ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಕಾರ್ಯವೈಖರಿಗೆ ಪ್ರಧಾನಿಯವರಿಂದ ಮೆಚ್ಚುಗೆ
Saturday, August 10th, 2024ನವ ದೆಹಲಿ : ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಜಿಯವರನ್ನು ಶುಕ್ರವಾರ ಪಾರ್ಲಿಮೆಂಟ್ ಭವನದ ಪ್ರಧಾನ ಕಚೇರಿಯಲ್ಲಿ ಭೇಟಿಯಾಗಿ ಮೂರನೇ ಬಾರಿ ಪ್ರಧಾನಮಂತ್ರಿ ಆಯ್ಕೆಯಾಗಿರುವುದಕ್ಕೆ ಶುಭಹಾರೈಸಿ ಶ್ರೀಕ್ಷೇತ್ರದ ಶ್ರೀ ಮಂಜುನಾಥ ಸ್ವಾಮಿಯ ಪ್ರಸಾದವನ್ನು ನೀಡಿ ದೇಶಕ್ಕೆ ಇನ್ನು ಉತ್ತಮ ಸೇವೆ ಸಲ್ಲಿಸುವಂತಾಗಲಿ ಎಂದು ಆಶೀರ್ವದಿಸಿದರು. ನಂತರ ಅನೇಕ ವಿಷಯಗಳ ಬಗ್ಗೆ ಸುದೀರ್ಘ ಚರ್ಚೆ ನಡೆಸಿದರು. ರಾಜ್ಯಸಭಾ ಸಂಸದರ ವ್ಯಾಪ್ತಿಗೆ ಬರುವ ನಿಧಿಯನ್ನು ಪೂಜ್ಯರು ಬೀದರ್‌ನಲ್ಲಿ ವಿನೂತನವಾಗಿ ವಿನಿಯೋಗಿಸಿ ಒಂದು ಕ್ಷೀರಕ್ರಾಂತಿಗೆ ನಾಂದಿ ಹಾಡಿರುವ ಬಗ್ಗೆ […]