ಭಗವಂತನ ಅನುಗ್ರಹಕ್ಕೆ ಪಾತ್ರರಾಗಲು ಅತ್ಯಂತ ಸರಳ ಹಾಗೂ ಸುಲಭ ಮಾಧ್ಯಮ ಭಜನೆ : ಅಶೋಕ್ ಭಟ್

Tuesday, September 24th, 2024
Ashok-Bhat

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುತ್ತಿರುವ 26ನೇ ವರ್ಷದ ಭಜನಾ ಕಮ್ಮಟದ 3ನೇ ದಿನದ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಮಣಿಪಾಲದ ಸಂಗೀತ ವಿದುಷಿ ಉಷಾ ಹೆಬ್ಬಾರ್ ಹಾಗೂ ಮಣಿಪಾಲದ ಆಕಾಶವಾಣಿ ‘ಎ’ ಗ್ರೇಡ್ ಕಲಾವಿದರಾದ ಶ್ರೀ ಕೆ. ಆರ್. ರಾಘವೇಂದ್ರ ಭಜನಾ ತರಬೇತಿ ನೀಡಿದರು. ಕಮ್ಮಟಕ್ಕೆ ಆಗಮಿಸಿದ ಪೂಜ್ಯನೀಯ ಡಿ. ವೀರೇಂದ್ರ ಹೆಗ್ಗಡೆಯವರು, ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆಯವರು, ಶ್ರೀ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ಉಪಸ್ಥಿತರಿದ್ದು ಶಿಬಿರಾರ್ಥಿಗಳನ್ನು ಪ್ರೇರೇಪಿಸಿದರು. ಅಶೋಕ್ ಭಟ್ […]

ಕೊಡಗು ಜಿಲ್ಲೆ ಮತ್ತು ಸಕಲೇಶಪುರ ಅತೀವೃಷ್ಠಿ ಪೀಡಿತರಿಗೆ ಕ್ಷೇತ್ರ ಧರ್ಮಸ್ಥಳದಿಂದ ರೂ. 10 ಕೋಟಿ ಬಿಡುಗಡೆ

Friday, September 7th, 2018
Veerendra-Hegde

ಧರ್ಮಸ್ಥಳ : ಇತ್ತೀಚೆಗೆ ಕೊಡಗು ಜಿಲ್ಲೆಯಲ್ಲಿ ಅತೀವೃಷ್ಠಿಯಿಂದ ಉಂಟಾಗಿರುವ ವ್ಯಾಪಕ ಹಾನಿಯ ಬಗ್ಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆಯವರು ಇಂದು ಧರ್ಮಸ್ಥಳದಲ್ಲಿ ವಿಶ್ಲೇಷಣೆ ನಡೆಸಿದರು. ಕೊಡಗು ಜಿಲ್ಲೆಯಲ್ಲಿ ಕುಟುಂಬಗಳಿಗೆ ಉಂಟಾಗಿರುವ ಹಾನಿಯ ಬಗ್ಗೆ ನಡೆಸಿದ ಸರ್ವೇಕ್ಷಣೆ ವರದಿಯನ್ನು ಕೊಡಗು ಜಿಲ್ಲೆಯ ನಿರ್ದೇಶಕ ಶ್ರೀ ಯೋಗೀಶ್‌ರವರು ನೀಡಿದರು. ಜಿಲ್ಲೆಯಲ್ಲಿ ಸುಮಾರು 1,715 ಯೋಜನೆಯ ಕುಟುಂಬಗಳಿಗೆ ವ್ಯಾಪಕವಾಗಿ ಹಾನಿಯಾಗಿದೆ. ಈ ಪೈಕಿ 1,000 ಕುಟುಂಬಗಳ ಮನೆಗಳು ಸಂಪೂರ್ಣವಾಗಿ ನಾಶವಾಗಿದೆ ಇಲ್ಲವೇ ಹಾನಿಯುಂಟಾಗಿದೆ. ಸುಮಾರು ರೂ. 2.50 ಕೋಟಿಯ ಉಪಕರಣಗಳು, ಬೆಲೆಬಾಳುವ ವಸ್ತುಗಳು ಕಣ್ಮರೆಯಾಗಿದೆ. […]

ಧರ್ಮಸ್ಥಳದಲ್ಲಿ 46ನೇ ವರ್ಷದ ಉಚಿತ ಸಾಮೂಹಿಕ ವಿವಾಹ

Tuesday, January 17th, 2017
mass marriage

ಉಜಿರೆ  : ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಮೇ 4 ರಂದು ಗುರುವಾರ ಸಾಯಂಕಾಲ 6.50ಕ್ಕೆ ಗೋಧೂಳಿ ಲಗ್ನ ಸುಮೂರ್ತದಲ್ಲಿ 46ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಆಯೋಜಿಸಲಾಗಿದೆ. ದಿನಾಂಕ 15-01-2017ರಂದು ಬೆಳಿಗ್ಗೆ ಉಚಿತ ಸಾಮೂಹಿಕ ವಿವಾಹಕ್ಕಾಗಿ ಪ್ರತ್ಯೇಕ ಕಚೇರಿಯನ್ನು ವಸಂತ ಮಹಲ್ನ (ಮಂಜಯ್ಯ ಹೆಗ್ಗಡೆ ಕಲಾಭವನ) ಬಲ ಭಾಗದ ಕೊಠಡಿಯಲ್ಲಿ ತೆರೆಯಲಾಗಿದೆ. ಹೆಚ್ಚಿನ ಮಾಹಿತಿಗಾಗಿ 08256-277144 ದೂರವಾಣಿ ಸಂಖ್ಯೆಗೆ ಸಂಪರ್ಕಿಸಬೇಕಾಗಿ ಅಪೇಕ್ಷೆ. ವರನಿಗೆ ಧೋತಿ, ಶಾಲು ಮತ್ತು ವಧುವಿಗೆ ಸೀರೆ, ರವಿಕೆ ಕಣ ಹಾಗೂ ಮಂಗಲ […]