ನಿರ್ಭಯಾ ಪ್ರಕರಣದ ಅಪರಾಧಿ ವಿನಯ್ ಶರ್ಮಾ ಸಲ್ಲಿಸಿದ್ದ ಕ್ಷಮಾದಾನ ಅರ್ಜಿ ತಿರಸ್ಕಾರ

Saturday, February 1st, 2020
vinay-sharma

ನವದೆಹಲಿ : ನಿರ್ಭಯಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ನಾಲ್ವರು ಅಪರಾಧಿಗಳಲ್ಲಿ ಓರ್ವನಾದ ವಿನಯ್ ಶರ್ಮಾ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿಗಳು ತಿರಸ್ಕರಿಸಿದ್ದಾರೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಶನಿವಾರ ಬೆಳಿಗ್ಗೆ ವಿನಯ್ ಶರ್ಮಾ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ತಿರಸ್ಕರಿಸಿದರು. ನಿರ್ಭಯಾ ಪ್ರಕರಣದ ನಾಲ್ವರು ಅಪರಾಧಿಗಳಿಗೆ ಶನಿವಾರ ಮುಂಜಾನೆ ಗಲ್ಲು ಶಿಕ್ಷೆ ನೀಡುವ ಬಗ್ಗೆ ಡೆತ್ ವಾರಂಟ್ ಹೊರಡಿಸಲಾಗಿತ್ತು. ಆದರೆ ಪಾಟಿಯಾಲ ಹೌಸ್ ಕೋರ್ಟ್ ಶುಕ್ರವಾರ ಸಂಜೆ ತಡೆಯಾಜ್ಷೆ ನೀಡಿತ್ತು. 2012ರ ಡಿಸೆಂಬರ್ 16ರಂದು ದೆಹಲಿಯ ವೈದ್ಯಕೀಯ […]

ಅತ್ಯಾಚಾರಿಗಳಿಗೆ ಕ್ಷಮಾದಾನ ಅರ್ಜಿ ಸಲ್ಲಿಸಲು ಅವಕಾಶ ನೀಡಬಾರದು : ರಾಮನಾಥ್​​ ಕೋವಿಂದ್​​

Friday, December 6th, 2019
Ramnath

ನವದೆಹಲಿ : ಶಿಶು ಅತ್ಯಾಚಾರಿಗಳಿಗೆ ಕ್ಷಮಾದಾನದ ಅರ್ಜಿ ಸಲ್ಲಿಸಲು ಯಾವುದೇ ಕಾರಣಕ್ಕೂ ಅನುಮತಿ ನೀಡಬಾರದು ಎನ್ನುವ ಮೂಲಕ ಭಾರತದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಇಂದು ರಾಜಸ್ಥಾನದ ಕಾರ್ಯಕ್ರಮವೊಂದರಲ್ಲಿ ಮಾತಾಡಿದ ರಾಷ್ಟ್ರಪತಿ ಕೋವಿಂದ್, ಫೋಕ್ಸೋ ಕಾಯ್ದೆ ಅಡಿಯಲ್ಲಿ ಶಿಕ್ಷೆಗೆ ಗುರಿಯಾದ ಅತ್ಯಾಚಾರಿಗಳಿಗೆ ಕ್ಷಮಾದಾನಕ್ಕೆ ಅವಕಾಶವೇ ಕೊಡಬಾರದು ಎಂದು ಅಭಿಪ್ರಾಯಪಟ್ಟಿದ್ದಾರೆ. ಮಹಿಳೆಯರ ರಕ್ಷಣೆ ಅತ್ಯಂತ ಗಂಭೀರ ವಿಚಾರ. ಹಾಗಾಗಿ ಫೋಕ್ಸೋ ಕಾಯ್ದೆಯಡಿ ಶಿಕ್ಷೆಗೊಳಗಾದ ಅತ್ಯಾಚಾರಿಳಿಗೆ ಕ್ಷಮೆ ಕೋರಿಕೆ ಅರ್ಜಿ ಸಲ್ಲಿಸುವ ಅವಕಾಶ ನೀಡಬಾರದು. ಅತ್ಯಾಚಾರಿಗಳಿಗೆ ಇಂತಹ […]