ಕೋವಿಡ್ ರೋಗಿಗಳನ್ನು ವಾಪಾಸ್ ಕಳುಹಿಸುವಂತಿಲ್ಲ: ಖಾಸಗೀ ಆಸ್ಪತ್ರೆಗಳಿಗೆ ಉಸ್ತುವಾರಿ ಸಚಿವರ ನಿರ್ದೇಶನ
Monday, July 20th, 2020ಮಂಗಳೂರು : ಖಾಸಗೀ ಆಸ್ಪತ್ರೆಗಳು ತಮ್ಮಲ್ಲಿಗೆ ಬಂದ ಕೋರೋನಾ ಸೋಂಕಿತ ರೋಗಿಗಳಿಗೆ ಚಿಕಿತ್ಸೆ ನೀಡದೆ ಯಾವುದೇ ಕಾರಣಕ್ಕೂ ವಾಪಾಸು ಕಳುಹಿಸುವಂತಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದ್ದಾರೆ. ಅವರು ಸೋಮವಾರ ನಗರದ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನಲ್ಲಿ ಕೋರೋನಾ ರೋಗಿಗಳ ನಿರ್ವಹಣೆ ಕುರಿತು ಸಭೆ ನಡೆಸಿ, ಬಳಿಕ ಮಾಹಿತಿ ನೀಡಿದರು. ದಕ್ಷಿಣ ಕನ್ನಡ ಜಿಲ್ಲೆಯು ವೈದ್ಯಕೀಯ ಕ್ಷೇತ್ರದಲ್ಲಿ ಸಾಕಷ್ಟು ಮುಂದುವರಿದಿದೆ. ಹೀಗಿರುವಾಗ, ಕೋವಿಡ್ ಸೋಂಕಿತರು ಅಥವಾ ಇತರೆ ಯಾವುದೇ ರೋಗಿಗಳು ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ […]