿಗೊಳಿಸಲಾಗಿದೆ. ಸಾರ್ವಜನಿಕರು ಮಾರ್ಗಸೂಚಿಗಳ ಪಾಲನೆ ಮಾಡುವಂತೆ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ತಿಳಿಸಿದ್ದಾರೆ. ಅವಕಾಶ ಕಲ್ಪಿಸಲಾಗಿದೆ: ಬೆ. 6 ರಿಂದ ಬೆ […]

ಜಿಲ್ಲೆಯಲ್ಲಿ ಲಸಿಕಾಕರಣ ತೀವ್ರಗತಿಯಲ್ಲಿ ನಡೆಸಿ

Friday, June 4th, 2021
gadaga dc

ಗದಗ : ಕೋವಿಡ್ ಸೋಂಕು ನಿಯಂತ್ರಣಕ್ಕೆ ಜಿಲ್ಲಾದ್ಯಂತ ವಿಧಿಸಲಾದ ಕಠಿಣ ಮಾರ್ಗಸೂಚಿಗಳ ಅನುಷ್ಟಾನದಲ್ಲಿ ಅಧಿಕಾರಿಗಳ ನಿಷ್ಕಾಳಜಿ ಸಹಿಸಲಾಗದು ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯ ವಿಡಿಯೋ ಸಭಾಂಗಣದಲ್ಲಿ ( ಶುಕ್ರವಾರ) ಜರುಗಿದ ಕೋವಿಡ್ ಸೋಂಕು ನಿಯಂತ್ರಣ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿಗಳು ಮಾತನಾಡಿದರು. ಸೋಂಕು ನಿಯಂತ್ರಣ ಕಾರ್ಯದಲ್ಲಿ ನಿಯೋಜಿತ ಅಧಿಕಾರಿಗಳು ಶಿಸ್ತು ಬದ್ಧವಾಗಿ ಕಾರ್ಯನಿರ್ವಹಿಸಬೇಕು. ಸೋಂಕು ನಿಯಂತ್ರಣ ಹಾಗೂ ಸೋಂಕಿನ ಸರಪಳಿ ತುಂಡರಿಸಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದರು. ಸೋಂಕು ನಿಯಂತ್ರಣ ಕಾರ್ಯದಲ್ಲಿ […]

ಸೋಂಕು ತಡೆಗಟ್ಟಲು ಲಘು ವಿಮಾನದ ಮೂಲಕ ಔಷಧಿ ಸಿಂಪಡಣೆ

Saturday, May 29th, 2021
organic disinfectants

ಬೆಂಗಳೂರು : ಕೋವಿಡ್ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಇಂದು ಯಲಹಂಕದ ಜಕ್ಕೂರು ವಿಮಾನ ನಿಲ್ದಾಣದಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಏರಿಯಲ್ ವಕ್ರ್ಸ್ ಏರೋ ಎಲ್ ಎಲ್ ಪಿಯು ಲಘು ವಿಮಾನದ ಮೂಲಕ ಸಾವಯವ ಕ್ರಿಮಿನಾಶಕ ಸಿಂಪಡಣೆಯ ಪ್ರಾಯೋಗಿಕ ಯೋಜನೆಗೆ ಕಂದಾಯ ಸಚಿವ ಆರ್ ಅಶೋಕ ಚಾಲನೆ ನೀಡಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಆರ್ ಅಶೋಕ,”ಇದೊಂದು ಪ್ರಾಯೋಗಿಕ ಯೋಜನೆಯಾಗಿದ್ದು, ಜನನಿಬಿಡ ಪ್ರದೇಶಗಳಾದ ಕೆ ಆರ್ ಮಾರುಕಟ್ಟೆ, ಕಲಾಸಿಪಾಳ್ಯ, ಶಿವಾಜಿನಗರ ಹಾಗೂ ಜಯನಗರದಂತಹ ಪ್ರದೇಶಗಳಲ್ಲಿ ಕೋವಿಡ್ […]

40 ಲಕ್ಷ ಮೌಲ್ಯದ ವೈದ್ಯಕೀಯ ಸಾಮಗ್ರಿ ನೆರವು ನೀಡಿದ ಹಿರಿಯ ಐಪಿಎಸ್ ಅಧಿಕಾರಿ ವಿಶ್ವನಾಥ ಸಜ್ಜನರ

Friday, May 28th, 2021
Vishwanath

ಗದಗ : ಮೂಲತಃ ಗದಗ ಜಿಲ್ಲೆಯವರಾದ ತೆಲಂಗಾಣ ರಾಜ್ಯದ ಸೈಬರಾಬಾದ ಪೋಲಿಸ್ ಆಯುಕ್ತರಾಗಿರುವ ಹಿರಿಯ ಐಪಿಎಸ್ ಅಧಿಕಾರಿ ವಿಶ್ವನಾಥ ಸಜ್ಜನರ ಅವರು ಕೋವಿಡ್ ಸೋಂಕು ನಿಯಂತ್ರಣಕ್ಕೆ ಅಗತ್ಯವಾಗಿರುವ ಅಂದಾಜು 40 ಲಕ್ಷ ಮೌಲ್ಯದ ವೈದ್ಯಕೀಯ ಔಷಧಿ ಸಾಮಗ್ರಿಗಳನ್ನು ಗದಗ ಜಿಲ್ಲಾಡಳಿತಕ್ಕೆ ಕಳುಹಿಸುವ ಮೂಲಕ ನೆರವು ನೀಡಿದ್ದಾರೆ. ಆಕ್ಸಿಜನ್ ಕಾನ್ಸ್ಂಟ್ರೇಟರ್ (22), ಆಕ್ಸಿಜನ ಸಿಲಿಂಡರ್ (84), ಕೋವಿಡ್ ಕಿಟ್ (2000), ಮಾಸ್ಕ (20000), ಸ್ಯಾನಿಟೈಸರ್ (200 ಲೀಟರ್), ಫೇಸ್‌ಶೀಲ್ಡ್ (1000), ರೆಮಿಡಿಸಿವರ್ (24 ಯುನಿಟ್) ಸೇರಿದಂತೆ ಇತರ ಔಷಧಿ […]