‘ಪಿಎಂ-ವಿದ್ಯಾಲಕ್ಷ್ಮಿ’ ಯೋಜನೆಯಿಂದ ಲಕ್ಷಾಂತರ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸು ನನಸು: ಸಂಸದ ಕ್ಯಾ. ಚೌಟ

Thursday, November 7th, 2024
Modi-Loan

ಮಂಗಳೂರು: ಕೇಂದ್ರ ಸರ್ಕಾರ ಪ್ರಾರಂಭಿಸುತ್ತಿರುವ ಹೊಸ ಪಿಎಂ-ವಿದ್ಯಾಲಕ್ಷ್ಮಿ ಯೋಜನೆಯು ಕರ್ನಾಟಕ ಸೇರಿದಂತೆ ದೇಶದೆಲ್ಲೆಡೆ ಆರ್ಥಿಕ ಸಮಸ್ಯೆಯಿಂದ ಉನ್ನತ ಶಿಕ್ಷಣ ಮುಂದುವರಿಸಲು ಸಾಧ್ಯವಾಗದ ಪ್ರತಿಭಾವಂತ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಬಹು ದೊಡ್ಡ ವರದಾನವಾಗಲಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಪಿಎಂ ವಿದ್ಯಾಲಕ್ಷ್ಮಿ ಎನ್ನುವ ಬಹಳ ಉಪಯುಕ್ತ ಯೋಜನೆಗೆ ಅನುಮೋದನೆ ನೀಡಿರುವುದಕ್ಕೆ ಹರ್ಷ ವ್ಯಕ್ತಪಡಿಸಿರುವ ಸಂಸದರು,” ಪ್ರಧಾನಮಂತ್ರಿ ವಿದ್ಯಾಲಕ್ಷ್ಮಿ ಯೋಜನೆ ರಾಷ್ಟ್ರೀಯ ಶಿಕ್ಷಣ […]

ಮಂಗಳೂರು ವಿವಿ ತುಳು ಎಂಎ ಅಧ್ಯಯನ ಪ್ರವೇಶ ಶುಲ್ಕ ಕಡಿತಕ್ಕೆ ಸಂಸದ ಕ್ಯಾ. ಚೌಟ ಮನವಿ

Wednesday, October 23rd, 2024
Brijesh-Chowta

ಮಂಗಳೂರು: ತುಳು ಭಾಷೆ ಉತ್ತೇಜನ ಹಾಗೂ ಬೆಳವಣಿಗೆಗೆ ಪೂರಕವಾಗಿ ಮಂಗಳೂರು ವಿಶ್ವವಿದ್ಯಾಲಯ ಆರಂಭಿಸಿರುವ ತುಳು ಸ್ನಾತಕೋತ್ತರ ಪ್ರವೇಶ ಶುಲ್ಕವನ್ನು ಏಕಾಏಕಿ ಏರಿಕೆ ಮಾಡಿರುವುದನ್ನು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ತೀವ್ರವಾಗಿ ಖಂಡಿಸಿದ್ದು, ಸರ್ಕಾರ ಕೂಡಲೇ ಶುಲ್ಕ ಕಡಿತಗೊಳಿಸುವುದಕ್ಕೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಈ ಕುರಿತು ರಾಜ್ಯದ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್‌ ಅವರಿಗೆ ಪತ್ರ ಬರೆದಿರುವ ಕ್ಯಾ. ಚೌಟ ಅವರು, ಮಂಗಳೂರು ವಿವಿಯಲ್ಲಿ ತುಳು ಸ್ನಾತಕೋತ್ತರ ವಿಭಾಗದ 2024-25ನೇ ಸಾಲಿನ ಪ್ರವೇಶ […]

ರೈಲ್ವೆ ಹಳಿ ಮೇಲೆ ಕಲ್ಲು : ದುಷ್ಕರ್ಮಿಗಳನ್ನು ತಕ್ಷಣ ಬಂಧಿಸುವಂತೆ ದ.ಕ. ಸಂಸದ ಕ್ಯಾ. ಚೌಟ ಒತ್ತಾಯ

Monday, October 21st, 2024
Brijesh-Ullal-Rail

ಮಂಗಳೂರು: ಮಂಗಳೂರು-ಕೇರಳ ಮಾರ್ಗವಾದ ಉಳ್ಳಾಲದ ತೊಕ್ಕೊಟ್ಟು ರೈಲ್ವೆ ಹಳಿ ಮೇಲೆ ಕಲ್ಲುಗಳನ್ನು ಇಟ್ಟು ಅಪಾಯಕಾರಿ ಕೃತ್ಯವೆಸಗಿರುವುದು ಗಂಭೀರ ವಿಚಾರವಾಗಿದ್ದು, ಪೊಲೀಸರು ಕೂಡಲೇ ದುಷ್ಕರ್ಮಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಆಗ್ರಹಿಸಿದ್ದಾರೆ. ಮಂಗಳೂರಿನಲ್ಲಿ ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಕ್ಯಾ. ಚೌಟ ಅವರು, ರೈಲ್ವೆ ಹಳಿ ಮೇಲೆ ಕಲ್ಲು ಇಟ್ಟು ವಿಕೃತಿ ಮೆರೆದಿರುವ ಈ ಕೃತ್ಯದ ಬಗ್ಗೆ ಈಗಾಗಲೇ ನಾನು ಸಂಬಂಧಪಟ್ಟ ಪೊಲೀಸರು ಹಾಗೂ ರೈಲ್ವೆ ಇಲಾಖೆ […]

ದೀಪಾವಳಿ ಹಬ್ಬಕ್ಕೆ ಮಂಗಳೂರು-ಬೆಂಗಳೂರು ನಡುವೆ ವಿಶೇಷ ರೈಲು ಮಂಜೂರು

Thursday, October 17th, 2024
Diwali-Train

ಮಂಗಳೂರು: ದೀಪಾವಳಿ ಹಬ್ಬದ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರ ಮನವಿಗೆ ತುರ್ತು ಸ್ಪಂದಿಸಿರುವ ರೈಲ್ವೆ ಸಚಿವರಾದ ಅಶ್ವಿನ್‌ ವೈಷ್ಣವ್‌ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವರಾದ ವಿ. ಸೋಮಣ್ಣ ಅವರು ಸ್ಪಂದಿಸಿದ್ದು, ಇದೀಗ ನೈರುತ್ಯ ರೈಲ್ವೆಯು ಮಂಗಳೂರು-ಬೆಂಗಳೂರು ನಡುವೆ ವಿಶೇಷ ರೈಲು ಸಂಚಾರ ಆರಂಭಿಸಿದೆ. ಅದರಂತೆ ಯಶವಂತಪುರ-ಮಂಗಳೂರು(06565) ವಿಶೇಷ ರೈಲು ಅ.30ರಂದು ರಾತ್ರಿ 11.50ಕ್ಕೆ ಯಶವಂತಪುರದಿಂದ ಹೊರಟು ಮರುದಿನ ಬೆಳಗ್ಗೆ 11.45ಕ್ಕೆ ಮಂಗಳೂರು ತಲುಪಲಿದೆ. ಹಾಗೆಯೇ ಮಂಗಳೂರು-ಯಶವಂತಪುರ(ನಂ. 06566) ವಿಶೇಷ ರೈಲು […]

ಕೇಂದ್ರ ಸರ್ಕಾರದಿಂದ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ ಬಿಡುಗಡೆ: ಸಂಸದ ಕ್ಯಾ. ಚೌಟ

Saturday, September 21st, 2024
Brijesh-Chowta

ಮಂಗಳೂರು : ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಆಯುಷ್ಮಾನ್ ಭಾರತ್ ಹೆಲ್ತ್ ಇಂಫ್ರಾಸ್ಟ್ರಕ್ಚರ್ ಮಿಷನ್-PMABHIM ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಗೆ ಒಟ್ಟು 25.11 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು ಆ ಪೈಕಿ 24 ಕೋಟಿ ರೂ. ವೆಚ್ಚದಲ್ಲಿ ವೆನ್ಲಾಕ್ ಆಸ್ಪತ್ರೆಯ ಆವರಣದಲ್ಲಿ ಕ್ರಿಟಿಕಲ್ ಕೇರ್ ಯೂನಿಟ್ ಕಟ್ಟಡ ನಿರ್ಮಾಣ ಕಾಮಗಾರಿಗೆ ಅನುಮೋದನೆ ಲಭಿಸಿರುವುದಾಗಿ ಸಂಸದ ಕ್ಯಾ. ಬ್ರಿಜೇಶ್‌ ಚೌಟ ತಿಳಿಸಿದ್ದಾರೆ. ಇಂಟಿಗ್ರೇಟೆಡ್ ಪಬ್ಲಿಕ್ ಹೆಲ್ತ್ ಲ್ಯಾಬ್ ಕಟ್ಟಡಕ್ಕೆ 1.11 ಕೋಟಿಈ ಯೋಜನೆಯಡಿ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯ ಟ್ರಮಾ […]

ಬೆಳ್ತಂಗಡಿಯ ರೆಖ್ಯಕ್ಕೆ ಭೇಟಿ ನೀಡಿ ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದ ಸಂಸದ ಕ್ಯಾ. ಚೌಟ

Wednesday, September 18th, 2024
rekhya

ಬೆಳ್ತಂಗಡಿ : ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಇಂದು ಬೆಳ್ತಂಗಡಿ ತಾಲೂಕಿನ ರೆಖ್ಯಕ್ಕೆ ಭೇಟಿ ನೀಡಿ ಅಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಹಾಗೂ ಎಂಜಿರದಲ್ಲಿ ಸರ್ವೀಸ್‌ ರಸ್ತೆ ಕಾಮಗಾರಿಗಳ ವೀಕ್ಷಣೆ ಮಾಡಿ ಸದ್ಯದ ಪ್ರಗತಿ ಬಗ್ಗೆ ಮಾಹಿತಿ ಪಡೆದುಕೊಂಡ ಸಂಸದರು, ರಸ್ತೆ ಕಾಮಗಾರಿಗಳಿಂದಾಗಿ ಸಾರ್ವಜನಿಕರಿಗೆ ಯಾವುದೇ ರೀತಿಯಿಂದ ತೊಂದರೆಯಾಗಬಾರದು. ಸ್ಥಳೀಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾಮಗಾರಿಯನ್ನು ತ್ವರಿತವಾಗಿ ಮುಂದುವರಿಸಬೇಕೆಂದು ಗುತ್ತಿಗೆದಾರರಿಗೆ ಸೂಚಿಸಿದ್ದಾರೆ. ಬೆಳ್ತಂಗಡಿ ಶಾಸಕ […]

“ಬಿ.ಸಿ. ರೋಡ್‌ ನ ಬ್ರಹ್ಮರ್ಷಿ ನಾರಾಯಣ ಗುರು ವೃತ್ತ ಮಾದರಿ ವೃತ್ತವಾಗಿ ಮರು ನಿರ್ಮಾಣ ” – ಸಂಸದ ಕ್ಯಾ. ಚೌಟ ಭರವಸೆ

Monday, September 16th, 2024
Bantwal-circle

ಬಂಟ್ವಾಳ : ಬಿ. ಸಿ. ರೋಡ್ ಜಂಕ್ಷನ್‌ನಲ್ಲಿರುವ ಬ್ರಹ್ಮರ್ಷಿ ನಾರಾಯಣ ಗುರು ವೃತ್ತವನ್ನು ಮಾದರಿ ವೃತ್ತವನ್ನಾಗಿ ಪುನರ್‌ ನಿರ್ಮಾಣ ಮಾಡುವ ಕುರಿತಂತೆ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು ಬಿಸಿರೋಡಿನ ಬ್ರಹ್ಮ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಬಿಲ್ಲವ ಸಮುದಾಯದ ಮುಖಂಡರು ಹಾಗೂ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಮಾತನಾಡಿದ ಕ್ಯಾ. ಚೌಟ ಅವರು “ಬಿ.ಸಿ. ರೋಡ್ ನಲ್ಲಿ ಮರು ನಿರ್ಮಾಣವಾಗಲಿರುವ ಬ್ರಹ್ಮರ್ಷಿ ನಾರಾಯಣಗುರು ವೃತ್ತವನ್ನು […]

ಕೇಂದ್ರ ಸರ್ಕಾರದ ‘ಪಿಎಂ ಶ್ರೀ ‘ ಶಾಲೆಯಾಗಿ ಮುಡಿಪು ಜವಾಹರ್ ನವೋದಯ ವಿದ್ಯಾಲಯ – ಕ್ಯಾ. ಚೌಟ

Saturday, September 14th, 2024
PM-shree

ಮಂಗಳೂರು: ಕೇಂದ್ರ ಸರ್ಕಾರ ಘೋಷಿಸಿರುವ ಮಹತ್ವಾಕಾಂಕ್ಷಿ ‘ಪಿಎಂ ಶ್ರೀ’ ಯೋಜನೆಯಡಿ ಮುಡಿಪುವಿನ ಜವಾಹರ್ ನವೋದಯ ವಿದ್ಯಾಲಯ ಆಯ್ಕೆಯಾಗಿರುವುದನ್ನು ಇಂದು ಅಧಿಕೃತವಾಗಿ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಘೋಷಿಸಿದ್ದಾರೆ. ಈ ವೇಳೆ ಮಾತನಾಡಿದ ಸಂಸದರು, ಪ್ರಧಾನ ಮಂತ್ರಿ ಸ್ಕೂಲ್ ಫಾರ್ ರೈಸಿಂಗ್ ಇಂಡಿಯಾ( ಪಿಎಂಶ್ರೀ) ಯೋಜನೆಯಡಿ ಮುಡಿಪುವಿನ ಜವಾಹರ್ ನವೋದಯ ವಿದ್ಯಾಲಯ ಶಾಲೆ ಆಯ್ಕೆಯಾಗಿರುವುದು ದಕ್ಷಿಣ ಕನ್ನಡ ಜಿಲ್ಲೆಗೆ ಹೆಮ್ಮೆಯ ಸಂಗತಿಯಾಗಿದೆ. ಈ ಯೋಜನೆಯಡಿ ಶಾಲೆಯಲ್ಲಿ ತಂತ್ರಜ್ಞಾನ ಆಧಾರಿತ ನಾವೀನ್ಯ ಬೋಧನಾ ವ್ಯವಸ್ಥೆ, ಕೌಶಲ್ಯ, ಆವಿಷ್ಕಾರ, ಉತ್ತಮ […]

ದಕ್ಷಿಣ ಕನ್ನಡದ ಪಿಎಂ ಆವಾಸ್ ಯೋಜನೆ ಫಲಾನುಭವಿಗಳ ಮನೆಗಳಲ್ಲಿ “ಹರ್ ಘರ್ ತಿರಂಗಾ” ಅಭಿಯಾನಕ್ಕೆ ಚಾಲನೆ

Tuesday, August 13th, 2024
ದಕ್ಷಿಣ ಕನ್ನಡದ ಪಿಎಂ ಆವಾಸ್ ಯೋಜನೆ ಫಲಾನುಭವಿಗಳ ಮನೆಗಳಲ್ಲಿ “ಹರ್ ಘರ್ ತಿರಂಗಾ” ಅಭಿಯಾನಕ್ಕೆ ಚಾಲನೆ

ಮಂಗಳೂರು : ಸ್ವಾತಂತ್ರ್ಯ ದಿನಾಚರಣೆ ಹಿನ್ನಲೆಯಲ್ಲಿ ಹರ್ ಘರ್ ತಿರಂಗಾ ಅಭಿಯಾನವನ್ನು ದೇಶದೆಲ್ಲೆಡೆ ಸಾರ್ಥಕಗೊಳಿಸುವಂತೆ ಪ್ರಧಾನಿ ಮೋದಿ ಅವರು ಈಗಾಗಲೇ ಕರೆ ನೀಡಿದ್ದಾರೆ. ಅದರಂತೆ ದಕ್ಷಿಣ ಕನ್ನಡ ಲೋಕಸಭಾ ವ್ಯಾಪ್ತಿಯ ಎಲ್ಲ ಪಿಎಂ ಆವಾಸ್ ಫಲಾನುಭವಿಗಳ ಯೋಜನೆ ಮನೆಗಳ ಮೇಲೂ ತ್ರಿವರ್ಣ ಧ್ವಜ ಹಾರಾಡಿಸುವ ವಿನೂತನ ಪ್ರಯತ್ನಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಮುಂದಾಗಿದ್ದಾರೆ. ಮಂಗಳೂರಿನ ಜಪ್ಪಿನಮೊಗರಿನಲ್ಲಿರುವ ಶ್ರೀಮತಿ ವಿನಯಾ ಶ್ರೀನಿವಾಸ್ ಅವರ ಮನೆ ಮೇಲೆ ಮಂಗಳವಾರ ಬೆಳಗ್ಗೆ ಹರ್ ಘರ್ ಅಭಿಯಾನದಡಿ ತ್ರಿವರ್ಣ ಧ್ವಜ ಹಾರಾಡಿಸುವ […]

ಗೋಲ್ಡ್ ಫಿಂಚ್ ಸಿಟಿಯಲ್ಲಿ ಡಿ.30ಕ್ಕೆ “ಮಂಗಳೂರು ಕಂಬಳ”

Friday, December 29th, 2023
ಗೋಲ್ಡ್ ಫಿಂಚ್ ಸಿಟಿಯಲ್ಲಿ ಡಿ.30ಕ್ಕೆ "ಮಂಗಳೂರು ಕಂಬಳ"

ಮಂಗಳೂರು: ನಗರದ ಬಂಗ್ರಕೂಳೂರಿನಲ್ಲಿರುವ ಗೋಲ್ಡ್ ಫಿಂಚ್ ಸಿಟಿಯಲ್ಲಿ ಡಿಸೆಂಬರ್ 30ರಂದು “ಮಂಗಳೂರು ಕಂಬಳ” ಅದ್ಧೂರಿಯಾಗಿ ನಡೆಯಲಿದ್ದು ಇದರ ಅಂಗವಾಗಿ ಛಾಯಾಚಿತ್ರ ಸ್ಪರ್ಧೆ, ಕಲರ್ ಕೂಟ ಮತ್ತು ರೀಲ್ ಕಂಟೆಸ್ಟ್ ಆಯೋಜಿಸಲಾಗಿದೆ ಎಂದು ಕಂಬಳ ಸಮಿತಿ ಅಧ್ಯಕ್ಷ ಕ್ಯಾ. ಬ್ರಿಜೇಶ್ ಚೌಟ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಡಿ.30ರಂದು ಬೆಳಗ್ಗೆ 8:30ಕ್ಕೆ ದಿ. ರತ್ನ ಮಾಧವ ಶೆಟ್ಟಿ ವೇದಿಕೆಯಲ್ಲಿ ಕಂಬಳ ಉದ್ಘಾಟನೆಗೊಳ್ಳಲಿದೆ. ಚಿತ್ರದುರ್ಗ ಮಾದಾರ ಚೆನ್ನಯ್ಯ ಗುರುಪೀಠದ ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ ಅವರು ಉದ್ಘಾಟನೆ ನೆರವೇರಿಸಲಿದ್ದು ರಾಣಿ […]