ಕಾಲೇಜಿಗೆ ಹೋಗು ಎಂದಿದ್ದಕ್ಕೆ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಯುವತಿ

Thursday, March 18th, 2021
Divya

ಚಾಮರಾಜನಗರ: ಲಾಕ್‍ಡೌನ್ ಬಳಿಕ ಮನೆಯಲ್ಲೇ ಇದ್ದ ಮಗಳನ್ನು ಕಾಲೇಜಿಗೆ ಹೋಗು ಎಂದು ಬಲವಂತ ಮಾಡಿದ್ದಕ್ಕೆ ಮನನೊಂದ ಯುವತಿ ಕ್ರಿಮಿನಾಶಕ ಕುಡಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಕೊಳ್ಳೇಗಾಲದಲ್ಲಿ ನಡೆದಿದೆ. ಕೊಳ್ಳೇಗಾಲದ ಮೇಗಲದೊಡ್ಡಿ ಗ್ರಾಮದ ಲೂರ್ಧಸ್ವಾಮಿ ಅವರ ಮಗಳು ದಿವ್ಯಾ(19) ಮೃತ ದುರ್ದೈವಿ. ಈಕೆ ಕಳೆದ ವರ್ಷ ಕೊರೊನಾ ಹಿನ್ನೆಲೆ ಲಾಕ್‍ಡೌನ್ ನಿಂದ ಕಾಲೇಜಿಗೆ ಹೋಗದೆ ಕೂಲಿ ಕೆಲಸ ಮಾಡಿಕೊಂಡಿದ್ದಳು. ಆದರೆ ಕಾಲೇಜು ಆರಂಭವಾದ ಬಳಿಕ ಓದಲು ಹೋಗು ಎಂದು ಪೋಷಕರು ಬಲವಂತ ಮಾಡಿ ಕಾಲೇಜಿಗೆ ಕಳುಹಿಸಿದ್ದರು. ಕಾಲೇಜಿಗೆ ಹೋಗಲು ಇಷ್ಟವಿಲ್ಲದ […]