ಪಾವಗಡ ಖಾಸಗಿ ಬಸ್ಸ್ ದುರಂತದಲ್ಲಿ ಮೃತರ ಸಂಖ್ಯೆ ಏರಿಕೆ

Saturday, March 19th, 2022
Pavgad-Bus-Accident

ತುಮಕೂರು: ಪಾವಗಡ ತಾಲೂಕಿನ ಪಳವಳ್ಳಿ ಗ್ರಾಮದ ಬಳಿ  ಖಾಸಗಿ ಬಸ್ಸೊಂದು ಮಗುಚಿ ಬಿದ್ದ ಪರಿಣಾಮ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಕನಿಷ್ಠ ಎಂಟು ಮೃತಪಟ್ಟು ಮೂವತ್ತೈದು ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಬಸ್ಸಿನಲ್ಲಿ 100ಕ್ಕೂ ಹೆಚ್ಚು ಪ್ರಯಾಣಿಕರಿದ್ದರೆ 30ಕ್ಕೂ ಅಧಿಕ ಮಂದಿ ಬಸ್ಸಿನ ಮೇಲೆ ಕುಳಿತು ಸಾಗುತ್ತಿದ್ದರು. ಬೆಳಗ್ಗೆ ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳು, ಆಫೀಸಿಗೆ ಜನರು ಹೋಗುವ ಹೊತ್ತು. ಈ ದಾರಿಯಲ್ಲಿ ಸಂಚಾರಕ್ಕೆ ಬೇರೆ ಸಾರಿಗೆ ಸೌಕರ್ಯಗಳಿಲ್ಲದ ಕಾರಣ ಸಿಕ್ಕಿದ್ದ ಎಸ್ ವಿಟಿ ಬಸ್ಸಿನಲ್ಲಿ ಸಾಧ್ಯವಾದಷ್ಟು ಜನ ಹತ್ತಿದ್ದರು, […]

ಖಾಸಗಿ ಬಸ್ ಪಲ್ಟಿ, ಡೀಸೆಲ್‌ ಸೋರಿಕೆ, ಹಲವರಿಗೆ ಗಾಯ

Tuesday, February 15th, 2022
sea bird

ಬಂಟ್ವಾಳ : ಮಂಗಳೂರು ಬೆಂಗಳೂರು ಸಂಚಾರದ  ಖಾಸಗಿ ಬಸ್ಸೊಂದು  ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ  ಹಲವು ಪ್ರಯಾಣಿಕರು ಗಾಯಗೊಂಡಿರುವ ಘಟನೆ ತುಂಬೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ರಾತ್ರಿ ನಡೆದಿದೆ. ಮಂಗಳೂರಿನಿಂದ ಬೆಂಗಳೂರಿಗೆ ಹೊರಟಿದ್ದ ಬಸ್ ತುಂಬೆ ಬಿ.ಎ‌. ಕಾಲೇಜು ಬಳಿಕ ರಾಷ್ಟ್ರೀಯ ಹೆದ್ದಾರಿಯ ಅಪಾಯಕಾರಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎಂದು ತಿಳಿದು ಬಂದಿದೆ. ಸೀ ಬರ್ಡ್ ಹೆಸರಿನ ಖಾಸಗಿ ಬಸ್ ತುಂಬೆ ಬಿ.ಎ. ಕಾಲೇಜು ಬಳಿಯ ತಿರುವಿನಲ್ಲಿ ಪಲ್ಟಿಯಾಗಿದೆ. ಬಸ್ ನಲ್ಲಿದ್ದ ಹಲವು ಪ್ರಯಾಣಿಕರಿಗೆ ಗಾಯಗಳಾಗಿದ್ದು ಹೆಚ್ಚಿನವರಿಗೆ ತುಂಬೆ […]

ಕಾಸರಗೋಡಿಗೆ ಸರ್ಕಾರಿ, ಖಾಸಗಿ ಬಸ್ ಸಂಚಾರವಿಲ್ಲ: ನಳೀನ್ ಕುಮಾರ್ ಕಟೀಲು

Sunday, August 1st, 2021
Kerala Bus

ಮಂಗಳೂರು : ನೆರೆಯ ಕೆರಳದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ತೀವ್ರಗೊಂಡಿರುವ ಹಿನ್ನಲೆಯಲ್ಲಿ ಜಿಲ್ಲೆಯಿಂದ ಕಾಸರಗೋಡುಗೆ ಸಂಚರಿಸುವ ಸರ್ಕಾರಿ ಹಾಗೂ ಖಾಸಗಿ ಬಸ್‍ಗಳನ್ನು ಆಗಸ್ಟ್ 1 ರಿಂದ ಒಂದು ವಾರದ ಕಾಲ ಸ್ಥಗಿತಗೊಳಿಸಲಾಗುವುದು ಎಂದು ಸಂಸದರಾದ ನಳೀನ್ ಕುಮಾರ್ ಕಟೀಲು ಅವರು ತಿಳಿಸಿದರು. ಅವರು ಜುಲೈ 31ರ ಶನಿವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೊರೊನಾ ಪಾಸಿಟಿವಿಟಿ ಪ್ರಕರಣಗಳು ಕಳೆದ ಕೆಲವು […]

ಸರ್ಕಾರಿ ಬಸ್ ಓಡಾಟ ನಡೆಸುತ್ತಿದ್ದ ರೂಟ್ ನಲ್ಲಿ ಖಾಸಗಿ ಬಸ್ ಓಡಾಟ

Wednesday, April 7th, 2021
private Bus

ಮಂಗಳೂರು: ಕೋವಿಡ್ -19 ಪ್ರಕರಣಗಳು ಹೆಚ್ಚುತ್ತಿರುವ ಮತ್ತು ವಿದ್ಯಾರ್ಥಿಗಳು ಪರೀಕ್ಷೆಗಳನ್ನು ಬರೆಯಲು ತಯಾರಿ ನಡೆಸುತ್ತಿರುವ ಸಮಯದಲ್ಲಿ ರಸ್ತೆ ಸಾರಿಗೆ ನಿಗಮದ ನೌಕರರ ಮುಷ್ಕರ ಸರಿಯಲ್ಲ ಎಂದು ಕರ್ನಾಟಕ ರಾಜ್ಯ ಖಾಸಗಿ ಬಸ್ ಮಾಲೀಕರ ಸಂಘ ಹೇಳಿದೆ. ಮಂಗಳೂರಿನಲ್ಲಿ ಕಾಂಟ್ರಾಕ್ಟ್ ಕ್ಯಾರೇಜ್ ಬಸ್ ಮಾಲೀಕರು ಮುಷ್ಕರದ  ದಿನ ಸೇವೆಗಳನ್ನು ಒದಗಿಸಿದ್ದಾರೆ. ಸಾರಿಗೆ ಸಂಸ್ಥೆ ನೌಕರರು ನಡೆಸುತ್ತಿರುವ ಮುಷ್ಕರವು ಮಂಗಳೂರಿನಲ್ಲಿ ಪ್ರಯಾಣಿಕರ ಮೇಲೆ ಯಾವುದೇ ಪರಿಣಾಮ ಬೀರಿಲ್ಲ.  ನಗರದಲ್ಲಿ ಖಾಸಗಿ ಬಸ್ ಗಳೇ  ಓಡಾಟ ನಡೆಸುತ್ತಿದೆ. ಗ್ರಾಮೀಣ ಭಾಗದಲ್ಲಿ ಮತ್ತು ಜಿಲ್ಲೆಯ ದೂರದೂರಿಗೆ ಮತ್ತು […]

ಯುವತಿಯೊಂದಿಗಿದ್ದ ಅನ್ಯ ಕೋಮಿನ ಯುವಕನಿಗೆ ಹಲ್ಲೆ : ಎಂಟು ಶಂಕಿತರು ವಶಕ್ಕೆ

Friday, April 2nd, 2021
Shashikumar

ಮಂಗಳೂರು : ಬೆಂಗಳೂರಿಗೆ ಕೆಲಸ ಹುಡುಕಲು ಅನ್ಯ ಕೋಮಿನ ಯುವಕನೊಂದಿಗೆ ಗುರುವಾರ ರಾತ್ರಿ ಖಾಸಗಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಯುವತಿಯೊಂದಿಗಿದ್ದ ಇದ್ದ ಯುವಕನ ಮೇಲೆ ಹಿಂದೂ ಸಂಘಟನೆಗಳು ಹಲ್ಲೆ ನಡೆಸಿದ  ಪ್ರಕರಣಕ್ಕೆ ಸಂಬಂಧಿಸಿದಂತೆ 8 ಜನರನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ  ಎನ್.ಶಶಿಕುಮಾರ್,  ಕಂಕನಾಡಿ ಬಸ್ ನಿಲ್ದಾಣದಲ್ಲಿ ಖಾಸಗಿ ಬಸ್ ತಡೆದು ಅದರಲ್ಲಿ ಯುವತಿಯೊಂದಿಗೆ ಪ್ರಯಾಣಿಸುತ್ತಿದ್ದ ಯುವಕನ ಮೇಲೆ ಹಲ್ಲೆ ಮಾಡಿದ್ದು, ಯುವಕನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ,  ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 8 ಶಂಕಿತರನ್ನು ವಿಚಾರಣೆಗಾಗಿ […]

ಹೊತ್ತಿ ಉರಿದ ಕಂಟೇನರ್ ಲಾರಿ ಹಾಗೂ ಖಾಸಗಿ ಬಸ್ : ಚಾಲಕ ಸಜೀವ ದಹನ

Thursday, March 25th, 2021
lorry

ನೆಲ್ಯಾಡಿ : ಕಂಟೇನರ್ ಲಾರಿ ಹಾಗೂ ಖಾಸಗಿ ಬಸ್ ಢಿಕ್ಕಿಹೊಡೆದ ಪರಿಣಾಮ ಬೆಂಕಿ ಅವರಿಸಿಕೊಂಡು ಲಾರಿ ಚಾಲಕ ಸಜೀವ ದಹನಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿಯಲ್ಲಿ ಮಾರ್ಚ್ 24 ರ ಬುಧವಾರ ತಡರಾತ್ರಿ ನಡೆದಿದೆ. ಘಟನೆಯ ಪರಿಣಾಮ ಬಸ್ ಸಂಪೂರ್ಣ ಭಸ್ಮಗೊಂಡಿದೆ. ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಶ್ರೀ ದುರ್ಗಾ ಟ್ರಾವೆಲ್ಸ್ ಸಂಸ್ಥೆಯ ಖಾಸಗಿ ಬಸ್ ಹಾಗೂ ಬೆಂಗಳೂರು ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಕಂಟೇನರ್ ಲಾರಿ ನಡುವೆ ನೆಲ್ಯಾಡಿ ಸಮೀಪ ಮಣ್ಣಗುಡ್ಡ ಎಂಬಲ್ಲಿ ಮುಖಾಮುಖಿ ಡಿಕ್ಕಿ ಸಂಭವಿಸಿದೆ. […]

ಕನ್ನಡ ಪರ ಸಂಘಟನೆಗಳು ನೀಡಿದ ರಾಜ್ಯವ್ಯಾಪ್ತಿ ಬಂದ್‌‌ ಕರೆಗೆ, ದಕ್ಷಿಣ ಕನ್ನಡದಲ್ಲಿ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ

Saturday, December 5th, 2020
Mangalore

ಮಂಗಳೂರು : ಕನ್ನಡ ಪರ ಸಂಘಟನೆಗಳು ನೀಡಿದ ರಾಜ್ಯವ್ಯಾಪ್ತಿ ಬಂದ್‌‌ ಕರೆಗೆ ಡಿ.5ರ ಶನಿವಾರದಂದು ದ.ಕ ಜಿಲ್ಲೆ ಯಲ್ಲಿ ವ್ಯಾಪಾರ ವಹಿವಾಟುಗಳು ಎಂದಿನಂತೆ ಇತ್ತು, ಮರಾಠ ಅಭಿವೃದ್ಧಿ ನಿಗಮ ರಚನೆ ವಿರೋಧಿಸಿ ಕನ್ನಡಪರ ಸಂಘಟನೆಗಳು ಶನಿವಾರ ಬಂದ್‌‌ಗೆ ಕರೆ ನೀಡಿದ್ದವು. ನಗರದಲ್ಲಿ ಮಾತ್ರವಲ್ಲದೇ ಜಿಲ್ಲೆಯಲ್ಲೂ ಕೂಡಾ ಕೆಎಸ್‌ಆರ್‌ಟಿಸಿ ಹಾಗೂ ಖಾಸಗಿ ಬಸ್‌ ಸೇವೆಗಳು ನಿರಾತಂಕವಾಗಿ ಮುಂದುವರೆದಿದೆ. ಆಟೋ ರಿಕ್ಷಾ, ಕ್ಯಾಬ್‌ಗಳು, ಹೋಟೆಲ್‌ಗಳು ಹಾಗೂ ಇತರ ಅಗತ್ಯ ಸೇವೆಗಳ ಮೇಲೆ ಯಾವುದೇ ಪರಿಣಾಮ ಬೀರಿಲ್ಲ. ಕೆಎಸ್‌ಆರ್‌ಟಿಸಿ ಬಸ್‌ ಸೇವೆ ಎಂದಿನಂತೆ […]

ಖಾಸಗಿ ಬಸ್‌ ಓಡುವ ಮಾರ್ಗದಲ್ಲಿ ಸರಕಾರಿ ಬಸ್‌ ಸಂಚಾರ ಬೇಡ

Friday, May 29th, 2020
tumakuru bus

ತುಮಕೂರು : ಲಾಕ್‌ ಡೌನ್‌ ಘೋಷಣೆಯಾದ ಮಾರ್ಚ್ 24 ರಿಂದ ಖಾಸಗಿ ಬಸ್‌ ಗಳು ರಸ್ತೆಗಿಳಿದಿಲ್ಲ ನಾವೆಲ್ಲರೂ ಸಂಕಷ್ಟದಲ್ಲಿದ್ದೇವೆ ಎಂದು ಖಾಸಗಿ ಬಸ್‌ ಮಾಲೀಕರ ಸಂಘದವರು ಗೋಳು ತೋಡಿಕೊಂಡಿದ್ದಾರೆ. ತಮ್ಮ ಹಲವಾರು ಬೇಡಿಕೆಗಳನ್ನು ಸರಕಾರದ ಮುಂದೆ ಸಲ್ಲಿಸಿರುವ ಖಾಸಗಿ ಬಸ್‌ ಮಾಲೀಕರು ತಮ್ಮ ಬೇಡಿಕೆ ಈಡೇರಿಕೆಯ ಬಗ್ಗೆ ಸರಕಾರದಿಂದ ಇದುವರೆಗೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಹೇಳಿದ್ದಾರೆ. ಅವರ ಬೇಡಿಕೆಗಳೆಂದರೆ : ಖಾಸಗಿ ಬಸ್‌ ಸಂಚಾರಕ್ಕೆ ಸೂಕ್ತ ಮಾರ್ಗಸೂಚಿ ರೂಪಿಸಬೇಕು.ಡಿಸೆಂಬರ್‌ ವರೆಗೆ ತೆರಿಗೆ ಪಡೆಯಲು ವಿನಾಯಿತಿ ನೀಡಬೇಕು. ಡಿಸೆಂಬರ್‌ […]

ಮಾರ್ಚ್ 22 : ಮಂಗಳೂರಲ್ಲಿ ಖಾಸಗಿ ಬಸ್ ಓಡಾಟ ಬಂದ್

Friday, March 20th, 2020
private bus

ಮಂಗಳೂರು :  ದೇಶದ ಹಿತ ದೃಷ್ಟಿಯಿಂದ ಮಾನ್ಯ ಪ್ರಧಾನ ಮಂತ್ರಿಯವರು ಕೊರೊನಾ ವೈರಸ್‌ ಅನ್ನು ಎದುರಿಸಲು ನೀಡಿರುವ “ಜನತಾ ಕರ್ಫ್ಯೂ” ಕರೆಗೆ ಸ್ವಯಂ ‌ಸಂಕಲ್ಪ ಹಾಗೂ ಸಂಯಮದಿಂದ ಸೋಂಕು ಹರಡುವುದನ್ನು ತಡೆಯಲು ಮಾರ್ಚ್ 22 ರಂದು ಸಾರ್ವಜನಿಕರು ಮನೆಯಲ್ಲಿಯೇ ಉಳಿಯಬೇಕು ಎಂಬ ಉದ್ದೇಶದಿಂದ ಬಸ್ ಓಡಾಟ ಇರುವುದಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಬಸ್ ಮಾಲಕರ ಸಂಘದ ಅಧ್ಯಕ್ಷರು ದಿಲ್ ರಾಜ್ ಆಳ್ವಾ ತಿಳಿಸಿದ್ದಾರೆ  

ತುಮಕೂರಿನಲ್ಲಿ ಖಾಸಗಿ ಬಸ್ ಪಲ್ಟಿ : ಏಳು ಜನರ ಸಾವು; ಹಲವರಿಗೆ ಗಂಭೀರ ಗಾಯ

Wednesday, October 30th, 2019
tumakur

ತುಮಕೂರು : ಖಾಸಗಿ ಬಸ್ ಪಲ್ಟಿಯಾಗಿ ಏಳು ಜನರು ಸಾವನ್ನಪ್ಪಿ , 20ಕ್ಕೂ ಹೆಚ್ಚು ಜನರು ಗಂಭೀರ ಗಾಯಗೊಂಡ ಭೀಕರ ದುರ್ಘಟನೆ ಕೊರಟಗೆರೆ ಜೆಟ್ಟಿ ಅಗ್ರಹಾರದ ಬಳಿ ನಡೆದಿದೆ. ಕೊರಟಗೆರೆಯಿಂದ ತುಮಕೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಜೆಟ್ಟಿ ಅಗ್ರಹಾರದ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.ಗಾಯಾಳುಗಳ ಪೈಕಿ ಮೂವರ ಸ್ಥಿತಿ ಗಂಭೀರವಾಗಿದೆ. ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.